Homeಮುಖಪುಟಬ್ಯಾನ್ ಆಯ್ತು ಪಬ್‌ಜಿ, ಹೆಚ್ಚಾದ್ವು ಮೀಮ್ಸ್ : ನೀವು ನೋಡಿ ನಕ್ಕುಬಿಡಿ

ಬ್ಯಾನ್ ಆಯ್ತು ಪಬ್‌ಜಿ, ಹೆಚ್ಚಾದ್ವು ಮೀಮ್ಸ್ : ನೀವು ನೋಡಿ ನಕ್ಕುಬಿಡಿ

ಟಿಕ್‌ಟಾಕ್ ಪ್ರಿಯರು ತಮ್ಮ ಶೋಕಾಚರಣೆಯ ತಂಡಕ್ಕೆ ಪಬ್‌ಜಿ ಪ್ರಿಯರನ್ನು ಆಹ್ವಾನಿಸಿದ್ದಾರೆ.

- Advertisement -
- Advertisement -

ಇಂದು ಭಾರತ ಸರ್ಕಾರ ಜನಪ್ರಿಯ ವಿಡಿಯೋ ಗೇಮ್ ’PUBG’ ಸೇರಿದಂತೆ ಜನಪ್ರಿಯ 118 ಚೀನಿ ಅಪ್ಲಿಕೇಶನ್‌ಗಳನ್ನು ನಿಷೇಧಸಿದೆ. ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆ, ರಕ್ಷಣಾ ಮತ್ತು ಭದ್ರತೆಯ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿದೆ ಎಂದು ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಭಾರತದಲ್ಲಿ ಸುಮಾರು 33 ಮಿಲಿಯನ್ ಸಕ್ರಿಯ PUBG ಆಟಗಾರರಿದ್ದಾರೆ ಎಂದು ವರದಿಗಳಿವೆ. ದಿನದಲ್ಲಿ ಸುಮಾರು 13 ಮಿಲಿಯನ್ ಬಳಕೆದಾರರು ಇದನ್ನು ಬಳಸುತ್ತಾರೆ ಎನ್ನಲಾಗಿದೆ.

ಇತ್ತ ಗೇಮ್ ಬ್ಯಾನ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಮೀಮ್ಸ್‌ಗಳ ಹಾವಳಿ ಹೆಚ್ಚಾಗಿದೆ. ಟಿಕ್‌ಟಾಕ್ ಪ್ರಿಯರು ತಮ್ಮ ಶೋಕಾಚರಣೆಯ ತಂಡಕ್ಕೆ ಪಬ್‌ಜಿ ಪ್ರಿಯರನ್ನು ಆಹ್ವಾನಿಸಿದ್ದಾರೆ. ಅಲ್ಲದೇ ಪಬ್‌ಜಿ ಹಾವಳಿ ತೊಲಗಿತು ಎಂದು ಪೋಷಕರು ಸಂತಸಪಡುವಂತೆ ಹಲವಾರು ನಕ್ಕು ನಗಿಸುವ ಮೀಮ್ಸ್‌ಗಳು ಹರಿದಾಡುತ್ತಿವೆ. ನೀವು ನೋಡಿ ನಕ್ಕುಬಿಡಿ

Sorry but not sorry!One more on Pubg Ban !#PubgBan #creative #memes #viral #contentcreator #agency #thinkbig #marketing #kamolika #Pubg #ChinaBan #funny #funnyvideos #memes?

Posted by Digital Monks on Wednesday, September 2, 2020

 

After Pub G Ban.. ??.. . . . . . . . #pubg #pubgmobile #pubgmemes #hindimemes #memes #meme #funny #funtimes…

Posted by The Live Insider on Wednesday, September 2, 2020

#PUBGMOBILE is banned. Here is how Twitter threw memes#PUBG #Chineseappbanned https://wp.me/p9dqjm-3vK

Posted by A Trend Hub on Wednesday, September 2, 2020

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಪ್ರಕಾರ, ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಇತರ ಅಪ್ಲಿಕೇಶನ್‌ಗಳೊಂದಿಗೆ ಪಬ್‌ಜಿ ಮೊಬೈಲ್ ಗೇಮ್ ಅನ್ನು ಕೂಡಾ ನಿಷೇಧಿಸಲಾಗಿದೆ.

“ಈ ನಿರ್ಧಾರವು ಭಾರತೀಯ ಸೈಬರ್‌ ಸ್ಪೇಸ್‌ನ ಸುರಕ್ಷತೆ, ರಕ್ಷಣೆ ಮತ್ತು ಸಾರ್ವಭೌಮತ್ವವನ್ನು ಖಚಿತಪಡಿಸಿಕೊಳ್ಳಲು ಮಾಡಿರುವ ಕ್ರಮವಾಗಿದೆ. ಇದು ಕೋಟ್ಯಾಂತರ ಭಾರತೀಯ ಮೊಬೈಲ್ ಮತ್ತು ಇಂಟರ್ನೆಟ್ ಬಳಕೆದಾರರ ಹಿತಾಸಕ್ತಿಗಳನ್ನು ಕಾಪಾಡುತ್ತದೆ” ಎಂದು ಅದು ಹೇಳಿದೆ.


ಇದನ್ನೂ ಓದಿ: PUBG ಸೇರಿದಂತೆ 118 ಜನಪ್ರಿಯ ಚೀನಿ ಅಪ್ಲಿಕೇಷನ್ ನಿಷೇಧಿಸಿದ ಭಾರತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...