Homeಅಂತರಾಷ್ಟ್ರೀಯವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

ವಲಸಿಗರ ವಿರುದ್ಧ ಶೋಧ ಕಾರ್ಯಾಚರಣೆಗೆ ವಿರೋಧ: ಲಾಸ್‌ ಏಂಜಲೀಸ್‌ನಲ್ಲಿ ತೀವ್ರಗೊಂಡ ಪ್ರತಿಭಟನೆ

- Advertisement -
- Advertisement -

ಅಮೆರಿಕದ ಲಾಸ್ ಏಂಜಲೀಸ್‌ ನಗರದಲ್ಲಿ ವಲಸೆ ಅಧಿಕಾರಿಗಳು ಅಕ್ರಮ ವಲಸಿಗರ ವಿರುದ್ದ ಕೈಗೊಂಡಿರುವ ಶೋಧ ಕಾರ್ಯಾಚರಣೆ ವಿರುದ್ದ ಪ್ರತಿಭಟನೆ ಭುಗಿಲೆದ್ದಿದೆ. ಕೆಲವೆಡೆ ಪ್ರತಿಭಟನೆ ಹಿಂಸೆಗೆ ತಿರುಗಿದೆ ಎಂದು ವರದಿಯಾಗಿದೆ.

ಶುಕ್ರವಾರ ಪ್ರಾರಂಭಗೊಂಡ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿಭಟನಾ ನಿರತರು ಫೆಡರಲ್ ಸಿಬ್ಬಂದಿ ಮೇಲೆ ದಾಳಿ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅಧ್ಯಕ್ಷ ಟ್ರಂಪ್ ಭದ್ರತಾ ಪಡೆಗಳನ್ನು ನಿಯೋಜಿಸಿದ್ದಾರೆ. ಇದು ಜನರ ಆಕ್ರೋಶ ಹೆಚ್ಚಾಗಲು ಕಾರಣವಾಗಿದೆ. ಭಾನುವಾರ ಭದ್ರತಾ ಸಿಬ್ಬಂದಿ ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ.

ನಗರದ ಮಧ್ಯಭಾಗದಲ್ಲಿ ಭಾನುವಾರ ನೂರಾರು ಪ್ರತಿಭಟನಾಕಾರರು ವಲಸಿಗರ ಶೋಧ ಕಾರ್ಯಾಚರಣೆಯಲ್ಲಿ ಬಂಧಿತರಾದವರನ್ನು ಬಂಧಿಸಿಟ್ಟಿರುವ ಮೆಟ್ರೋಪಾಲಿಟನ್ ಬಂಧನ ಕೇಂದ್ರದ ಹೊರಗೆ ಜಮಾಯಿಸಿದ್ದರಿಂದ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಬಂಧನ ಕೇಂದ್ರದ ಬಳಿ ಬೀಡುಬಿಟ್ಟಿದ್ದ ಭದ್ರತಾ ಪಡೆಗಳ ವಿರುದ್ದ “ಶೇಮ್, ಶೇಮ್” “ವಾಪಸ್ ಹೋಗಿ” ಇತ್ಯಾದಿ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಜನರನ್ನು ಚದುರಿಸಲು ಅಶ್ರುವಾಯು ಸಿಡಿಸಿದ್ದಾರೆ ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋಗಳಲ್ಲಿ ಪ್ರತಿಭಟನಾಕಾರರು ವಾಹನಗಳಿಗೆ ಬೆಂಕಿ ಹಚ್ಚಿರುವುದು ಮತ್ತು ಭದ್ರತಾ ಪಡೆಗಳು ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸುತ್ತಿರುವುದನ್ನು ನೋಡಬಹುದು.

“ಒಂದು ಕಾಲದಲ್ಲಿ ಅಮೆರಿಕದ ಶ್ರೇಷ್ಠ ನಗರವಾಗಿದ್ದ ಲಾಸ್ ಏಂಜಲೀಸ್ ಅನ್ನು ಅಕ್ರಮ ವಲಸಿಗರು ಮತ್ತು ಕ್ರಿಮಿನಲ್‌ಗಳು ಆಕ್ರಮಿಸಿಕೊಂಡಿದ್ದಾರೆ. ಈಗ ಹಿಂಸಾತ್ಮಕ, ದಂಗೆಕೋರ ಗುಂಪುಗಳು ನಮ್ಮ ಗಡಿಪಾರು ಕಾರ್ಯಾಚರಣೆಗಳನ್ನು ನಿಲ್ಲಿಸಲು ಫೆಡರಲ್ ಏಜೆಂಟ್‌ಗಳ ಮೇಲೆ ದಾಳಿ ಮಾಡುತ್ತಿವೆ. ಆದರೆ, ಈ ಕಾನೂನುಬಾಹಿರ ಗಲಭೆಗಳು ನಮ್ಮ ಸಂಕಲ್ಪವನ್ನು ಬಲಪಡಿಸುತ್ತವೆ. ಲಾಸ್ ಏಂಜಲೀಸ್ ಅನ್ನು ವಲಸಿಗರ ಆಕ್ರಮಣದಿಂದ ಮುಕ್ತಗೊಳಿಸಲು ಮತ್ತು ಈ ವಲಸಿಗರ ಗಲಭೆಗಳನ್ನು ಕೊನೆಗೊಳಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾನು ಹೋಮ್‌ಲ್ಯಾಂಡ್ ಸೆಕ್ಯುರಿಟಿ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್, ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಮತ್ತು ಅಟಾರ್ನಿ ಜನರಲ್ ಪ್ಯಾಮ್ ಬೋಂಡಿ ಅವರಿಗೆ ನಿರ್ದೇಶನ ನೀಡುತ್ತಿದ್ದೇನೆ. ಅಕ್ರಮ ವಲಸಿಗರನ್ನು ಹೊರಹಾಕಿ ಲಾಸ್‌ ಏಂಜಲೀಸ್ ಅನ್ನು ಸ್ವಚ್ಛ ಮಾಡುತ್ತೇವೆ” ಎಂದು ಅಧ್ಯಕ್ಷ ಟ್ರಂಪ್ ಸಾಮಾಜಿಕ ಮಾಧ್ಯಮ ಟ್ರುಥ್ ಸೋಶಿಯಲ್‌ನಲ್ಲಿ ಬರೆದುಕೊಂಡಿದ್ದಾರೆ.

ಪರಿಸ್ಥಿತಿ ಹದಗೆಡುತ್ತಿದ್ದರೂ, ಟ್ರಂಪ್ 1807ರ ದಂಗೆ ಕಾಯ್ದೆಯನ್ನು ಇನ್ನೂ ಜಾರಿಗೊಳಿಸಿಲ್ಲ. ಆದರೂ, ಅಶಾಂತಿ ಹರಡಿದರೆ ವ್ಯಾಪಕ ಮಿಲಿಟರಿ ಕಾರ್ಯಾಚರಣೆ ಕೈಗೊಳ್ಳುವ ಸೂಚನೆಯನ್ನು ಅವರು ನೀಡಿದ್ದಾರೆ. “ನಮ್ಮ ದೇಶದಲ್ಲಿ ಧಂಗೆ ನಡೆಯಲು ಬಿಡುವುದಿಲ್ಲ. ಸೇನೆ ನಿಯೋಜಿಸುತ್ತೇವೆ” ಎಂದು ಮಾಧ್ಯಮಗಳಿಗೆ ಟ್ರಂಪ್ ಹೇಳಿದ್ದಾರೆ.

ಕ್ಯಾಲಿಫೋರ್ನಿಯಾ ಗವರ್ನರ್ ಗ್ಯಾವಿನ್ ನ್ಯೂಸಮ್ ಸೇನೆ ನಿಯೋಜನೆಯನ್ನು “ದೇಶದ ಸಾರ್ವಭೌಮತ್ವದ ಗಂಭೀರ ಉಲ್ಲಂಘನೆ” ಎಂದು ಖಂಡಿಸಿದ್ದಾರೆ. ಸೇನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಫೆಡರಲ್ ಅಧಿಕಾರಿಗಳನ್ನು ಅವರು ಒತ್ತಾಯಿಸಿದ್ದಾರೆ.

ಹಲವರ ಬಂಧನ

ಪ್ರತಿಭಟನಾ ನಿರತ ಹಲವರನ್ನು ಲಾಸ್ ಏಂಜಲೀಸ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. “ಲಾಸ್‌ ಏಂಜಲೀಸ್ ಡೌನ್‌ಟೌನ್‌ನ ಸಿವಿಕ್ ಸೆಂಟರ್‌ನಲ್ಲಿ ಕಾನೂನು ಬಾಹಿರ ಸಭೆ ಘೋಷಣೆ ಮಾಡಲಾಗಿದೆ. ಈ ಸಂಬಂಧ ಹಲವರನ್ನು ಬಂಧಿಸಲಾಗಿದೆ. ಜನರು ಡೌನ್‌ಟೌನ್ ಸಿವಿಕ್ ಸೆಂಟರ್‌ನಿಂದ ದೂರ ಇರಿ” ಎಂದು ಭಾನುವಾರ ಪೊಲೀಸರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು.

ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...