Homeಮುಖಪುಟತೆಲಂಗಾಣ: ಸರಕಾರಿ ಉದ್ಯೋಗಾಕಾಂಕ್ಷಿ ಯುವತಿ ಆತ್ಮಹತ್ಯೆ: ಭುಗಿಲೆದ್ಧ ಪ್ರತಿಭಟನೆ

ತೆಲಂಗಾಣ: ಸರಕಾರಿ ಉದ್ಯೋಗಾಕಾಂಕ್ಷಿ ಯುವತಿ ಆತ್ಮಹತ್ಯೆ: ಭುಗಿಲೆದ್ಧ ಪ್ರತಿಭಟನೆ

- Advertisement -
- Advertisement -

ಸರ್ಕಾರಿ ಉದ್ಯೋಗಕ್ಕೆ ಸಿದ್ಧತೆ ಮಾಡುತ್ತಿದ್ದ ಯುವತಿಯೋರ್ವಳು ನೇಮಕಾತಿ ಆದೇಶವನ್ನು ಸರಕಾರ ರದ್ದುಗೊಳಿಸಿದ ಹಿನ್ನೆಲೆ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಅಶೋಕ್ ನಗರ ಪ್ರದೇಶದ ಖಾಸಗಿ ಹಾಸ್ಟೆಲ್‌ನಲ್ಲಿ ವಾರಂಗಲ್ ಮೂಲದ ಮರ್ರಿ ಪ್ರವಳಿಕಾ (23) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸರ್ಕಾರಿ ನೇಮಕಾತಿ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು ಮತ್ತು ಇತ್ತೀಚೆಗೆ ಗ್ರೂಪ್ 2 ಪರೀಕ್ಷೆ ರದ್ದುಗೊಳಿಸಿದ್ದಕ್ಕಾಗಿ ನೊಂದುಕೊಂಡಿದ್ದರು ಎನ್ನಲಾಗಿದೆ.

ಘಟನೆ ಬೆನ್ನಲ್ಲೇ ಪ್ರತಿಪಕ್ಷ ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಘಟನೆಯ ಕುರಿತು 48 ಗಂಟೆಗಳ ಒಳಗೆ ವಿವರವಾದ ವರದಿಯನ್ನು ಕಳುಹಿಸುವಂತೆ ಮುಖ್ಯ ಕಾರ್ಯದರ್ಶಿ, ಪೊಲೀಸ್ ಮಹಾನಿರ್ದೇಶಕರು ಮತ್ತು ತೆಲಂಗಾಣ ರಾಜ್ಯ ಲೋಕಸೇವಾ ಆಯೋಗದ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಮರ್ರಿ ಪ್ರವಳಿಕಾ ಶುಕ್ರವಾರ ರಾತ್ರಿ ಸರ್ಕಾರಿ ಉದ್ಯೋಗದ ಆಕಾಂಕ್ಷಿಗಳ ಕೇಂದ್ರವೆಂದು ಕರೆಯಲ್ಪಡುವ ಅಶೋಕ್ ನಗರ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಹರಡುತ್ತಿದ್ದಂತೆ, ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಹಾಸ್ಟೆಲ್‌ನ ಹೊರಗೆ ಪ್ರತಿಭಟನೆಯನ್ನು ನಡೆಸಿದ್ದಾರೆ.

ಪೊಲೀಸರು ಸ್ಥಳಕ್ಕೆ ತೆರಳಿದ್ದು ಮೃತದೇಹವನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಆಕೆಯ ಮೊಬೈಲ್ ಫೋನ್ ವಶಪಡಿಸಿಕೊಂಡು ಪರೀಕ್ಷೆಗೆ ಕಳುಹಿಸಿದ್ದಾರೆ.

ಘಟನೆ ತೆಲಂಗಾಣದಲ್ಲಿ ರಾಜಕೀಯ ತಿರುವು ಪಡೆದುಕೊಂಡಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್ ಮಾಡಿದ್ದು, ತೆಲಂಗಾಣದಲ್ಲಿ 23 ವರ್ಷದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆಯಿಂದ ವೇದೆನೆಯಾಗಿದೆ. ರಾಜ್ಯ ಲೋಕಸೇವಾ ಆಯೋಗದ ಪರೀಕ್ಷೆ ಪದೇ ಪದೇ ಮುಂದೂಡಿಕೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಮರ್ರಿ ಪ್ರವಲ್ಲಿಕಾ ಕುಟುಂಬದ ಜೊತೆ ಈ ದುಃಖ ಮತ್ತು ನೋವಿನ ಸಂದರ್ಭದಲ್ಲಿ ನಾವು ಜೊತೆಯಾಗಿದ್ದೇವೆ ಎಂದು ಹೇಳಿದ್ದಾರೆ.

ತೆಲಂಗಾಣದ ಸಾವಿರಾರು ಯುವ ಉದ್ಯೋಗಾಕಾಂಕ್ಷಿಗಳು ಪರೀಕ್ಷೆಗಳನ್ನು ನಡೆಸುವಲ್ಲಿ BRS ಸರ್ಕಾರದ ನಿರಾಸಕ್ತಿಯಿಂದಾಗಿ ಹತಾಶರಾಗಿದ್ದಾರೆ ಮತ್ತು ಕೋಪಗೊಂಡಿದ್ದಾರೆ. ತೆಲಂಗಾಣದ ಯುವಕರು, ಭ್ರಷ್ಟ, ಅಸಮರ್ಥ  BRS ಸರ್ಕಾರವನ್ನು ಇದಕ್ಕೆ ಹೊಣೆಗಾರರನ್ನಾಗಿ ಮಾಡಿ ರಾಜ್ಯದಲ್ಲಿ ಅಧಿಕಾರದಿಂದ ಹೊರಹಾಕಲಿದ್ದಾರೆ ಎಂದು ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ಭಯೋತ್ಪಾದನ ಕೃತ್ಯದ ಆರೋಪಿ ವೈಭವ್ ರಾವುತ್ ಜೈಲಿನಿಂದ ಬಿಡುಗಡೆ ವೇಳೆ ಅದ್ದೂರಿ ಸ್ವಾಗತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...