HomeಮುಖಪುಟPTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

PTCL ಕಾಯ್ದೆ ಅನುಷ್ಠಾನ ವೈಫಲ್ಯ: ನ್ಯಾಯಾಂಗ ಹಾಗೂ ಸರ್ಕಾರದ ಧೋರಣೆ ಖಂಡಿಸಿ ಜ್ಯೂರಿ ವರದಿ ಬಿಡುಗಡೆ

- Advertisement -
- Advertisement -

ದಲಿತ ಸಮುದಾಯಗಳಿಗೆ ಮಂಜೂರಾದ ಭೂಮಿ ಅನ್ಯಯವಾಗುವುದನ್ನು ತಡೆಯುವಲ್ಲಿ ಹಾಗೂ ಪಿಟಿಸಿಎಲ್ (PTCL) ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ನ್ಯಾಯಾಂಗ ಮತ್ತು ಸರ್ಕಾರ ಸಂಪೂರ್ಣವಾಗಿ ವಿಫಲವಾಗಿವೆ ಎಂದು ಜ್ಯೂರಿ ವರದಿಯು ತೀವ್ರವಾಗಿ ಅತೃಪ್ತಿ ವ್ಯಕ್ತಪಡಿಸಿದೆ. ಪಿಟಿಸಿಎಲ್ ಕಾಯ್ದೆ, 1978ರ ಅನುಷ್ಠಾನದ ಕುರಿತು ನಡೆದ ಸಾರ್ವಜನಿಕ ವಿಚಾರಣೆಯ ಆಧಾರದ ಮೇಲೆ ಸಿದ್ಧಪಡಿಸಲಾದ ಈ ಪ್ರಮುಖ ವರದಿಯನ್ನು ಮಂಗಳವಾರ ಬೆಳಗ್ಗೆ ಎಲ್.ಹೆಚ್ (ಲೆಜಿಸ್ಲೇಟರ್ಸ್‌ ಹೋಮ್‌ನಲ್ಲಿ) ಭವನದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು.

PTC ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ, ಆಲ್ ಇಂಡಿಯಾ ಲಾಯರ್ಸ್‌ ಅಸೋಸಿಯೇಷನ್ ಫಾರ್ ಜಸ್ಟಿಸ್ (AILAJ), ಆಲ್ಟರ್ನೇಟಿವ್ ಲಾ ಫೋರಂ (ALF) ಮತ್ತು ಮಂಥನ್ ಲಾ ಸಂಯುಕ್ತ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಚಿವರು, ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳು ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಐವರು ಸದಸ್ಯರನ್ನೊಳಗೊಂಡ ಜ್ಯೂರಿ ಸಮಿತಿಯ ಪೈಕಿ ಭೂ ಶಕ್ತಿ ಕೇಂದ್ರದ ಅಧ್ಯಕ್ಷರಾದ ಶ್ರೀಮತಿ ಜ್ಯೋತಿ ರಾಜ್, ಪಿಟಿಸಿಎಲ್ ಪ್ರಕರಣಗಳ ಕಾನೂನು ತಜ್ಞರಾದ ಅಡ್ವೊಕೇಟ್ ಎಚ್.ಎಲ್. ವೆಂಕಟೇಶ್ ಹಾಗೂ ಕಂದಾಯ ಇಲಾಖೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಿ. ತಂಗರಾಜ್ ಅವರು ವರದಿಯ ಪ್ರಮುಖ ಶಿಫಾರಸುಗಳನ್ನು ಸಭೆಯಲ್ಲಿ ವಾಚಿಸಿದರು.

ಈ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ, ಮಾಜಿ ಸಮಾಜ ಕಲ್ಯಾಣ ಸಚಿವ ಡಾ. ಎಚ್.ಸಿ. ಮಹದೇವಪ್ಪ, ವಿಧಾನ ಪರಿಷತ್ ಸದಸ್ಯರಾದ ಸುಧಾಮ ದಾಸ್, ಜಕ್ಕಣ್ಣನವರ್, ಕೆ. ಶಿವಕುಮಾರ್, ಪಿ.ವಿ. ಮೋಹನ್, ಎಸ್‌ಸಿ ಮತ್ತು ಎಸ್‌ಟಿ ಕಲ್ಯಾಣದ ಮೇಲ್ವಿಚಾರಣಾ ವಿಧಾನಸಭಾ ಉಪಸಮಿತಿಯ ಅಧ್ಯಕ್ಷ ಎ.ಆರ್. ಕೃಷ್ಣಮೂರ್ತಿ, ಡಿಎಸ್‌ಎಸ್ ನಾಯಕ ಹೆಣ್ಣೂರು ಶ್ರೀನಿವಾಸ್ ಸೇರಿದಂತೆ ಹಲವು ಗಣ್ಯರು ಹಾಗೂ ಹೋರಾಟಗಾರರು ಉಪಸ್ಥಿತರಿದ್ದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಸಮಾಜ ಕಲ್ಯಾಣ ಇಲಾಖೆಯ ಮಾಜಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ, ವರದಿಯ ಶಿಫಾರಸುಗಳನ್ನು ತಕ್ಷಣವೇ ಜಾರಿಗೆ ತರಲು ಕಂದಾಯ ಸಚಿವರೊಂದಿಗೆ ತುರ್ತು ಸಭೆ ನಡೆಸಬೇಕು ಎಂದು ಆಗ್ರಹಿಸಿದರು. ದಲಿತ ಸಮುದಾಯಗಳಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ವಿಶೇಷ ನ್ಯಾಯಾಲಯಗಳು ಮತ್ತು ನ್ಯಾಯಮಂಡಳಿಗಳನ್ನು ಸ್ಥಾಪಿಸಬೇಕು ಎಂದ ಅವರು, ರಿಯಲ್ ಎಸ್ಟೇಟ್ ಮಾಫಿಯಾಗಳು ಕಾಯ್ದೆ ಜಾರಿಯಾಗದಂತೆ ತಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ನ್ಯಾಯಾಲಯಗಳ ಜವಾಬ್ದಾರಿ ಅತ್ಯಂತ ಹಿರಿದಾಗಿದೆ ಎಂದು ಅಭಿಪ್ರಾಯಪಟ್ಟರು.

ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಮಾತನಾಡಿ, ದಲಿತರು ಮತ್ತು ಆದಿವಾಸಿಗಳ ಭೂಹಕ್ಕಿನ ಪ್ರಶ್ನೆ ನಮ್ಮೆಲ್ಲರ ಗಂಭೀರ ಚಿಂತನೆಗೆ ಒಳಪಡಬೇಕಾದದ್ದು ಎಂದರು. ದೇಶದ ಜನಸಂಖ್ಯೆಯಲ್ಲಿ ಶೇ. 23ರಷ್ಟಿರುವ ದಲಿತರ ಬಳಿ ಇರುವುದು ಕೇವಲ ಶೇ. 2ರಷ್ಟು ಭೂಮಿ ಮಾತ್ರ. ನಮ್ಮ ಬಳಿ ಉಳಿದಿರುವ ಅಲ್ಪಸ್ವಲ್ಪ ಭೂಮಿಯನ್ನಾದರೂ ಉಳಿಸಿಕೊಳ್ಳುವುದು ಇಂದಿನ ತುರ್ತು ಅಗತ್ಯವಾಗಿದ್ದು, ಈ ಹೋರಾಟಕ್ಕೆ ತಾನು ಸಂಪೂರ್ಣ ಬದ್ಧನಾಗಿರುವುದಾಗಿ ತಿಳಿಸಿದರು.

ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ ಸದಸ್ಯರಾದ ಕೆ. ಶಿವಕುಮಾರ್, ಪಿಟಿಸಿಎಲ್ ಕಾಯ್ದೆಯನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿದರು. ಎಸಿ (AC) ಮತ್ತು ಡಿಸಿ (DC) ನ್ಯಾಯಾಲಯಗಳು ಪ್ರಕರಣಗಳನ್ನು ಪದೇಪದೇ ಅನ್ಯಾಯಯುತವಾಗಿ ವಜಾಗೊಳಿಸುತ್ತಿವೆ ಎಂದು ಆರೋಪಿಸಿದ ಅವರು, ತಾವೂ ಕೂಡ ಪಿಟಿಸಿಎಲ್ ಕಾಯ್ದೆಯಡಿ ಹಕ್ಕು ಪಡೆದವರಾಗಿದ್ದು, ಭೂಮಿಯ ಹಕ್ಕನ್ನು ಕಾಪಾಡಿಕೊಳ್ಳಲು ಸಾರ್ವಜನಿಕರು ಒಗ್ಗಟ್ಟಾಗಿ ಹೋರಾಟ ಮುಂದುವರಿಸಬೇಕು ಎಂದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಎ.ಆರ್. ಕೃಷ್ಣಮೂರ್ತಿ ಹಾಗೂ ವಿಧಾನ ಪರಿಷತ್ ಸದಸ್ಯ ಸುಧಾಮ ದಾಸ್ ಮಾತನಾಡಿ, ವರದಿಯ ಶಿಫಾರಸುಗಳನ್ನು ಸಮಿತಿಯಲ್ಲಿ ವಿಸ್ತೃತವಾಗಿ ಚರ್ಚಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಹಾಗೂ ದಲಿತರನ್ನು ಶೋಷಣೆಗೆ ಒಳಪಡಿಸುವ ಸಾಮಾಜಿಕ-ಆರ್ಥಿಕ ವ್ಯವಸ್ಥೆಯನ್ನು ಧೈರ್ಯವಾಗಿ ಪ್ರಶ್ನಿಸಬೇಕು ಎಂದು ಒತ್ತಾಯಿಸಿದರು. ಮೂಡಿಗೆರೆ ಕ್ಷೇತ್ರದ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರು ಹೋರಾಟದ ಮಹತ್ವವನ್ನು ಸ್ಮರಿಸಿದರು.

ಎಐಎಎಲ್‌ಜೆ (AILAJ) ಪ್ರಧಾನ ಕಾರ್ಯದರ್ಶಿ ಕ್ಲಿಫ್ಟನ್ ಡಿ’ರೊಸಾರಿಯೋ ಮಾತನಾಡಿ, ಪಿಟಿಸಿಎಲ್ ಕಾಯ್ದೆಯ ಮೂಲ ಉದ್ದೇಶಗಳು ಹಾಗೂ ವರದಿಯ ಆಳವಾದ ಅಂಶಗಳನ್ನು ವಿವರಿಸಿದರು. ಮಂಜೂರಾದ ಭೂಮಿಯ ಸ್ವಾಧೀನ ಪಡೆಯಲು ಫಲಾನುಭವಿಗಳು ಎದುರಿಸುತ್ತಿರುವ ಯಾತನೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟ ಅವರು, ಅಂತಹ ಭೂಮಿಯನ್ನು ಬಲವಂತವಾಗಿ ಹಾಗೂ ವಂಚನೆಯಿಂದ ಕಸಿದುಕೊಳ್ಳುತ್ತಿದ್ದರೂ ನ್ಯಾಯಾಲಯಗಳು ಮೌನವಾಗಿವೆ ಎಂದರು. ಪಿಟಿಸಿಎಲ್ ಕಾಯ್ದೆಯನ್ನು ಪರಿಶೀಲಿಸುತ್ತಿರುವ ದೇಶದ ಮೊಟ್ಟಮೊದಲ ವರದಿ ಇದಾಗಿದ್ದು, ನ್ಯಾಯಾಂಗ ವ್ಯವಸ್ಥೆಯಲ್ಲಿಯೂ ಜಾತಿ ವ್ಯವಸ್ಥೆ ಹೇಗೆ ಪ್ರಭಾವ ಬೀರುತ್ತಿದೆ ಎಂಬುದನ್ನು ಇದು ಎತ್ತಿ ತೋರಿಸುತ್ತದೆ ಎಂದು ನುಡಿದರು.

ಐತಿಹಾಸಿಕವಾಗಿ ಭೂಮಿಯಿಂದ ವಂಚಿತವಾಗಿರುವ ಸಮುದಾಯಗಳಿಗೆ ಘನತೆಯ ಬದುಕು ಮತ್ತು ಆರ್ಥಿಕ ಸ್ವಾತಂತ್ರ್ಯ ಸಿಗಲು ಭೂಮಿ ಅತ್ಯಮೂಲ್ಯ ಹಕ್ಕಾಗಿದೆ. ಹತ್ತು ವಿವಿಧ ಪ್ರಕರಣಗಳ ಅಧ್ಯಯನದ ಮೂಲಕ ಸಿದ್ಧಪಡಿಸಲಾಗಿರುವ ಈ ವರದಿಯು, ಶಿಕ್ಷಣ ವಂಚನೆ, ಸಾಲಬಾಧೆ, ಜೀತ ಪದ್ಧತಿ, ಬೆದರಿಕೆ ಹಾಗೂ ಹಿಂಸಾಚಾರಗಳೇ ಮಂಜೂರುದಾರರು ಭೂಮಿ ಕಳೆದುಕೊಳ್ಳಲು ಪ್ರಮುಖ ಕಾರಣಗಳು ಎಂಬುದನ್ನು ದೃಢಪಡಿಸಿದೆ. ಸರ್ಕಾರದ ರಕ್ಷಣಾತ್ಮಕ ಕಾಯ್ದೆಗಳ ಲೋಪದಿಂದಾಗಿ ಮೂಲ ಭೂಸುಧಾರಣೆಯು ಹಿಮ್ಮುಖವಾಗಿ ಸಾಗುತ್ತಿದ್ದು, ಇದು ಸಾಮಾಜಿಕ ನ್ಯಾಯದ ಆಶಯಕ್ಕೆ ದೊಡ್ಡ ಪೆಟ್ಟು ನೀಡುತ್ತಿದೆ ಎಂದು ವರದಿ ಎಚ್ಚರಿಸಿದೆ.

ವರದಿಯಲ್ಲಿ ಪ್ರಮುಖವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಬಾಕಿಯಿರುವ ‘ನೆಕ್ಕಂಟಿ ರಾಮಲಕ್ಷ್ಮಿ’ ಮರುಪರಿಶೀಲನಾ ಅರ್ಜಿಯಲ್ಲಿ ರಾಜ್ಯ ಸರ್ಕಾರ ಪರಿಣಾಮಕಾರಿ ವಾದ ಮಂಡಿಸುವುದು, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸುವುದು, ವಿಳಂಬದ ಕಾರಣದಿಂದ ಭೂಮಿ ಕಳೆದುಕೊಂಡವರಿಗೆ ಪರ್ಯಾಯ ಜಮೀನು ನೀಡುವುದು, ಪಿಟಿಸಿಎಲ್ ಪ್ರಕರಣಗಳಿಗೆ ಉಚಿತ ಹಾಗೂ ಆದ್ಯತೆಯ ಕಾನೂನು ನೆರವು ಕಲ್ಪಿಸುವುದು, ಸೆಕ್ಷನ್ 8 ಮತ್ತು 6 ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ ಅಕ್ರಮ ಖರೀದಿದಾರರು ಹಾಗೂ ಕಂದಾಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಹಾಗೂ ಶಿಸ್ತು ಕ್ರಮ ಕೈಗೊಳ್ಳುವುದು ಸೇರಿದಂತೆ ಕಂದಾಯ ಅಧಿಕಾರಿಗಳಿಗೆ ವಿಶೇಷ ತರಬೇತಿ ನೀಡುವ ಹತ್ತು ಹಲವು ನಿರ್ಣಾಯಕ ಶಿಫಾರಸುಗಳನ್ನು ಮಾಡಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಪ್ರಕ್ರಿಯೆಗೆ 6 ತಿಂಗಳ ಕಾಲಾವಕಾಶ ನೀಡಿ: ಸೆಪ್ಟೆಂಬರ್ 1 ರಂದು ‘ಎಲೆಕ್ಷನ್ ಕಮಿಷನ್ ಚಲೋ’ ಗೆ ಒಕ್ಕೂಟ ಕರೆ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿನ ಅವೈಜ್ಞಾನಿಕ ಧೋರಣೆ ಹಾಗೂ ಗೊಂದಲಮಯ ಕ್ರಮಗಳನ್ನು ತೀವ್ರವಾಗಿ ಖಂಡಿಸಿರುವ 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ', ಮತದಾರರ ಹಕ್ಕುಗಳನ್ನು...

ನೇಪಾಳದಲ್ಲಿ ದಿಢೀರ್ ಪ್ರವಾಹ : 105 ಭಾರತೀಯರು ಸೇರಿದಂತೆ 384 ಮಂದಿ ನಾಪತ್ತೆ

ನೇಪಾಳ ಪ್ರವಾಸೋದ್ಯಮ ಮಂಡಳಿಯ ಮಾಹಿತಿ ಪ್ರಕಾರ, ಬುಧವಾರ (ಆ.26) ಬೆಳಿಗ್ಗೆ ನೇಪಾಳದ ರಸುವಾ ಜಿಲ್ಲೆಯ ಭೋಟೆ ಕೋಶಿ ನದಿಯಲ್ಲಿ ಸಂಭವಿಸಿದ ಹಠಾತ್ ಪ್ರವಾಹದ ನಂತರ 105 ಭಾರತೀಯ ಪ್ರಜೆಗಳು ಸೇರಿದಂತೆ ಕನಿಷ್ಠ 384...

ರಾಜ್ಯದಲ್ಲಿ 102 ತಾಲೂಕುಗಳಲ್ಲಿ ಬರ: ಡಿಸಿಎಂ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿ ತಲೆದೋರಿದ್ದು, 102 ತಾಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದೆ. ಕೇಂದ್ರ ಸರ್ಕಾರದ ಮಾನದಂಡಗಳನ್ವಯ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಧಿಕೃತವಾಗಿ ಬರ ಘೋಷಿಸಲಾಗುವುದು ಹಾಗೂ ಪ್ರತಿ ವಾರವೂ...

ಪ. ಬಂಗಾಳ SIR : ನ್ಯಾಯಮಂಡಳಿಗಳಿಂದ ಇದುವರೆಗೆ ಕೇವಲ 2.17% ಮೇಲ್ಮನವಿಗಳ ಇತ್ಯರ್ಥ; ಇನ್ನು 37 ಲಕ್ಷಕ್ಕೂ ಹೆಚ್ಚು ಬಾಕಿ!

ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಭಗವಾಂಗೋಲಾದ ನಿವಾಸಿಯಾದ ಮೊಹಮ್ಮದ್ ದುವಾಲ್ ಅಲಿ ಅವರು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾಗ, ಕರ್ತವ್ಯದ ಅವಧಿಯಲ್ಲಿ ಗುಂಡೇಟಿಗೆ ಒಳಗಾಗಿದ್ದರು. ಪ್ರಾಣಾಪಾಯದಿಂದ ಬದುಕುಳಿದ ಅವರು ನಂತರ ಭಾರತೀಯ ರೈಲ್ವೆಯಲ್ಲಿ ಕೆಲಸ...

ಬಂಡಾಯ ಸಂಸದರಿಗೆ ಸಂಕಷ್ಟ: 7 ದಿನಗಳಲ್ಲಿ ಉತ್ತರಿಸಲು ಲೋಕಸಭೆ ಸಚಿವಾಲಯ ತಾಕೀತು

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ 20 ಬಂಡಾಯ ಸಂಸದರಿಗೆ ಲೋಕಸಭಾ ಸಚಿವಾಲಯವು ನೋಟಿಸ್ ಜಾರಿ ಮಾಡಿದ್ದು, ಏಳು ದಿನಗಳ ಒಳಗಾಗಿ ಸೂಕ್ತ ಉತ್ತರ ನೀಡುವಂತೆ ಸೂಚಿಸಿದೆ. ಪಕ್ಷಾಂತರ ಕಾಯ್ದೆಯಡಿ ಸಂಸದರ ಅನರ್ಹತೆ ಪ್ರಕ್ರಿಯೆಗಳನ್ನು...

ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ನ್ಯೂಯಾರ್ಕ್ ಮೇಯರ್ ವಿರೋಧ: ಸಂಘದ ‘ಹೊರಗಿಡುವ ದೃಷ್ಟಿಕೋನ’ ಖಂಡಿಸಿದ ಮಮ್ದಾನಿ

ಅಮೆರಿಕದ ನ್ಯೂಯಾರ್ಕ್ ನಗರದ ಅತ್ಯಂತ ಪ್ರಸಿದ್ಧ ಹಾಗೂ ಐತಿಹಾಸಿಕ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸರಸಂಘಚಾಲಕ ಮೋಹನ್ ಭಾಗವತ್ ಅವರ ಉಪಸ್ಥಿತಿಯಲ್ಲಿ ಆಯೋಜಿಸಲಾಗಿರುವ ಬೃಹತ್ ಭಾರತೀಯ ಮೂಲದವರ ಸಮಾವೇಶವು...

ಕರ್ನಾಟಕದಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಕರ್ನಾಟಕದಲ್ಲಿ ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂಡಿಯಾ ಟುಡೇ ರೌಂಡ್‌ಟೇಬಲ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ...

ಬೀದಿ ಬದಿ ವ್ಯಾಪಾರಿಗಳ ತೆರವು ಅಕ್ರಮ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಮಂಗಳೂರಿನ ಟೌನ್ ಹಾಲ್ ಸಮೀಪ ನಡೆಯುವ ಸಂಡೇ ಬಜಾರ್‌ನಲ್ಲಿ ಪಾದಚಾರಿ ಮಾರ್ಗದ ಬಳಿ ಇದ್ದ ಬೀದಿ ವ್ಯಾಪಾರಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಏಕಾಏಕಿ ತೆರವುಗೊಳಿಸಲು ಮುಂದಾಗಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲಾ...

ತೆಲಂಗಾಂಣ | ಹೈದರಾಬಾದ್‌-ವಿಜಯವಾಡ ಹೆದ್ದಾರಿಯಲ್ಲಿ ಭೀಕರ ಅಪಘಾತ: 6 ಮಂದಿ ಸಾವು; ಹಲವರಿಗೆ ಗಾಯ

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ (ಆ.26) ಮುಂಜಾನೆ ಖಾಸಗಿ ಎಲೆಕ್ಟ್ರಿಕ್ ಬಸ್‌ವೊಂದು ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 12 ಜನರು ಗಾಯಗೊಂಡಿದ್ದಾರೆ...

ಬಿಡದಿ ಟೌನ್‌ಶಿಪ್: ಸರ್ಕಾರಕ್ಕೆ ನಾಲ್ಕು ಪ್ರಮುಖ ಹಕ್ಕೊತ್ತಾಯ, ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆ.

ಬಿಡದಿ ಸ್ಮಾರ್ಟ್ ಸಿಟಿ ಅಥವಾ ಟೌನ್‌ಶಿಪ್ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆಯನ್ನು ವಿರೋಧಿಸಿ ಬಿಡದಿ ರೈತರು ಹಾಗೂ ಸಂಯುಕ್ತ ಹೋರಾಟದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ಮತ್ತು ವಿಧಾನಸೌಧ ಚಲೋ ಹೋರಾಟ...