Homeಮುಖಪುಟಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟು ಸೃಷ್ಟಿಸಿದ ಮೂವರು ನಾಗರಿಕರ ಹತ್ಯೆ

- Advertisement -
- Advertisement -

ಗಾಝಾದಲ್ಲಿ ಇಸ್ರೇಲ್‌ ಸೇನೆ ತನ್ನದೇ ದೇಶದ ಮೂವರು ನಾಗರಿಕರನ್ನು ಹತ್ಯೆ ಮಾಡಿದೆ. ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಇದನ್ನು ಐಡಿಎಫ್‌ನಿಂದಾದ ದೊಡ್ಡ ಪ್ರಮಾದ ಎಂದು ಹೇಳಿದ್ದರು. ಇದೀಗ ಘಟನೆಯ ಬೆನ್ನಲ್ಲೇ ಇಸ್ರೇಲ್‌ನಲ್ಲಿ ವ್ಯಾಪಕವಾಗಿ ಪ್ರತಿಭಟನೆ ಭುಗಿಲೆದ್ದಿದ್ದು, ಮೂವರು ನಾಗರಿಕರ ಹತ್ಯೆ ಇಸ್ರೇಲ್‌ನಲ್ಲಿ ಆಂತರಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ.

ಗಾಝಾದಲ್ಲಿ ಹಮಾಸ್‌ ವಶದಲ್ಲಿದ್ದ ತಮ್ಮದೇ ದೇಶದ ಮೂವರು ಒತ್ತೆಯಾಳುಗಳನ್ನು ಇಸ್ರೇಲ್‌ ಸೈನಿಕರು ಹತ್ಯೆ ನಡೆಸಿರುವುದನ್ನು ಖಂಡಿಸಿ ಟೆಲ್ ಅವಿವ್‌ನಲ್ಲಿ ನೂರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಕಾರರು ಟೆಲ್ ಅವಿವ್‌ ನಗರದ ಮಧ್ಯಭಾಗದಲ್ಲಿರುವ ಮುಖ್ಯ ರಸ್ತೆಯನ್ನು ತಡೆದು ಒತ್ತೆಯಾಳುಗಳ ತಕ್ಷಣದ ಬಿಡುಗಡೆಗೆ ಒತ್ತಾಯಿಸಿದ್ದಾರೆ ಎಂದು ಮಾದ್ಯಮ ವರದಿ ತಿಳಿಸಿದೆ.

ಪ್ರತಿಭಟನಾಕಾರರು ಈಗ ಸಮಯ ಮೀರುತ್ತಿದೆ. ಒತ್ತೆಯಾಳುಗಳನ್ನು ಮನೆಗೆ ಕರೆ ತನ್ನಿ ಎಂದು ಘೋಷಣೆಗಳನ್ನು ಕೂಗಿದ್ದು, ಪ್ರತಿ ಕೊನೆಯ ಒತ್ತೆಯಾಳು ಬಿಡುಗಡೆಯಾಗುವವರೆಗೂ ಯಾವುದೇ ವಿಜಯವಿಲ್ಲ ಎಂದು ಹೇಳುತ್ತಿದ್ದಾರೆ. ಇದಲ್ಲದೆ ಒತ್ತೆಯಾಳುಗಳ ಚಿತ್ರಗಳಿರುವ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನಾಕಾರರು ಇಸ್ರೇಲ್‌ ಸೇನಾ ಪ್ರಧಾನ ಕಚೇರಿಯತ್ತ ಮೆರವಣಿಗೆ ನಡೆಸಿದ್ದಾರೆ. ಕೆಲವು ಪ್ರತಿಭಟನಾಕಾರರು ಒತ್ತೆಯಾಳುಗಳ ಬಿಡುಗಡೆಗೆ  ನೆತನ್ಯಾಹು ಅವರ ಸರ್ಕಾರವು ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ. ಇದಲ್ಲದೆ ನವೆಂಬರ್‌ನಲ್ಲಿ ನಡೆಸಿದಂತೆ ಮತ್ತೊಂದು ಕದನ ವಿರಾಮಕ್ಕೆ ಆಗ್ರಹಿಸಿದ್ದಾರೆ.

ಅ.7 ರಂದು ಹಮಾಸ್, ಇಸ್ರೇಲ್‌ ಪಟ್ಟಣಗಳಲ್ಲಿ ನಡೆಸಿದ ದಾಳಿಯಲ್ಲಿ 1,200 ಜನರ ಹತ್ಯೆ ನಡೆದಿತ್ತು. 240 ಒತ್ತೆಯಾಳುಗಳನ್ನು ಸೆರೆಹಿಡಿಯಲಾಗಿತ್ತು. ಇಸ್ರೇಲ್ ನಂತರ ಪ್ರತಿದಾಳಿಯನ್ನು ಪ್ರಾರಂಭಿಸಿ, ಈವರೆಗೆ ಗಾಝಾದಲ್ಲಿ 19,000 ಜನರನ್ನು ಇಸ್ರೇಲ್‌ ಮಿಲಿಟರಿ ಹತ್ಯೆ ಮಾಡಿದೆ ಎಂದು ಗಾಝಾದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ನವೆಂಬರ್ ಅಂತ್ಯದಲ್ಲಿ ಕದನ ವಿರಾಮದ ಸಮಯದಲ್ಲಿ 240 ಮಹಿಳೆಯರು ಮತ್ತು ಅಪ್ರಾಪ್ತರ ಬಿಡುಗಡೆಗೆ ಪ್ರತಿಯಾಗಿ ಹಮಾಸ್‌ 100ಕ್ಕೂ ಹೆಚ್ಚು ಇಸ್ರೇಲ್‌ ಮಹಿಳೆಯರು, ಮಕ್ಕಳು ಮತ್ತು ವಿದೇಶಿಯರನ್ನು ಬಿಡುಗಡೆ ಮಾಡಿತ್ತು. ಇಸ್ರೇಲ್ ಒತ್ತೆಯಾಳಾಗಿರಿಸಿದ್ದ ಗಾಝಾದ ನಾಗರಿಕರನ್ನು ಕ್ಷುಲ್ಲಕವಾಗಿ ಇಸ್ರೇಲ್‌ ಸೈನಿಕರ ಮೇಲೆ ಕಲ್ಲು ತೂರಾಟ ಸೇರಿ ಸಣ್ಣ ಅಪರಾಧಗಳಿಗಾಗಿ ಬಂಧಿಸಲಾಗಿತ್ತು

ಮೃತ ಒತ್ತೆಯಾಳುಗಳಲ್ಲಿ ಕಿಬ್ಬುತ್ಜ್ ಕ್ಫಾರ್‌ನಿಂದ ಅಪಹರಿಸಲ್ಪಟ್ಟ ಯೋತಮ್ ಹೈಮ್, ಕಿಬ್ಬುತ್ಜ್ ನಿರ್ ಆಮ್‌ನಿಂದ ಅಪಹರಿಸಲ್ಪಟ್ಟ ಸಮರ್ ತಲಲ್ಕಾ ಮತ್ತು ಅಲೋನ್ ಶಮ್ರಿಜ್ ಎಂದು ಗುರುತಿಸಲಾಗಿದೆ. ಮೂವರು ಕೂಡ ಅಕ್ಟೋಬರ್ 7ರಿಂದ ಹಮಾಸ್‌ನ ವಶದಲ್ಲಿದ್ದರು. ಮೃತ ಯೋತಮ್ ಒಬ್ಬ ಪ್ರತಿಭಾನ್ವಿತ ಸಂಗೀತಗಾರನಾಗಿದ್ದ ಮತ್ತು ಸಮೀರ್ ಒಬ್ಬ ಸೈಕ್ಲಿಸ್ಟ್ ಆಗಿದ್ದ ಎಂದು ವರದಿ ತಿಳಿಸಿದೆ.

ಘಟನೆ ಬಗ್ಗೆ ಇಸ್ರೇಲ್ ರಕ್ಷಣಾ ಪಡೆ (ಐಡಿಎಫ್) ವಕ್ತಾರ ರಿಯರ್ ಅಡ್ಮಿರಲ್ ಡೇನಿಯಲ್ ಮಾಹಿತಿ ನೀಡಿದ್ದು, ತಪ್ಪಿನಿಂದ ಪ್ರಮಾದವಾಗಿದೆ. ಇದು ನಮಗೆ ನೋವಿನ ಸಂಗತಿಯಾಗಿದೆ ಎಂದು ವಿಷಾದ ವ್ಯಕ್ತಪಡಿಸಿದ್ದರು.

ಈ ಬಗ್ಗೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಪ್ರತಿಕ್ರಿಯಿಸಿದ್ದು, ಐಡಿಎಫ್‌ನಿಂದ ದೊಡ್ಡ ಪ್ರಮಾದ ನಡೆದುಹೋಗಿದೆ. ಎಲ್ಲಾ ಒತ್ತೆಯಾಳುಗಳನ್ನು ಸುರಕ್ಷಿತವಾಗಿ ಮನೆಗೆ ಕರೆತರುವ ಪ್ರಯತ್ನವನ್ನು ಮುಂದುವರಿಸುತ್ತೇವೆ. ಇಡೀ ಇಸ್ರೇಲ್ ಜನರಿಗೆ ನಾನು ತಲೆಬಾಗುತ್ತೇನೆ ಮತ್ತು ಅಪಹರಣಕ್ಕೊಳಗಾದ ನಮ್ಮ ಮೂವರು ಪುತ್ರರ ಸಾವಿಗೆ ಸಂತಾಪ ಸೂಚಿಸುತ್ತೇನೆ. ನನ್ನ ಹೃದಯವು ಕಷ್ಟದ ಸಮಯದಲ್ಲಿ ದುಃಖಿತ ಕುಟುಂಬಗಳಿಗೆ ಜೊತೆಗೆ ನಿಲ್ಲುತ್ತದೆ ಎಂದು ಹೇಳಿದ್ದರು.

ಅಲ್ ಜಝೀರಾ ಪತ್ರಕರ್ತನ ಹತ್ಯೆ

ಇಸ್ರೇಲ್ ನಡೆಸಿದ ದಾಳಿಯಲ್ಲಿ ಗಾಝಾದಲ್ಲಿ ಅಲ್ ಜಝೀರಾ ಮಾದ್ಯಮ ಸಂಸ್ಥೆಯ ಕ್ಯಾಮರಾಮ್ಯಾನ್ ಸಮರ್ ಅಬು ದಕ್ಕಾ ಕೊಲ್ಲಲ್ಪಟ್ಟಿದ್ದಾರೆ ಎಂದು ಅಲ್ ಜಝೀರಾ ಹೇಳಿದೆ.

ಕತಾರ್ ನೆಟ್‌ವರ್ಕ್ ಪ್ರಕಾರ, ಇಸ್ರೇಲ್ ಯುದ್ಧ ಸಂಭವಿಸಿದಾಗ ಅಬು ದಕ್ಕಾ, ವರದಿಗಾರ ವೇಲ್ ದಹದೌಹ್ ಜೊತೆಗೆ ಖಾನ್ ಯೂನಿಸ್‌ನಲ್ಲಿರುವ ಶಾಲಾ ಮೈದಾನದಿಂದ ವರದಿ ಮಾಡುತ್ತಿದ್ದರು. ಖಾನ್ ಯೂನಿಸ್ ದಕ್ಷಿಣ ಗಾಝಾದ ಪ್ರಮುಖ ನಗರವಾಗಿದೆ. ಈ ಘಟನೆಯ ಬಗ್ಗೆ ಇಸ್ರೇಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಆದರೆ ಅಬು ದಕ್ಕಾ ಹತ್ಯೆಯ ಮೊದಲೇ  ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ಪ್ರಾರಂಭವಾದ ಬಳಿಕ ಕನಿಷ್ಠ 63 ಪತ್ರಕರ್ತರು ಹತ್ಯೆ ನಡೆದಿದೆ ಎನ್ನವುದನ್ನು ಅಂಕಿ-ಅಂಶಗಳು ಬಹಿರಂಗಪಡಿಸುತ್ತದೆ.

ಇದನ್ನು ಓದಿ: ಶುಕ್ರವಾರದ ನಮಾಝ್‌ಗೆ ನಿರಂತರ ಅವಕಾಶ ನಿರಾಕರಣೆ; ಕಣಿವೆ ರಾಜ್ಯದಲ್ಲಿ ಧಾರ್ಮಿಕ ಹಕ್ಕಿನ ಉಲ್ಲಂಘನೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಿಲಯನ್ಸ್ ಇಂಡಸ್ಟ್ರೀಸ್‌ಗೆ ರೂ. 56.44 ಕೋಟಿ ಸಿಜಿಎಸ್‌ಟಿ ದಂಡ

ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್, ಅಹಮದಾಬಾದ್‌ನ ಸಿಜಿಎಸ್‌ಟಿ ಜಂಟಿ ಆಯುಕ್ತರಿಂದ 56.44 ಕೋಟಿ ರೂ. ದಂಡದ ಆದೇಶವನ್ನು ಸ್ವೀಕರಿಸಿದೆ ಎಂದು ಶುಕ್ರವಾರ ತಿಳಿಸಿದೆ. ನವೆಂಬರ್ 25 ರಂದು ಹೊರಡಿಸಲಾದ ಆದೇಶದಲ್ಲಿ, ಕಂಪನಿಯ ಇನ್‌ಪುಟ್...

ತಮಿಳುನಾಡು| ರಸ್ತೆ ಅಪಘಾತದಲ್ಲಿ ಇಬ್ಬರು ದಲಿತ ಯುವಕರು ಸಾವು; ಜಾತಿ ವೈಷಮ್ಯ ಆರೋಪ

ತಮಿಳುನಾಡಿನ ಧರ್ಮಪುರಿಯಲ್ಲಿ ಬುಧವಾರ ರಾತ್ರಿ ಚಿನ್ನಾರ್ಥಳ್ಳಿ ಕೂಟ್ ರಸ್ತೆಯ ಬಳಿ ಅಪರಿಚಿತ ವಾಹನವೊಂದು ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸೊನ್ನಂಪಟ್ಟಿ ಗ್ರಾಮದ ಪರಿಶಿಷ್ಟ ಜಾತಿಗೆ ಸೇರಿದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ ಎಂದು...

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...