ಸಂಸತ್ತಿನ ಗೇಟ್‌ಗಳ ಮುಂದೆ ಸಂಸದರು ಅಥವಾ ರಾಜಕೀಯ ಪಕ್ಷಗಳ ನಡೆಸುವ ಪ್ರತಿಭಟನಾ ಪ್ರದರ್ಶನವನ್ನು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ನಿಷೇಧಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಸಂಸತ್‌ನ ಗೇಟ್‌ಗಳಲ್ಲಿ
ಅವರ ಆದೇಶಕ್ಕೂ ಮೊದಲು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟಿಸಿತ್ತು. ಇದರ ವಿರುದ್ಧ ಬಿಜೆಪಿ ಕೂಡಾ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಎಂದು ಆರೋಪಿಸಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಈ ಪ್ರತಿಭಟನೆಯ ನಂತರ ಸಂಸತ್ ಕಟ್ಟಡದ ಅವರಣದೊಳಗೆ ಉಭಯ ಪಕ್ಷಗಳ ಸಂಸದರು ಪರಸ್ಪರ ದಾಳಿ ನಡೆದಿರುವ ಬಗ್ಗೆ ಆರೋಪಿಸಿದ್ದಾರೆ. ಬಿಜೆಪಿಯ ಇಬ್ಬರು ಸಂಸದರು ಈ ವೇಳೆ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇನ್ನೊಬ್ಬ ಬಿಜೆಪಿ ಸಂಸದರನ್ನು ತಳ್ಳಿದರು ಎಂದು ಆಡಳಿತ ಪಕ್ಷ ಆರೋಪಿಸಿದ್ದು, ಇದರ ನಂತರ ದೆಹಲಿ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಮತ್ತೊಂದೆಡೆ, ಬಿಜೆಪಿ ಸಂಸದರು ತಳ್ಳಿದ ಕಾರಣ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೆಲದ ಮೇಲೆ ಬಿದ್ದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಾಗ್ಯೂ, ಬಿಜೆಪಿ ಸಂಸದರು ಖರ್ಗೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರಿನ ಬಗ್ಗೆ ಪೊಲೀಸರು ಇನ್ನೂ ಕ್ರಮ ಕೈಗೊಂಡಿಲ್ಲ.
ಈ ಸಂಘರ್ಷದ ನಂತರ, ಸಂಸತ್ತಿನ ಪಾವಿತ್ರ್ಯತೆಯನ್ನು ಕಾಪಾಡಲು ಮತ್ತು ಅದರ ಕಲಾಪಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಪ್ರತಿಭಟನಾ ಪ್ರದರ್ಶನಗಳನ್ನು ನಿಷೇಧಿಸುವ ನಿರ್ದೇಶನವನ್ನು ನೀಡಲಾಗಿದೆ ಎಂದು ಸ್ಪೀಕರ್ ಕಚೇರಿ ಒತ್ತಿಹೇಳಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸಂಸತ್‌ನ ಗೇಟ್‌ಗಳಲ್ಲಿ
ಇದನ್ನೂ ಓದಿ: ಉಪರಾಷ್ಟ್ರಪತಿ ಧನಕರ್ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ


