Homeಕರ್ನಾಟಕತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

- Advertisement -
- Advertisement -

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಆ. 3ರಂದು ಪ್ರಿಯಾಂಕ್ ಖರ್ಗೆ ಅವರು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ PTI ದೃಶ್ಯ ಮಾಧ್ಯಮ ವಿಭಾಗದ ಸಂಪಾದಕ ಶಾಝಿ ಝಮಾನ್ ಅವರು ಆಗಸ್ಟ್ 4ರಂದು ಖರ್ಗೆ ಅವರಿಗೆ ಪತ್ರ ಬರೆದು ಕ್ಷಮೆಯಾಚಿಸಿದ್ದಾರೆ.

ಪತ್ರದಲ್ಲಿ, “ನಮ್ಮ ಕಡೆಯಿಂದ ಸಂಭವಿಸಿದ ಮಾನವ ದೋಷದಿಂದ ನಿಮ್ಮ ಹೇಳಿಕೆಗೆ ಸಂಬಂಧಿಸಿ ತಪ್ಪು ಅರ್ಥೈಸುವಿಕೆ ಉಂಟಾಗಿದೆ. ತಪ್ಪನ್ನು ಸರಿಪಡಿಸುವುದು ಮತ್ತು ಸಂಬಂಧಪಟ್ಟ ಸಿಬ್ಬಂದಿಯಿಂದ ವಿವರಣೆ ಪಡೆಯುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ಕೈಗೊಂಡಿದ್ದೇವೆ. ಈ ತಪ್ಪಿಗೆ ನಾವು ಕ್ಷಮೆಯಾಚಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಪತ್ರವನ್ನು ಸಾಮಾಜಿಕ ತಾಣ ಎಕ್ಸ್‌ನಲ್ಲಿ ಹಂಚಿಕೊಂಡಿರುವ ಪ್ರಿಯಾಂಕ್ ಖರ್ಗೆ, “ಹಾನಿ ಈಗಾಗಲೇ ಆಗಿದೆ. ನಿಮ್ಮ ಕ್ಷಮೆಯಾಚನೆಯಿಂದ ಏನು ಪ್ರಯೋಜನ? ಈ ತಪ್ಪು ಮಾಹಿತಿಯನ್ನು ರಾಜಕೀಯ ಪಕ್ಷಗಳು ಮಾತ್ರವಲ್ಲ, ಸಾಮಾಜಿಕ ಮಾಧ್ಯಮದಲ್ಲಿನ ಕಂಟೆಂಟ್‌ ಕ್ರಿಯೆಟರ್‌ಗಳು ವ್ಯಾಪಕವಾಗಿ ವೈರಲ್‌ ಮಾಡಿದ್ದಾರೆ. ತಪ್ಪು ಮಾಹಿತಿ ವೈರಲ್ ಆದ ಬಳಿಕ ಉಂಟಾದ ಹಾನಿಯನ್ನು ಯಾರು ಸರಿಪಡಿಸಲಿದ್ದಾರೆ? ಎಷ್ಟು ಮಂದಿಯನ್ನು ಹೊಣೆಗಾರರನ್ನಾಗಿ ಮಾಡಲು ಸಾಧ್ಯ? ಭಾರತದಲ್ಲಿ ಜವಾಬ್ದಾರಿಯುತ ಪತ್ರಿಕೋದ್ಯಮವು ಹೆಚ್ಚಾಗಿ ಪುರಾಣವಾಗುತ್ತಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಇದರೊಂದಿಗೆ ಇಂಗ್ಲಿಷ್ ಸಾಹಿತಿ ಜೋನಾಥನ್ ಸ್ವಿಫ್ಟ್ ಅವರ, “ಸುಳ್ಳು ವೇಗವಾಗಿ ಹರಡುತ್ತದೆ; ಸತ್ಯ ಅದರ ಹಿಂದೆ ಬರುತ್ತದೆ. ಸತ್ಯ ತಲುಪುವಷ್ಟರಲ್ಲಿ ಸುಳ್ಳು ತನ್ನ ಪರಿಣಾಮ ಬೀರಿರುತ್ತದೆ” ಎಂಬ ಉಲ್ಲೇಖವನ್ನೂ ಅವರು ಹಂಚಿಕೊಂಡಿದ್ದಾರೆ.

ಏನಿದು ವಿವಾದ?

ವಿಜಯಪುರದ ತಿಕೋಟಾದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ (ಸಿವಿಲ್) ಹುದ್ದೆಗೆ ಆಯ್ಕೆಗಾಗಿ ನಡೆದ ಪರೀಕ್ಷೆ ವೇಳೆ ಉಂಟಾದ ಪ್ರಶ್ನೆ ಪತ್ರಿಕೆ ಮತ್ತು ಒಎಂಆರ್‌ ಶೀಟ್‌ ಗೊಂದಲಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಾಗೂ ವಿರೋಧ ಪಕ್ಷದ ನಾಯಕ ಆರ್. ಅಶೋಕ್‌ ತಮ್ಮ ರಾಜೀನಾಮೆಗೆ ಆಗ್ರಹಿಸುತ್ತಿರುವ ಕುರಿತು ಕೇಳಲಾದ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದ ಖರ್ಗೆ, “ನನ್ನ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ 25 ದಿನಗಳ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧವಿದ್ದರೆ ಅದನ್ನು ಪರಿಗಣಿಸುತ್ತೇನೆ” ಎಂದು ಹೇಳಿದ್ದರು.

ಆದರೆ, ಈ ಹೇಳಿಕೆಯನ್ನು PTI ತಪ್ಪಾಗಿ ಅರ್ಥೈಸಿ, ಅದು ಉದ್ಯೋಗಾಕಾಂಕ್ಷಿಗಳನ್ನು ಉದ್ದೇಶಿಸಿ ನೀಡಿದ ಹೇಳಿಕೆ ಎಂಬ ಅರ್ಥ ಬರುವ ರೀತಿಯಲ್ಲಿ ವರದಿ ಹಾಗೂ ಎಕ್ಸ್‌ನಲ್ಲಿ ಪೋಸ್ಟ್ ಪ್ರಕಟಿಸಿತ್ತು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಿಯಾಂಕ್ ಖರ್ಗೆ, ತಮ್ಮ ಹೇಳಿಕೆ ಬಿಜೆಪಿಯ ರಾಜಕೀಯವನ್ನು ಉದ್ದೇಶಿಸಿದ್ದೇ ಹೊರತು, ವಿದ್ಯಾರ್ಥಿಗಳು ಅಥವಾ ಉದ್ಯೋಗಾಕಾಂಕ್ಷಿಗಳನ್ನು ಉದ್ದೇಶಿಸಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ತಪ್ಪು ಮಾಹಿತಿ ಹರಡಿದ ಸುದ್ದಿ ಸಂಸ್ಥೆಗಳು ಹಾಗೂ ವ್ಯಕ್ತಿಗಳ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದಾಗಿಯೂ ಅವರು ತಿಳಿಸಿದ್ದರು. ಸುಳ್ಳು ಸುದ್ದಿ ಲಕ್ಷಾಂತರ ಸರ್ಕಾರಿ ಉದ್ಯೋಗಾಕಾಂಕ್ಷಿಗಳಲ್ಲಿ ಅನಗತ್ಯ ಆತಂಕ ಸೃಷ್ಟಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದ್ದರು.

ವಿವಾದದ ಬಳಿಕ PTI ತನ್ನ ಎಕ್ಸ್ ಖಾತೆಯಲ್ಲಿ ಮತ್ತೆ ಪ್ರತಿಕ್ರಿಯಿಸಿ, “ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿತ್ತು. ಆ. 3ರಂದು ಪ್ರಕಟಿಸಿದ್ದ ತಮ್ಮ ಹಿಂದಿನ ಎಕ್ಸ್ ಪೋಸ್ಟ್ ಅನ್ನು ಹಿಂತೆಗೆದುಕೊಳ್ಳಲಾಗಿದೆ. ಈ ತಪ್ಪಿಗೆ ತೀವ್ರ ವಿಷಾದ ವ್ಯಕ್ತಪಡಿಸುತ್ತೇವೆ” ಎಂದು ಸ್ಪಷ್ಟಪಡಿಸಿತ್ತು.

ಈ ತಿದ್ದುಪಡಿಯ ಮರುದಿನವೇ PTI ಖರ್ಗೆ ಅವರಿಗೆ ಅಧಿಕೃತ ಪತ್ರ ಬರೆದು ಕ್ಷಮೆಯಾಚಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...