Homeಕರ್ನಾಟಕ"ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು": ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ...

“ಕಲ್ಲಡ್ಕ ಪ್ರಭಾಕರ್ ಭಟ್ ಕೆಣಕಿ ಉಳಿದ ಸರ್ಕಾರವಿಲ್ಲ, ಕರಾವಳಿ ಕಿಡಿಯಾದೀತು”: ಪ್ರಚೋದನಕಾರಿ ಪೋಸ್ಟ್ ವಿರುದ್ಧ ಕ್ರಮಕ್ಕೆ ಆಗ್ರಹ

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ‘ದೀಪೋತ್ಸವ’ ಕಾರ್ಯಕ್ರಮದಲ್ಲಿ ಧಾರ್ಮಿಕ ದ್ವೇಷ ಭಾಷಣ ಮಾಡಿದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅ.30ರಂದು ವಿಚಾರಣೆಗೆ ಹಾಜರಾಗಲು ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ವರದಿಯಾಗಿದೆ.

ಈ ಕುರಿತು ವಸಂತ್ ಗಿಳಿಯಾರ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ ಹಾಕಿದ್ದಾರೆ.

“ಕಲ್ಲಡ್ಕ ಪ್ರಭಾಕರ್ ಭಟ್ ಎನ್ನುವ ಶಕ್ತಿಯನ್ನು ಕೆಣಕಿ ಉಳಿದ ಸರ್ಕಾರವಿಲ್ಲ! ಭಟ್ಟರ ಬಂಧನಕ್ಕೆ ಒತ್ತಡವಿದೆ ಎನ್ನುವ ಮಾತು ಕೇಳಿಸಿಕೊಂಡೆ. ಕರಾವಳಿ ಕಿಡಿ ಕಿಡಿಯಾದೀತು. ಪ್ರಭಾಕರ ಭಟ್ಟರ ಪ್ರಭಾವ ಏನೂ ಎನ್ನುವುದನ್ನು ಪ್ರದರ್ಶನ ಮಾಡುವ ರಿಸ್ಕಿಗೆ ಯಾರೂ ಕೈ ಹಾಕದೇ ಇರೋದು ಸೇಫ್! ಕರಾವಳಿ ಕರ್ನಾಟಕ ಶಾಂತಿಯಲ್ಲಿರಲಿ ಎನ್ನುವುದು ಸಲಹೆ” ಎಂದು ಗಿಳಿಯಾರ್ ಪೋಸ್ಟ್ ಹಾಕಿದ್ದು, ಬಹಿರಂಗವಾಗಿ ಹಿಂಸಾಚಾರಕ್ಕೆ ಪ್ರಚೋದನೆ ಕೊಟ್ಟಿರುವ ಆತನ ವಿರುದ್ದ ಕ್ರಮಕ್ಕೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಸಂತ್ ಗಿಳಿಯಾರ್ ವಿರುದ್ದ ಕಾನೂನು ಕ್ರಮಕ್ಕೆ ಆಗ್ರಹಿಸಿ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಕೆಲ ಪೋಸ್ಟ್‌ಗಳು ಮತ್ತು ಸ್ಕ್ರೀನ್‌ ಶಾಟ್‌ಗಳು ಕೆಳಗೆ ನೋಡಬಹುದು.

ಇನ್ನು, Divyath K Poojary ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು “ಹೆಣ್ಣು ಮಕ್ಕಳಿಗೆ ರೆಸ್ಪೆಕ್ಟ್ ಕೊಡದ ಅಯೋಗ್ಯರು ಇಂತವರು. ಇವನ ಭಾಷಣ ಕೇಳಿ ಅರ್ಧದಿಂದ ಹೋದವ ನಾನು. ಧರ್ಮವನ್ನು ದ್ವೇಷ ಮಾಡಲು ಕಲಿಸೋ ಇವನಿಂದ ನಾವೇನು ಕಲಿಯಬೇಕಿಲ್ಲ” ಎಂದು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

Musthafa Mf ಎಂಬ ಫೇಸ್‌ಬುಕ್ ಬಳಕೆದಾರ “ನೀನು ಯಾವ ಸೀಮೆಯ ಪತ್ರಕರ್ತ ಮೊದಲು ಹೇಳು. ಮೊದಲು ಕಾನೂನಿಗೆ ಗೌರವ ಕೊಡೋದು ಕಲಿ. ಸುಪ್ರೀಂ ಕೋರ್ಟ್ ಏನು ಹೇಳಿದೆ ಗೊತ್ತಾ, ಅದು ಮೊದಲು ತಿಳ್ಕೋ. ಒಂದು ಧರ್ಮವನ್ನು ಗುರಿಯಾಗಿಸಿ ದ್ವೇಷ ಭಾಷಣ ಮಾಡುವನನ್ನು ಬಂಧನ ಮಾಡಬೇಕು. ಅದರ ಆಯೋಜಕರನ್ನು ಬಂಧಿಸಬೇಕು. ಈತ ಕಾನೂನಿಗಿಂತ ದೊಡ್ಡವನಲ್ಲ. ನೀ ಮೊದಲು ಪತ್ರಕರ್ತನ ಕೆಲಸ ಮಾಡು. ಹೆದರಿಸುವುದು ಬಿಡು” ಎಂದು ವಸಂತ್ ಗಿಳಿಯಾರ್‌ಗೆ ಪ್ರತಿಕ್ರಿಯೆ ನೀಡಿದ್ದಾರೆ.

Yadava Kuntalapady ಎಂಬ ಬಳಕೆದಾರ “ಬಂಧನ ಮಾಡಿದರೆ ಏನೂ ಆಗೊದಿಲ್ಲ. ಅದು ನಿನ್ನ ಭ್ರಮೆ. ಈಗ ರೋಡಿಗೆ ಬಂದು ಗಲಾಟೆ ಮಾಡಿದರೆ, ಮಾಡಿಸಿದವನು ನೇರ ಹೊಣೆ. ಅವನನ್ನೇ ಒದ್ದು ಒಳಗೆ ಹಾಕುವಂತ ಪ್ರಾಮಾಣಿಕ 2 ಪೋಲಿಸ್ ಅಧಿಕಾರಿಗಳು ಇದ್ದಾರೆ” ಎಂದು ಕಾಮೆಂಟ್‌ ಮಾಡಿದ್ದಾರೆ.

ಆನಂದ ಕುಮಾರ ಹಾಲಗೆರೆ ಎಂಬ ಬಳಕೆದಾರ, “ಜಾಸ್ತಿ ತಲೆಕೆಡಿಸಿ ಇರೋದು ಬೇಡ ಹರಿಪ್ರಸಾದ್ ಗೃಹಮಂತ್ರಿ ಆಗಲಿ ನೋಡು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

Sanatan Dharam ಎಂಬ ಫೇಸ್‌ಬುಕ್ ಖಾತೆಯಲ್ಲಿ, “ಈ ಪೋಸ್ಟ್‌ನಲ್ಲಿ ಪ್ರಚೋದನಕಾರಿ ವಿಷಯವಿರುವುದರಿಂದ ನಿಮಗೆ ಅಪಾಯವಾಗಬಹುದು! ಪೋಸ್ಟ್ ಅನ್ನು ಮಾರ್ಪಡಿಸಲು ಪ್ರಯತ್ನಿಸಿ ಎಂದು ಗಿಳಿಯಾರ್‌ ಗೆ ಸಲಹೆ ನೀಡಲಾಗಿದೆ.

ಆರ್‌ಎಸ್‌ಎಸ್‌ ಪಥಸಂಚಲನ ವಿವಾದ: ಅ.28ರಂದು ಶಾಂತಿ ಸಭೆ ನಡೆಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...