Homeಕರ್ನಾಟಕ32ನೇ ದಿನಕ್ಕೆ ಕಾಲಿಟ್ಟ ಪಿಟಿಸಿಎಲ್ ಹೋರಾಟ; ಎಸ್ಆರ್ ಹಿರೇಮಠ ಬೆಂಬಲ

32ನೇ ದಿನಕ್ಕೆ ಕಾಲಿಟ್ಟ ಪಿಟಿಸಿಎಲ್ ಹೋರಾಟ; ಎಸ್ಆರ್ ಹಿರೇಮಠ ಬೆಂಬಲ

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಯ (ಪಿಟಿಸಿಎಲ್) 1978-79ರ ಸಮಗ್ರ ತಿದ್ದುಪಡಿಗೆ ಆಗ್ರಹಿಸಿ ‘ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ’ದ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಹೋರಾಟ ನಡೆಯತ್ತಿದೆ. ಸಾಮಾಜಿಕ ಹೋರಾಟಗಾರ ಎಸ್ಆರ್ ಹಿರೇಮಠ  ಅವರು ಹೋರಾಟ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಬೆಂಬಲ ವ್ಯಕ್ತಪಡಿಸಿದರು.

ಪ್ರತಿಭಟನಾಕಾರರ ಜೊತೆಗೆ ಎಸ್ಆರ್ ಹಿರೇಮಠ ಅವರು ಸಮಾಲೋಚನೆ ನಡೆಸಿದರು. ಆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ”ನಾವು ಸುಪ್ರೀಂ ಕೋರ್ಟ್‌ನಿಂದ ನ್ಯಾಯ, ಸ್ವಾತಂತ್ರ್ಯ, ಸಮಾನತೆಯನ್ನು ನಿರೀಕ್ಷಿಸುತ್ತೇವೆ. ಆದರೆ ಸುಪ್ರೀಂ ಕೋರ್ಟ್ ಕೂಡ ಇತ್ತಿಚಿನ ದಿನಗಳಲ್ಲಿ ನಡೆದುಕೊಳ್ಳುತ್ತಿರುವುದನ್ನು ಗಮನಿಸಿದರೆ, ಅಲ್ಲಿಗೆ ಎಂತೆಂಥವರು ಸೇರಿಕೊಳ್ಳುತ್ತಿದ್ದಾರೆ ಎನ್ನುವ ಆತಂಕ ಸೃಷ್ಟಿಯಾಗಿದೆ” ಎಂದರು.

ಇದನ್ನೂ ಓದಿ: ಅಂಗನವಾಡಿ ನೌಕರರ ಬೇಡಿಕೆಗಳಿಗೆ ಸರ್ಕಾರ ಸ್ಪಂದನೆ: ಹೋರಾಟ ಅಂತ್ಯ

”ಪ್ರಸ್ತುತ ಅಧಿಕಾರದಲ್ಲಿರುವ ಸರ್ಕಾರಕ್ಕೆ ಸಂವಿಧಾನ, ಬಡವರು ಮತ್ತು ಸಮಾಜಿಕ ನ್ಯಾಯದ ಬಗ್ಗೆ ಕಳಕಳಿ ಇಲ್ಲ. ಹಾಗಾಗಿ ನ್ಯಾಯಕ್ಕಾಗಿ, ಹಕ್ಕುಗಳಿಗಾಗಿ ಇಂತಹ ಹೊರಾಟಗಳು ಇಂದು ಅನಿವಾರ್ಯವಾಗಿವೆ. ಹೋರಾಟಗಳು ಪ್ರಜಾಪ್ರಭುತ್ವವನ್ನು ಜೀವಂತವಾಗಿರಿಸುತ್ತವ” ಎಂದು ಹೇಳಿದರು.

ಇಲ್ಲಿ ಕಳೆದ ಒಂದು ತಿಂಗಳಿಂದ ಹೋರಾಟ ನಡೆಸುತ್ತಿದ್ದರೂ ಸರ್ಕಾರದ ಕಣ್ಣಿಗೆ ಕಾಣಿಸಿಲ್ಲ ಎಂದರೆ ಬಡವರ ಬಗ್ಗೆ ಅವರಿಗೆ ಕಳಕಳಿ ಇಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ವ್ಯಕ್ತಿಗಳನ್ನು ಆಯ್ಕೆ ಮಾಡಿ ಎಂದು ಪ್ರತಿಭಟನಾ ನಿರತರಿಗೆ ಸಲಹೆ ನೀಡಿದರು.

32ನೇ ದಿನಕ್ಕೆ ಕಾಲಿಟ್ಟ ಹೋರಾಟ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಯ (ಪಿಟಿಸಿಎಲ್) ಸಮಗ್ರ ತಿದ್ದುಪಡಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ’ದ ನೇತೃತ್ವದಲ್ಲಿ ನಡೆಯುತ್ತಿರುವ ಈ ಅಹೋರಾತ್ರಿ ಹೋರಾಟ ಗುರುವಾರ 32ನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಸರ್ಕಾರವಾಗಿ ಸಂಬಂಧಪಟ್ಟ ಸಚಿವರಾಗಲಿ ಇತ್ತ ಸುಳಿದಿಲ್ಲ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಆಲ್ ಐಸ್ ಆನ್ ರಫಾ’: ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹಂಚಿಕೊಂಡ ಪೋಸ್ಟ್‌ನ ಅರ್ಥವೇನು?

0
ಇಸ್ರೇಲ್‌ ರಫಾ ಮೇಲಿನ ಆಕ್ರಮಣದ ಮಧ್ಯೆ 'ಆಲ್ ಐಸ್ ಆನ್ ರಫಾ' ಎಂಬ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಸದ್ದು ಮಾಡಿದೆ. ಭಾರತೀಯ ಸೆಲೆಬ್ರಿಟಿಗಳು ಹೆಚ್ಚಾಗಿ ಈ ಪೋಸ್ಟ್‌ನ್ನು ಹಂಚಿಕೊಂಡಿದ್ದಾರೆ. ಸಿನಿಮಾ ನಟ ದುಲ್ಕರ್...