HomeಅಂಕಣಗಳುKarnataka against SIRಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು.

ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಸ್ಥಳೀಯ ನಾಯಕರು ಹಾಗೂ ಸಾರ್ವಜನಿಕರು ಸ್ವಾಗತಿಸಿದರು. ಬಳಿಕ ಯರಗಟ್ಟಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಾಗೃತಿ ಭಾಷಣ ನಡೆಯಿತು.

ಜಾಥಾ ನಾಯಕ ಯೂಸುಫ್ ಕನ್ನಿ ಮಾತನಾಡಿ, ಎಸ್‌ಐಆರ್ ಯಾವುದೇ ಒಂದು ಕೋಮಿಗೆ ಸೀಮಿತವಲ್ಲ. ಈಗಾಗಲೇ ಎಸ್‌ಐಆರ್ ನಡೆದಿರುವ ರಾಜ್ಯಗಳಲ್ಲಿ ಬರೋಬ್ಬರಿ 6.5 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಇದರಲ್ಲಿ ಒಂದು ಕೋಟಿ ಚಿಲ್ಲರೆ ಮಾತ್ರ ಮುಸ್ಲಿಮರು, ಉಳಿದವರು ಹಿಂದೂ, ಕ್ರೈಸ್ತ ಸೇರಿದಂತೆ ಇತರ ಧರ್ಮೀಯರು, ಅದರಲ್ಲೂ ದಲಿತರು, ಆದಿವಾಸಿಗಳು, ಕೂಲಿ ಕಾರ್ಮಿಕರು ಎಂದರು.‌

ಪಶ್ಚಿಮ ಬಂಗಾಳ ಸೇರಿದಂತೆ ಇತರ ರಾಜ್ಯಗಳಲ್ಲಿ ಈಗಾಗಲೇ ಎಸ್‌ಐಆರ್‌ ನಡೆಸಿರುವ ಅವಾಂತರಗಳನ್ನು ವಿವರಿಸಿದ ಯೂಸುಫ್ ಕನ್ನಿ, ಇದೇ ತಿಂಗಳ 30ರಿಂದ ಪ್ರಾರಂಭಗೊಳ್ಳುವ ಎಸ್‌ಐಆರ್‌ ಅನ್ನು ಸೂಕ್ತವಾಗಿ ಎದುರಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ಸ್ಥಳೀಯ ನಾಯಕರು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ಕರೆ ನೀಡಿದರು.

ಸಾಮಾಜಿಕ ಹೋರಾಟಗಾರ್ತಿ ಇಸಾಬೆಲ್ಲ ಝೇವಿಯರ್ ಮಾತನಾಡಿ, ಎಸ್‌ಐಅರ್‌ನಲ್ಲಿ ಹೆಣ್ಣು ಮಕ್ಕಳನ್ಮು ಹೆಚ್ಚಾಗಿ ಮತದಾರರ ಪಟ್ಟಿಯಿಂದ ಹೊರಗಿಡಲಾಗಿದೆ. ಹೆಣ್ಣು ಮಕ್ಕಳಿಗೆ ಮದುವೆಗಿಂತ ಮೊದಲು ಒಂದು ಹೆಸರಿದ್ದರೆ, ಮದುವೆ ಬಳಿಕ ಇನ್ನೊಂದು ಹೆಸರಿಡಲಾಗುತ್ತದೆ.‌ ಇಂತವರ ದಾಖಲೆಗಳಲ್ಲಿ ಒಂದು ಅಕ್ಷರ ತಪ್ಪು ಇರಬಾರದು ಎಂದರೆ ಹೇಗೆ ಎಂದು ಪ್ರಶ್ನಿಸಿದರು. ದಾಖಲೆ ಇಲ್ಲದವರನ್ನು ದೇಶದವರೇ ಅಲ್ಲಾ ಅಂತಿದ್ದಾರೆ. ಬಡ ಹೆಣ್ಣು ಮಕ್ಕಳು ಎಲ್ಲಿಂದ ದಾಖಲೆ‌ ತರಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಅವ್ಯವಸ್ಥೆ ವಿರುದ್ದ ಎಲ್ಲ ಜನ ಸಮುದಾಯ ಒಂದಾಗಿ ಧ್ವನಿ ಎತ್ತಬೇಕು. ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್) ಮುಖಂಡ ಭಾಸ್ಕರ್ ಹಿರೇಮೈತ್ರಿ ಮಾತನಾಡಿ, ಎಸ್‌ಐಅರ್ ವೇಳೆ 12 ದಾಖಲೆಗಳನ್ನು ಕೇಳ್ತಿದಾರೆ. ಅಂತಹ ಯಾವುದೇ ದಾಖಲೆಗಳು ನಮ್ಮ‌ ಜನರಲ್ಲಿ ಇಲ್ಲ. ಚುನಾವಣಾ ಆಯೋಗ ದಾಖಲೆ ಸಿದ್ದಪಡಿಸಲು ಅವಕಾಶವನ್ನೂ ಕೊಡ್ತಿಲ್ಲ ಎಂದರು.

ನಮ್ಮ ದೇಶದ ಸ್ವಾತಂತ್ರ್ಯ ಪಡೆಯುವ ಮುನ್ನ ಎಲ್ಲರಿಗೂ ಮತದಾನದ ಹಕ್ಕು ಇರಲ್ಲಿಲ್ಲ. ಕೆಲವರಿಗೆ ಮಾತ್ರ ಇತ್ತು. ಅಂಬೇಡ್ಕರ್ ಅವರ ಸಂವಿಧಾನ ಎಲ್ಲಾ ಜನರಿಗೆ ಮತದಾನದ ಹಕ್ಕು ಕೊಟ್ಟಿತು. ಅದನ್ನು ಎಸ್‌ಐಅರ್ ಮೂಲಕ ಕಿತ್ತುಕೊಳ್ಳಲು ಮುಂದಾಗಿದ್ದಾರೆ ಎಂದು ಹೇಳಿದರು.

ಎಸ್‌ಐಆರ್ ವಿಷಯದಲ್ಲಿ ಹಿಂದೂ, ಮುಸ್ಲಿಂ ಎನ್ನುವಂತಹ ಜಾತಿ, ಧರ್ಮಗಳ ಬೇಧವಿಲ್ಲ. ಇದು ಎಲ್ಲಿರಿಗೂ ಅಪಾಯಕಾರಿ. ತಳ ಮಟ್ಟದ ಜನರೇ ಇದರ ಮುಖ್ಯ ಗುರಿ ಎಂದರು.

ಯರಗಟ್ಟಿ ಬಳಿಕ ಬೆಳಗಾವಿ ನಗರದ ಅಂಬೇಡ್ಕರ್ ಪಾರ್ಕ್‌ನಲ್ಲಿ ಅಂಬೇಡ್ಕರ್ ಪ್ರತಿಮೆಗೆ ಜಾಥಾ ತಂಡ ಮತ್ತು ಸ್ಥಳೀಯ ನಾಯಕರು ಮಾಲಾರ್ಪಣೆ ಮಾಡಿದರು. ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದರು.

ಬಳಿಕ ಅಂಬೇಡ್ಕರ್ ಪಾರ್ಕ್‌ನಿಂದ ರಾಣಿ ಚೆನ್ನಮ್ಮ ಸರ್ಕಲ್ ಮೂಲಕ ಕನ್ನಡ ಭವನಕ್ಕೆ ಕಾಲ್ನಡಿಗೆ ಜಾಥಾ ನಡೆಯಿತು. ಕನ್ನಡ ಭವನದಲ್ಲಿ ವಿವಿಧ ಧರ್ಮಗಳ ಮುಖಂಡರು, ಸಮುದಾಯ ನಾಯಕರ ನೇತೃತ್ವದಲ್ಲಿ ಜಾಗೃತಿ ಸಭೆ ನಡೆಯಿತು.

ಈ ಕಾರ್ಯಕ್ರಮದಲ್ಲಿ ಜಾಥಾ ತಂಡದ ಇಸಾಬೆಲ್ಲ ಝೆವಿಯರ್, ಯೂಸುಫ್ ಕನ್ನಿ, ಸರೋವರ್ ಬೆಂಕಿಕೆರೆ ಮತ್ತು ಆರಿಫುಲ್ಲಾ ಮಾತನಾಡಿದರು.

ಯೋಗಾನಂದ ಸ್ವಾಮೀಜಿ, ಸಾಜಿದ್ ಮೌಲಾನ, ಪಾಸ್ಟರ್ ಶಾಂತಪ್ಪ, ಸ್ಥಳೀಯ ಹೋರಾಟಗಾರರಾದ ಮಂದಾ, ಶಿವಲೀಲ, ಅಯ್ನ ಶೇಕ್, ಬಂಡಾಯ ಸಾಹಿತ್ಯದ ಡಾ. ಹಿಮ್ಮಡಿ, ಜನಶಕ್ತಿಯ ರವಿ, ಜಮಾಅತೆ ಇಸ್ಲಾಮಿ ಹಿಂದ್‌ನ ಮುಖಂಡ ಯಾಸಿನ್ ಮಕಾನದಾರ ಸೇರಿದಂತೆ ಹಲವರು ಹಾಜರಿದ್ದರು

ಸಂಜೆ ಜಾಥಾ ತಂಡ ಬಿಷಪ್ ಹೌಸ್‌ನಲ್ಲಿ ಬೆಳಗಾವಿ ಕ್ರೈಸ್ತ ಧರ್ಮ ಪ್ರಾಂತ್ಯದ ಧರ್ಮ ಗುರುಗಳಾದ ಫಾದರ್ ಡೆರೆಕ್ ಅವರನ್ನು ಭೇಟಿಯಾಗಿ ಎಸ್‌ಐಅರ್ ಕುರಿತು ಮಹತ್ವದ ಚರ್ಚೆ ನಡೆಸಿತು‌.

ನಂತರ ಸಾಯಿನಗರದ ನೇಕಾರ ಗಲ್ಲಿಯಲ್ಲಿ ಸ್ಥಳೀಯ ನೇಕಾರ ಸಮುದಾಯದ ಜನರಿಗೆ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...