Homeಮುಖಪುಟಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

ಪಿಎಸ್‌ಐ ನೇಮಕಾತಿ ಅಕ್ರಮ; ಸಿಐಡಿ ಅಧಿಕಾರಿಗಳ ನೋಟಿಸ್‌ ಕುರಿತು ಪ್ರಿಯಾಂಕ್ ವ್ಯಂಗ್ಯ

- Advertisement -
- Advertisement -

ನಿನ್ನೆ ಸಂಜೆ ನನ್ನ ನಿವಾಸಕ್ಕೆ ಸಿಐಡಿ ಅಧಿಕಾರಿಗಳು ನೋಟೀಸ್ ತಲುಪಿಸಿದ್ದು, ಈ ನೋಟೀಸ್ ಸರ್ಕಾರ ಹಾಗೂ ಗೃಹ ಇಲಾಖೆಯ ಕಾರ್ಯವೈಖರಿ, ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿರುವ ಪ್ರಿಯಾಂಕ್,  ಅಧಿಕಾರಿಗಳು ನೋಟಿಸ್‌ನಲ್ಲಿ ‘ತಾವು ದಿನಾಂಕ 23-04-2022ರಂದು ಪತ್ರಿಕಾಗೋಷ್ಠಿ ನಡೆಸಿ 3-10-2021ರಂದು ನಡೆದ 541 ಸಿವಿಲ್ ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ತಮ್ಮ ಬಳಿ ಸಾಕ್ಷ್ಯವಿರುವುದಾಗಿ ಮಾಹಿತಿ ನೀಡಿದ್ದೀರಿ. ಈ ಪ್ರಕರಣ ಬಹಳ ಸೂಕ್ಷ್ಮ ಹಾಗೂ ಗಂಭೀರವಾಗಿದೆ. ಲಭ್ಯವಿರುವ ಎಲ್ಲ ಮಾಹಿತಿ ತ್ವರಿತಗತಿಯಲ್ಲಿ ಸಂಗ್ರಹಿಸುವ ಅಗತ್ಯವಿರುವುದರಿಂದ ತಮ್ಮ ಬಳಿ ಇರುವ ಸಾಕ್ಷಿ ಹಾಗೂ ದಾಖಲೆ ಪರಿಶೀಲಿಸಿ ತನಿಖೆ ಕೈಗೊಳ್ಳುವುದು ಅತಿ ಅವಶ್ಯವಾಗಿದೆ. ತನಿಖಾಧಿಕಾರಿಗಳು ದಾಖಲೆ ಸಂಗ್ರಹಿಸಲು ಸೂಚಿಸಿದ್ದು, ತಾವು ಇಂದು 11.30ಕ್ಕೆ ಹಾಜರಾಗಬೇಕು’ ಎಂದು ತಿಳಿಸಿದ್ದಾರೆ. ಇದು ಸರ್ಕಾರದ ಅಸಮರ್ಥತೆಗೆ ಸಾಕ್ಷಿಯಾಗಿದೆ ಎಂದರು.

ಸರ್ಕಾರ ಹಾಗೂ ತನಿಖಾಧಿಕಾರಿಗಳು ನಾನು ಇದುವರೆಗೂ ಈ ವಿಚಾರವಾಗಿ ನಡೆಸಿರುವ ಪತ್ರಿಕಾಗೋಷ್ಠಿಯನ್ನು ಕಣ್ಣು ತೆರೆದು, ಕಿವಿಗೊಟ್ಟಿ ನೋಡಬೇಕು ಎಂದು ಹೇಳಲು ಬಯಸುತ್ತೇನೆ. ನಾನು ಯಾವುದೇ ತನಿಖೆ ಮಾಡಿ, ಸಾರ್ವಜನಿಕ ವಲಯಕ್ಕೆ ಹೊರತುಪಡಿಸಿ ನನ್ನ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿಲ್ಲ. ನಾನು ಸಾರ್ವಜನಿಕ ವಲಯದಲ್ಲಿ ಲಭ್ಯವಿರುವ ಸಾಕ್ಷ್ಯಾಧಾರಗಳನ್ನಷ್ಟೇ ಮಾಧ್ಯಮಗಳ ಮುಂದಿಟ್ಟಿದ್ದೇನೆ. ಸಾರ್ವಜನಿಕ ವಲಯಗಳಲ್ಲಿ ಇರುವ ಮಾಹಿತಿ ಅವರ ಬಳಿ ಇಲ್ಲ ಎಂದು ಹೇಳುತ್ತಿರುವುದು ಬಹಳ ಆಶ್ಚರ್ಯವಾಗುತ್ತಿದೆ ಎಂದು ತಿಳಿಸಿದ್ದಾರೆ.

ಜ.1ರಂದು ಅಭ್ಯರ್ಥಿಗಳು ಗೃಹ ಸಚಿವರನ್ನು ಭೇಟಿ ಮಾಡಿರುವ ಮಾಹಿತಿಯನ್ನು ಸಚಿವರೇ ಟ್ವೀಟ್ ಮಾಡಿದ್ದಾರೆ. ಜ.22ರಂದು ಗೃಹ ಸಚಿವರು ಶಿವಮೊಗ್ಗದಲ್ಲಿ ಈ ಪರೀಕ್ಷೆ ಪಾಸ್ ಮಾಡಲಾಗದವರು ಅಸೂಯೆಯಿಂದ ಅಕ್ರಮ ನಡೆದಿರುವ ಆರೋಪ ಮಾಡಿದ್ದಾರೆ ಎಂದು ಬೇಜವಾಬ್ದಾರಿ ಹೇಳಿಕೆ ಕೊಟ್ಟಿದ್ದಾರೆ. ಜ.29ರಂದು ಆರ್ಟಿಕಲ್ 371 ಮೀಸಲಾತಿ ವಿಚಾರವಾಗಿ ಸರ್ಕಾರಕ್ಕೆ ವರದಿ ಬಂದಿತ್ತು. ಫೆ.7ರಂದು ನೇಮಕಾತಿಯನ್ನು ಗೃಹ ಇಲಾಖೆಯೇ ತಡೆ ಹಿಡಿದಿದೆ ಎಂದು ನೆನಪಿಸಿದ್ದಾರೆ.

3-2-2022ರಲ್ಲಿ ಸಚಿವ ಪ್ರಭು ಚೌಹಾಣ್ ಅವರು ಈ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುತ್ತಾರೆ. 10-3-2022ರಂದು ಸುಶೀಲ್ ನಮೋಶಿ ಅವರಿಗೆ ಹಾಗೂ ರವಿ ಅವರ ಪ್ರಶ್ನೆಗಳಿಗೆ ಗೃಹ ಸಚಿವರು ಮೇಲ್ಮನೆಯಲ್ಲಿ ಭಿನ್ನ ಉತ್ತರ ಕೊಟ್ಟಿದ್ದಾರೆ. ಮಾರ್ಚ್ 24ರಂದು ಯು.ಬಿ ವೆಂಕಟೇಶ್ ಅವರ ಪ್ರಶ್ನೆಗೆ ಈ ನೇಮಕಾತಿ ಸುಗಮವಾಗಿ ಸಾಗುತ್ತಿದೆ ಎಂದು ಗೃಹ ಸಚಿವರು ಉತ್ತರ ಕೊಟ್ಟಿದ್ದೀರಿ. ಏ.9ರಂದು ಚೈಕ್ ಪೋಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಗಳು ದೂರು ದಾಖಲಿಸಿದ್ದರು. ಇವಿಷ್ಟು ನಾನು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಕೊಟ್ಟ ದಾಖಲೆಗಳು. ಇದ್ಯಾವುದೂ ಸರ್ಕಾರದ ಬಳಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಸಂಭಾವ್ಯ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿ ಇನ್ನು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನವೇ ಪೊಲೀಸ್ ಸಮವಸ್ತ್ರ ಧರಿಸಿಕೊಂಡು ಓಡಾಡುತ್ತಿರುವ ಮಾಹಿತಿ ಇಲಾಖೆ ಬಳಿ ಇಲ್ಲವೇ? ಎಬಿವಿಪಿ ಕಾರ್ಯಕರ್ತ ಅರುಣ್ ಅಂತಿಮ ಪಟ್ಟಿಯಲ್ಲಿ ಹೆಸರು ಬಂದಿರುವ ಮಾಹಿತಿ ನಮಗೆ ಲಭ್ಯವಾಗಿದ್ದು, ನಿಮಗೆ ಲಭ್ಯವಾಗಿಲ್ಲವೇ? ನನಗೆ ಪತ್ರಿಕೆಗಳು, ಸಾಮಾಜಿಕ ಜಾಲತಾಣಗಳ ಮೂಲಕ ಈ ಎಲ್ಲ ದಾಖಲೆಗಳು, ಪರೀಕ್ಷೆಯ ಒಎಂಆರ್ ಪತ್ರಿಕೆಗಳು ಲಭ್ಯವಾಗುತ್ತಿದ್ದು, ನಿಮಗೆ ಲಭ್ಯವಾಗಿಲ್ಲವೇ? ಎಂದು ಕೇಳಿದ್ದಾರೆ.

ಈ ಪ್ರಕರಣದಲ್ಲಿ ದಿವ್ಯಾ ಹಾಗರಗಿ ಅವರ ಹೆಸರು ಕೇಳಿಬಂತು, ನಂತರ ಮಾಹಂತೇಶ್ ಪಾಟೀಲ್, ಆರ್.ಡಿ ಪಾಟೀಲ್ ಬಂಧನವಾದರು. ನಾವು ಬಿಡುಗಡೆ ಮಾಡಿದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿತ್ತು. ಅಲ್ಲದೇ ನಾವು ಬಿಡುಗಡೆಗೂ ಮುನ್ನ ಅಂದಿನ ಕನ್ನಡ ಪ್ರಭ ಪತ್ರಿಕೆಯಲ್ಲಿ ಆ ಬಗ್ಗೆ ವರದಿ ಬಂದಿತ್ತು. ಆಮೂಲಕ ಆ ವಿಚಾರ ಸಾರ್ವಜನಿಕ ವಲಯದಲ್ಲಿತ್ತು. ನಾನು ಈ ಆಡಿಯೋವನ್ನು ರಹಸ್ಯ ಕಾರ್ಯಾಚರಣೆ ಮೂಲಕ ಮಾಡಿಲ್ಲವಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಜಾಮೀನು ದೊರೆತ ಬಳಿಕ ಮತ್ತೊಮ್ಮೆ ಜಿಗ್ನೇಶ್‌ ಮೇವಾನಿಯ ಬಂಧನ

ಆ ಆಡಿಯೋದಲ್ಲಿ ಒಬ್ಬ ಅಭ್ಯರ್ಥಿ ನಾವು ಇದರಲ್ಲಿ ಸಿಕ್ಕಿಕೊಳ್ಳುವುದಿಲ್ಲವಲ್ಲವೇ ಎಂದು ಕೇಳಿದಾಗ, ಮಧ್ಯವರ್ತಿ, ಇದರಲ್ಲಿ ಮೇಲಿಂದ ಕೆಳಗಿನವರೆಗೂ ಎಲ್ಲ ಪ್ರಭಾವಿವ್ಯಕ್ತಿಗಳಿದ್ದು, ಸಿಕ್ಕಿಬೀಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. 545 ನೇಮಕಾತಿಯಲ್ಲಿ ಪರೀಕ್ಷೆ ನಡೆಸುವವರು ಭಾಗಿಯಾಗಿದ್ದಾರೆ ಎಂಬ ಮಾತುಗಳಿವೆ. ಇದೆಲ್ಲವೂ ರಾಜ್ಯ ಗುಪ್ತಚರ ಇಲಾಖೆ ಎಷ್ಟು ದುರ್ಬಲವಾಗಿದೆ ಎಂಬುದಕ್ಕೆ ಸಾಕ್ಷಿ. ಈ ಹಿಂದೆ ಗುಪ್ತಚರ ಇಲಾಖೆಗೆ ತನ್ನದೇ ಆದ ಮೂಲ, ಸೂತ್ರಗಳಿರುತ್ತಿದ್ದವು. ಆದರೆ ಈಗ ಪತ್ರಿಕೆ ವರದಿ, ಮಾಧ್ಯಮ ವರದಿ ನೋಡಿ ಸರ್ಕಾರಕ್ಕೆ ಮಾಹಿತಿ ನೀಡುತ್ತಿವೆ. ಇವರಿಗೆ ಸಾಮಾನ್ಯ ಪ್ರಜ್ಞೆಯೂ ಇಲ್ಲವಾಗಿದೆ ಎಂದು ಕುಟುಕಿದ್ದಾರೆ.

ಆಡಿಯೋದಲ್ಲಿ ಶ್ರೀಶೈಲ ಬಿರಾದಾರ್ ಎಂಬ ಅಭ್ಯರ್ಥಿ ಮಧ್ಯವರ್ತಿ ಜತೆ ಮಾತನಾಡಿದ್ದಾರೆ ಎಂಬ ಮಾಹಿತಿ ಸರ್ಕಾರದ ಬಳಿ ಇಲ್ಲವೇ? ಇವರು ಕಣ್ಣಮುಂದೆ ಇರುವ ಸಾಕ್ಷಿಗಳನ್ನು ನೋಡಲು ತಯಾರಿಲ್ಲ. ಹೀಗಾಗಿ ನಾನು ಕಾಲಾನುಕ್ರಮವಾಗಿ ಸರ್ಕಾರಿ ದಾಖಲೆ, ಸಚಿವರ ಹೇಳಿಕೆ, ಅಧಿಕಾರಿಗಳ ಹೇಳಿಕೆಯನ್ನು ಜನರ ಮುಂದೆ ಇಟ್ಟಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...