Homeಕರ್ನಾಟಕಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಲ್ಲಿಲ್ಲಿ ವಿರೋಧ??

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ಎಲ್ಲಿಲ್ಲಿ ವಿರೋಧ??

- Advertisement -
- Advertisement -

ಈಶಾನ್ಯ ರಾಜ್ಯಗಳ ಪೈಕಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ಅಂತ್ಯಗೊಂಡಿರುವ ಅಸ್ಸಾಂ ಅಕ್ಷರಶಃ ಕುದಿಯತೊಡಗಿದೆ. ಪ್ರತಿಭಟನೆಗಳನ್ನು ಹತ್ತಿಕ್ಕುವ ಸಲುವಾಗಿ ಇಂಟರ್ ನೆಟ್ ಸೇವೆಗಳನ್ನು ಸ್ಥಗಿತ ಮಾಡಿದೆ. ರಾಜಧಾನಿ ಗುವಾಹಟಿ ಸೇರಿದಂತೆ ರಾಜ್ಯದ ಪ್ರಮುಖ ನಗರಳಲ್ಲಿ ಭಾರತೀಯ ಸೇನಾಪಡೆ, ಅರೆ ಸೇನಾಪಡೆಗಳು ಮತ್ತು ಪೊಲೀಸರನ್ನು ನಿಯೋಜನೆ ಮಾಡಿದ್ದು ಕಟ್ಟೆಚ್ಚರ ವಹಿಸಲಾಗಿದೆ. ಕರ್ಪ್ಯೂ ವಿಧಿಸಿರುವ ನಡುವೆಯೇ ಪ್ರತಿಭಟನೆಗಳು ತೀವ್ರಗೊಂಡಿವೆ. ಸಾವಿರಾರು ಸಂಖ್ಯೆಯಲ್ಲಿ ರಸ್ತೆಗೆ ಇಳಿದಿರುವ ಪ್ರತಿಭಟನಾಕಾರರು ಟೈರ್ ಗಳಿಗೆ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾಕಾರರನ್ನು ಹತ್ತಿಕ್ಕಲು ಸೇನೆ ಗುಂಡಿನ ದಾಳಿ ನಡೆಸಿದ್ದು ಇಬ್ಬರು ಅಸುನೀಗಿದ್ದಾರೆ. ನಾಲ್ವರು ಗಾಯಗೊಂಡಿದ್ದು ಪರಿಸ್ಥಿತಿ ಬಿಗಡಾಯಿಸಿದೆ.

ಅಸ್ಸಾಂ ರಾಜ್ಯದಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಪೌರತ್ವ ನೋಂದಣಿ ನಡೆದಾಗ 40 ಲಕ್ಷ ಮಂದಿ ಪಟ್ಟಿಯಿಂದ ಹೊರಗೆ ಉಳಿದಿದ್ದರು. ಇದು ತಾರತಮ್ಯದಿಂದ ಕೂಡಿದೆ ಎಂದು ಪ್ರಶ್ನಿಸಿ ಹಲವರು ಸುಪ್ರೀಂಕೋರ್ಟ್ ಮೊರೆ ಹೋದರು. ಪರಿಣಾಮ ಸುಪ್ರೀಂಕೋರ್ಟ್ ಮೇಲುಸ್ತುವಾರಿಯಲ್ಲಿ ಎರಡನೇ ಬಾರಿಗೆ ಎನ್.ಸಿ.ಆರ್ ನಡೆಯಿತು. ಈ ಪಟ್ಟಿಯಿಂದಲೂ 19 ಲಕ್ಷ ಹೊರಗುಳಿದರು. ಇಷ್ಟೆಲ್ಲಾ ಆದಾಗಲೂ ಮೌನವಹಿಸಿದ್ದ ಅಸ್ಸಾಂ ಜನತೆ ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ ನ ಉಭಯ ಸದನಗಳಲ್ಲಿ ಅಂಗೀಕರಿಸಿ ಕಾಯ್ದೆಯಾಗಿ ರೂಪಿಸುವ ಸಂದರ್ಭದಲ್ಲಿ ಇದರಿಂದ ಕೆರಳಿ ಅಸ್ಸಾಂ ಜನತೆ ಬೀದಿಗೆ ಇಳಿದಿದ್ದಾರೆ.

ಪ್ರತಿಭಟನೆಯಲ್ಲಿ ವಕೀಲರು, ವಿದ್ಯಾರ್ಥಿಗಳು ಸಾಮಾಜಿಕ ಕಾರ್ಯಕರ್ತರು, ವೈದ್ಯರು, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇರುವ ಎಲ್ಲರೂ ಭಾಗವಹಿಸಿದ್ದು ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಂಡಿದೆ. ಅಷ್ಟೇ ಅಲ್ಲ ಪೌರತ್ವ ತಿದ್ದುಪಡಿ ಕಾಯ್ದೆ ಅಸಂವಿಧಾನಿಕ, ಕಾನೂನುಬಾಹಿರ, ತಾರತಮ್ಯದಿಂದ ಕೂಡಿದೆ. ಧರ್ಮಾಧಾರಿತವಾಗಿದೆ ಎಂದು ಸಂಸತ್ ಒಳಗೂ ಮತ್ತು ಹೊರಗೂ ಪ್ರತಿಪಕ್ಷಗಳು ವ್ಯಾಪಕ ವಿರೋಧ ವ್ಯಕ್ತಪಡಿಸತೊಡಗಿದೆ. ಚಳಗಾಲದ ಅಧಿವೇಶನದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ ಮತ್ತು ಪೌರತ್ವ ತಿದ್ದುಪಡಿ ಕಾಯ್ದೆ ಭಾರೀ ಸದ್ದು ಮಾಡಿದ್ದು ಕಲಾಪವನ್ನು ನುಂಗಿ ಹಾಕಿದೆ. .

ಅಸ್ಸಾಂನಲ್ಲಿ ಪರಿಸ್ಥಿಗೆ ಬಿಗಡಾಯಿಸಿರುವ ಹಿನ್ನೆಲೆಯಲ್ಲಿ ಶಿಲ್ಲಾಂಗ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ಕರ್ಪ್ಯೂ ವಿಧಿಸಲಾಗಿದೆ.  ಕರ್ಪ್ಯೂ ವಿಧಿಸಿರುವ ನಡುವೆಯೇ ರಾತ್ರಿಯೂ ಪ್ರತಿಭಟನೆಗಳು ನಡೆದಿವೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿರುವುದರಿಂದ ಶಾಲಾ-ಕಾಲೇಜುಗಳಿಗೆ ಡಿಸೆಂಬರ್ 22ರವರೆಗೆ ರಜೆ ಘೋಷಿಸಿದೆ. ತ್ರಿಪುರ, ಪಶ್ಚಿಮಬಂಗಾಳ ಮೊದಲಾದ ಅಂತರ್ ರಾಜ್ಯಗಳ ರೈಲು ಸೇವೆಯನ್ನು ಸ್ಥಗಿತೊಳಿಸಲಾಗಿದೆ. ವಿಮಾನಯಾನವೂ ಸ್ಥಬ್ದವಾಗಿದ್ದು ಪ್ರಯಾಣಿಕರು ಪರದಾಡುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ. ಅಸ್ಸಾಂ ರಾಜ್ಯದ 10 ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆ, ಎಸ್.ಎಂ.ಎಸ್ ಸೇವೆಯವನ್ನು ಸರ್ಕಾರ ಸ್ಥಗಿತಗೊಳಿಸಿದೆ. ಸಾಮಾಜಿಕ ಜಾಲತಾಣವನ್ನು ದುರ್ಬಳಕೆ ಮಾಡಿಕೊಳ್ಳುವುದು ಮತ್ತು ಶಾಂತಿಯನ್ನು ಕದಡುವುದನ್ನು ತಡೆಯಲು ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಇದು ಅನಿವಾರ್ಯ ಎಂದು ಸರ್ಕಾರ ಹೇಳಿದೆ.

ಮೊನ್ನೆ ತಾನೆ ರಾಜ್ಯಸಭೆಯಲ್ಲಿ ಬಹುಮತದಿಂದ ಅಂಗೀಕರಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆ ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಆಫ್ಘಾನಿಸ್ತಾನದಿಂದ ಅಕ್ಟೋಬರ್ 31, 2014 ರೊಳಗೆ ದೇಶಕ್ಕೆ ವಲಸೆ ಬಂದಿರುವ ಹಿಂದೂ, ಸಿಖ್, ಪಾರ್ಸಿ, ಜೈನ, ಬುದ್ದಿಸ್ಟ್ ಮತ್ತು ಕ್ರಿಶ್ಚಿಯನ್ನರಿಗೆ ಪೌರತ್ವ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಇದರಲ್ಲಿ ಮುಸ್ಲಿಂ ಸಮುದಾಯದ ಹೆಸರನ್ನು ಉಲ್ಲೇಖಿಸದೇ ಅವರನ್ನು ಪೌರತ್ವದಿಂದ ಹೊರಗಿಡುವ ಪ್ರಯತ್ನ ಸಂವಿಧಾನ ನೀಡುರುವ ಮೂಲಭೂತ ಹಕ್ಕುಗಳಿಗೆ ವಿರುದ್ದವಾಗಿದ ಎಂದು ಮಾಜಿ ಕೇಂದ್ರ ಸಚಿವ ಪಿ.ಚಿದಂಬರ್ ಲೋಕಸಭೆಯಲ್ಲಿ ಹೇಳಿದ್ದು ಇದರ ಬಗ್ಗೆ ಚರ್ಚೆ ನಡೆಯಬೇಕಾಗಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿಗೆ ದಕ್ಷಿಣ ರಾಜ್ಯಗಳಿಂದಲೂ ವಿರೋಧ ವ್ಯಕ್ತವಾಗುತ್ತಿದೆ. ಅಸ್ಸಾಂ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಇದೀಗ ದಕ್ಷಿಣಕ್ಕೂ ಹಬ್ಬಿದೆ. ತಮಿಳುನಾಡಿನಲ್ಲಿ ದ್ರಾವಿಡ ಮುನ್ನೇತ್ರ ಕಳಗಂ ಪ್ರತಿಭಟನೆ ನಡೆಸಿ ಪೌರತ್ವ ಕಾಯ್ದೆಗೆ ತನ್ನ ವಿರೋಧ ದಾಖಲಿಸಿದೆ. ಚೆನ್ನೈಸಯಿದಾಪೇಟೆಯಲ್ಲಿ ಯುವ ನೇತಾರ ಉದಯನಿಧಿ ಸ್ಟಾಲಿನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಆಡಳಿತಾರೂಢ ಎಐಎಡಿಎಂಕೆ ತಮಿಳು ವಿರೋಧಿ, ಅಲ್ಪಸಂಖ್ಯಾತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಡಿಎಂಕೆ ಆರೋಪಿಸಿದೆ. ಇದೇ ವೇಳೆ ಡಿಎಂಕೆ ಮುಖ್ಯಸ್ಥ ಡಿಸೆಂಬರ್ 17ರಮದು ರಾಜ್ಯವ್ಯಾಪಿ ಪ್ರತಿಭಟನೆಗೆ ಕರೆನೀಡಿದ್ದಾರೆ.

ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ರವರು ಕೇರಳದಲ್ಲಿ ಸಿಎಬಿ ಮತ್ತು ಎನ್‌ಆರ್‌ಸಿಗಳನ್ನು ಜಾರಿಗೊಳಿಸುವುದಿಲ್ಲ ಎಂದು ಘೋಷಿಸಿದ್ದಾರೆ.

ಕರ್ನಾಟಕ ರಾಜ್ಯದಲ್ಲೂ ಪ್ರತಿಭಟನೆಗಳು ಶುರುವಾಗಿವೆ. ಉತ್ತರ ಕರ್ನಾಟಕದ ಕಲಬುರುಗಿಯಲ್ಲಿ ಪ್ರತಿಭಟನೆ ನಡೆಸಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಹೀಗಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಎನ್.ಸಿ.ಆರ್ ಗೆ ದೇಶಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗಿದ್ದು ಪ್ರತಿಭಟನೆಗಳು ಇನ್ನಷ್ಟು ತೀವ್ರಗೊಳ್ಳಲಿವೆ ಎಂಬ ಮುನ್ಸೂಚನೆ ದೊರೆತಿದೆ.

ಅಸ್ಸಾಂ ಒಪ್ಪಂದ 1987ರಲ್ಲಿ ಉಲ್ಲೇಖಿಸಿರುವಂತೆ 1971 ಮಾರ್ಚ್‌ 24ರ ಮಧ್ಯರಾತ್ರಿಯೊಳಗೆ ವಲಸೆ ಬಂದಿರುವವರು ಈ ದೇಶದಲ್ಲಿ ಉಳಿಯಲು ಅವಕಾಶ ಮಾಡಿಕೊಟ್ಟಿದೆ. ಇದೇ ಮಾದರಿಯನ್ನು ದೇಶಾದ್ಯಂತ ‌ಅನುಸರಿಸಲಾಗುವುದೇ ಎಂಬ ಬಗ್ಗೆ ಕೇಂದ್ರ ಸರ್ಕಾರ ಇದುವರೆಗೆ ಸ್ಪಷ್ಟಪಡಿಸಿಲ್ಲ. ಆದರೆ ಬಿಜೆಪಿಯೇತರ ರಾಜ್ಯ ಸರ್ಕಾರಗಳು ಪೌರತ್ವ ನೋಂದಣಿ  ಮತ್ತು ಪೌರತ್ವ ಕಾಯ್ದೆಯನ್ನು ವಿರೋಧಿಸಬೇಕು ಎಂದು ರಾಜಕೀಯ ಚತುರ ಪ್ರಶಾಂತ್ ಕಿಶೋರ್ ಬಿಜೆಪಿ ಹೊರತುಪಡಿಸಿ ಎಲ್ಲಾ ಪಕ್ಷಗಳ ಮುಖಂಡರಲ್ಲಿ ಮನವಿ ಮಾಡಿಕೊಂಡಿದ್ದಾರೆ ಜೆಡಿಯು ತನ್ನ ನಿಲುವನ್ನು ಪರಿಶೀಲಿಸುವಂತೆಯೂ ಮನವಿ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಪಶ್ಚಿಮ ಬಂಗಾಳ, ಕೇರಳ ಮತ್ತು ಪಂಜಾಬ್ ರಾಜ್ಯಗಳು ಸಂವಿಧಾನ ವಿರೋಧಿ ಎನ್.ಸಿ.ಆರ್ ಅನ್ನು ತಾವು ಬೆಂಬಲಿಸುವುದಿಲ್ಲ ಎಂದು ಸ್ಪಷ್ಟಪಡಿಸಿವೆ. ಹೀಗಾಗಿ ಬಿಜೆಪಿ ಯಾವ ಮಾರ್ಗ ಅಸುಸರಿಸಲಿದೆ ಎಂಬುದನ್ನು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...