Homeಕರ್ನಾಟಕಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ!

ಮುಂದಿನ ಚುನಾವಣೆಗೆ ಸ್ಪರ್ಧಿಸುವುದಾಗಿ ಹೇಳಿದ ಪಿಎಸ್‌ಐ ಹಗರಣದ ಆರೋಪಿ ರುದ್ರಗೌಡ ಪಾಟಿಲ!

- Advertisement -
- Advertisement -

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ರುದ್ರಗೌಡ ಪಾಟಿಲ ಅಲಿಯಾಸ್ ಆರ್‌‌ಡಿ ಪಾಟಿಲ ಅವರು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿರುವುದಾಗಿ ಶನಿವಾರ ಹೇಳಿದ್ದಾರೆ. ಈ ಬಗ್ಗೆ ಅವರು ಫೇಸ್‌‌‌ಬುಕ್‌ ಮೂಲಕ ವೀಡಿಯೊವನ್ನು ಬಿಡುಗಡೆ ಮಾಡಿದ್ದಾರೆ.

ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ ರುದ್ರಗೌಡ ಅವರನ್ನು ಮತ್ತೆ ಬಂಧಿಸಲು ಗುರುವಾರ ಕಲಬುರಗಿಯಲ್ಲಿರುವ ಅವರ ನಿವಾಸಕ್ಕೆ ತೆರಳಿದ್ದ ಕರ್ನಾಟಕ ಅಪರಾಧ ತನಿಖಾ ಇಲಾಖೆ (ಸಿಐಡಿ) ಅಧಿಕಾರಿಗಳಿಂದ ಅವರು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ ಎಂದು ಕಲಬುರಗಿ ಪೊಲೀಸರು ತಿಳಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸ್ಥಳದಿಂದ ಪರಾರಿಯಾಗುವ ವೇಳೆ ರುದ್ರಗೌಡ ಅವರನ್ನು ವಶಕ್ಕೆ ತೆಗೆದುಕೊಳ್ಳಲು ಯತ್ನಿಸಿದ ಸಿಐಡಿ ಅಧಿಕಾರಿಗಳನ್ನು ತಳ್ಳಿದ್ದರು ಎಂದು ವರದಿಯಾಗಿದೆ.ಈ ಘಟನೆ ನಡೆದ ನಂತರ ವೀಡಿಯೊ ಬಿಡುಗಡೆ ಮಾಡಲಾಗಿದೆ.

ರುದ್ರಗೌಡ ಅವರನ್ನು ಈ ಹಿಂದೆ 2022ರ ಏಪ್ರಿಲ್‌ನಲ್ಲಿ ಬಂಧಿಸಲಾಗಿತ್ತು. ನಂತರ ಅವರನ್ನು ಡಿಸೆಂಬರ್‌ನಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಆದರೆ ಜಾಮೀನು ಷರತ್ತುಗಳನ್ನು ಅನುಸರಿಸಲು ವಿಫಲವಾದ ಕಾರಣ, ಸಿಐಡಿ ಅಧಿಕಾರಿಗಳು ಗುರುವಾರ ಸಂಜೆ 5.30 ರ ಸುಮಾರಿಗೆ ಬಂಧನ ವಾರಂಟ್‌ನೊಂದಿಗೆ ಅವರ ಮನೆಗೆ ತಲುಪಿದ್ದರು. ಅದೇ ದಿನ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತಂಡವೂ ಪಾಟೀಲ್ ಅವರ ನಿವಾಸದಲ್ಲಿ ವಿಚಾರಣೆ ನಡೆಸಿತ್ತು.

ಕರ್ನಾಟಕ ಸಿಐಡಿ ಪೊಲೀಸರು ರುದ್ರಗೌಡ ವಿರುದ್ಧ ಕಲಬುರಗಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. “ಆರೋಪಿಯನ್ನು ವಶಕ್ಕೆ ಪಡೆಯಲು ನಿವಾಸಕ್ಕೆ ತೆರಳಿದಾಗ ನಮ್ಮನ್ನು ತಳ್ಳಿ ಪರಾರಿಯಾಗಿದ್ದಾರೆ” ಎಂದು ಸಿಐಡಿ ಅಧಿಕಾರಿಗಳು ಹೇಳಿದ್ದಾರೆ.

ರುದ್ರಗೌಡ ಅವರೇ ನಿರ್ವಹಿಸುತ್ತಿದ್ದಾರೆ ಎಂದು ಹೇಳಲಾದ ಫೇಸ್‌ಬುಕ್ ಪೇಜ್‌ನಲ್ಲಿ ವೀಡಿಯೊವನ್ನು ಬಿಡುಗಡೆ ಮಾಡಲಾಗಿದೆ. ವಿಡಿಯೋದಲ್ಲಿ ರುದ್ರಗೌಡ ಪಾಟೀಲ್ ಅವರು ತಾನು ತಲೆಮರೆಸಿಕೊಂಡಿಲ್ಲ ಎಂದು ಹೇಳಿಕೊಂಡಿದ್ದಾರೆ.

“ನಾನು ತಲೆಮರೆಸಿಕೊಂಡಿಲ್ಲ. ಇದು ಸುಳ್ಳು ಸುದ್ದಿ, ಯಾರೂ ಆತಂಕಕ್ಕೆ ಒಳಗಾಗಬಾರದು. ನಿಮ್ಮ ಸೇವೆಯನ್ನು ನಿರ್ವಹಿಸಲು ನಾನು ಶೀಘ್ರದಲ್ಲೇ ನಿಮ್ಮ ಮುಂದೆ ಹಾಜರಾಗುತ್ತೇನೆ. ಜನರು ಬಯಸಿದರೆ, ನಾನು ಅಫಜಲಪುರ ಕ್ಷೇತ್ರದ ಅಭ್ಯರ್ಥಿಯಾಗಿ 2023ರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುತ್ತೇನೆ” ಎಂದು ರುದ್ರಗೌಡ ವೀಡಿಯೊದಲ್ಲಿ ಹೇಳಿದ್ದಾರೆ.

ಕಳೆದ ವರ್ಷ ಕರ್ನಾಟಕವನ್ನು ಬೆಚ್ಚಿಬೀಳಿಸಿದ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ತನ್ನನ್ನು ಸಿಲುಕಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. “ರಾಜಕೀಯ ಒತ್ತಡಕ್ಕೆ ಮಣಿದು ಅಧಿಕಾರಿಗಳು ನನ್ನನ್ನು ಫಿಕ್ಸ್ ಮಾಡಿದ್ದಾರೆ. ನಾನು ಅಥವಾ ನನ್ನ ಸಹೋದರ ರಾಜಕೀಯವಾಗಿ ಬೆಳೆಯುವುದು ಬೇಡ ಎನ್ನುವ ಕಾರಣಕ್ಕೆ ಕೆಲವರು ಈ ಸಂಚು ರೂಪಿಸಿದ್ದಾರೆ” ಎಂದು ರುದ್ರಗೌಡ ವಿಡಿಯೊದಲ್ಲಿ ಹೇಳಿಕೊಂಡಿದ್ದಾರೆ.

“ಇದೇ ರೀತಿಯ ಎಷ್ಟು ಪ್ರಕರಣಗಳಲ್ಲಿ ನನ್ನನ್ನು ಬಂಧಿಸಿದರೂ ನಾನು ಹೆದರುವುದಿಲ್ಲ. ನಾನು ತಲೆಮರೆಸಿಕೊಂಡಿಲ್ಲ. ಮಾಧ್ಯಮಗಳಿಗೆ ಸತ್ಯಾಸತ್ಯತೆ ಗೊತ್ತಿರುವುದಿಲ್ಲ. ಹಾಗಾಗಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ. ನಾನು ಯಾವುದೇ ಅಧಿಕಾರಿಯಿಂದ ಓಡಿಹೋಗಿಲ್ಲ, ಈ ನೆಲದ ಕಾನೂನಿನ ಬಗ್ಗೆ ನನಗೆ ಗೌರವವಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಳಿಗ್ಗೆ 6 ರಿಂದ ರಾತ್ರಿ 11 ರವರೆಗೆ ನನ್ನನ್ನು ವಿಚಾರಣೆ ನಡೆಸಿದ್ದರು. ಈ ವೇಳೆ ನಾನು ತನಿಖೆಗೆ ಸಂಪೂರ್ಣವಾಗಿ ಸಹಕರಿಸಿದ್ದೇನೆ” ಎಂದು ಅವರು ತನ್ನನ್ನು ಸಮರ್ಥಿಸಿಕೊಂಡಿದ್ದಾರೆ.

ತನ್ನನ್ನು ಬಂಧಿಸಲು ಆಗಮಿಸಿದ್ದ ಸಿಐಡಿ ಅಧಿಕಾರಿಗಳನ್ನು ತಳ್ಳಿ ತಮ್ಮ ನಿವಾಸದಿಂದ ಪರಾರಿಯಾಗಿದ್ದಾರೆ ಎಂಬ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಅವರು ಅಲ್ಲಗಳೆದರು. “ನಾನು ಮನೆಯಿಂದ ಹೊರಟಾಗ ಸಿಐಡಿ ಅಧಿಕಾರಿಯನ್ನು ತಳ್ಳಿ ಓಡಿ ಹೋಗಿದ್ದೇನೆ ಎಂದು ಮಾಧ್ಯಮಗಳು ಸುಳ್ಳು ವರದಿ ಮಾಡುತ್ತಿವೆ” ಎಂದು ಆರೋಪಿಸಿದರು.

“ನಾನು ಎಲ್ಲಿಯೂ ಓಡಿಹೋಗಿಲ್ಲ ಮತ್ತು ಭಯಪಡುವ ಅಗತ್ಯವಿಲ್ಲ. ಈ ನಿಟ್ಟಿನಲ್ಲಿ ಯಾವುದೇ ಸುದ್ದಿಗೆ ಕಿವಿಗೊಡಬೇಡಿ. ಕಷ್ಟಗಳ ನಡುವೆಯೂ ಜನಸೇವೆಯನ್ನು ಮುಂದುವರಿಸುತ್ತೇನೆ. ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಾನು ಈ ಹಿಂದೆ ಎಲ್ಲಿಯೂ ಹೇಳಿಕೊಂಡಿಲ್ಲ. ಇಂದು ನಾನು ಅದರ ಬಗ್ಗೆ ಮಾತನಾಡುತ್ತಿದ್ದೇನೆ. ಕ್ಷೇತ್ರದ ಜನತೆ ಬಯಸಿದರೆ ಅಫಜಲಪುರ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ನನ್ನ ಅಭಿಮಾನಿಗಳು, ಹಿತೈಷಿಗಳು ಹಾಗೂ ಮತದಾರರ ಆಶೀರ್ವಾದ ನನ್ನ ಸಹೋದರ ಮಹಾಂತೇಶ ಪಾಟೀಲರ ಮೇಲಿರಲಿ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಿಎಸ್‌ಐ ಹಗರಣ: ಎಡಿಜಿಪಿ ಅಮೃತ್ ಪೌಲ್ ಬಂಧನ; 10 ದಿನ ಪೊಲೀಸ್ ಕಸ್ಟಡಿಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...