Homeಮುಖಪುಟಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ - ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ

ಸಂಸತ್‌ನ ಗೇಟ್‌ಗಳಲ್ಲಿ ಪ್ರತಿಭಟನೆ ನಿಷೇಧ – ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಆದೇಶ

- Advertisement -
- Advertisement -

ಸಂಸತ್ತಿನ ಗೇಟ್‌ಗಳ ಮುಂದೆ ಸಂಸದರು ಅಥವಾ ರಾಜಕೀಯ ಪಕ್ಷಗಳ ನಡೆಸುವ ಪ್ರತಿಭಟನಾ ಪ್ರದರ್ಶನವನ್ನು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಗುರುವಾರ ನಿಷೇಧಿಸಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಪಿಟಿಐ ವರದಿ ಮಾಡಿದೆ. ಸಂಸತ್‌ನ ಗೇಟ್‌ಗಳಲ್ಲಿ

ಅವರ ಆದೇಶಕ್ಕೂ ಮೊದಲು ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರತಿಭಟಿಸಿತ್ತು. ಇದರ ವಿರುದ್ಧ ಬಿಜೆಪಿ ಕೂಡಾ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಅವಮಾನಿಸಿದೆ ಎಂದು ಆರೋಪಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಈ ಪ್ರತಿಭಟನೆಯ ನಂತರ ಸಂಸತ್ ಕಟ್ಟಡದ ಅವರಣದೊಳಗೆ ಉಭಯ ಪಕ್ಷಗಳ ಸಂಸದರು ಪರಸ್ಪರ ದಾಳಿ ನಡೆದಿರುವ ಬಗ್ಗೆ ಆರೋಪಿಸಿದ್ದಾರೆ. ಬಿಜೆಪಿಯ ಇಬ್ಬರು ಸಂಸದರು ಈ ವೇಳೆ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇನ್ನೊಬ್ಬ ಬಿಜೆಪಿ ಸಂಸದರನ್ನು ತಳ್ಳಿದರು ಎಂದು ಆಡಳಿತ ಪಕ್ಷ ಆರೋಪಿಸಿದ್ದು, ಇದರ ನಂತರ ದೆಹಲಿ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಮತ್ತೊಂದೆಡೆ, ಬಿಜೆಪಿ ಸಂಸದರು ತಳ್ಳಿದ ಕಾರಣ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೆಲದ ಮೇಲೆ ಬಿದ್ದಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಅದಾಗ್ಯೂ, ಬಿಜೆಪಿ ಸಂಸದರು ಖರ್ಗೆ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ದೂರಿನ ಬಗ್ಗೆ ಪೊಲೀಸರು ಇನ್ನೂ ಕ್ರಮ ಕೈಗೊಂಡಿಲ್ಲ.

ಈ ಸಂಘರ್ಷದ ನಂತರ, ಸಂಸತ್ತಿನ ಪಾವಿತ್ರ್ಯತೆಯನ್ನು ಕಾಪಾಡಲು ಮತ್ತು ಅದರ ಕಲಾಪಗಳಿಗೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಪ್ರತಿಭಟನಾ ಪ್ರದರ್ಶನಗಳನ್ನು ನಿಷೇಧಿಸುವ ನಿರ್ದೇಶನವನ್ನು ನೀಡಲಾಗಿದೆ ಎಂದು ಸ್ಪೀಕರ್ ಕಚೇರಿ ಒತ್ತಿಹೇಳಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸಂಸತ್‌ನ ಗೇಟ್‌ಗಳಲ್ಲಿ

ಇದನ್ನೂ ಓದಿ: ಉಪರಾಷ್ಟ್ರಪತಿ ಧನಕರ್ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ

ಉಪರಾಷ್ಟ್ರಪತಿ ಧನಕರ್ ವಿರುದ್ಧ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ವಜಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...