HomeಅಂಕಣಗಳುKarnataka against SIRಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

- Advertisement -
- Advertisement -

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ಮುಖಂಡರ ಬಹಿರಂಗ ಸಭೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಹಿರಿಯ ಪತ್ರಕರ್ತ ಸನತ್ ಕುಮಾರ್ ಬೆಳಗಲಿ, ಎಸ್‌ಐಆರ್ ವಿಷಯದಲ್ಲಿ ಸುಪ್ರೀಂ ಕೋರ್ಟ್‌ಲ್ಲೂ ನಮಗೆ ನ್ಯಾಯ ಸಿಕ್ಕಿಲ್ಲ. ಸುಪ್ರೀಂ ಕೋರ್ಟ್‌ನಿಂದ ಇತ್ತೀಚೆಗೆ ಬರುತ್ತಿರುವ ತೀರ್ಪುಗಳು ಆತಂಕ ಹುಟ್ಟಿಸುತ್ತಿವೆ ಎಂದರು.

ಎಸ್‌ಐಆರ್‌ನಲ್ಲಿ ಮೊದಲು ಮತದಾರರ ಪಟ್ಟಿಯಿಂದ ತೆಗಿಯುತ್ತಾರೆ, ಆಮೇಲೆ ನಾಗರಿಕರಲ್ಲ ಎನ್ನುತ್ತಾರೆ. ಈಗಾಗಲೇ ಪ್ರಾದೇಶಿಕ ಪಕ್ಷಗಳನ್ನು ಒಡೆದು ಅಧಿಕಾರಕ್ಕೆ ಬರುತ್ತಿದ್ದಾರೆ. ಈ ಅಪಾಯವನ್ನು ಎದುರಿಸಲು ಈಗ ಎದ್ದು ನಿಲ್ಲದಿದ್ದರೆ ಮುಂದೆ ಭಯಾನಕ ದಿನಗಳು ಬರಲಿವೆ ಎಂದು ಎಚ್ಚರಿಸಿದರು.

ಜನರು ವಿವಿಧ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ದ ಹೋರಾಟಗಳು ಮಾಡಬಾರದು ಎಂದು ಜಾತಿ ಧರ್ಮಗಳ ಮಧ್ಯೆ ಜಗಳ ತಂದಿಡುತ್ತಿದ್ದಾರೆ. ಬಿಜೆಪಿ ಆರ್‌ಎಸ್‌ಎಸ್ ಶಕ್ತಿಗಳ ವಿರುದ್ದ ನಾವು ಹೋರಾಡಬೇಕು. ಇಲ್ಲದಿದ್ದರೆ ಸಂವಿಧಾನ ನಾಶವಾಗಲಿದೆ, ಮನುಸ್ಮೃತಿ ಜಾರಿಗೆ ಬರಲಿದೆ ಎಂದರು.

ಹೋರಾಟಗಾರ ಬಿಎಸ್. ಸೊಪ್ಪಿನ ಮಾತನಾಡಿ, ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಚಟುವಟಿಕೆ, ರಾಜಕೀಯ ವಲಯದ ಬೆಳವಣಿಗೆಗಳು ನೋಡುವಾಗ ಭಯವಾಗ್ತಿದೆ. ಇದುವರೆಗೆ ನಡೆದ ಜನ ಪ್ರತಿನಿಧಿಗಳ ಅಯ್ಕೆ ಮುಂದೆ ನಡೆಯುವುದಿಲ್ಲ ಎಂಬ ಆತಂಕ ಶುರುವಾಗಿದೆ. ಸಾಂವಿಧಾನಿಕ ಸಂಸ್ಥೆಗಳು ಆಡಳಿತ ಪಕ್ಷದ ಕೈಗೊಂಬೆಯಾಗಿವೆ. ಇದರ ವಿರುದ್ದ ನಾವು ಎಚ್ಚೆತುಕೊಳ್ಳಬೇಕಾಗಿದೆ ಎಂದು ಹೇಳಿದರು.

ಈ ಹಿಂದೆ ಸಂವಿಧಾನ, ಸರ್ಕಾರ ನಾವು ಈ ದೇಶದವರು ಎಂದು ಹೇಳುತಿತ್ತು. ಈಗ ನಾವು ದಾಖಲೆ ಕೊಟ್ಟು ಸಾಬೀತುಪಡಿಸಬೇಕಾಗಿದೆ. ನಮ್ಮಲ್ಲಿರುವ ಆಧಾರ್ ಕಾರ್ಡ್, ರೇಷನ್ ಕಾರ್ಡ್‌ ಎಸ್‌ಐಆರ್‌ಗೆ ಅರ್ಹ ದಾಖಲೆಯಲ್ಲ ಎಂದಿದ್ದಾರೆ. ಹೀಗಿರುವಾಗ ನಾವು ಎಂತಹ ಸಂಕಷ್ಟದ ಪರಿಸ್ಥಿಯಿಯಲ್ಲಿದ್ದೇವೆ ಎಂದು ಕಳವಳ ವ್ಯಕ್ತಪಡಿಸಿದರು.

ಈಗಾಗಲೇ 13 ರಾಜ್ಯಗಳಲ್ಲಿ 6.5. ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರಗಿಟ್ಟಿದ್ದಾರೆ‌. ಇನ್ನೂ 6 ಕೋಟಿ ಜನರನ್ನು ಹೊರಗಿಡುತ್ತಾರೆ. ಹಾಗಾದರೆ, ಇವರೆಲ್ಲ ಪಾಕಿಸ್ತಾನಿಗಳ? ಎಂದು ಪ್ರಶ್ನಿಸಿದರು. ಸರ್ಕಾರದ ಒಳ ಉದ್ದೇಶ ಬಡವರು, ದಲಿತರು, ಕಾರ್ಮಿಕರನ್ನು ಮತದಾರರ ಪಟ್ಟಿಯಿಂದ ಹೊರ ಹಾಕುವುದು. ಏಕೆಂದರೆ ಇವರಿಗೆ ಅವರು ಮತ ಹಾಕುವುದಿಲ್ಲ ಎಂದರು.

ದಲಿತ ಸಂಘಟನೆಗಳ ಒಕ್ಕೂಟದ ಮುಖಂಡ ಗುರುನಾಥ್ ಉಳ್ಳಿಕಾಶಿ ಮಾತನಾಡಿ, ಎಸ್‌ಐಆರ್ ವೇಳೆ 12 ದಾಖಲೆಗಳನ್ನು ತೋರಿಸಿ ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ದಾಖಲೆ ಕೊಡಬೇಕಾದವರು ನಾವಲ್ಲ, ಈ ಷಡ್ಯಂತ್ರ್ಯ ರೂಪಿಸಿದರು. ಅಂದರೆ ಆರ್‌ಎಸ್‌ಎಸ್‌, ಸಂಘಪರಿವಾರದವರು. ಏಕೆಂದರೆ, ಅವರ ಸಂಘಟನೆ ಇನ್ನೂ ನೋಂದಣಿಯೇ ಆಗಿಲ್ಲ. ಅವರು ಮೊದಲು ದಾಖಲೆಗಳನ್ನು ಕೊಡಲಿ, ಬಳಿಕ ನಾವೂ ಕೊಡುತ್ತೇವೆ ಎಂದು ಹೇಳಿದರು.

ಲಡಾಯಿ ಪ್ರಕಾಶನದ ಬಸವರಾಜ್ ಸೂಳೆಭಾವಿ ಮಾತನಾಡಿ, ಎಸ್ಐಅರ್ ಮೂಲಕ ಈ ದೇಶದ ಜನರ ನಾಗರಿಕತ್ವ ಪರಿಶೀಲಿಸಲು ಹೊರಟವರಿಗೆ ನಮ್ಮನೊಂದು ಸವಾಲಿದೆ. ದೆಹಲಿಯ ಕೆಂಪುಕೋಟೆ ಮೇಲೆ ಸ್ವಾತಂತ್ರ್ಯಕ್ಕಾಗಿ ಪ್ರಾಣತ್ಯಾಗ ಮಾಡಿದವರ ಹೆಸರಿದೆ. ಅದರಲ್ಲಿ ಒಬ್ಬರೇ ಒಬ್ಬ ಆರ್‌ಎಸ್‌ಎಸ್‌ ಸಂಘ ಪರಿವಾರದವರ ಹೆಸರು ತೋರಿಸಲಿ ಎಂದರು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಸಂಘಪರಿವಾರದವರು ಬ್ರಿಟಿಷರ ಜೊತೆ ಕೈಜೋಡಿಸಿದ್ದರು ಎಂದು ಆರೋಪಿಸಿದರು.

ಎಸ್‌ಐಆರ್ ಮೂಲಕ ನೀವು ಕಿತ್ತುಕೊಳ್ಳಲು ಮುಂದಾಗಿರುವ ನಮ್ಮ ನಾಗರಿಕತ್ವ ಉಳಿಸಿಕೊಳ್ಳಲು ನಾವು ಹೋರಾಡುತ್ತೇವೆ, ನಮ್ಮ ಹಕ್ಕುಗಳನ್ನು ಉಳಿಸುತ್ತೇವೆ. ಎಸ್‌ಐಅರ್ ಮೂಲಕ ನೀವು ಈ ದೇಶದಲ್ಲಿ ಕ್ರಾಂತಿಗೆ ನಾಂದಿ ಹಾಡುತಿದ್ದೀರಿ, ನಾವು ಆ ಕ್ರಾಂತಿಗೆ ಸಿದ್ದರಾಗುತ್ತೇವೆ ಎಂದರು.

ಅಮ್ಮಾರೂಡ ಗುರುಪೀಠದ ಶ್ರೀ ರಾಘವೇಂದ್ರ ಸ್ವಾಮೀಜಿ ಮಾತನಾಡಿ, ನಾವು ದಲಿತರು, ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ಹಿಂದುಳಿದ ಸಮುದಾಯದವರು ಒಗ್ಗಟ್ಟಾದರೆ ಯಾವುದೇ ಎಸ್ಐಆರ್ ನಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ನಮ್ಮ‌ ಪೂರ್ವಜರು ತ್ಯಾಗಗಳನ್ನು ಮಾಡಿ ನಮಗೆ ಸ್ವಾತಂತ್ರ್ಯ ಕೊಡಿಸಿದರು. ಬಾಬಾ ಸಾಹೇಬರು ಸಂವಿಧಾನದ ಮೂಲಕ ನಮಗೆ ಹಕ್ಕುಗಳನ್ನು ನೀಡಿದರು. ಅದನ್ನು ಕೇಳುವ ಅವಕಾಶ ನಮಗಿದೆ ಎಂದರು.

ನಮ್ಮ ಸಮಾಜದಲ್ಲಿ ತಾರತಮ್ಯಗಳು ಮುಂದುವರಿದಿವೆ. ಮುಂದೆ ಇದ್ದವರು ಇನ್ನೂ ಮುಂದುವರಿಯುತ್ತಿದ್ದಾರೆ. ಹಿಂದುಳಿದವರು ಹಿಂದೆಯೇ ಇದ್ದೇವೆ. ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು. ಅದಕ್ಕಾಗಿ ನಾವೆಲ್ಲ‌ ಒಗ್ಗಟ್ಟಿನಿಂದ ಹೋರಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ ಮುನ್ನಡೆಸುತ್ತಿರುವ ಯೂಸುಫ್ ಕನ್ನಿ, ಇಸಾಬೆಲ್ಲ ಝೇವಿಯರ್, ಸಂವಿಧಾನ ಸುರಕ್ಷಾ ಸಮಿತಿಯ ಸಂಚಾಲಕ ಅಶ್ರಫ್ ಅಲೀ ಮಾತನಾಡಿದರು.

ವಿವಿಧ ಜನ ಸಂಘಟನೆಗಳು ಮತ್ತು ಜಾತ್ಯತೀತ ಪಕ್ಷಗಳ ಮುಖಂಡರು ಮತ್ತು ಸಾರ್ವಜನಿಕರು ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...