Homeಕರ್ನಾಟಕಪಿಎಸ್ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಅಮೃತ್ ಪೌಲ್‌ಗೆ ಜಾಮೀನು

ಪಿಎಸ್ಐ ನೇಮಕಾತಿ ಹಗರಣ: ಪ್ರಮುಖ ಆರೋಪಿ ಅಮೃತ್ ಪೌಲ್‌ಗೆ ಜಾಮೀನು

- Advertisement -
- Advertisement -

ಪಿಎಸ್ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಐಪಿಎಸ್ ಅಧಿಕಾರಿ ಅಮೃತ್ ಪೌಲ್‌ಗೆ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

ಕಲಬುರಗಿ ನ್ಯಾಯಪೀಠದಲ್ಲಿರುವ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಅಮೃತ್ ಪೌಲ್‌ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಜಾಮೀನು ಮಂಜೂರು ವೇಳೆ ತನಿಖೆಗೆ ಸಹಕರಿಸಬೇಕು, ಅನುಮತಿ ಇಲ್ಲದೆ ವಿದೇಶಕ್ಕೆ ಹೋಗುವಂತಿಲ್ಲ ಎಂದು ನ್ಯಾಯಾಲಯ ಅಮೃತ್ ಪೌಲ್‌ಗೆ ಷರತ್ತುಗಳನ್ನು ವಿಧಿಸಿದೆ.

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದ 545 ಪಿಎಸ್‌ಐಗಳ ನೇಮಕಾತಿಯಲ್ಲಿ ಅಕ್ರಮ ಪ್ರಕರಣದಲ್ಲಿ ಅಮೃತ್ ಪೌಲ್‌ ಮಾರ್ಚ್‌ನಲ್ಲಿ ಜೈಲು ಸೇರಿದ್ದರು. ನೇಮಕಾತಿ ಅಕ್ರಮದ ಸಮಯದಲ್ಲಿ ಅವರು ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಅಮೃತ್ ಪೌಲ್‌ ಕಳೆದ ಆರು ತಿಂಗಳಿಗೂ ಹೆಚ್ಚು ಕಾಲ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದರು.

ಇದನ್ನು ಓದಿ: ದೇವದುರ್ಗದಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಇಲ್ಲ: ಜೆಡಿಎಸ್‌ ಶಾಸಕಿ ಕರೆಮ್ಮ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...