Homeಕರ್ನಾಟಕಪಿಯು ನಿರ್ದೇಶಕಿ ಸ್ನೇಹಲ್‌ ವರ್ಗಾವಣೆ; ಸಮವಸ್ತ್ರ ಸುತ್ತೋಲೆಯೇ ಕಾರಣ?

ಪಿಯು ನಿರ್ದೇಶಕಿ ಸ್ನೇಹಲ್‌ ವರ್ಗಾವಣೆ; ಸಮವಸ್ತ್ರ ಸುತ್ತೋಲೆಯೇ ಕಾರಣ?

- Advertisement -
- Advertisement -

ಬೆಂಗಳೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿಯಾಗಿದ್ದ ಆರ್‌.ಸ್ನೇಹಲ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಹಿಜಾಬ್‌ ವಿವಾದದ ಹಿನ್ನೆಲೆಯಲ್ಲಿ ಸಮವಸ್ತ್ರ ಸಂಬಂಧ ಅವರು ಹೊರಡಿಸಿದ್ದ ಸುತ್ತೋಲೆಯೇ ವರ್ಗಾವಣೆಗೆ ಕಾರಣ ಎನ್ನಲಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಸ್ನೇಹಲ್ ಹೊರಡಿಸಿದ್ದ ಸುತ್ತೋಲೆಯಿಂದಾಗಿ ಸರ್ಕಾರಕ್ಕೆ ಹಿನ್ನೆಡೆಯಾಗಿತ್ತು. ಈ ಹಿನ್ನೆಲೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಸ್ನೇಹಲ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಬೀದರ್ ಜಿಲ್ಲಾಧಿಕಾರಿ ರಾಮಚಂದ್ರ ಅವರನ್ನು ನೇಮಿಸಲಾಗಿದೆ. ಆದರೆ ಸ್ನೇಹಲ್‌ ಅವರಿಗೆ ಯಾವುದೇ ಹುದ್ದೆಯನ್ನು ನೀಡಿಲ್ಲ.

ಉಡುಪಿಯಲ್ಲಿ ಹಿಜಾಬ್ ವಿವಾದ ಸೃಷ್ಟಿಯಾದ ಬಳಿಕ ಆರ್‌.ಸ್ನೇಹಲ್ ಅವರು ಸುತ್ತೋಲೆ ಹೊರಡಿಸಿ, “ಪಿಯು ಹಂತದಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿಲ್ಲ. ಕಾಲೇಜು ಆಡಳಿತ ಮಂಡಳಿಯವರು ಸಮವಸ್ತ್ರ ಕಡ್ಡಾಯಗೊಳಿಸಿರುವುದು ಕಾನೂನುಬಾಹಿರ” ಎಂದಿದ್ದರು ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಈ ನಡುವೆ ಬಿಜೆಪಿಯ ಶಾಸಕರು, ಸಚಿವರು ಹಿಜಾಬ್‌ ಧರಿಸುವುದನ್ನು ವಿರೋಧಿಸುತ್ತಲೇ ಬಂದಿದ್ದು, ಕೋಮು ಕೇಂದ್ರಿತ ಚರ್ಚೆ ಬಿರುಸು ಪಡೆದಿದೆ. ಈ ನಡುವೆ ನಿರ್ದೇಶಕರು ಹೊರಡಿಸಿದ ಸುತ್ತೋಲೆಯಿಂದ ಬಿಜೆಪಿ ಶಾಸಕರು, ಸಚಿವರಿಗೆ ಮುಖಭಂಗವಾಗಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ಸ್ನೇಹಲ್‌ ಅವರನ್ನು ಯಾವುದೇ ಹುದ್ದೆಯನ್ನು ನೀಡದೆ ವರ್ಗಾವಣೆ ಮಾಡಲಾಗಿದೆ.

ಮೊದಲು ಉಡುಪಿ ಸರ್ಕಾರಿ ಕಾಲೇಜಿನಲ್ಲಿ ವಿವಾದ ಉಂಟಾಗಿತ್ತು. ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರನ್ನು ಶಾಲೆಯಿಂದ ಹೊರಗಿಡಲಾಗಿತ್ತು. ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್‌ ಧರಿಸಿ ಬಂದರೆ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಬಂದಿದ್ದರು. ಶಾಲೆಯ ಪ್ರಾಂಶುಪಾಲರು ಮುಸ್ಲಿಂ ಧಾರ್ಮಿಕ ಆಚರಣೆಯನ್ನು ವಿವಾದದ ಕೇಂದ್ರವಾಗಿಸಿದರು.

ಇಷ್ಟೆಲ್ಲ ಆದ ಮೇಲೆ ಕುಂದಾಪುರದಲ್ಲಿ ನಡೆದ ಮತ್ತೊಂದು ಪ್ರಕರಣ ಭಾರೀ ಸದ್ದು ಮಾಡಿದೆ. ಕಾಲೇಜಿನ ಪ್ರಾಂಶುಪಾಲರು ಮುಸ್ಲಿಂ ವಿದ್ಯಾರ್ಥಿನಿಯರನ್ನು ಅಮಾನವೀಯವಾಗಿ ಹೊರಗಡೆ ನಿಲ್ಲಿಸಿ ವಿವಾದ ಸೃಷ್ಟಿಸಿದರು. ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಮವಸ್ತ್ರ ಸಂಬಂಧ ಸರ್ಕಾರ ಮತ್ತೊಂದು ಆದೇಶ ಹೊರಡಿಸಿದೆ. ನ್ಯಾಯಾಲಯದ ಅಂಗಳದಲ್ಲಿ ಇರುವಾಗಲೇ ಸರ್ಕಾರ ಆದೇಶ ಹೊರಡಿಸಿ ಹಿಜಾಬ್‌ ಹಾಗೂ ಕೇಸರಿ ಶಾಲನ್ನು ನಿರ್ಬಂಧಿಸಿದೆ. ಎಲ್ಲ ಸರ್ಕಾರಿ ಶಾಲಾ, ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸಿದೆ.


ಇದನ್ನೂ ಓದಿರಿ: ನಾರಾಯಣ ಗುರುಗಳಿಗಾದ ಅವಮಾನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿ: ಸಂಘ ಪರಿವಾರದ ಮಾಜಿ ನಾಯಕ ಸುನಿಲ್ ಬಜಿಲಕೇರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮತದಾನ ನಡೆದ 48 ಗಂಟೆಗಳಲ್ಲಿ ಅಂಕಿಅಂಶಗಳ ಬಿಡುಗಡೆ: ಚು.ಆಯೋಗದಿಂದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್‌

0
ಮತದಾನ ಮುಗಿದ 48 ಗಂಟೆಗಳ ಒಳಗೆ ಮತದಾನ ಕೇಂದ್ರವಾರು ಮತದಾರರ ಅಂಕಿಅಂಶಗಳನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲು ನಿರ್ದೇಶನ ನೀಡುವಂತೆ ಕೋರಿ ಎನ್‌ಜಿಒ ಎಡಿಆರ್ ಸಲ್ಲಿಸಿದ ಮನವಿಗೆ ಸುಪ್ರೀಂಕೋರ್ಟ್ ಶುಕ್ರವಾರ ಒಂದು ವಾರದೊಳಗೆ ಭಾರತೀಯ...