Homeಮುಖಪುಟಪ್ರಚೋದನಕಾರಿ & ನಿಂದನಾತ್ಮಕ ಹೇಳಿಕೆ | ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ಪ್ರಚೋದನಕಾರಿ & ನಿಂದನಾತ್ಮಕ ಹೇಳಿಕೆ | ಯತಿ ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ವಿವಾದಾತ್ಮಕ ಅರ್ಚಕ ಯತಿ ನರಸಿಂಹಾನಂದ ಗಿರಿ ವಿರುದ್ಧ ದ್ವೇಷ ಹರಡಿದ ಮತ್ತು ಜಿಲ್ಲೆಯ ಉನ್ನತ ಪೊಲೀಸ್ ಅಧಿಕಾರಿಗಳನ್ನು ನಿಂದಿಸಿದ ವೀಡಿಯೊಕ್ಕಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಉತ್ತರ ಪ್ರದೇಶದ ಗಾಝಿಯಾಬಾದ್‌ನ ಅಧಿಕಾರಿಗಳು ಶನಿವಾರ (ಮಾರ್ಚ್ 22, 2025) ತಿಳಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಪ್ರಚೋದನಕಾರಿ

ಗಾಝಿಯಬಾದ್‌ನಲ್ಲಿ ದಾಖಲಾಗಿರುವ ಎಫ್‌ಐಆರ್ ಪ್ರಕಾರ, ದಸ್ನಾ ದೇವಿ ದೇವಾಲಯದ ಅರ್ಚಕರಾಗಿರುವ ನರಸಿಂಗಾನಂದ ಮಹಾತ್ಮ ಗಾಂಧಿಯವರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ, ಕ್ರಿಮಿನಲ್ ಬೆದರಿಕೆಯನ್ನು ಉಂಟುಮಾಡುವ, ಅವಮಾನಿಸುವ, ಮಾನಹಾನಿ ಮಾಡುವ ಮತ್ತು ಸಾರ್ವಜನಿಕ ಶಾಂತಿಯನ್ನು ಭಂಗಗೊಳಿಸುವ ಉದ್ದೇಶದಿಂದ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಚೋದನಕಾರಿ

ದುಷ್ಕರ್ಮಿ ನರಸಿಂಹಾನಂದ ತನ್ನ ವೀಡಿಯೊದಲ್ಲಿ ಗಾಜಿಯಾಬಾದ್ ಪೊಲೀಸ್ ಆಯುಕ್ತ ಮತ್ತು ಲೋನಿಯ ಸಹಾಯಕ ಪೊಲೀಸ್ ಆಯುಕ್ತರ ವಿರುದ್ಧ ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಶುಕ್ರವಾರ ವೇವ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ ಆರೋಪಿಯ ಹೇಳಿಕೆಗಳು ಕೋಮು ಸಾಮರಸ್ಯವನ್ನು ಕೆರಳಿಸುವ ಮತ್ತು ಅಡ್ಡಿಪಡಿಸುವ ಉದ್ದೇಶವನ್ನು ಹೊಂದಿವೆ ಎಂದು ಪೊಲೀಸ್ ಉಪ ಆಯುಕ್ತ (ಗ್ರಾಮೀಣ) ಸುರೇಂದ್ರ ನಾಥ್ ತಿವಾರಿ ಹೇಳಿದ್ದಾರೆ. ಈ ವಿಷಯದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ಹೊಸ ಮಾಹಿತಿಯ ಪ್ರಕಾರ (ಮಾರ್ಚ್ 22, 2025 ರವರೆಗೆ), ದುಷ್ಕರ್ಮಿ ನರಸಿಂಗಾನಂದ್ ವಿರುದ್ಧ 20ಕ್ಕೂ ಹೆಚ್ಚು ಎಫ್‌ಐಆರ್‌ಗಳು ದಾಖಲಾಗಿವೆ. ಇವುಗಳಲ್ಲಿ ಹತ್ಯೆಗೆ ಪ್ರಯತ್ನ, ದ್ವೇಷ ಭಾಷಣ, ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದು, ಗಲಭೆಗೆ ಪ್ರಚೋದನೆ ಮತ್ತು ಇತರ ಆರೋಪಗಳು ಸೇರಿವೆ.

ಈ ಪ್ರಕರಣಗಳು ಉತ್ತರ ಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ದಾಖಲಾಗಿವೆ. ಇತ್ತೀಚೆಗೆ 2024ರಲ್ಲಿ ಪ್ರವಾದಿ ಮುಹಮ್ಮದ್ ವಿರುದ್ಧ ಅವಮಾನಕರ ಹೇಳಿಕೆಗಳಿಗಾಗಿ ಅವರ ವಿರುದ್ಧ ಹೊಸ ಎಫ್‌ಐಆರ್‌ಗಳು ಸಹ ದಾಖಲಾಗಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿ: ಕೇಂದ್ರ ಸರ್ಕಾರ

ಉತ್ತರ ಪ್ರದೇಶ, ಮಹಾರಾಷ್ಟ್ರ, ಬಿಹಾರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡುಗಳಲ್ಲಿ ಅತೀ ಹೆಚ್ಚು ಕ್ಯಾನ್ಸರ್ ಪ್ರಕರಣಗಳು ವರದಿ: ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಎಸ್‌ಐಆರ್: 192 ಕ್ಷೇತ್ರಗಳಲ್ಲಿ ಗೆಲುವಿನ ಅಂತರಕ್ಕಿಂತ ಹೆಚ್ಚು ಮತಗಳು ಡಿಲೀಟ್; 2028ಕ್ಕೆ ಯಾರಿಗೆ ಅಧಿಕಾರ?

ಜನಪರ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ವಿರೋಧ, ಆತಂಕ ಹಾಗೂ ಆರೋಪಗಳ ಹೊರತಾಗಿಯೂ ಕರ್ನಾಟಕದಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಗಿದಿದೆ. 2026ರ ಅಕ್ಟೋಬರ್ 27ರಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಅವರು ಅಂತಿಮ ಮತದಾರರ...

ಸೌಜನ್ಯ ಪ್ರಕರಣ: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಶಶಿಕುಮಾರ್‌ಗೆ ಕೊಕ್; ಚೇತನ್ ಸಿಂಗ್ ರಾಥೋಡ್‌ಗೆ ತನಿಖೆಯ ಹೊಣೆ

ಮಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ನೇತೃತ್ವದಲ್ಲಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಿದೆ. ಎಸ್‌ಐಟಿ ಮುಖ್ಯಸ್ಥರಾಗಿದ್ದ ಐಜಿಪಿ ಎನ್. ಶಶಿಕುಮಾರ್...

ಇಸ್ರೇಲ್ ಚುನಾವಣೆ: ನೆತನ್ಯಾಹು, ಐಸೆನ್‌ಕೋಟ್ ಬಣಗಳಿಗೆ ಬಹುಮತದ ಕೊರತೆ; ಸರ್ಕಾರ ರಚನೆಯಲ್ಲಿ ಅರಬ್ ಪಕ್ಷಗಳೇ ನಿರ್ಣಾಯಕ!

ಇಸ್ರೇಲ್‌ನ ಸಾರ್ವತ್ರಿಕ ಚುನಾವಣೆಯ ಫಲಿತಾಂಶ ಆಡಳಿತಾರೂಢ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಮಾಜಿ ಸೇನಾ ಮುಖ್ಯಸ್ಥ ಗಡಿ ಐಸೆನ್‌ಕೋಟ್ ನೇತೃತ್ವದ ವಿರೋಧ ಪಕ್ಷದ ಬಣಗಳೆರಡಕ್ಕೂ ಭಾರಿ ಸವಾಲು ತಂದೊಡ್ಡಿದೆ. 120 ಸದಸ್ಯ ಬಲದ...

ನ.1ರ ಇಂಡಿಯಾ ಒಕ್ಕೂಟದ ರ‍್ಯಾಲಿಗೆ ಬೆಂಬಲ ಘೋಷಿಸಿದ ‘ಪೀಪಲ್ ಅಗೆನ್ಸ್ಟ್ ಎಸ್‌ಐಆರ್’

ವಿರೋಧ ಪಕ್ಷಗಳ ಇಂಡಿಯಾ ಒಕ್ಕೂಟ ನವೆಂಬರ್ 1ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆಸಲಿರುವ ಬೃಹತ್ ರ‍್ಯಾಲಿಗೆ ಪೀಪಲ್ ಅಗೆನೆಸ್ಟ್ ಎಸ್‌ಐಆರ್‌ ಬೆಂಬಲ ಘೋಷಿಸಿದೆ. ಪ್ರಜಾಪ್ರಭುತ್ವವನ್ನು ಉಳಿಸಲು, ಎಸ್‌ಐಆರ್ ರದ್ದುಗೊಳಿಸಲು, ಮುಖ್ಯ ಚುನಾವಣಾ ಆಯುಕ್ತ...

‘ನುಸುಳುಕೋರರನ್ನು’ ಹೊರಹಾಕಲು SIR ಎಂದಿತ್ತು ಬಿಜೆಪಿ ಮತ್ತು ಚು. ಆಯೋಗ : ಆರು ರಾಜ್ಯಗಳಲ್ಲಿ ಪತ್ತೆಯಾಗಿದ್ದು ಕೇವಲ 1,600 ವಿದೇಶಿಯರು ಮಾತ್ರ

'ನುಸುಳುಕೋರರನ್ನು' ಪತ್ತೆ ಹಚ್ಚುವುದು ಅಥವಾ 'ವಿದೇಶಿ ಅಕ್ರಮ ವಲಸಿಗರನ್ನು' ಪತ್ತೆ ಹಚ್ಚುವುದು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಪ್ರಮುಖ ಉದ್ದೇಶಗಳಲ್ಲಿ ಒಂದಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಹೇಳಿತ್ತು....

ಸಂತ್ರಸ್ತೆ ಮತ್ತು ಆರೋಪಿ ನಡುವಿನ ‘ಒಪ್ಪಂದ’ವನ್ನಷ್ಟೇ ಆಧರಿಸಿ ಅತ್ಯಾಚಾರ ಪ್ರಕರಣ ರದ್ದುಗೊಳಿಸಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಪಕ್ಷಕಾರರ (ಸಂತ್ರಸ್ತೆ ಮತ್ತು ಆರೋಪಿ) ನಡುವಿನ ರಾಜಿ ಸಂಧಾನದ ಆಧಾರದ ಮೇಲೆ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದ್ದ ಮಧ್ಯಪ್ರದೇಶ ಹೈಕೋರ್ಟ್‌ನ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಕೇವಲ ಒಪ್ಪಂದದ ಆಧಾರದ ಮೇಲೆ ಗಂಭೀರ ಅಪರಾಧಗಳನ್ನು...

DELHI SIR : 2026ರ ಮತದಾರರ ಪಟ್ಟಿಯಲ್ಲಿದ್ದರೂ ಕೂಡ ಡಿಲಿಟೆಡ್ ವೋಟರ್ಸ್ ಫಾರಂ-6 ಸಲ್ಲಿಸುವಂತೆ ಸೂಚಿಸಿದ್ದು ಏಕೆ? ಚು. ಆಯೋಗಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ

ದೆಹಲಿಯ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಸಂಬಂಧಿಸಿದಂತೆ, 2026ರ ಮತದಾರರ ಪಟ್ಟಿಯಲ್ಲಿದ್ದರೂ ಸಹ ಗಣತಿ ನಮೂನೆಗಳನ್ನು (enumeration forms) ಭರ್ತಿ ಮಾಡದ ಕಾರಣಕ್ಕಾಗಿ ಕರಡು ಪಟ್ಟಿಯಿಂದ ಹೆಸರನ್ನು ಕಳೆದುಕೊಂಡಿರುವ ವ್ಯಕ್ತಿಗಳು,...

ಮರ್ಯಾದೆಗೇಡು ಹತ್ಯೆ ಶಂಕೆ: ದಲಿತ ಯುವಕನನ್ನು ಇಟ್ಟಿಗೆಯಿಂದ ಹೊಡೆದು ಕೊಂದ ಪತ್ನಿಯ ಸಹೋದರ ಬಂಧನ

ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ 23 ವರ್ಷದ ದಲಿತ ಯುವಕನನ್ನು ಇಟ್ಟಿಗೆಗಳಿಂದ ಹೊಡೆದು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಇದು ಮರ್ಯಾದೆಗೇಡು ಹತ್ಯೆ ಶಂಕೆಗೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನ ಪತ್ನಿಯ ಹಿರಿಯ...

Karnataka SIR | ಅಂತಿಮ ಮತದಾರರ ಪಟ್ಟಿಯನ್ನು ತಿರಸ್ಕರಿಸಿದ ಹೋರಾಟಗಾರರು : ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್‌ಗೆ ಬಹಿರಂಗ ಸವಾಲು

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬಳಿಕ ಮಂಗಳವಾರ (ಅ.27) ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಹೋರಾಟಗಾರರು ತಿರಸ್ಕರಿಸಿದ್ದು, ಹೋರಾಟ ಮುಂದುವರಿಸುವ ಘೋಷಣೆ ಮಾಡಿದ್ದಾರೆ. ಬುಧವಾರ (ಅ.28) ಬೆಂಗಳೂರಿನ ಶಾಸಕರ ಭವನದಲ್ಲಿ...

ಜಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾಂಗ್ರೆಸ್ ಬೆಂಬಲ; ಪ್ರತಿಭಟನಾ ಸ್ಥಳಕ್ಕೆ ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಪ್ರತಿಭಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ನೀಡುವ ನಿರೀಕ್ಷೆಯಿರುವ ಬೆನ್ನಲ್ಲೇ, ವಿದ್ಯಾರ್ಥಿಗಳ ಹೋರಾಟಕ್ಕೆ ಪಕ್ಷವು ಬೆಂಬಲ ವ್ಯಕ್ತಪಡಿಸಿದೆ. ವಿದ್ಯಾರ್ಥಿ ಸಂಘವನ್ನು (ಜೆಎಂಐಎಸ್‌ಯು)...