Homeಕರ್ನಾಟಕಪಿಎಸ್‌ಐ ಪರೀಕ್ಷೆ ಅಕ್ರಮ: ಗೃಹಸಚಿವರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಎಎಪಿ ಮನವಿ

ಪಿಎಸ್‌ಐ ಪರೀಕ್ಷೆ ಅಕ್ರಮ: ಗೃಹಸಚಿವರನ್ನು ವಜಾಗೊಳಿಸುವಂತೆ ರಾಜ್ಯಪಾಲರಿಗೆ ಎಎಪಿ ಮನವಿ

- Advertisement -
- Advertisement -

ಪಿಎಸ್‌ಐ ಪರೀಕ್ಷೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಮನವಿ ಮಾಡಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರರವರನ್ನು ಸಚಿವ ಸಂಪುಟದಿಂದ ವಜಾ ಮಾಡಲು ಆಗ್ರಹಿಸಿದರು.

ರಾಜ್ಯಪಾಲರನ್ನು ಭೇಟಿಯಾದ ನಿಯೋಗದಲ್ಲಿ ಪಕ್ಷದ ಹಿರಿಯ ಮುಖಂಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹಾಗೂ ಪಕ್ಷದ ಅನೇಕ ಮುಖಂಡರು ಇದ್ದರು.

ರಾಜಭವನದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರನ್ನು ಮಂಗಳವಾರ ಭೇಟಿ ಮಾಡಿದ ಪೃಥ್ವಿ ರೆಡ್ಡಿಯವರು ಮೂರು ಆಗ್ರಹಗಳನ್ನು ಲಿಖಿತ ರೂಪದಲ್ಲಿ ಸಲ್ಲಿಸಿದರು. ಇವುಗಳನ್ನು ಶೀಘ್ರ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಆದೇಶ ನೀಡಬೇಕೆಂದು ಮನವಿ ಮಾಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೊದಲನೆಯದಾಗಿ, ರಾಜ್ಯದ 52,000 ಅಭ್ಯರ್ಥಿಗಳು ಪಿಎಸ್‌ಐ ಪರೀಕ್ಷೆ ಬರೆದಿದ್ದಾರೆ. ಈಗ ಅಕ್ರಮ ಬಯಲಾಗಿರುವ ಹಿನ್ನೆಲೆಯಲ್ಲಿ, ಅಭ್ಯರ್ಥಿಗಳನ್ನು ಕಾಯಿಸದೇ ಶೀಘ್ರವೇ ಮರುಪರೀಕ್ಷೆ ನಡೆಸಬೇಕಾದ ಅವಶ್ಯಕತೆಯಿದೆ. ಇದಕ್ಕಾಗಿ ನೂತನ ಪ್ರಾಧಿಕಾರ ರಚಿಸಿ ಪಾರದರ್ಶಕವಾಗಿ ಪರೀಕ್ಷಾ ಪ್ರಕ್ರಿಯೆಗಳನ್ನು ಕೈಗೊಳ್ಳಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಎರಡನೆಯದಾಗಿ, ಪಿಎಸ್‌ಐ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿ ಪ್ರಸ್ತುತ ನಡೆಯುತ್ತಿರುವ ಸಿಐಡಿ ತನಿಖೆಯು ನಿಧಾನಗತಿಯಲ್ಲಿ ಸಾಗುತ್ತಿದೆ. ಅಲ್ಲದೇ, ರಾಜ್ಯ ಸರ್ಕಾರವು ತನ್ನ ಪ್ರಭಾವ ಬಳಸಿ ತನಿಖೆಯು ವಿಳಂಬವಾಗುವಂತೆ ಮಾಡುವ ಸಾಧ್ಯತೆಯಿದೆ. ಆದ್ದರಿಂದ ತನಿಖೆಗೆ ಕಾಲಮಿತಿ ನಿಗದಿಪಡಿಸಬೇಕು. ಕೂಡಲೇ ತಪ್ಪಿತಸ್ಥರನ್ನು ಬಂಧಿಸಿ, ಆರೋಪಪಟ್ಟಿ ಸಲ್ಲಿಸಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಕೋರಿದ್ದಾರೆ.

ಮೂರನೇಯದಾಗಿ, ರಾಜ್ಯ ಸಚಿವ ಸಂಪುಟದಲ್ಲಿ ಗೃಹ ಇಲಾಖೆಯು ಅತ್ಯಂತ ಸೂಕ್ಷ್ಮವಾದ ಇಲಾಖೆಯಾಗಿದೆ. ಹಾಲಿ ಗೃಹ ಸಚಿವ ಆರಗ ಜ್ಞಾನೇಂದ್ರರವರಿಗೆ ಸಾಮರ್ಥ್ಯ ಹಾಗೂ ಅನುಭವದ ಕೊರತೆಯಿರುವುದು ಅವರು ಅಧಿಕಾರ ವಹಿಸಿಕೊಂಡ ಸಂದರ್ಭದಿಂದಲೂ ಸಾಬೀತಾಗುತ್ತಿದೆ. ಆದ್ದರಿಂದ ಕೂಡಲೇ ಅವರನ್ನು ವಜಾ ಮಾಡಿ ಸಮರ್ಥರನ್ನು ಗೃಹ ಸಚಿವ ಸ್ಥಾನಕ್ಕೆ ನೇಮಿಸಬೇಕು. ಈ ಕುರಿತು ಸರ್ಕಾರಕ್ಕೆ ಆದೇಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಆಮ್‌ ಆದ್ಮಿ ಪಾರ್ಟಿಯ ಮುಖಂಡರಾದ ನಾಗಣ್ಣ ಗೌಡ, ಚನ್ನಪ್ಪಗೌಡ ನೆಲ್ಲೂರು ಹಾಗೂ ಜಗದೀಶ್ ಚಂದ್ರ ಹಾಜರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...