Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ, ಬೆದರಿಕೆ ಆರೋಪ ಮಾಡಿ, ಅವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ನಡೆ ಬಗ್ಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ. ಉಷಾ ಟೀಕಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪಿಟಿ ಉಷಾ, ”ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆಗೆ ಕುಳಿತುಕೊಳ್ಳಲು ನಿರ್ಧರಿಸುವ ಮುನ್ನ ತಾವು ಮಾಡಿದ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರುವವರೆಗು ಕಾಯಬೇಕಿತ್ತು. ಅದಕ್ಕೂ ಮುನ್ನ ಪ್ರತಿಭಟನೆಗೆ ಇಳಿದಿರುವುದು ಅಶಿಸ್ತಿನ ನಡೆಯಾಗಿದೆ ಎಂದು ಹೇಳಿದ್ದಾರೆ.

ಈ ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿ ಬರುವವರೆಗಾದರೂ ಕಾಯಬೇಕಿತ್ತು. ಕುಸ್ತಿಪಟುಗಳ ಪ್ರತಿಭಟನೆಯಿಂದಾಗಿ ದೇಶದ ಘನತೆಗೆ ಧಕ್ಕೆಯಾಗುತ್ತಿದೆ. ಇದು ನಕಾರಾತ್ಮಕ ಧೋರಣೆ ಎಂದಿದ್ದಾರೆ.

ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟೆನೆ ನಡೆಸುತ್ತಿರುವುದನ್ನು ಟೀಕಿಸಿರುವ ಪಿಟಿ ಉಷಾ ಮೇಲೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿಟಿ ಉಷಾ ಕುಸ್ತಿಪಟುಗಳ ವಿರುದ್ಧ ತೀವ್ರವಾಗಿ ಟೀಕಿಸಿದ ಒಂದು ದಿನದ ನಂತರ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಟ್ವೀಟ್ ಮಾಡಿದ್ದಾರೆ.

”ನಮ್ಮ ಕ್ರೀಡಾಪಟುಗಳು ನ್ಯಾಯಕ್ಕಾಗಿ ಬೀದಿಗಿಳಿದಿರುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ. ಅವರು ನಮ್ಮ ಮಹಾನ್ ರಾಷ್ಟ್ರವನ್ನು ಪ್ರತಿನಿಧಿಸಲು ಮತ್ತು ನಮಗೆ ಹೆಮ್ಮೆ ತರಲು ಶ್ರಮಿಸಿದ್ದಾರೆ. ರಾಷ್ಟ್ರವಾಗಿ, ಪ್ರತಿಯೊಬ್ಬ ವ್ಯಕ್ತಿಯ ಸಮಗ್ರತೆ ಮತ್ತು ಘನತೆಯನ್ನು ಕಾಪಾಡುವ ಜವಾಬ್ದಾರರು, ಇದು ಎಂದಿಗೂ ಸಂಭವಿಸಬಾರದು” ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ.

”ಇದೊಂದು ಸೂಕ್ಷ್ಮ ವಿಷಯವಾಗಿದ್ದು, ನಿಷ್ಪಕ್ಷಪಾತ ಮತ್ತು ಪಾರದರ್ಶಕ ರೀತಿಯಲ್ಲಿ ವ್ಯವಹರಿಸಬೇಕು. ನ್ಯಾಯ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

”ಪ್ರೀತಿಯ ಪಿಟಿ ಉಷಾ ಅವರೇ, ನಿಮ್ಮ ಸಹ ಕ್ರೀಡಾಪಟುಗಳು ಪುನರಾವರ್ತಿತ ಮತ್ತು ಅನಪೇಕ್ಷಿತ ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿ ಪ್ರತಿಭಟನೆ ಮಾಡುವುದನ್ನು ಅವಹೇಳನ ಮಾಡುವುದು ನಿಮಗೆ ವ್ಯಕ್ತಿತ್ವಕ್ಕೆ ಸರಿಯಾದುದಲ್ಲ. ಅವರ ಹಕ್ಕುಗಳಿಗಾಗಿ ಅವರು ಪ್ರತಿಭಟಿಸುತ್ತಿದ್ದಾರೆ. ಅದು “ರಾಷ್ಟ್ರದ ಇಮೇಜ್ ಅನ್ನು ಕಳಂಕಗೊಳಿಸುವುದಿಲ್ಲ”. ಅವರ ಕಳವಳಗಳನ್ನು ನಿರ್ಲಕ್ಷಿಸುವುದು – ಅವುಗಳನ್ನು ಕೇಳುವ ಬದಲು, ಅವುಗಳನ್ನು ತನಿಖೆ ಮಾಡುವುದು ಮತ್ತು ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕು” ಎಂದು ಕಾಂಗ್ರೆಸ್ ನಾಯಕ ಶಶಿ ತರೂರು ಟ್ವೀಟ್ ಮಾಡಿದ್ದಾರೆ.

ಪಿಟಿ ಉಷಾ ಅವರ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ”ನಾನು ಇವತ್ತು ಪಯ್ಯೋಳಿ ಎಕ್ಸ್‌ಪ್ರೆಸ್ ಅಭಿಮಾನಿ ಎಂಬ ನನ್ನ ಇಷ್ಟದ ಹಣೆಪಟ್ಟಿಯನ್ನು ಕಳಚಿಕೊಂಡಿದ್ದೇನೆ” ಎಂದಿದ್ದಾರೆ.

”ದೇಶಕ್ಕೆ ಕೀರ್ತಿ ತಂದ ಕುಸ್ತಿ ಪಟು ಹೆಣ್ಣುಮಕ್ಕಳು, ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಹೋರಾಟಕ್ಕೆ ಸಹಾಯ ಕೊಡಿ ಎಂದು ದಿಲ್ಲಿಯಲ್ಲಿ ಧರಣಿ ಹಮ್ಮಿಕೊಂಡು ಅಂಗಲಾಚಿ ಕುಳಿತಿರುವಾಗ, ಮೊದಲು ಬಂದು ಅವರ ಅಹವಾಲು ಕೇಳಬೇಕಿದ್ದ ಭಾರತ ಒಲಿಂಪಿಕ್ ಅಸೋಸಿಯೇಷನ್‌ನ ಹೊಸ ಅಧ್ಯಕ್ಷೆ ಪಿ ಟಿ ಉಷಾ ಅವರು, ಈ ಹೆಣ್ಣುಮಕ್ಕಳು ದೇಶದ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದು ಅತ್ಯಂತ ಶೋಚನೀಯ ಸ್ಥಿತಿ” ಎಂದು ಹೇಳಿದ್ದಾರೆ.

”ಐದಾರು ತಿಂಗಳ ಹಿಂದೆ ಇದೇ ಪಿ ಟಿ ಉಷಾ ಅವರು ತಮ್ಮ ಅಕಾಡೆಮಿಯಲ್ಲಿ ಭೂವಿವಾದವೊಂದು ಸೃಷ್ಟಿ ಆಗಿದ್ದಾಗ (ಅದರ ಒಳಸುಳಿಗಳು ಏನಿವೆ ನನಗೆ ಅರಿವಿಲ್ಲ), ತಾವೇ ಸ್ವತಃ ಮಾಧ್ಯಮಗಳ ಎದುರು ಬಂದು ತಮ್ಮ ಸಂಸ್ಥೆಯ ದಯನೀಯ ಸ್ಥಿತಿಯ ಬಗ್ಗೆ ಅಲವತ್ತುಕೊಂಡದ್ದು ರಾಷ್ಟ್ರೀಯ ಸುದ್ದಿ ಆಗಿತ್ತು. ಹಾಗಾಗಿ, ಒಂದು ಸಮಸ್ಯೆ ಎದುರಾದಾಗ, ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದರೆ ಪರಿಹಾರ ಸಿಗಬಹುದೆಂಬ ಪೂರ್ವೋದಾಹರಣೆ ಹಾಕಿಕೊಟ್ಟ ಹಿರಿಯಕ್ಕ ಅವರೇ, ಈಗ ಅದನ್ನೇ ಅನುಸರಿಸಿದ ಕಿರಿಯ ಕ್ರೀಡಾಪಟುಗಳ ಮೇಲೆ ಹರಿಹಾಯುವುದು ಖಂಡಿತಕ್ಕೂ ಭಾರತದ ಕ್ರೀಡಾಜಗತ್ತಿನ ನೈತಿಕ ಸ್ಥೈರ್ಯಕ್ಕೆ ಮರ್ಮಾಘಾತ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಈಗ ಸ್ವತಃ ರಾಜ್ಯಸಭಾ ಸದಸ್ಯರಾಗಿ, ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷೆಯಾಗಿ ಉಷಾ ಅವರಿಗೆ ತೀರಿಸಲು ಸಾಕಷ್ಟು ದೊಡ್ಡ ಋಣದ ಹೊರೆ ಇರಬಹುದು. ಆದರೆ, ಅದನ್ನು ತೀರಿಸಲು, ಈ ಕ್ರೀಡಾಪಟುಗಳ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಪರೋಕ್ಷ ಸಮರ್ಥನೆಗೆ ಇಳಿಯುವ ಮೂಲಕ ಪಿ ಟಿ ಉಷಾ, ತಮ್ಮ ಜಾಗತಿಕ ಮಟ್ಟದ ಕ್ರೀಡಾಸಾಧನೆಗಳ ಸಾಮಾಜಿಕ ಔನ್ನತ್ಯವನ್ನು ರಾಜಕೀಯದ ಕೆಸರು ರಾಡಿಯಲ್ಲಿ ಮುಳುಗಿಸಿ ಸಣ್ಣವರಾಗಿದ್ದಾರೆ. ಆ ಹೆಣ್ಣುಮಕ್ಕಳ ದೂರನ್ನು ಕನಿಷ್ಠ ಏನೆಂದು ಕೇಳುವ ನೈತಿಕತೆಯನ್ನು ಅವರು ಉಳಿಸಿಕೊಳ್ಳಬೇಕಾಗಿತ್ತು. ತುಂಬಾ ಬೇಸರದಿಂದ ಇದನ್ನು ದಾಖಲಿಸುತ್ತಿದ್ದೇನೆ” ಎಂದು ತಲ್ಲೂರು ಅವರು ಬರೆದುಕೊಂಡಿದ್ದಾರೆ.

ಮಹೇಂದ್ರ ಹಿಪ್ಪರಗಿ ಎನ್ನುವವರು ಸಾಮಾಜಿಕ ಮಾಧ್ಯಮ ಫೇಸ್‌ಬುಕ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ”ದಿಲ್ಲಿ ಬೀದಿಯಲ್ಲಿ ದೇಶಕ್ಕೆ ಕೀರ್ತಿ ತಂದ ಕುಸ್ತಿಪಟು ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯ ಒದಗಿಸಿ ಎಂದು ಅಂಗಲಾಚಿ ಕುಳಿತಿರುವಾಗ ಸ್ವತಃ ಕ್ರೀಡಾಪಟು, ಭಾರತ ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷೆ ಇವೆಲ್ಲಕ್ಕಿಂತ ಮುಖ್ಯವಾಗಿ ತಾನೊಬ್ಬ ಹೆಣ್ಣು ಮಗಳಾಗಿ ಎಲ್ಲರಿಗಿಂತ ಮೊದಲು ಬಂದು ಅವರ ಅಹವಾಲು ಕೇಳಬೇಕಿತ್ತು. ಆದರೆ ಪಿ ಟಿ ಉಷಾ ಧರಣಿ ನಿರತ ಈ ಹೆಣ್ಣು ಮಕ್ಕಳು ದೇಶದ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ ಎನ್ನುತ್ತಿದ್ದಾಳಲ್ಲ ಈಕೆ ನಿಜವಾಗಿಯೂ ಮನುಷ್ಯಳಾ…?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...