Homeಚಳವಳಿದೇಶಾದ್ಯಂತ ರೈತರ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ- AIKSCC ಅಧಿಕೃತ ಹೇಳಿಕೆ

ದೇಶಾದ್ಯಂತ ರೈತರ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ- AIKSCC ಅಧಿಕೃತ ಹೇಳಿಕೆ

ಕೇಂದ್ರ ಸಚಿವರೊಂದಿಗಿನ ಮಾತುಕತೆ ಅನಿರ್ದಿಷ್ಟವಾಗಿ ಕೊನೆಗೊಂಡಿದ್ದು ನಾಳೆ ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

- Advertisement -
- Advertisement -

ನಿನ್ನೆ ನಡೆದ ಮೂವರು ಕೇಂದ್ರ ಸಚಿವರೊಂದಿಗಿನ ರೈತ ಮುಖಂಡರ ಸಭೆಯ ನಿರ್ಧಾರಗಳಿಗೆ ರೈತ ಸಂಘಟನೆಗಳು ತಿರಸ್ಕರಿಸಿದ್ದು, ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು AIKSCC ಅಧಿಕೃತ ಹೇಳಿಕೆ ನೀಡಿದೆ.

AIKSCC (All India Kisan Sangarsh Coordination Committee) ಬಿಡುಗಡೆ ಮಾಡಿರುವ ಬುಲೆಟಿನ್‌ನಲ್ಲಿ ಈ ನಿರ್ಧಾರವನ್ನು ತಿಳಿಸಿದೆ. ಸರ್ಕಾರದೊಂದಿಗೆ ನಡೆದ ಮಾತುಕತೆ ಅನಿರ್ದಿಷ್ಟವಾಗಿದ್ದು, ರೈತ ಸಂಘಟನೆಗಳಿಗೆ ಸರ್ಕಾರದ ಪ್ರಸ್ತಾಪ ಒಪ್ಪಿತವಾಗಿಲ್ಲ ಹೀಗಾಗಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಳ್ಳುತ್ತವೆ ಎಂದು ತಿಳಿಸಿದೆ.

35 ರೈತ ಮುಖಂಡರು, ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಸಚಿವ ಪಿಯೂಷ್ ಗೋಯಲ್ ಮತ್ತು  ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಅವರ ಸಚಿವರ ನಿಯೋಗವನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ತಿಳಿಸಿದ್ದಾರೆ. ಕೇಂದ್ರದ ಮೂರು ಕೃಷಿ ಕಾಯ್ದೆಗಳು ಮತ್ತು ವಿದ್ಯುತ್ ತಿದ್ದುಪಡಿ ಮಸೂದೆ 2020 ಅನ್ನು ಹಿಂತೆಗೆದುಕೊಳ್ಳುವುದು ಈ ಬೇಡಿಕೆಯಲ್ಲಿವೆ. 32 ರೈತ ಮುಖಂಡರು, ಪಂಜಾಬ್ ಒಕ್ಕೂಟಗಳು, ಹರಿಯಾಣದ ರೈತ ಮುಖಂಡರು,  ರಾಷ್ಟ್ರೀಯ ರೈತ ಸಂಘಟನೆಗಳಾದ ಎಐಕೆಎಸ್‌ಸಿಸಿ ಮತ್ತು ಆರ್‌ಕೆಎಂಎಸ್‌ ಪ್ರತಿನಿಧಿಗಳು ಸಭೆಯಲ್ಲಿದ್ದರು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಬಗ್ಗೆ ಸಮಿತಿ ರಚಿಸುವ ಸರ್ಕಾರದ ಪ್ರಸ್ತಾಪ ತಿರಸ್ಕರಿಸಿದ ರೈತ ಮುಖಂಡರು: ಪ್ರತಿಭಟನೆ ಮುಂದುವರಿಕೆ

ಕೇಂದ್ರ ಸಚಿವರೊಂದಿಗಿನ ಮಾತುಕತೆ ಅನಿರ್ದಿಷ್ಟವಾಗಿ ಕೊನೆಗೊಂಡಿದೆ. ಡಿಸೆಂಬರ್ 3(ನಾಳೆ)ರಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯಲಿದೆ.

ರೈತರ ಆಕ್ಷೇಪಣೆಗಳನ್ನು ಪರಿಶೀಲಿಸಲು ಮತ್ತು ಅವರ ಕಳವಳಗಳನ್ನು ಅಧ್ಯಯನ ಮಾಡಲು 5 ಸದಸ್ಯರ ಸಮಿತಿಯನ್ನು ರಚಿಸುವ ಸರ್ಕಾರದ ಪ್ರಸ್ತಾಪವನ್ನು ರೈತ ಮುಖಂಡರು ತಿರಸ್ಕರಿಸಿ ಪ್ರತಿಭಟನೆ ಮುಂದುವರಿಸುವುದಾಗಿ ಘೋಷಿಸಿದ್ದಾರೆ.

ಸರ್ಕಾರವು ಕೃಷಿ ಸಂಘಟನೆಗಳಿಗೆ ಕೃಷಿ ಮಸೂದೆಗಳ ಬಗ್ಗೆ ತಮ್ಮ ವಿಮರ್ಶೆಯನ್ನು ವಿವರವಾಗಿ ಒದಗಿಸಲು ಕೇಳಿದೆ. ಕೃಷಿ ಒಕ್ಕೂಟಗಳು ಸೂಚಿಸಿರುವ ಆಕ್ಷೇಪಣೆಗಳು ಮತ್ತು ನ್ಯೂನತೆಗಳನ್ನು ಪರಿಶೀಲಿಸಲು ಸರ್ಕಾರ ಸಿದ್ಧವಿದೆ ಎಂದು ಸಚಿವರು ಹೇಳಿದ್ದಾರೆ ಎಂದು ಬುಲೆಟಿನ್‌ನಲ್ಲಿ ಉಲ್ಲೇಖಿಸಲಾಗಿದೆ.

ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೆ ರೈತರ ಪ್ರತಿಭಟನೆ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಎಐಕೆಎಸ್‌ಸಿಸಿ ಘೋಷಿಸಿದೆ. ಪ್ರತಿಭಟನೆ ನಡೆಸುತ್ತಿರುವ ರೈತರ ಬೇಡಿಕೆಗಳಿಗೆ ಗುರುವಾರದೊಳಗೆ ಸರ್ಕಾರ ಒಪ್ಪದಿದ್ದರೆ ಮಹಾರಾಷ್ಟ್ರದಿಂದ ದೆಹಲಿಗೆ ಮೆರವಣಿಗೆ ಪ್ರಾರಂಭಿಸುವುದಾಗಿ ಮಹಾರಾಷ್ಟ್ರ ರೈತ ಗುಂಪುಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.


ಇದನ್ನೂ ಓದಿ: ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ ಶಾಹೀನ್‌ಬಾಗ್ ಅಜ್ಜಿ ಬಿಲ್ಕೀಸ್‌ರನ್ನು ಬಂಧಿಸಿದ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...