Homeಚಳವಳಿದೆಹಲಿ ಚಲೋ ಬೆಂಬಲಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ: ರೈತರ ಮೇಲಿನ ಹಲ್ಲೆಗೆ ಖಂಡನೆ

ದೆಹಲಿ ಚಲೋ ಬೆಂಬಲಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆ: ರೈತರ ಮೇಲಿನ ಹಲ್ಲೆಗೆ ಖಂಡನೆ

ಕೋಲಾರ, ಚಿತ್ರದುರ್ಗ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ರೈತರನ್ನು ಬೆಂಬಲಿಸಿ ಪ್ರತಿಭಟನೆಗಳು ದಾಖಲಾಗಿವೆ.

- Advertisement -
- Advertisement -

ವಿವಾದಾತ್ಮಕ ಕೃಷಿ ಮಸೂದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ದೆಹಲಿಯಲ್ಲಿ ಒಂದು ವಾರದಿಂದ ಲಕ್ಷಾಂತರ ರೈತರು ನಡೆಸುತ್ತಿರುವ ದೆಹಲಿ ಚಲೋ ಹೋರಾಟಕ್ಕೆ ಕರ್ನಾಟಕದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ಚಲೋ ಬೆಂಬಲಿಸಿ ಪ್ರತಿಭಟನೆಗಳು ನಡೆದಿದ್ದು, ರೈತರ ಮೇಲಿನ ಹಲ್ಲೆಗೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕೇಂದ್ರ ಸರ್ಕಾರ ಚಳವಳಿಯನ್ನು ಹತ್ತಿಕ್ಕಲು ರೈತರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ತುಮಕೂರಿನಲ್ಲಿ ಪ್ರಗತಿಪರ ಸಂಘಟನೆಗಳು ಪ್ರತಿಭಟನಾ ಧರಣಿ ನಡೆಸಿದವು. ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ಕುಳಿತ ಪ್ರತಿಭಟನಾಕಾರರು ಕೂಡಲೇ ರೈತ-ಕಾರ್ಮಿಕ ವಿರೋಧಿ ನೀತಿಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿದರು. ರೈತರ ಬೇಡಿಕೆ ಒಂದೇ. ಅದು ಕೃಷಿ ಸಂಬಂಧಿ ಸುಗ್ರಿವಾಜ್ಞೆಗಳನ್ನು ವಾಪಸ್ ಪಡೆಯಬೇಕೆಂಬುದು. ಅದನ್ನು ಬಿಟ್ಟು ಬೇರೆ ಯಾವುದೇ ಬೇಡಿಕೆಗಳನ್ನು ಮುಂದಿಟ್ಟಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿ ರೈತರ ಸಮಸ್ಯೆಯನ್ನು ಆಲಿಸುತ್ತಿಲ್ಲ. ಬದಲಿಗೆ ಹಿಟ್ಲರ್ ರೀತಿ ವರ್ತಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಧರಣಿಯನ್ನು ಉದ್ದೇಶಿಸಿ ಮಾತನಾಡಿದ ಜನಪರ ಚಿಂತಕ ಕೆ.ದೊರೈರಾಜ್, ಕೇಂದ್ರ ಸರ್ಕಾರ ರೈತ ಕಾರ್ಮಿಕರ ಮೇಲೆ ದಬ್ಬಾಳಿಕೆ, ದೌರ್ಜನ್ಯ ನಡೆಸುತ್ತಿದೆ. ಜನವಿರೋಧಿ ನೀತಿಗಳನ್ನು ಜಾರಿಗೊಳಿಸಿ ಸಾಮಾನ್ಯ ಜನರನ್ನು ಸಂಕಷ್ಟಕ್ಕೆ ದೂಡುತ್ತಿದ್ದು, ಅಮಾನವೀಯವಾಗ ವರ್ತಿಸುತ್ತಿದೆ. ರೈತರ ಬೇಡಿಕೆಯ ಕುರಿತು ಮಾತುಕತೆ ನಡೆಸಲು ಹಿಂದೇಟು ಹಾಕುತ್ತಿದೆ. ಸಂವಿಧಾನ ವಿರೋಧಿ ನೀತಿಗಳನ್ನು ಜಾರಿಗೊಳಿಸಿ ಸಂವಿಧಾನ ವಿರೋಧಿ ಆಡಳಿತ ನಡೆಸುತ್ತಿದೆ ಎಂದು ಕಿಡಿಕಾರಿದರು.

ಎಐಕೆಎಸ್‌ಸಿಸಿ ಜಿಲ್ಲಾ ಕಾರ್ಯದರ್ಶಿ ಹಾಗೂ ಹಿರಿಯ ಹೋರಾಟಗಾರ ಸಿ.ಯತಿರಾಜು ಮಾತನಾಡಿ ಕೇಂದ್ರ ಹೋರಾಟನಿರತ ರೈತರನ್ನು ಮಾತುಕತೆಗೆ ಆಹ್ವಾನಿಸಿದೆ. ಆದರೆ ಷರತ್ತುಗಳನ್ನು ವಿಧಿಸುತ್ತಿದೆ. ಕೃಷಿನೀತಿಗಳ ಬಗ್ಗೆ ಪುನರ್ ಪರಿಶೀಲನೆ ಮಾಡುವುದಿಲ್ಲ ಎನ್ನುತ್ತಿದೆ. ಮಾತುಕತೆಗೆ ಆಹ್ವಾನಿಸುವುದು ಮತ್ತು ಕೃಷಿನೀತಿಗಳ ಬದಲಾವಣೆ ಮಾಡುವುದಿಲ್ಲ ಎಂದು ಹೇಳುವುದು ಕೇಂದ್ರ ಸರ್ಕಾರದ ದ್ವಂದ್ವ ಧೋರಣೆಗೆ ಹಿಡಿದ ಕನ್ನಡಿ ಆಗಿದೆ. ದೆಹಲಿ ಬುಕಾರಿ ಮೈದಾನವನ್ನೇ ಓಪನ್ ಜೈಲು ಮಾಡಲು ಸಚಿವ ಅಮಿತ್ ಶಾ ನಿರ್ಧರಿಸಿದಂತಿದೆ. ಕೇಂದ್ರದ ಈ ನಡೆ ಖಂಡನೀಯ. ಕೇಂದ್ರ ತನ್ನ ಧೋರಣೆಯನ್ನು ಬದಲಿಸಿಕೊಳ್ಳದಿದ್ದರೆ ಹೋರಾಟ ತೀವ್ರ ಗೊಳ್ಳಲಿದೆ. ಬೀದಿಬೀದಿಗಳಲ್ಲೂ ರೈತರು ಚಳವಳಿ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

ವೈದ್ಯ ಡಾ.ಬಸವರಾಜು ಮಾತನಾಡಿ, ಕೇಂದ್ರ ಸರ್ಕಾರ ರೈತರನ್ನು ಉಗ್ರರಂತೆ ಬಿಂಬಿಸುವುದು ಸರಿಯಲ್ಲ. ರೈತರು ಹಕ್ಕುಗಳಿಗಾಗಿ ಬೀದಿಗೆ ಇಳಿದಿದ್ದಾರೆ. ಕೇಂದ್ರ ಸರ್ಕಾರ ಮುಕ್ತಮನಸ್ಸಿನಿಂದ ರೈತರ ಜೊತೆ ಮಾತುಕತೆ ಮಾಡಬೇಕು. ರೈತರು ದೇಶಕ್ಕೆ ಅನ್ನ ನೀಡುವವರು. ಅವರ ಸಮಸ್ಯೆಯನ್ನು ಆಲಿಸಿ ಬಗೆಹರಿಸಲು ಮುಂದಾಗಬೇಕು. ರೈತರು ಇಲ್ಲದಿದ್ದರೆ ಅನ್ನವೇ ಸಿಗದಂತಹ ವಾತಾವರಣ ನಿರ್ಮಾಣವಾಗುತ್ತದೆ. ಇದನ್ನು ಸರ್ಕಾರ ಅರ್ಥಮಾಡಿಕೊಳ್ಳಬೇಕು. ರೈತ ವಿರೋಧಿ ನೀತಿಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ಮಾತನಾಡಿ “ಕೇಂದ್ರದ ಮೋದಿ ಸರ್ಕಾರ ರೈತರನ್ನು ಶತ್ರುಗಳಂತೆ ನೋಡುತ್ತಿದೆ. ರೈತರೇ ಇಂದು ಜಿಡಿಪಿ ಹೆಚ್ಚಳಕ್ಕೆ ಕಾರಣ ಎಂಬುದನ್ನು ಮರೆಯಬಾರದು. ಆದರೆ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸೇನೆಯನ್ನು ಇಳಿಸಿದೆ. ಶತ್ರುಗಳ ವಿರುದ್ಧ ಸೇನೆಯನ್ನು ಇಳಿಸಬೇಕಿತ್ತು. ಆದರೆ ಇಲ್ಲಿ ಉಲ್ಟಾ ಆಗಿದೆ. ರೈತರ ಮೇಲೆ ಆಶ್ರುವಾಯು, ಜಲಪಿರಂಗಿ, ಲಾಠೀ ಚಾರ್ಜ್ ಮಾಡಿದರು. ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ, ಕೇಂದ್ರ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಬೇಕು. ಸುಪ್ರೀಂಕೋರ್ಟ್ ಕೇಂದ್ರಕ್ಕೆ ಎಚ್ಚರಿಕೆ ನೀಡಬೇಕು. ಇದು ಆಗದಿರುವುದು ಕಳವಳಕಾರಿ ಎಂದರು.

ಪ್ರತಿಭಟನೆಯಲ್ಲಿ ತುಮಕೂರು ಜಿಲ್ಲಾ  ಕೊಳಗೇರಿ ನಿವಾಸಿಗಳ ಹಿತಕ್ಷಣಾ ವೇದಿಕೆಯ ಎ.ನರಸಿಂಹಮೂರ್ತಿ, ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು, ಸಮತಾ ವೇದಿಕೆಯ ನಾಯಕಿ ಡಾ.ಅರುಂಧತಿ, ಮಹಿಳಾಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಕೋಲಾರದಲ್ಲಿ ಪ್ರತಿಭಟನೆ
ಚಿತ್ರದುರ್ಗದಲ್ಲಿ ಪ್ರತಿಭಟನೆ

ಕೋಲಾರ, ಚಿತ್ರದುರ್ಗ, ಉಡುಪಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ದೆಹಲಿ ರೈತರನ್ನು ಬೆಂಬಲಿಸಿ ಪ್ರತಿಭಟನೆಗಳು ದಾಖಲಾಗಿವೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...