Homeಕರ್ನಾಟಕಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

ಮೀಸಲಾತಿ ಹೇಳಿಕೆ: ಆಧಾರ ಸಹಿತ ಸಾಬೀತುಪಡಿಸುವಂತೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಸವಾಲು

- Advertisement -
- Advertisement -

ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂಬ ಹೇಳಿಕೆಯನ್ನು ಆಧಾರ ಸಹಿತ ಸಾಬೀತುಪಡಿಸಬೇಕು. ಇಲ್ಲದಿದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಪ್ರಧಾನಿ ಹೇಳಿಕೆಗೆ ಎಕ್ಸ್‌ನಲ್ಲಿ ಪ್ರತಿಕ್ರಿಯೆ ನೀಡಿರುವ ಸಿಎಂ, ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವ ಹಸಿ ಸುಳ್ಳು. ಇದು ಅವರ ಅಜ್ಞಾನವನ್ನಷ್ಟೇ ಅಲ್ಲ, ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನೂ ಸೂಚಿಸುತ್ತದೆ. ದೇಶದಲ್ಲಿ ಇಲ್ಲಿಯವರೆಗಿನ ಯಾರೂ ಕೂಡಾ ಪ್ರಧಾನಿ ಪಟ್ಟವನ್ನು ಇಂತಹ ಕೀಳು ಮಟ್ಟಕ್ಕೆ ಇಳಿಸಿಲ್ಲ ಎಂದಿದ್ದಾರೆ.

ಜವಾಬ್ದಾರಿ ಸ್ಥಾನದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಒಂದೋ ಈ ಬೇಜವಾಬ್ದಾರಿತನದ ಆರೋಪವನ್ನು ಆಧಾರಗಳನ್ನು ನೀಡಿ ಸಾಬೀತುಪಡಿಸಬೇಕು. ಇಲ್ಲದೆ ಇದ್ದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದು ಸಿಎಂ ಆಗ್ರಹಿಸಿದ್ದಾರೆ.

ಹಿಂದುಳಿದ ಜಾತಿ ಮತ್ತು ಎಸ್‌ಸಿ / ಎಸ್‌ಟಿ ಮೀಸಲಾತಿಯನ್ನು ಕಿತ್ತು ಮುಸ್ಲಿಮರಿಗೆ ನೀಡುವುದಾಗಿ ಕಾಂಗ್ರೆಸ್ ಎಲ್ಲಿ ಹೇಳಿದೆ? ಯಾವ ರಾಜ್ಯದ ಕಾಂಗ್ರೆಸ್ ಸರ್ಕಾರ ಮಾಡಿದೆ? ಅದಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶದ ಪತ್ರ ಇದೆಯೇ? ಈ ಎಲ್ಲ ವಿವರವನ್ನು ಪ್ರಧಾನಿಯವರು ದೇಶದ ಮುಂದೆ ಇಡಬೇಕು ಎಂದು ಸಿಎಂ ಒತ್ತಾಯಿಸಿದ್ದಾರೆ.

ಸಂವಿಧಾನದತ್ತವಾದ ಮೀಸಲಾತಿಯನ್ನು ಮನ ಬಂದಂತೆ ಬದಲಾವಣೆ ಮಾಡಲು ಸಾಧ್ಯ ಇಲ್ಲ. ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಆಧಾರದಲ್ಲಿ ಮಾತ್ರ ಮೀಸಲಾತಿಯ ಪರಿಷ್ಕರಣೆ ಸಾಧ್ಯ. ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿಯನ್ನು ಪರಿಷ್ಕರಿಸುವ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲಿಯೂ ಇಲ್ಲ. ಇದಕ್ಕಾಗಿ ಸಂಸತ್‌ನ ಉಭಯ ಸದನಗಳ ಒಪ್ಪಿಗೆಯೊಂದಿಗೆ ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ. ಇಂತಹದ್ದೊಂದು ಕನಿಷ್ಠ ಜ್ಞಾನ ಒಬ್ಬ ಪ್ರಧಾನಮಂತ್ರಿಗೆ ಇಲ್ಲದಿರುವುದು ಈ ದೇಶದ ದುರಂತವೇ ಸರಿ ಎಂದಿದ್ದಾರೆ.

ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ ಚಿನ್ನಪ್ಪ ರೆಡ್ಡಿ ಆಯೋಗದ ವರದಿ ಆಧಾರದಲ್ಲಿ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿಯನ್ನು ಗಮನಕ್ಕೆ ತೆಗೆದುಕೊಂಡು ಮುಸ್ಲಿಮರನ್ನು ಹಿಂದುಳಿದ ಜಾತಿಗಳ 2ಬಿ ವರ್ಗಕ್ಕೆ ಸೇರಿಸಲಾಗಿರುವುದು ನಿಜ. ಕಳೆದ ಮೂರು ದಶಕಗಳಿಂದ ರಾಜ್ಯದಲ್ಲಿ ಈ ಮೀಸಲಾತಿ ಜಾರಿಯಲ್ಲಿದೆ. ಕೇಂದ್ರದಲ್ಲಿ ಹಿಂದೆ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರವಾಗಲಿ, ಕಳೆದ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರವಾಗಲಿ ಇಲ್ಲಿಯ ವರೆಗೆ ಈ ಮೀಸಲಾತಿಯನ್ನು ಪ್ರಶ್ನಿಸಿಲ್ಲ. ಬಿಜೆಪಿಯೂ ಸೇರಿದಂತೆ ಯಾರೂ ಕೂಡಾ ಇದನ್ನು ನ್ಯಾಯಾಲಯದಲ್ಲೂ ಪ್ರಶ್ನಿಸಿಲ್ಲ ಎಂದು ಸಿಎಂ ವಿವರಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಧರ್ಮದ ಆಧಾರದಲ್ಲಿ ಮತ ವಿಭಜನೆಯ ಏಕೈಕ ದುರುದ್ದೇಶದಿಂದ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಮೀಸಲಾತಿಯನ್ನು ಅಡ್ಡಾದಿಡ್ಡಿಯಾಗಿ ಪರಿಷ್ಕರಿಸಲು ಹೊರಟು ಸುಪ್ರೀಂ ಕೋರ್ಟಿನಿಂದ ಛೀಮಾರಿಗೆ ಗುರಿಯಾಗಿರುವುದನ್ನು ಪ್ರಧಾನಿ ಮೋದಿಯವರು ಮರೆತಂತೆ ಕಾಣುತ್ತಿದೆ. ಮುಸ್ಲಿಮರಿಗೆ ಇದ್ದ ಶೇಕಡಾ ನಾಲ್ಕರ ಮೀಸಲಾತಿಯನ್ನು ರದ್ದು ಮಾಡಿ ಅದನ್ನು ಒಕ್ಕಲಿಗ ಮತ್ತು ಲಿಂಗಾಯತರಿಗೆ ಹಂಚಿರುವ ತೀರ್ಮಾನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದ್ದು, ಮುಂದಿನ ಆದೇಶದ ವರೆಗೆ ಪರಿಷ್ಕೃತ ಮೀಸಲಾತಿಯನ್ನು ಜಾರಿಗೊಳಿಸಬಾರದೆಂದು ಆದೇಶ ನೀಡಿದೆ. ಇಂತಹದ್ದೊಂದು ಪ್ರಮುಖ ಮಾಹಿತಿ ಕೂಡಾ ಪ್ರಧಾನಮಂತ್ರಿಯವರ ಗಮನದಲ್ಲಿ ಇಲ್ಲದೆ ಇರುವುದು ವಿಷಾದನೀಯ ಎಂದು ಸಿಎಂ ಹೇಳಿದ್ದಾರೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಹದಿನೈದರಿಂದ ಹದಿನೇಳಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಮೂರರಿಂದ ಐದಕ್ಕೆ ಹೆಚ್ಚಿಸುವುದಾಗಿ ಹಿಂದಿನ ಬಿಜೆಪಿ ಸರ್ಕಾರ ಘೋಷಿಸಿತ್ತು. ಈ ಬಗ್ಗೆ ಕೇಂದ್ರ ಬಿಜೆಪಿ ಸರ್ಕಾರಕ್ಕೂ ಪತ್ರ ಬರೆದಿರುವುದಾಗಿಯೂ ತಿಳಿಸಿತ್ತು. ಆದರೆ, ಇಂತಹ ಯಾವ ಪತ್ರ ಕೂಡಾ ರಾಜ್ಯದ ಬಿಜೆಪಿ ಸರ್ಕಾರದಿಂದ ತಮಗೆ ಬಂದಿಲ್ಲ. ಆ ರೀತಿಯ ಮೀಸಲಾತಿ ಏರಿಕೆಯ ಪ್ರಸ್ತಾವ ತಮ್ಮ ಪರಿಶೀಲನೆಯಲ್ಲಿ ಇಲ್ಲ ಎಂದು 2023ರ ಮಾರ್ಚ್ 14ರಂದು ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ನಾರಾಯಣ ಸ್ವಾಮಿ ಅವರೇ ಲೋಕಸಭೆಗೆ ತಿಳಿಸಿದ್ದರು. ಸರ್ಕಾರದ ಈ ನಿರ್ಧಾರ ಪ್ರಧಾನಿ ಮೋದಿಯವರ ಗಮನಕ್ಕೆ ಬಂದಿರಲಿಲ್ಲವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಕಳೆದ ಹತ್ತು ವರ್ಷಗಳ ಕಾಲ ಆಡಳಿತ ನಡೆಸಿದರೂ, ತಮ್ಮ ಸಾಧನೆಯ ಬಗ್ಗೆ ಹೇಳಲು ಏನೂ ಇಲ್ಲದಿರುವುದು ಪ್ರಧಾನಿ ಮೋದಿಯವರು ಒಬ್ಬ ವಿಫಲ ಪ್ರಧಾನಿ ಎನ್ನುವುದನ್ನು ಸಾಬೀತುಪಡಿಸಿದೆ. ಒಬ್ಬ ಅನಕ್ಷರಸ್ಥ ಮಾತ್ರ ಈ ರೀತಿಯ ಆಧಾರ ರಹಿತ ಆರೋಪಗಳನ್ನು ಮಾಡಲು ಸಾಧ್ಯ. ಪ್ರಧಾನಿಯವರು ಸ್ವಯಂ ಪ್ರದರ್ಶಿಸುತ್ತಿರುವ ಅಜ್ಞಾನವನ್ನು ನೋಡಿದರೆ ಇವರ ಪದವಿ ಶಿಕ್ಷಣದ ಬಗೆಗಿನ ಸಂಶಯಗಳು ನಿಜ ಇರುವಂತೆ ಕಾಣಿಸುತ್ತದೆ ಎಂದು ಸಿಎಂ ಕಿಡಿಕಾರಿದ್ದಾರೆ.

ಮುಸ್ಲಿಂ ಮೀಸಲಾತಿಯನ್ನು ವಿರೋಧಿಸುತ್ತಿರುವ ಪ್ರಧಾನಿ ಮೋದಿಯವರು ಹೇಳಿಕೆ ಬಗ್ಗೆ ಮೋದಿಯವರ ಆಪ್ತಮಿತ್ರ ಮತ್ತು ಬಿಜೆಪಿಯ ಹೊಸ ಸಂಗಾತಿಯಾಗಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಯನ್ನು ಜಾರಿಗೊಳಿಸಿದ್ದೇ ನಾನು ಎಂದು ಕೊಚ್ಚಿಕೊಳ್ಳುತ್ತಿದ್ದ ದೇವೇಗೌಡರು, ಈಗಲೂ ತಮ್ಮ ನಿಲುವಿಗೆ ಬದ್ಧರಾಗಿದ್ದಾರಾ? ಇಲ್ಲವೇ ನರೇಂದ್ರ ಮೋದಿಯವರಿಗೆ ಶರಣಾಗಿ ತಮ್ಮ ಹಿಂದಿನ ನಿಲುವನ್ನು ಬದಲಾಯಿಸಿಕೊಳ್ಳುತ್ತರಾ? ಎಂಬುದನ್ನು ಅವರು ರಾಜ್ಯದ ಜನತೆಗೆ ಸ್ಪಷ್ಟಪಡಿಸಬೇಕು ಎಂದು ಸಿಎಂ ಹೇಳಿದ್ದಾರೆ.

ಇದನ್ನೂ ಓದಿ : ಮಂಗಳೂರು: ‘ಶೂದ್ರ ವರ್ಗದವ ನಮ್ಮನ್ನು ಆಳಲು ಹೊರಟರೆ, ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’: ಬಿಜೆಪಿಗೆ ಮತ ಹಾಕುವಂತೆ ಆಗ್ರಹಿಸಿದ ‘ಕರಪತ್ರ’!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...