Homeಕರ್ನಾಟಕPSI ಹಗರಣ ನ್ಯಾಯಾಂಗ ತನಿಖೆಗೆ: ಮೂರು ತಿಂಗಳಲ್ಲಿ ವರದಿ ಸಲ್ಲಿಸಲು ಸರ್ಕಾರ ಸೂಚನೆ

PSI ಹಗರಣ ನ್ಯಾಯಾಂಗ ತನಿಖೆಗೆ: ಮೂರು ತಿಂಗಳಲ್ಲಿ ವರದಿ ಸಲ್ಲಿಸಲು ಸರ್ಕಾರ ಸೂಚನೆ

- Advertisement -
- Advertisement -

ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಹೊರಬಂದಿದ್ದ 545 PSI ನೇಮಕಾತಿ ಹಗರಣವನ್ನು ಸದ್ಯದ ಆಡಳಿತರೂಢ ಕಾಂಗ್ರೆಸ್ ಸರ್ಕಾರವು ನಿವೃತ್ತ ನ್ಯಾಯಮೂರ್ತಿ ಬಿ ವೀರಪ್ಪ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆಗಾಗಿ ನೇಮಿಸಿರುವ ಈ ಏಕ ಸದಸ್ಯ ಆಯೋಗವು 3 ತಿಂಗಳೊಳಗಾಗಿ ತನಿಖೆ ಪೂರ್ಣಗೊಳಿಸಿ ವರದಿಯನ್ನು ಸಲ್ಲಿಸುವಂತೆ ಸರ್ಕಾರ ಸೂಚಿಸಿದೆ.

ಪಿಎಸ್‌ಐ ಹಗರಣದ ವಿರುದ್ಧ ತೀವ್ರ ಹೋರಾಟ ನಡೆಸಿದ್ದ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ತನಿಖೆ ನಡೆಸುವುದಾಗಿ ಘೋಷಿಸಿತ್ತು. ಅಂತೆಯೇ ಇದೀಗ ಅಧಿಕಾರಕ್ಕೆ ಬಂದ ತಕ್ಷಣ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಕ್ರಮವನ್ನು ಹೈ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್) 545 ಖಾಲಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಜನವರಿ 21, 2021ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅಕ್ಟೋಬರ್‌ 3, 2021 ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಯಲ್ಲಿ ಅಕ್ರಮಗಳು ಕಂಡು ಬಂದ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರ ಸಿಐಡಿ ತನಿಖೆಗೆ ಒಳಪಡಿಸಿತ್ತು.

ರಾಜ್ಯದ ನಾನಾ ಪೊಲೀಸ್ ಠಾಣೆಗಳಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿನ 52 ಅಭ್ಯರ್ಥಿಗಳು ಒಳಗೊಂಡಂತೆ ಇತರೆ ಆರೋಪಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿತ್ತು. ಸಂಬಂಧಪಟ್ಟ ನ್ಯಾಯಾಲಯಗಳಲ್ಲಿ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಲಾಗಿದ್ದು, ಹೆಚ್ಚುವರಿ ತನಿಖೆಯನ್ನು ಮುಂದುವರಿಸಲಾಗಿದೆ.

ಆರೋಪಿತ 52 ಅಭ್ಯರ್ಥಿಗಳು ಕಾನೂನುಬಾಹಿರವಾಗಿ ಪರೀಕ್ಷೆಯನ್ನು ಬರೆದಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ 1977ರ ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) (ತಿದ್ದುಪಡಿ) ನಿಯಮಗಳಲ್ಲಿ ನಿಯಮ 20 ರಲ್ಲಿ ನಮೂದಿಸಿರುವ ದುರ್ನಡತೆಯನ್ನು ಎಸಗಿರುವ ಕಾರಣ ನೇಮಕಾತಿ ಡಿಜಿಪಿಯನ್ನು ಜೂನ್‌ 20, 2023ರಲ್ಲಿ ಪೊಲೀಸ್‌ ಇಲಾಖೆ ನಡೆಸುವ ಎಲ್ಲ ವೃಂದದ ಹುದ್ದೆಗಳ ನೇಮಕಾತಿಯಲ್ಲಿ ಭಾಗವಹಿಸಲು ಶಾಶ್ವತವಾಗಿ ನಿಷೇಧಿಸಲಾಗಿತ್ತು.

545 ಪೊಲೀಸ್ ಸಬ್-ಇನ್ಸ್​ಪೆಕ್ಟರ್ ನೇರ ನೇಮಕಾತಿ ಪ್ರಕಿಯೆಯಲ್ಲಿ ಬಹು ಆಯಾಮದ ಅಕ್ರಮಗಳು ನಡೆದಿರುವುದು ಕಂಡುಬಂದಿರುವುದರಿಂದ ಮತ್ತು ಈ ಅಕ್ರಮ ಪ್ರಕರಣವು ಗಂಭೀರ ಸ್ವರೂಪದ್ದಾಗಿದೆ‌. ಸಾರ್ವಜನಿಕ ಮಹತ್ವವುಳ್ಳ ವಿಷಯವಾಗಿರುವುದರಿಂದ, ಇನ್ನುಮುಂದೆ ನಡೆಯುವ ಪೊಲೀಸ್ ನೇಮಕಾತಿಗಳು ಅತ್ಯಂತ ಪಾರದರ್ಶಕವಾಗಿ ನಡೆಸುವ ಅಗತ್ಯವಿರುವುದರಿಂದ ಈ ಪ್ರಕರಣದಲ್ಲಿ ನ್ಯಾಯಾಂಗ ತನಿಖೆಯ ಅಗತ್ಯವಿರುವುದನ್ನು ಮನಗಂಡು ಕಮಿಷನ್‌ ಆಪ್‌ ಎನ್‌ಕ್ವಾರಿ ಆಕ್ಟ್‌ 1952ರ ನಿಯಮ 3ರ ಉಪ ನಿಯಮ ರನ್ವಯ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ನಡೆಸಲು ವಿಚಾರಣಾ ಆಯೋಗ ರಚಿಸಲು ಸರ್ಕಾರ ನಿರ್ಧರಿಸಿದೆ.

ವಿಚಾರಣಾ ಆಯೋಗ 21.01.2021 ರನ್ವಯ ಜರುಗಿದ 545 ಗಳ ಆಯ್ಕೆ ಪ್ರಕ್ರಿಯೆಗಳಲ್ಲಿ ನೇಮಕಾತಿ ನಿಯಮಗಳನ್ನು ಉಲ್ಲಂಘಿಸಲಾಗಿದೆಯೇ? ಎಂದು ತನಿಖೆ ನಡೆಸಬೇಕು. ಆಯ್ಕೆ ಪ್ರಕ್ರಿಯೆಗಳಲ್ಲಿ ನೇಮಕಾತಿ ನಿಯಮಗಳು ಉಲ್ಲಂಘನೆಯಾಗಿದ್ದಲ್ಲಿ ಅಂತಹ ಉಲ್ಲಂಘನೆ ಅಥವಾ ಅಕ್ರಮಗಳು ಯಾವುವು? ಮತ್ತು ಆ ಅಕ್ರಮಗಳು ಯಾವ ಹಂತದಲ್ಲಿ ಜರುಗಿವೆ? ಎಂದು ತನಿಖೆ ನಡೆಸಬೇಕು.

ಅಕ್ರಮಗಳಲ್ಲಿ ಭಾಗಿಗಳಾಗಿ ದುರ್ಲಾಭ ಪಡೆದಿರುವ ವ್ಯಕ್ತಿಗಳು ಯಾರು? ಪಿಎಸ್ಐ ಹುದ್ದೆಗೆ ಅಭ್ಯರ್ಥಿಗಳ ನೇರ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಿಯಮಾನುಸಾರ, ಪಾರದರ್ಶಕವಾಗಿ ಮತ್ತು ಲೋಪರಹಿತವಾಗಿ ನಡೆಸುವ ನಿಟ್ಟಿನಲ್ಲಿ ಸರ್ಕಾರವು ಕೈಗೊಳ್ಳಬಹುದಾದ ಕ್ರಮಗಳಾವುವು? ಎಂಬುದನ್ನು ತನಿಖೆ ನಡೆಸಲು ಆದೇಶದಲ್ಲಿ ಸೂಚಿಸಲಾಗಿದೆ.

ಇದನ್ನೂ ಓದಿ; ಮಣಿಪುರ ಕ್ರೌರ್ಯ: ಬೆತ್ತಲೆ ಮೆರವಣಿಗೆ ದಿನವೇ ಮತ್ತಿಬ್ಬರು ಮಹಿಳೆಯರ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...