Homeಕರ್ನಾಟಕಪ್ರಚೋದನಕಾರಿ ಪೋಸ್ಟ್ : ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ದ ಪ್ರಕರಣ ದಾಖಲು

ಪ್ರಚೋದನಕಾರಿ ಪೋಸ್ಟ್ : ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ದ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರಿನಲ್ಲಿ ರಸ್ತೆಯಲ್ಲಿ ನಮಾಝ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಪ್ರಚೋದನಕಾರಿ ಪೋಸ್ಟ್ ಹಾಕಿದ ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಕಳೆದ ಶುಕ್ರವಾರ ನಗರದ ಕಂಕನಾಡಿಯಲ್ಲಿ ಮಸೀದಿ ಪಕ್ಕದ ಒಳ ರಸ್ತೆ ಬದಿಯಲ್ಲಿ ಕೆಲ ಯುವಕರು ನಮಾಝ್ ಮಾಡಿದ ವಿಡಿಯೋ ವೈರಲ್ ಆಗಿತ್ತು. ನಮಾಝ್ ನಿರ್ವಹಿಸಿದ್ದಕ್ಕೆ ಸಂಘಪರಿವಾರ ಆಕ್ಷೇಪ ವ್ಯಕ್ತಪಡಿಸಿತ್ತು. ಇದರ ಬೆನ್ನಲ್ಲೆ ಪೊಲೀಸರು ಸುಮೋಟೊ ಪ್ರಕರಣ (ಐಪಿಸಿ ಸೆಕ್ಷನ್ 341, 283, 143 ಜೊತೆಗೆ 149 ಸೆಕ್ಷನ್) ದಾಖಲಿಸಿಕೊಂಡಿದ್ದರು. ಪೊಲೀಸರ ಕ್ರಮಕ್ಕೆ ಮುಸ್ಲಿಂ ಸಮುದಾಯ ಆಕ್ರೋಶ ವ್ಯಕ್ತಪಡಿಸಿತ್ತು. ಸಾಮಾಜಿಕ ಮಾಧ್ಯಮಗಳಲ್ಲಿ ಕಾಂಗ್ರೆಸ್ ಸರ್ಕಾರ ಮತ್ತು ಪೊಲೀಸ್ ಇಲಾಖೆಯ ವಿರುದ್ಧ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು.

ಮೇ 29ರಂದು ಕಾಂಗ್ರೆಸ್ ಮುಖಂಡ ಕೆ ಕೆ ಶಾಹುಲ್ ಹಮೀದ್ ನೇತೃತ್ವದ ಮುಸ್ಲಿಂ ನಾಯಕರ ನಿಯೋಗ ಮಂಗಳೂರು ನಗರ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಕೇಸ್ ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು. ಇಲ್ಲದಿದ್ದರೆ ಹೋರಾಟದ ಎಚ್ಚರಿಕೆ ನೀಡಿದ್ದರು. ಎಸ್‌ಡಿಪಿಐ ಪಕ್ಷ ಇಂದು (ಮೇ 31) ಶುಕ್ರವಾರ ಪ್ರತಿಭಟನೆ ಕೂಡ ಹಮ್ಮಿಕೊಂಡಿತ್ತು.

ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಸುಮೋಟೊ ಪ್ರಕರಣ ರದ್ದಾಗಿದೆ. ಈ ಬಗ್ಗೆ ಅಧಿಕೃತ ಹೇಳಿಕೆ ಪ್ರಕಟಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ “ರಸ್ತೆಯಲ್ಲಿ ನಮಾಝ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಚಾರಕ್ಕೆ ಅಡೆತಡೆ ಮಾಡುವ ಯಾವುದೇ ಉದ್ದೇಶ ಇಲ್ಲದಿರುವುದರಿಂದ ಸದ್ರಿ ಪ್ರಕರಣದಲ್ಲಿ ‘ಬಿ’ ಅಂತಿಮ ವರದಿ ಸಲ್ಲಿಸಲಾಗಿದೆ ಮತ್ತು ಹಿರಿಯ ಅಧಿಕಾರಿಗಳಿಗೆ ಯಾವುದೇ ಮಾಹಿತಿಯನ್ನು ನೀಡದೆ ಸುಮೋಟೊ ಪ್ರಕರಣ ದಾಖಲಿಸಿದ ಕದ್ರಿ ಪೊಲೀಸ್ ನಿರೀಕ್ಷಕರನ್ನು ಕಡ್ಡಾಯ ರಜೆಯಲ್ಲಿ ಕಳುಹಿಸಿ, ಎಸಿಪಿ ದರ್ಜೆಯ ಅಧಿಕಾರಿಯನ್ನು ವಿಚಾರಣೆಗೆ ನೇಮಕ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿ ಭಂಗ ಉಂಟು ಮಾಡುವ ಪೋಸ್ಟ್ ಹಾಕಿದ್ದ ಹಿಂದುತ್ವ ಮುಖಂಡ ಶರಣ್ ಪಂಪ್‌ವೆಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶರಣ್ ಪಂಪವೆಲ್ ಇತ್ತೀಚೆಗೆ ಫೇಸ್‌ಬುಕ್‌ನಲ್ಲಿ ಹಾಕಿದ್ದ ಪೋಸ್ಟ್‌ನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲು ಮಾಡಲಾಗಿದೆ.

“ಮಂಗಳೂರಿನ ಕಂಕನಾಡಿ ಬಳಿ ಸಾರ್ವಜನಿಕರಿಗೆ ಉದ್ದೇಶಪೂರ್ವಕವಾಗಿ ತೊಂದರೆ ನೀಡಲು ನಡೆಸಿರುವ ನಮಾಜಿನ ಸಂಬಂಧಪಟ್ಟವರಿಗೆ ಈಗಾಗಲೇ ತಿಳಿಸಲಾಗಿದೆ. ಶುಕ್ರವಾರ ಮತ್ತೆ ಅದೇ ಜಾಗದಲ್ಲಿ ನಮಾಝ್ ನಡೆದರೆ ನೇರವಾಗಿ ಬಜರಂಗದಳ ಇದರ ವಿರುದ್ಧ ನೇರ ಕಾರ್ಯಾಚರಣೆ ನಡೆಸಿ ನಿಲ್ಲಿಸಲಾಗುವುದು ಎಂದು ಈ ಮೂಲಕ ಎಚ್ಚರಿಕೆ ನೀಡುತ್ತಿದ್ದೇವೆ” ಎಂಬ ಬರವಣಿಗೆಯೊಂದಿಗೆ ಶರಣ್‌ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದರು.

“ಜನರಲ್ಲಿ ದ್ವೇಷ ಭಾವನೆ ಉಂಟಾಗುವಂತೆ ಹಾಗೂ ಕಾನೂನನ್ನು ಕೈಗೆತ್ತಿಕೊಳ್ಳುವ ಬೆದರಿಕೆ ಹಾಕಿ ಎಚ್ಚರಿಕೆಯನ್ನು ನೀಡಿ ಸಮಾಜದಲ್ಲಿ ಭಯವನ್ನುಂಟು ಮಾಡುವ ರೀತಿಯಲ್ಲಿ ಪೋಸ್ಟ್‌ ಅನ್ನು ಮಾಡಿದ್ದಾಗಿದೆ. ಈ ಬಗ್ಗೆ ಮಂಗಳೂರು ನಗರದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದರಿಂದ ಪ್ರಕರಣವು ದಾಖಲಾಗಿರುತ್ತದೆ” ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಬಂಧನ: ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಿರುವ ಎಸ್‌ಐಟಿ ಅಧಿಕಾರಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...