HomeಅಂಕಣಗಳುKarnataka against SIRಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು.

ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ ಮುನ್ಸಿಪಾಲಿಟಿ ಸರ್ಕಲ್, ಎಲ್‌ಐಸಿ ಸರ್ಕಲ್‌, ಅಂಬೇಡ್ಕರ್ ಭವನ, ವಾಂಬೆ ಕಾಲೋನಿ, ಇಲ್ಯಾಸ್ ಮಸೀದಿ ಏರಿಯಾಗಳಲ್ಲಿ ಸಾಗಿ ಪಂಕಾ ಮಸೀದಿ ಬಳಿ ಸಮಾಪ್ತಿಯಾಯಿತು.

ಮುನ್ಸಿಪಾಲಿಟಿ ಸರ್ಕಲ್‌ನಲ್ಲಿ ವಿವಿಧ ಜನಸಂಘಟನೆಗಳು, ವೆಲ್ಫೇರ್ ಪಕ್ಷ, ಕಾಂಗ್ರೆಸ್ ಪಕ್ಷಗಳ ಸಹಯೋಗದಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಪಾಲ್ಗೊಂಡು ಜಾಥಾಗೆ ಶುಭ ಕೋರಿದರು. ಎಸ್‌ಐಆರ್ ಕುತಂತ್ರದ ವಿರುದ್ಧ ಜನರು ಎಚ್ಚೆತ್ತುಕೊಳ್ಳಬೇಕಾದ ಅವಶ್ಯಕತೆ ಇದೆ ಎಂದರು. ಕಾಂಗ್ರೆಸ್ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೆಲಸ ಮಾಡಬೇಕೆಂದು ಕರೆ ನೀಡಿದರು.

ಕಾಂಗ್ರೆಸ್ ಬಾಗಲಕೋಟೆ ಜಿಲ್ಲಾಧ್ಯಕ್ಷ ಎಸ್‌.ಜಿ ನಂಜಯ್ಯಮಠ ಅವರು ಮಾತನಾಡಿ, ಎಸ್‌ಐಆರ್‌ ಮೂಲಕ ಜನರ ಮತಕಡಿತಗೊಳಿಸಿ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿದರು. ನೊಬೆಲ್ ಪುರಸ್ಕೃತ ಅಮರ್ತ್ಯಸೇನ್ ಅವರ ಮತದಾನದ ಹಕ್ಕು ಕಿತ್ತುಕೊಳ್ಳಲು ನೋಡಿದರು. ದೇಶಕ್ಕಾಗಿ ಸೇವೆ ಸಲ್ಲಿಸಿರುವ ಯೋಧನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದ್ದಾರೆ ಎಂದರು.

ಜನರು ಎಸ್‌ಐಆರ್ ಬಗ್ಗೆ ಎಚ್ಚರಗೊಂಡು ಮತ ಹಕ್ಕು ಉಳಿಸಿಕೊಳ್ಳಿ. ಕಾರ್ಯಕರ್ಯರು, ಮುಖಂಡರು ಬೀದಿಗಿಳಿದು ಜನರ ಹಕ್ಕು ಉಳಿಸಲು ಪ್ರಯತ್ನಿಸಿ. ಎಸ್‌ಐಆರ್‌ ಮೂಲಕ ಅಂಬೇಡ್ಕರ್ ಅವರು ಕೊಟ್ಟ ಸಾಂವಿಧಾನಿಕ ಹಕ್ಕು ಮೊಟಕುಗೊಳಿಸುವುದು ಬಿಜೆಪಿಯ ಕುತಂತ್ರವಾಗಿದೆ. ನಮ್ಮ‌ರಾಜ್ಯದಲ್ಲಿ 91 ಕಾಂಗ್ರೆಸ್ ಕ್ಷೇತ್ರಗಳ ಮೇಲೆ ಕಣ್ಣಿಟ್ಟಿದ್ದಾರೆ. ಸಾಂಪ್ರಾದಯಿಕ ಮತ ಕಡಿಯಲು ತಂತ್ರ ರೂಪಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಹೋರಾಟಗಾರ ಹೆಚ್‌ಎನ್‌ ನೀಲ್ ನಾಯಕ, ಎದ್ದೇಳು ಕರ್ನಾಟಕದ ಪವಿತ್ರಾ ಜಕ್ಕಪ್ಪನವರ್, ಬಿಎಸ್ ಬಾಬಾ ಖಾನ್, ಸ್ಥಳೀಯ ನಾಯಕ ಹಾಜಿ ಸಾಬ್ ದಂಡಿನ್, ವೆಲ್ಫೇರ್ ಪಾರ್ಟಿ ಮತ್ತು ಕಾಂಗ್ರೆಸ್ ಪಾರ್ಟಿಯ ಸ್ಥಳೀಯ ಮುಖಂಡರು ಹಾಗೂ ನೂರಾರು ಮಂದಿ ಸಾರ್ವಜನಿಕರು ಇದ್ದರು.

ಮುನ್ಸಿಪಾಲಿಟಿ ಸರ್ಕಲ್‌ನಲ್ಲಿ ಸಭಾ ಕಾರ್ಯಕ್ರಮದ ಬಳಿಕ, ಎಸ್‌ಐಆರ್ ವಿರುದ್ಧ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಜಾಥಾದಲ್ಲಿ ಪಾಲ್ಗೊಂಡರು. ಚುನಾವಣಾ ಆಯೋಗ, ಎಸ್‌ಐಆರ್ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ವಾಂಬೆ ಕಾಲೋನಿ, ಇಲ್ಯಾಸ್ ಮಸೀದಿ ಮತ್ತು ಪಂಕಾ ಮಸೀದಿ ಪ್ರದೇಶಗಳಲ್ಲಿ ಎಸ್‌ಐಆರ್ ವಿರೋಧಿ ಒಕ್ಕೂಟದ ಪ್ರಮುಖರಾದ ಜಮಾಅತೆ ಇಸ್ಲಾಮಿ ಹಿಂದ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಮೌಲಾನ ಯೂಸುಫ್ ಕನ್ನಿ, ಆರಿಫುಲ್ಲಾ ಖಾನ್, ಸರೋವರ್ ಬೆಂಕಿಕೆರೆ ಜಾಗೃತಿ ಭಾಷಣಗಳನ್ನು ಮಾಡಿದರು. ಜನರಲ್ಲಿ ಎಸ್‌ಐಆರ್ ಕುರಿತು ಅರಿವು ಮೂಡಿಸಿದರು. ಈ ಸಂದರ್ಭದಲ್ಲಿ ಕರಪತ್ರಗಳನ್ನು ಹಂಚಲಾಯಿತು.

ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ವಿಎಸ್ ಉಗ್ರಪ್ಪ ಅವರನ್ನು ಭೇಟಿಯಾದ ಜಾಥಾ ತಂಡ ಮಾತುಕತೆ ನಡೆಸಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...