Homeಕರ್ನಾಟಕಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ಬಾಕಿ ಸಂಬಳ ಹಾಗೂ ಇತರ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ

ಖಾಯಂ ಉಪನ್ಯಾಸಕರಂತೆ ಪ್ರತಿದಿನ ಕಾಲೇಜಿನ ಎಲ್ಲಾ ರೀತಿಯ ಶೈಕ್ಷಣಿಕ ಚಟುವಟಿಕೆಗಳನ್ನು ಸಮರ್ಪಕವಾಗಿ ನಡೆಸಿಕೊಟ್ಟಿದ್ದೇವೆ, ಆದರೆ ನಮ್ಮನ್ನು ಸರಕಾರ ಸಂಪೂರ್ಣವಾಗಿ ನಿರ್ಲಕ್ಷಿಸಿದೆ ಎಂದು ಉಪನ್ಯಾಸಕರು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಬಿಕ್ಕಟ್ಟಿನಿಂದಾಗಿ ಕಳೆದ ಮೂರ್ನಾಲ್ಕು ತಿಂಗಳಿನಿಂದ ಸಂಬಳವಿಲ್ಲದೆ ಸಂಕಷ್ಟಕ್ಕೀಡಾಗಿರುವ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಆನ್ಲೈನ್‌ನಲ್ಲಿ ಬಿತ್ತಿಪತ್ರ ಪ್ರತಿಭಟನೆ ನಡೆಸಿದರು.

ಅತಿಥಿ ಉಪನ್ಯಾಸಕರ ಸಂಘ ಹಾಗೂ AIDYO ಸಹಯೋಗದಲ್ಲಿ ಈ ಪ್ರತಿಭಟನೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಕೊರೊನಾದಿಂದಾಗಿ ಅತಿಥಿ ಉಪನ್ಯಾಸಕರ ಜೀವನ ಸಂಕಷ್ಟಕ್ಕೆ ಸಿಲುಕಿದೆ. ಸರಕಾರ ಕೂಡಲೇ ಬಾಕಿ ವೇತನ ಪಾವತಿಸಿ ಆತ್ಮಹತ್ಯೆ ಹಾದಿಯಲ್ಲಿರುವ ಉಪನ್ಯಾಸಕರನ್ನು ರಕ್ಷಿಸಬೇಕಿದೆ ಎಂದು ಹೋರಾಟ ಸಮಿತಿಯ ಪದಾಧಿಕಾರಿಗಳು ಸರಕಾರವನ್ನು ಆಗ್ರಹಿಸಿದ್ದಾರೆ.

“ಆರ್ಥಿಕ ಸಂಕಷ್ಟದಿಂದ ಜೀವನ ನಡೆಸಲು ಆಗದೆ ಕೆಲವು ಅತಿಥಿ ಉಪನ್ಯಾಸಕರು ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲಸ ಮಾಡಿಸಿಕೊಂಡಿರುವ ಸರಕಾರ ನಮ್ಮನ್ನು ಮರೆತಿದೆ. ಸಂಬಳವಿಲ್ಲದೆ ಇನ್ನೂ ಕೆಲವು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದಾರೆ ಕೂಡಲೇ ಸರಕಾರ ಸೇವಾಭದ್ರತೆ ಒದಗಿಸುವುದರೊಂದಿಗೆ ಬಾಕಿ ವೇತನ ಪಾವತಿಸಬೇಕಾಗಿದೆ” ಎಂದು ಅತಿಥಿ ಉಪನ್ಯಾಸಕರಾದ ಮಂಜುನಾಥ್ ಆಗ್ರಹಿಸಿದ್ದಾರೆ.

ಖಾಯಂ ಉಪನ್ಯಾಸಕರಂತೆ ಪ್ರತಿದಿನ ಕಾಲೇಜಿನಲ್ಲಿ ಎಲ್ಲಾ ರೀತಿಯ ಶೈಕ್ಷಣಿಕ ಚಟುವಟಿಕೆಗಳನ್ನು ಸಮರ್ಪಕವಾಗಿ ನಡೆಸಿಕೊಟ್ಟಿದ್ದೇವೆ. ಆದರೆ ಸರಕಾರ ನಮ್ಮನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಖಂಡನೀಯ ಎಂದು ಹೋರಾಟ ಸಮಿತಿಯ ಮತ್ತೊಬ್ಬರು ತಿಳಿಸಿದ್ದಾರೆ.

ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಒದಗಿಸುವುದು, ಲಾಕ್ ಡೌನ್ ಅವಧಿಯ ವೇತನ ಬಿಡುಗಡೆ ಮಾಡುವುದು, ಅತಿಥಿ ಉಪನ್ಯಾಸಕರಿಗೆ ಕೊರೊನಾ ಪ್ಯಾಕೇಜ್ ಘೋಷಣೆ ಮಾಡುವುದು ಹಾಗೂ ಆತ್ಮಹತ್ಯೆಗೆ ಒಳಗಾದ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಪ್ರತಿಭಟನಾ ನಿರತ ಉಪನ್ಯಾಸಕರು ಸರ್ಕಾರವನ್ನು ಆಗ್ರಹಹಿಸಿದ್ದಾರೆ.


ಓದಿ: 35,000 ಕ್ಕೂ ಹೆಚ್ಚು ಖಾಸಗಿ ಶಾಲಾ ಶಿಕ್ಷಕರು ವಜಾ: 8 ಅತಿಥಿ ಉಪನ್ಯಾಸಕರ ಆತ್ಮಹತ್ಯೆ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...