Homeಕರ್ನಾಟಕಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ನೀಡಿ: ಜನಾಗ್ರಹ ಆಂದೋಲನ

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ ಎಂದು ಸಂಘಟನೆ ತಿಳಿಸಿದೆ.

- Advertisement -
- Advertisement -

ರಾಜ್ಯದಲ್ಲಿ ಆಕ್ಸಿಜನ್‌, ಬೆಡ್, ಔಷಧಿ, ವ್ಯಾಕ್ಸಿನ್ ಕೊರತೆಗಳಿಂದ ಜನರ ಬದುಕು ಅತಂತ್ರವಾಗಿದ್ದ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಣೆಯಾಯಿತು. ಕಳೆದ ಏಪ್ರಿಲ್ ತಿಂಗಳಿನಿಂದಲೇ ದುಡಿಮೆಯ ಅವಕಾಶಗಳು ಸಂಪೂರ್ಣ ನಿಂತು ಹೋಗಿ ಕಂಗಾಲಾಗಿದ್ದ ಜನರಿಗೆ ಲಾಕ್‌ಡೌನ್‌ ಮುಂದುವರಿಕೆ ಮತ್ತಷ್ಟು ಅತಂತ್ರರನ್ನಾಗಿಸಿದೆ. ಇಂತಹ ಸ್ಥಿತಿಯಲ್ಲಿ ಸರ್ಕಾರ ಘೋಷಿಸಿರುವ ಪ್ಯಾಕೇಜ್ ನಿರಾಶದಾಯಕವಾಗಿದ್ದು, ಹೊಟ್ಟೆಗೆ ಅನ್ನ, ಬದುಕಿಗೆ ಭರವಸೆ ನೀಡುವ ಸಮಗ್ರ ಪ್ಯಾಕೇಜ್ ಬೇಕು ಎಂದು ಜನಾಗ್ರಹ ಆಂದೋಲನ ಆಗ್ರಹಿಸಿದೆ.

ರಾಜ್ಯದಲ್ಲಿ ಲಾಕ್‌ಡೌನನ್ನು ಜೂನ್ 14ರ ವರೆಗೆ ವಿಸ್ತರಿಸಲಾಗಿದೆ. ದಿನಬಳಕೆ ವಸ್ತುಗಳು, ಬಾಡಿಗೆ, ಸಾಲ, ಮನೆ ವೆಚ್ಚಗಳ ಜೊತೆಗೆ ಆಸ್ಪತ್ರೆ ವೆಚ್ಚದ ಚಿಂತೆ ಜನರನ್ನು ಕಂಗೆಡಿಸಿದೆ. ಜನರ ಸಂಕಟವನ್ನು ಹೋಲಿಸಿದಾಗ ರಾಜ್ಯ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ ಯಾವ ರೀತಿಯಲ್ಲೂ ಸಾಲುವುದಿಲ್ಲ. ರಾಜ್ಯದ ಜನತೆ ಎದುರಿಸುತ್ತಿರುವ ಬಿಕ್ಕಟ್ಟಿನ ಆಳ, ಗಾಢತೆ ಮತ್ತು ತೀವ್ರತೆ  ಸರ್ಕಾರಕ್ಕೆ ಅರ್ಥವೇ  ಆಗಿಲ್ಲ. 3.6 ಕೋಟಿ ಜನರಿರುವ ಕೇರಳಕ್ಕೆ ಅಲ್ಲಿನ ಸರ್ಕಾರ 20 ಸಾವಿರ ಕೋಟಿ ಪ್ಯಾಕೇಜ್‌ ನೀಡಿದೆ. ಆದರೆ, 6.8 ಕೋಟಿ ಜನರಿರುವ ಕರ್ನಾಟಕಕ್ಕೆ ನಮ್ಮ ಸರ್ಕಾರ ಘೋಷಿಸಿರುವ ಪ್ಯಾಕೇಜ್ 2 ಸಾವಿರ ಕೋಟಿಯನ್ನೂ ಹೊಂದಿಲ್ಲ ಎಂದು ಸಂಘಟನೆ ಆಕ್ರೋಶ ಹೊರಹಾಕಿದೆ.

ಕರ್ನಾಟಕದಲ್ಲಿ 70 ಲಕ್ಷ ಬಡ ಕುಟುಂಬಗಳಿವೆ. ಸರ್ಕಾರದ ಪ್ಯಾಕೇಜ್ 5 ಲಕ್ಷ ಜನರನ್ನೂ ಒಳಗೊಂಡಿಲ್ಲ. ರಾಜ್ಯದಲ್ಲಿ ಬಹುತೇಕ ಶ್ರಮಿಕರಿಗೆ ಯಾವ ನೊಂದಾವಣಿಯೂ ಇಲ್ಲ. ಅತಿ ದೊಡ್ಡ ಶ್ರಮಿಕ ವರ್ಗವಾದ ಗ್ರಾಮೀಣ ಕೂಲಿ ಕಾರ್ಮಿಕರನ್ನು, ಅತಿಸಣ್ಣ ಮತ್ತು ಸಣ್ಣ ರೈತರನ್ನು ಸರ್ಕಾರ ಪರಿಗಣನೆಗೆ ತೆಗೆದುಕೊಂಡಿಲ್ಲ. ಅಂತಹದರಲ್ಲಿ ವಲಸೆ ಕಾರ್ಮಿಕರ, ಅಲೆಮಾರಿಗಳ, ಆದಿವಾಸಿಗಳ ಕತೆ ಏನು..? ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಹೀಗಾಗಿ ಜನರ ಜೀವಕ್ಕೆ ಭರವಸೆ ದೊರಕಬೇಕಾದರೆ, ಜನರ ಜೀವನೋಪಾಯಕ್ಕೆ ಆಸರೆ ಸಿಗಬೇಕಾದರೆ, ಬರಲಿರುವ ಕೋವಿಡ್ ಮೂರನೇ ಅಲೆಗೆ ರಾಜ್ಯವನ್ನು ಸಜ್ಜುಗೊಳಿಸಬೇಕಾದರೆ ಸರ್ಕಾರ ಸಮಗ್ರವಾದ ಮತ್ತು ಪರಿಣಾಮಕಾರಿಯಾದ ಮೂರನೇ ಪ್ಯಾಕೇಜನ್ನು ಘೋಷಿಸಲೇಬೇಕು. ಅದು ಈ ಕ್ರಮಗಳನ್ನು ಒಳಗೊಂಡಿರಲೇಬೇಕು ಎಂದು ಜನಾಗ್ರಹ ಆಂದೋಲನ ತನ್ನ ಬೇಡಿಕೆಗಳನ್ನು ಮುಂದಿಟ್ಟಿದೆ.

೧. ಸುಮಾರು 70 ಲಕ್ಷದಷ್ಟಿರುವ ಎಲ್ಲಾ ಬಿಪಿಎಲ್ ಕುಟುಂಬಗಳಿಗೂ ಸಮಗ್ರ ಆಹಾರದ ಕಿಟ್ ಮತ್ತು ಮಾಸಿಕ 5000 ಆರ್ಥಿಕ ನೆರವನ್ನು ನೀಡಬೇಕು.

೨. ಕೋವಿಡ್‌ನಿಂದಾಗಿ ಅನಾಥಗೊಂಡಿರುವ ಕುಟುಂಬಗಳಿಗೆ ಬದುಕು ಕಟ್ಟಿಕೊಳ್ಳಲು 5 ಲಕ್ಷ ರೂ ಪರಿಹಾರ ಧನ ನೀಡಬೇಕು.

೩. ರೈತರ ಮುಂಗಾರು ಬಿತ್ತನೆಯ ಗೊಬ್ಬರ ಮತ್ತು ಬೀಜಕ್ಕೆ ವಿಶೇಷ ಸಬ್ಸಿಡಿ ಘೋಷಿಸಬೇಕು.

೪. ಇಡೀ ರಾಜ್ಯದ ವೈದ್ಯಕೀಯ ವ್ಯವಸ್ಥೆಯನ್ನು ಬಲಪಡಿಸಬೇಕು, ಕೋವಿಡ್‌ ಚಿಕಿತ್ಸೆಯನ್ನು ಸಂಪೂರ್ಣ ಉಚಿತಗೊಳಿಸಬೇಕು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಿರುವ ಸ್ಥಳಗಳಲ್ಲೆಲ್ಲಾ ಕೋವಿಡ್‌ ಆರೈಕೆ ಕೇಂದ್ರಗಳನ್ನು ಪ್ರಾರಂಭಿಸಬೇಕು.

೫. ಎಲ್ಲಾ ವಯಸ್ಸಿನವರಿಗೂ ಕೂಡಲೇ ಉಚಿತ ವ್ಯಾಕ್ಸಿನ್ ವ್ಯವಸ್ಥೆ ಮಾಡಬೇಕು. ಯಾವುದೇ ಗೊಂದಲ, ಬೇಧಭಾವಕ್ಕೆ ಅವಕಾಶ ಕೊಡದೆ, ಎಷ್ಟು ದಿನದೊಳಗೆ ಹಾಗೂ ಯಾವ ರೀತಿಯ ಪ್ರಕ್ರಿಯೆ ಅಳವಡಿಸಿ ಇದನ್ನು ಪೂರ್ಣಗೊಳಿಸಲಾಗುವುದು ಎಂಬುದನ್ನು ಸರ್ಕಾರ ಜನತೆಗೆ ಸ್ಪಷ್ಟಪಡಿಸಬೇಕು ಎಂದಿದೆ.

ಜನಪರ ಆರ್ಥಿಕ ತಜ್ಞರು ಈ ಕ್ರಮಗಳಿಗಾಗಿ ತಗಲುವ ಒಟ್ಟು ವೆಚ್ಚವಷ್ಟು..? ಮತ್ತುಇದಕ್ಕಾಗಿ ಸಂಪನ್ಮೂಲ ಕ್ರೂಢೀಕರಣದ ಮಾರ್ಗಗಳು ಯಾವುವು..?ಎಂಬ ಪ್ರಸ್ತಾಪವನ್ನು ಸಿದ್ಧಪಡಿಸುತ್ತಿದ್ದಾರೆ. ಒಂದೆರಡು ದಿನದಲ್ಲಿ ಈ ಖಚಿತ ಪ್ರಸ್ತಾಪ ಹೊಂದಿರುವ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು. ಅದಕ್ಕೂ ಸರ್ಕಾರ ಸ್ಪಂದಿಸದೇ ಹೋದಲ್ಲಿ ಎಲ್ಲಾ ಮಂತ್ರಿಗಳು ಹಾಗೂ ಶಾಸಕರ ಮನೆಗಳ ಮುಂದೆ ಅನಿರ್ಧಿಷ್ಟ ಸತ್ಯಾಗ್ರಹ ಪ್ರಾರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಸಸಿಕಾಂತ್ ಸೆಂದಿಲ್, ಹೆಚ್.ಆರ್ ಬಸವರಾಜಪ್ಪ, ಚಾಮರಸ ಮಾಲೀ ಪಾಟೀಲ್, ಮಾವಳ್ಳಿ ಶಂಕರ್, ಕೆ.ಎಲ್. ಅಶೋಕ್, ಸ್ವರ್ಣ ಭಟ್, ಯಾಸಿನ್ ಮಲ್ಪೆ, ಯೂಸೂಫ್‌ಕನ್ನಿ, ಸಿದ್ದನಗೌಡ ಪಾಟೀಲ್ ಮತ್ತು ನೂರ್ ಶ್ರೀಧರ್ ಜನಾಗ್ರಹ ಆಂದೋಲನದ ಪರವಾಗಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಕೊರೊನಾ ಲಾಕ್‌ಡೌನ್‌ ಮೊದಲ ಹಂತದಲ್ಲಿ ಸರ್ಕಾರ 1,200 ಕೋಟಿ ಮೌಲ್ಯದ ಮೊದಲ ಪ್ಯಾಕೇಜ್ ಘೋಷಿಸಿತು. ಈ ಪ್ಯಾಕೇಜಿನ ವಿರುದ್ಧ ಜನಾಕ್ರೋಶ ವ್ಯಕ್ತವಾಗಿತ್ತು. ಜನಾಗ್ರಹ ಆಂದೋಲನವು ಮೇ 26 ರಂದು “ನಾವೂ ಬದುಕಬೇಕು” ಎಂಬ ಘೋಷದಡಿ ಪ್ರತಿಭಟನೆಗೆ ಕರೆ ನೀಡಿತ್ತು. ಸಾವಿರಕ್ಕೂ ಹೆಚ್ಚು ಸ್ಥಳಗಳಲ್ಲಿ ಜನ ಬೀದಿಗೆ ಬಂದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ಆಂದೋಲನಕ್ಕೆ ವಿಪಕ್ಷಗಳು ಬೆಂಬಲ ನೀಡಿದ್ದವು.


ಇದನ್ನೂ ಓದಿ: “ನಾವೂ ಬದುಕಬೇಕು”: ಜನಾಗ್ರಹ ಆಂದೋಲನಕ್ಕೆ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...