Homeಅಂತರಾಷ್ಟ್ರೀಯಜೀವನ ನಿರ್ವಹಣಾ ವೆಚ್ಚದ ಏರಿಕೆ ವಿರುದ್ಧ ಫ್ರಾನ್ಸ್‌ನಲ್ಲಿ ಪ್ರತಿಭಟನೆ: ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

ಜೀವನ ನಿರ್ವಹಣಾ ವೆಚ್ಚದ ಏರಿಕೆ ವಿರುದ್ಧ ಫ್ರಾನ್ಸ್‌ನಲ್ಲಿ ಪ್ರತಿಭಟನೆ: ಭಾರತೀಯ ಪ್ರಜೆಗಳಿಗೆ ಎಚ್ಚರಿಕೆ

- Advertisement -
- Advertisement -

ಜೀವನ ನಿರ್ವಹಣಾ ವೆಚ್ಚದ ಏರಿಕೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ಘರ್ಷಣೆಗಳಿಗೆ ತಿರುಗಿದ ಹಿನ್ನೆಲೆಯಲ್ಲಿ, ಪಶ್ಚಿಮ ಯುರೋಪಿಯನ್ ದೇಶದಲ್ಲಿರುವ ಮತ್ತು ಅಲ್ಲಿಗೆ ಪ್ರಯಾಣಿಸುತ್ತಿರುವ ತಮ್ಮ ನಾಗರಿಕರು ಎಚ್ಚರಿಕೆಯಿಂದಿರಬೇಕು ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪ್ರಯಾಣ ಮತ್ತು ಸುರಕ್ಷತಾ ಸಲಹೆಯನ್ನು ನೀಡಿದೆ.

ಶಾಲೆಗಳಲ್ಲಿನ ಕಳಪೆ ಪರಿಸ್ಥಿತಿ ಮತ್ತು ಶಿಕ್ಷಕರ ಕೊರತೆಯಿಂದಾಗಿ ಸೆಪ್ಟೆಂಬರ್ ಕೊನೆಯಲ್ಲಿ ಭುಗಿಲೆದ್ದ ಈ ಘರ್ಷಣೆಗಳು, ಹೆಚ್ಚುತ್ತಿರುವ ಜೀವನ ವೆಚ್ಚ, ಅಧಿಕ ಇಂಧನ ಬೆಲೆಗಳು, ಸಾರ್ವಜನಿಕ ವಲಯದ ಬಜೆಟ್ ಕಡಿತ ಮತ್ತು ಅಧ್ಯಕ್ಷ ಇಮ್ಯುಮ್ಯುಯೆಲ್ ಮ್ಯಾಕ್ರನ್ ಅವರ ಆಡಳಿತದ ಮೇಲಿನ ಸಾರ್ವಜನಿಕ ಅಸಮಾಧಾನದಿಂದಾಗಿ ದೇಶವ್ಯಾಪಿ ಸರ್ಕಾರ ವಿರೋಧಿ ಪ್ರತಿಭಟನೆಗಳಾಗಿ ಕ್ಷಿಪ್ರವಾಗಿ ವಿಸ್ತರಿಸಿದೆ.

ಭಾರತ ಸರ್ಕಾರ ನೀಡಿರುವ ಎಚ್ಚರಿಕೆಯು, ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು, ಸ್ಥಳೀಯ ಕರ್ಫ್ಯೂ ಮತ್ತು ಈ ಪ್ರದೇಶದಾದ್ಯಂತ ಸಂಭಾವ್ಯ ಸಾರಿಗೆ ವ್ಯತ್ಯಯಗಳ ಆಧಾರದಲ್ಲಿ ಬಂದಿದೆ.

ಫ್ರಾನ್ಸ್‌ನಲ್ಲಿ ವಾಸಿಸುತ್ತಿರುವ ಅಥವಾ ಅಲ್ಲಿಗೆ ಭೇಟಿ ನೀಡುತ್ತಿರುವ ಭಾರತೀಯ ನಾಗರಿಕರು, ವಿಶೇಷವಾಗಿ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಅಥವಾ ಪ್ರತಿಭಟನೆಗಳು ನಡೆಯುವ ಸ್ಥಳಗಳಲ್ಲಿ ಎಚ್ಚರಿಕೆ ವಹಿಸುವಂತೆ ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಾಮಾಜಿಕ ಮಾಧ್ಯಮವಾದ ‘ಎಕ್ಸ್’ನಲ್ಲಿ ನೀಡಿದ ಹೇಳಿಕೆಯಲ್ಲಿ ತಿಳಿಸಿದೆ.

ಫ್ರಾನ್ಸ್‌ನಲ್ಲಿನ ಪ್ರತಿಭಟನೆ ಮತ್ತು ನಾಗರಿಕ ಅಶಾಂತಿಯು ಸ್ಥಳೀಯ ಕರ್ಫ್ಯೂಗಳಿಗೆ ಹಾಗೂ ರಸ್ತೆ ಪ್ರಯಾಣ ಮತ್ತು ಸಾರ್ವಜನಿಕ ಸಾರಿಗೆಯಲ್ಲಿ ಸಂಭಾವ್ಯ ವಿಳಂಬ ಅಥವಾ ಕಡಿತಕ್ಕೆ ಕಾರಣವಾಗಿದೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಪ್ರಯಾಣಿಕರು ಮತ್ತು ನಿವಾಸಿಗಳು ಸ್ಥಳೀಯ ಫ್ರೆಂಚ್ ಅಧಿಕಾರಿಗಳು, ಫ್ರೆಂಚ್ ಪ್ರಿಫೆಕ್ಚರ್ ಆಫ್ ಪೊಲೀಸ್‌ನಿಂದ ಬರುವ ಅಪ್‌ಡೇಟ್‌ಗಳನ್ನು ಮತ್ತು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಅಧಿಕೃತ ‘ಎಕ್ಸ್’ ಖಾತೆಯ ಹೇಳಿಕೆಗಳನ್ನು ನಿಕಟವಾಗಿ ಅನುಸರಿಸಬೇಕು ಎಂದು ಭಾರತೀಯ ರಾಯಭಾರ ಕಚೇರಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

“ಫ್ರಾನ್ಸ್‌ಗೆ ಅಥವಾ ಫ್ರಾನ್ಸ್ ಒಳಗೆ ಪ್ರಯಾಣಿಸಲು ಯೋಜಿಸುತ್ತಿರುವವರು ನೈಜ-ಸಮಯದ ವೇಳಾಪಟ್ಟಿ ಬದಲಾವಣೆಗಳಿಗಾಗಿ ತಮ್ಮ ವಿಮಾನಯಾನ ಸಂಸ್ಥೆಗಳು ಅಥವಾ ಪ್ರಯಾಣ ಸಂಸ್ಥೆಗಳೊಂದಿಗೆ ನೇರ ಸಂಪರ್ಕದಲ್ಲಿರಲು ಶಿಫಾರಸು ಮಾಡಲಾಗಿದೆ” ಎಂದು ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತನ್ನ ಹೇಳಿಕೆಯಲ್ಲಿ ಸೇರಿಸಿದೆ.

ಫ್ರಾನ್ಸ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ತನ್ನ ಅಧಿಕೃತ ‘ಎಕ್ಸ್’ ಖಾತೆಯಲ್ಲಿ ಹೀಗೆ ಹೇಳಿದೆ: “ಫ್ರಾನ್ಸ್‌ನಲ್ಲಿ ಇತ್ತೀಚಿನ ಬೆಳವಣಿಗೆಗಳು ಮತ್ತು ವಿಧಿಸಲಾದ ಸ್ಥಳೀಯ ಕರ್ಫ್ಯೂಗಳ ದೃಷ್ಟಿಯಿಂದ, ದಯವಿಟ್ಟು ಜಾಗರೂಕರಾಗಿರಿ ಮತ್ತು ಎಚ್ಚರಿಕೆ ವಹಿಸಿ. ದಯವಿಟ್ಟು ದೊಡ್ಡ ಜನಸಂದಣಿ ಮತ್ತು ಪ್ರತಿಭಟನೆಗಳು ನಡೆಯುತ್ತಿರುವ ಜನದಟ್ಟಣೆಯ ಸ್ಥಳಗಳನ್ನು ತಪ್ಪಿಸಿ, ಸ್ಥಳೀಯ ಫ್ರೆಂಚ್ ಅಧಿಕಾರಿಗಳು ನೀಡುವ ಸೂಚನೆಗಳು ಹಾಗೂ ಸಲಹೆಗಳನ್ನು ಪಾಲಿಸಿ. ದಯವಿಟ್ಟು ಸ್ಥಳೀಯ ಸುದ್ದಿಗಳ ಮೂಲಕ ಮಾಹಿತಿ ಪಡೆದುಕೊಳ್ಳಿ, ಅಧಿಕೃತ ನವೀಕರಣಗಳನ್ನು ಅನುಸರಿಸಿ (https://gouvernement.fr) ಮತ್ತು ಸಾರ್ವಜನಿಕ ಸಾರಿಗೆ ವ್ಯತ್ಯಯಗಳಿಗಾಗಿ ಪರಿಶೀಲಿಸಿ (https://ratp.fr).

ಯಾವುದೇ ತುರ್ತು ಸಂದರ್ಭದಲ್ಲಿ, ಭಾರತೀಯ ನಾಗರಿಕರು ಇವರನ್ನು ಸಂಪರ್ಕಿಸಬಹುದು:

  • ಭಾರತೀಯ ರಾಯಭಾರ ಕಚೇರಿ, ಪ್ಯಾರಿಸ್: +33 6 48 34 00 63 | [email protected]
  • ಭಾರತದ ದೂತವಾಸ ಕಚೇರಿ, ಮಾರ್ಸೇಲ್: +33 7 43 16 25 59 | [email protected]”

ಅಕ್ಟೋಬರ್ 17 ರಂದು ದೇಶಾದ್ಯಂತ ನಡೆದ ಗಲಭೆಗಳು ವ್ಯಾಪಕ ವಿನಾಶ ಮತ್ತು ಸಾವಿರಾರು ಬಂಧನಗಳಿಗೆ ಕಾರಣವಾದ ನಂತರ, ಶನಿವಾರ ಘೋಷಿಸಲಾದ ಹೊಸ ಸಾಮಾಜಿಕ ಹೋರಾಟಗಳಲ್ಲಿ ಹಿಂಸಾಚಾರವನ್ನು ತಡೆಯಲು ತನ್ನ ಕೈಲಾದ ಎಲ್ಲವನ್ನೂ ಮಾಡುವುದಾಗಿ ಫ್ರೆಂಚ್ ಸರ್ಕಾರ ಪ್ರತಿಜ್ಞೆ ಮಾಡಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಂತಹ ಹಿಂಸಾತ್ಮಕ ಘಟನೆಗಳು ಮರುಕಳಿಸುವುದನ್ನು ತಡೆಯಲು ಸರ್ಕಾರವು ಲಭ್ಯವಿರುವ ಎಲ್ಲಾ ಕಾನೂನು ಸಾಧನಗಳನ್ನು ಬಳಸುತ್ತದೆ ಎಂದು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಬುಧವಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಕತಾರ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಾ, ಅಕ್ಟೋಬರ್ 24 ರಂದು ನಿಗದಿಯಾಗಿರುವ ಹೊಸ ಸುತ್ತಿನ ಪ್ರತಿಭಟನೆಗಳ ಮುನ್ನ ಫ್ರೆಂಚ್ ಸರ್ಕಾರದ ದೃಢಸಂಕಲ್ಪವನ್ನು ಮ್ಯಾಕ್ರನ್ ಒತ್ತಿಹೇಳಿದ್ದಾರೆ ಎಂದು ಫ್ರೆಂಚ್ ದೂರದರ್ಶನ ಚಾನೆಲ್ ಬಿಎಫ್‌ಎಂ ಟಿವಿ ತಿಳಿಸಿದೆ.

ತುರ್ತು ಪರಿಸ್ಥಿತಿಯನ್ನು ಘೋಷಿಸುವಂತೆ ಕೆಲವು ರಾಜಕಾರಣಿಗಳು ಮಾಡಿದ ಬೇಡಿಕೆಗಳಿಗೆ ಸಂಬಂಧಿಸಿದಂತೆ, ಅಂತಹ ಕ್ರಮವು ಈ ಹಂತದಲ್ಲಿ ಅಗತ್ಯವಿಲ್ಲ ಎಂದು ಫ್ರೆಂಚ್ ಅಧ್ಯಕ್ಷರು ಹೇಳಿದರು. ಅಗತ್ಯವಿದ್ದರೆ ಅದನ್ನೂ ನಂತರ ಬಳಸಿಕೊಳ್ಳಬಹುದು ಎಂದರು.

ಅಕ್ಟೋಬರ್ 17 ರ ಗಲಭೆಯ ನಂತರ ಫ್ರಾನ್ಸ್ ಹಲವಾರು ನಗರಗಳಲ್ಲಿ ಜಾರಿಗೊಳಿಸಿರುವ ಕರ್ಫ್ಯೂಗಳನ್ನು ವಿಧಿಸಿತು. ಸೋಮವಾರ ರಾತ್ರಿ ಶಾಂತಿಯನ್ನು ಕಾಪಾಡಿಕೊಳ್ಳಲು ಇದು ಸಹಾಯ ಮಾಡಿದೆ ಎಂದು ಪ್ರಧಾನಿ ಸೆಬಾಸ್ಟಿಯನ್ ಲೆಕೋರ್ನು ಮಂಗಳವಾರ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಯಾಂಗ ಬಂಧನದಿಂದ ಬಿಡುಗಡೆ ಬೆನ್ನಲ್ಲೇ ಸಿಜೆಪಿ ನಾಯಕರಿಗೆ ದೆಹಲಿ ಕ್ರೈಮ್ ಬ್ರಾಂಚ್ ಸಮನ್ಸ್

ದೆಹಲಿ ಪೊಲೀಸ್ ಅಪರಾಧ ವಿಭಾಗವು (ಕ್ರೈಮ್ ಬ್ರಾಂಚ್) ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರಿಗೆ ಸಮನ್ಸ್ ಜಾರಿ ಮಾಡಿದ್ದು, ಗುರುವಾರ (ಅ.22) ಮಧ್ಯಾಹ್ನ 12...

ಸನಾತನ ಧರ್ಮದ ಅನುಯಾಯಿಗಳಿಗೆ ಮಾತ್ರ ದೇವಿ ವಿಗ್ರಹಗಳನ್ನು ಸ್ಪರ್ಶಿಸಲು ಅನುಮತಿ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ

ಹುಗ್ಲಿ ನದಿಯಲ್ಲಿ ದುರ್ಗಾ ವಿಸರ್ಜನೆಯ ಸಮಯದಲ್ಲಿ ಸನಾತನ ಧರ್ಮದ ಅನುಯಾಯಿಗಳಿಗೆ ಮಾತ್ರ ದೇವಿಯ ವಿಗ್ರಹಗಳನ್ನು ಸ್ಪರ್ಶಿಸಲು ಅನುಮತಿ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಬುಧವಾರ ಹೇಳಿದ್ದಾರೆ. ಸುರಕ್ಷತಾ ಕಾಳಜಿಗಳು ಮತ್ತು...

ಮಹಾರಾಷ್ಟ್ರ ಸಿಇಒ ಮನವಿಗೆ ಸ್ಪಂದಿಸಿದ ಚುನಾವಣಾ ಆಯೋಗ: ‘ಇಸಿಐನೆಟ್’ ಸಾಫ್ಟ್‌ವೇರ್‌ನಲ್ಲಾಯಿತು 4 ಪ್ರಮುಖ ಬದಲಾವಣೆ!

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಂತ್ರಿಕ ಸಾಫ್ಟ್‌ವೇರ್‌ನ ಅತಿಯಾದ ನಿಯಂತ್ರಣವು ಸ್ಥಳೀಯ ನೋಂದಣಿ ಅಧಿಕಾರಿಗಳ ಶಾಸನಬದ್ಧ ಅಧಿಕಾರವನ್ನೇ ಕಸಿದುಕೊಳ್ಳುತ್ತಿದೆ ಎಂಬ ತೀವ್ರ ಕಳವಳದ ಬೆನ್ನಲ್ಲೇ, ಭಾರತೀಯ ಚುನಾವಣಾ ಆಯೋಗವು ತನ್ನ 'ಇಸಿಐನೆಟ್' (ECINet)...

ಮಸೀದಿಯಲ್ಲಿ ಚುಂಬಿಸಿದ್ದಕ್ಕೆ ಮರಣದಂಡನೆ? ಸೌದಿ ಅಮಾನವೀಯ ತೀರ್ಪಿಗೆ ತೀವ್ರ ಆಕ್ರೋಶ

ಮುಸ್ಲಿಂ ಸಮುದಾಯದ ಪವಿತ್ರ ನಗರವಾದ ಮೆಕ್ಕಾದ ಮಸೀದಿಯೊಂದರಲ್ಲಿ ಅನೈತಿಕ ಕೃತ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಸೌದಿ ಅರೇಬಿಯಾ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳಿಗೆ ಮರಣದಂಡನೆ ವಿಧಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಮರಣದಂಡನೆಗಳು...

ಯೂಸುಫ್ ಪಠಾಣ್‌ಗೆ ವಡೋದರಾದ ವಿವಾದಿತ ನಿವೇಶನ ಹಂಚಿಕೆ ಮಾಡಿದ ಗುಜರಾತ್ ಬಿಜೆಪಿ ಸರ್ಕಾರ : ಟಿಎಂಸಿ ತೊರೆದು ಎನ್‌ಡಿಎ ಬೆಂಬಲಿಸಿದ್ದಕ್ಕೆ ಗಿಫ್ಟ್?

ಲೋಕಸಭಾ ಸಂಸದ ಮತ್ತು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರಿಗೆ ವಡೋದರಾದಲ್ಲಿರುವ 978 ಚದರ ಮೀಟರ್ ವಿಸ್ತೀರ್ಣದ ವಿವಾದಿತ ನಿವೇಶನವನ್ನು ಹಂಚಿಕೆ ಮಾಡಲು ಗುಜರಾತ್‌ನ ಬಿಜೆಪಿ ಸರ್ಕಾರವು ಅನುಮೋದನೆ ನೀಡಿದೆ. ಈ ಸಂಬಂಧ...

‘ಒಬ್ಬರೇ ಭೇಟಿಯಾಗಿದ್ದು ಯಾಕೆ?’ : ಎಪ್‌ಸ್ಟೀನ್ ಜೊತೆಗಿನ ಸಚಿವ ಹರ್ದೀಪ್ ಸಿಂಗ್ ಪುರಿ ಪೋಟೋ ಹಂಚಿಕೊಂಡು ಪ್ರತಿಪಕ್ಷ ನಾಯಕರ ಪ್ರಶ್ನೆ, ಉತ್ತರ ನೀಡಲು ಆಗ್ರಹ

ಕಾಂಗ್ರೆಸ್, ಟಿಎಂಸಿ ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ವಿರೋಧ ಪಕ್ಷದ ನಾಯಕರು, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಅನ್ನು ಭೇಟಿಯಾಗಿರುವ ಫೋಟೋ...

ಸಿಎಂಆರ್‌ಎಲ್-ಎಕ್ಸಾಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನಗಳ ತಡೆ ನೀಡಿದ ಸುಪ್ರೀಂ ಕೋರ್ಟ್: ಹೈಕೋರ್ಟ್‌ನಲ್ಲಿ ಮೇಲ್ಮನವಿಗೆ ಅವಕಾಶ

ಖಾಸಗಿ ಕಂಪನಿಯಿಂದ ಅಕ್ರಮ ಹಣಕಾಸು ವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 'ಸಿಎಂಆರ್‌ಎಲ್-ಎಕ್ಸಾಲಾಜಿಕ್' ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪುತ್ರಿ ವೀಣಾ ಟಿ. ಹಾಗೂ ಅಳಿಯ, ಮಾಜಿ ಸಚಿವ...

ನ್ಯಾಯಾಂಗ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಸಿಜೆಪಿಯ ಸೌರವ್ – ಅಶುತೋಷ್

ಪ್ರತಿಭಟನಾ ಸ್ಥಳವಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿರುವ ಜಂತರ್ ಮಂತರ್‌ನಲ್ಲಿ ರಾಷ್ಟ್ರಧವಜ ಹಾರಿಸಿ ಬಂಧನಕ್ಕೊಳಗಾಗಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ, ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ)...

ಆಂಧ್ರ ಪ್ರದೇಶ ಮುನ್ಸಿಪಲ್ ಚುನಾವಣೆ: ವೈಎಸ್‌ಆರ್‌ಸಿಪಿ ಅರ್ಜಿ ಪರಿಶೀಲಿಸಿ ನಾಳೆಯೊಳಗೆ ತೀರ್ಮಾನಿಸಿ; ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ!

ಆಂಧ್ರಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳೆ ವ್ಯಾಪಕ ಹಿಂಸಾಚಾರ ನಡೆಸಿ, ತಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ತಡೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಪ್ರಮುಖ...

ಸಿಜೆಪಿ ನಾಯಕರು – ನೇಹಾ ಬೋರಾ ಅರ್ಜಿಗಳ ತುರ್ತು ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್‌

ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ತಮ್ಮ ನ್ಯಾಯಾಂಗ ಬಂಧನವನ್ನು ವಿಸ್ತರಿಸಿರುವುದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಸಲ್ಲಿಸಿರುವ ಅರ್ಜಿಯನ್ನು ಬುಧವಾರ (ಅ.21) ವಿಚಾರಣೆ...