Homeಮುಖಪುಟಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ 'ಮದ್ಯ' ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

ಗೆಲುವಿನ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕವಾಗಿ ‘ಮದ್ಯ’ ಹಂಚಿಕೆ; ಬಿಜೆಪಿ ಎಂಪಿ ಸುಧಾಕರ್ ವಿರುದ್ಧ ಜಾಲತಾಣದಲ್ಲಿ ಆಕ್ರೋಶ

'ಊಟ ಉಪಚಾರ ವ್ಯವಸ್ಥೆ ಜೊತೆಗೆ ಮಧ್ಯ ಇರುತ್ತದೆ' ಎಂದು ಅನುಮತಿ ಕೇಳಿರುವ ತಾಲೂಕು ಬಿಜೆಪಿ ಅಧ್ಯಕ್ಷ

- Advertisement -
- Advertisement -

ನೂತನ ಬಿಜೆಪಿ ಸಂಸದ ಡಾ. ಕೆ.ಸುಧಾಕರ್ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ ಸಂಭ್ರಮಕ್ಕೆ ಭಾನುವಾರ (ಜು.07)ದಂದು ನೆಲಮಂಗದಲ್ಲಿ ‘ಬಿಜೆಪಿ-ಜೆಡಿಎಸ್’ ಬೆಂಬಲಿಗರಿಗೆ ಔತಣಕೂಟ ಏರ್ಪಡಿಸಿದ್ದರು. ಪಕ್ಷದ ಸಂಘಟಕರು ಈ ಸಂಭ್ರಮಾಚರಣೆಯಲ್ಲಿ ಬಹಿರಂಗವಾಗಿ ‘ಮದ್ಯ’ ಹಂಚುತ್ತಿರುವ ವಿಡಿಯೊಗಳು ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಸುಧಾಕರ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಟ್ರಕ್‌ಗಳಲ್ಲಿ ತಂದ ವಿಸ್ಕಿ ಟೆಟ್ರಾ ಪಾಕೆಟ್ ಮತ್ತು ಬೀರ್ ಬಾಟಲಿಗಳನ್ನು ಪಡೆಯಲು ಜನರು ಉದ್ದನೆಯ ಸರತಿ ಸಾಲಿನಲ್ಲಿ ನಿಂತಿದ್ದು, ಭದ್ರತೆಗೆ ಬೌನ್ಸರ್‌ಗಳನ್ನು ನಿಯೋಜಿಸಲಾಗಿದೆ. ವಿಶೇಷವೆಂದರೆ ಪೊಲೀಸರ ಸಮ್ಮುಖದಲ್ಲಿ ಮದ್ಯ ಹಂಚಿರುವುದು ಜನರ ಕೋಪಕ್ಕೆ ಕಾರಣವಾಗಿದೆ.

ಚಿಕ್ಕಬಳ್ಳಾಪುರ ಸಂಸದ ಕೆ.ಸುಧಾಕರ್ ಪರವಾಗಿ ಕಾರ್ಯಕ್ರಮ ಆಯೋಜಿಸಿರುವ ನೆಲಮಂಗಲ ಬಿಜೆಪಿ ತಾಲೂಕು ಅಧ್ಯಕ್ಷ ಜಗದೀಶ್ ಚೌಧರಿ ಅವರು, ನಿರಪೇಕ್ಷಣಾ ಪತ್ರ ಖೋರಿ ಪೊಲೀಸ್ ಇಲಾಖೆಗೆ ಬರೆದ ಪತ್ರದಲ್ಲಿ ‘ಪಾರ್ಟಿಯಲ್ಲಿ ಮದ್ಯ ನೀಡುವುದಾಗಿ’ ಸ್ಪಷ್ಟವಾಗಿ ತಿಳಿಸಿದ್ದಾರೆ.

“ಮಧ್ಯಾಹ್ನ 12.30 ರಿಂದ ವೇದಿಕೆ ಕಾರ್ಯಕ್ರಮ ಪ್ರಾರಂಭವಾಗಲಿದೆ, ಊಟ ಉಪಚಾರ ವ್ಯವಸ್ಥೆ ಮತ್ತು ಮಧ್ಯ ಇರುತ್ತದೆ” ಎಂದು ಜಗದೀಶ್ ಪೊಲೀಸರುಗೆ ಬರೆದಿದ್ದಾರೆ ಎನ್ನಲಾದ ಪತ್ರದ ಪ್ರತಿ ಮಾಧ್ಯಮಗಳಿಗೆ ಲಭ್ಯವಾಗಿದೆ.

ಆದರೆ, ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಸಮಾರಂಭದಲ್ಲಿ ಮದ್ಯ ಸೇವಿಸದಂತೆ ಸಂಘಟಕರಿಗೆ ಸೂಚಿಸಿದ್ದು, ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದರು ಎನ್ನಲಾಗಿದೆ. ಕಾರ್ಯಕ್ರಮದಲ್ಲಿ ಮದ್ಯ ಪೂರೈಕೆ ಮಾಡದಂತೆ ಪೊಲೀಸ್ ಇಲಾಖೆ ನಿರ್ಬಂಧ ವಿಧಿಸಿ ಸಂಘಟಕರಿಗೆ ತಿಳಿಸಿತ್ತು. ಷರತ್ತುಗಳನ್ನು ಉಲ್ಲಂಘಿಸಿದರೆ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಲಾಗಿದೆ. ಆದರೂ ಮದ್ಯ ನೀಡಲು ಅಬಕಾರಿ ಇಲಾಖೆಯಿಂದ ಅನುಮತಿ ಪಡೆದಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಎಂಎಸ್ ರಕ್ಷಾ ರಾಮಯ್ಯ ಅವರನ್ನು 1.5 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಕೆ. ಸುಧಾಕರ್ ಸೋಲಿಸಿದ್ದಾರೆ. ಚಿಕ್ಕಬಳ್ಳಾಪುರವು ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಒಂದಾಗಿದೆ; 1977 ರಲ್ಲಿ ಈ ಕ್ಷೇತ್ರವು ಅಸ್ತಿತ್ವಕ್ಕೆ ಬಂದಿತು.

ಚಿಕ್ಕಬಳ್ಳಾಪುರ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಏಪ್ರಿಲ್ 26 ರಂದು ನಡೆದಿದ್ದು, ಶೇ.77 ರಷ್ಟು ಮತದಾನವಾಗಿದೆ. ಜುನ್ 4ರಂದು ಫಲಿತಾಂಶ ಪ್ರಕಟವಾಗಿತ್ತು.

ಇದನ್ನೂ ಓದಿ; ಜಗನ್ನಾಥ ರಥ ಯಾತ್ರೆಯಲ್ಲಿ ಅವಘಡ; ಕಾಲ್ತುಳಿತದಿಂದ ಒರ್ವ ಸಾವು, 15 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಔಷಧ ತಯಾರಕರ ಪರವಾಗಿ ಇಡೀ ವ್ಯವಸ್ಥೆ ಕೆಲಸ ಮಾಡುತ್ತಿರುವುದೇಕೆ? ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಔಷಧಿಗಳ ಗರಿಷ್ಠ ಚಿಲ್ಲರೆ ಬೆಲೆ (ಎಂಆರ್‌ಪಿ) ಮತ್ತು ಚಿಲ್ಲರೆ ವ್ಯಾಪಾರಿಗಳು ಅವುಗಳನ್ನು ಖರೀದಿಸುವ ಬೆಲೆಯ ನಡುವಿನ ಭಾರಿ ವ್ಯತ್ಯಾಸದ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತೀವ್ರವಾಗಿ ಪ್ರಶ್ನಿಸಿದೆ. ಔಷಧ ತಯಾರಕರಿಗೆ...

ಚುನಾವಣಾ ಆಯೋಗದ ಅಫಿಡವಿಟ್ ಕುರಿತ ‘ಲೈವ್ ಲಾ’ ರೀಲ್ ತೆಗೆದುಹಾಕಿದ ಇನ್‌ಸ್ಟಾಗ್ರಾಮ್

ಭಾರತೀಯ ಚುನಾವಣಾ ಆಯೋಗ (ಇಸಿಐ) ಸೋಮವಾರ (ಅ.26) ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್ ಕುರಿತು ವಿವರಿಸುವ ತನ್ನ ರೀಲ್ ಅನ್ನು ಇನ್‌ಸ್ಟಾಗ್ರಾಂ ತೆಗೆದುಹಾಕಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಲೈವ್ ಲಾ (Livelaw.in)...

‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ 'ಫಾರಂ-6ರ' ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ 'ಘೋಷಣಾ ಪತ್ರ' ಫಾರಂ-6ರ ಭಾಗವಾಗಿರಲಿಲ್ಲ (Declaration not a part of...

‘ತಪ್ಪು ಗ್ರಹಿಕೆ, ಅಶಾಂತಿ’ ನೆಪದಲ್ಲಿ ಉಮರ್ ಖಾಲಿದ್ ಅವರ ಸಂಶೋಧನಾ ಕೃತಿಯನ್ನು ಗ್ರಂಥಾಲಯದಿಂದ ತೆಗೆದ ಐಐಎಸ್‌ಇಆರ್ ಪುಣೆ

ಪುಣೆ: ಜೈಲಿನಲ್ಲಿರುವ ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರು ಬರೆದ ಪುಸ್ತಕವೊಂದನ್ನು ಗ್ರಂಥಾಲಯಕ್ಕೆ ಹೊಸದಾಗಿ ಸೇರ್ಪಡೆ ಮಾಡಿರುವುದಕ್ಕೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಪುಣೆಯ ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ...

ಗ್ಯಾನೇಶ್ ಕುಮಾರ್ ಕಾರ್ಯವೈಖರಿ ಪ್ರಶ್ನಿಸಿ ಅರ್ಜಿ : ಚುನಾವಣಾ ಆಯೋಗದ ಉತ್ತರಕ್ಕೆ ಪ್ರತಿಕ್ರಿಯಿಸಲು 10 ದಿನಗಳ ಕಾಲಾವಕಾಶ ನೀಡಿದ ಸುಪ್ರೀಂ ಕೋರ್ಟ್

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಅ.27) ಮುಂದೂಡಿದೆ. ನಿನ್ನೆ ಇಸಿಐ ಸಲ್ಲಿಸಿರುವ ಆಕ್ಷೇಪಣಾ ಅಫಿಡವಿಟ್‌ಗೆ (ಕೌಂಟರ್ ಅಫಿಡವಿಟ್) ಪ್ರತ್ಯುತ್ತರ (ರಿಜಾಯಿಂಡರ್) ಸಲ್ಲಿಸಲು...

ತಮಿಳುನಾಡು: ಥೇಣಿ ಉಪಜೈಲಿನಿಂದ 17 ವಿಚಾರಣಾಧೀನ ಕೈದಿಗಳ ಪರಾರಿ; ನಾಲ್ವರು ಪುನಃ ಬಂಧನ

ತಮಿಳುನಾಡಿನ ಆಂಡಿಪಟ್ಟಿ ಸಮೀಪದ ತೆಕ್ಕಂಪಟ್ಟಿ ಉಪಜೈಲಿನಲ್ಲಿ ಜೈಲು ಸಿಬ್ಬಂದಿಯನ್ನು ಥಳಿಸಿ 17 ವಿಚಾರಣಾಧೀನ ಕೈದಿಗಳು ಪರಾರಿಯಾಗಿದ್ದಾರೆ ಎಂದು ಮಂಗಳವಾರ (ಅ.27) ಪೊಲೀಸರು ತಿಳಿಸಿದ್ದಾರೆ. ಸೋಮವಾರ ತಡರಾತ್ರಿ ಈ ಘಟನೆ ನಡೆದಿದೆ. ಜೈಲಿನಿಂದ ಪರಾರಿಯಾದವರ ಪೈಕಿ...

ಕರ್ನಾಟಕ ಎಸ್ಐಆರ್: ಅಂತಿಮ ಮತದಾರರ ಪಟ್ಟಿಯಿಂದ 99.32 ಲಕ್ಷ ಹೆಸರುಗಳು ಹೊರಕ್ಕೆ; ಮತದಾರರ ಸಂಖ್ಯೆ 4.55 ಕೋಟಿಗೆ ಕುಸಿತ: ವರದಿ

ಬೆಂಗಳೂರು: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ ಮತದಾರರ ಪಟ್ಟಿಯಿಂದ ಬರೋಬ್ಬರಿ 99.32 ಲಕ್ಷ ಮತದಾರರ ಹೆಸರುಗಳು ಹೊರಗುಳಿದಿವೆ. ಮಂಗಳವಾರ ಪ್ರಕಟವಾಗಲಿರುವ ಅಂತಿಮ ಪಟ್ಟಿಯಲ್ಲಿ ರಾಜ್ಯದ...

‘ನ್ಯೂಸ್‌ರೂಮ್‌ಗಳೇ ಮುಚ್ಚಿಹೋಗಲಿವೆ’ : ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಡಿಎನ್‌ಪಿಎ; ಕೇಂದ್ರ ಸರ್ಕಾರಕ್ಕೆ ನೋಟಿಸ್

ಡಿಜಿಟಲ್ ವೈಯಕ್ತಿಕ ಡೇಟಾ ಸಂರಕ್ಷಣಾ ಕಾಯ್ದೆ, 2023ರ (DPDP Act) ನಿಬಂಧನೆಗಳನ್ನು ಪ್ರಶ್ನಿಸಿ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ (DNPA) ಸಲ್ಲಿಸಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಅ.27) ನೋಟಿಸ್...

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು : ಪ್ರಶಾಂತ್ ಭೂಷಣ್

ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ್ದಕ್ಕೂ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (ಸಿಇಸಿ) ಕೈಗೊಂಡ...

SIR ವಿವಾದ: ಎಲ್ಲಾ ಆದೇಶಗಳು ಒಮ್ಮತದಿಂದಲೇ ಎಂದು ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಅಫಿಡವಿಟ್!

ವಿವಿಧ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision – SIR)ಗೆ ಸಂಬಂಧಿಸಿದ ಎಲ್ಲಾ ಆದೇಶಗಳು ಸಂಪೂರ್ಣ ಒಮ್ಮತದಿಂದಲೇ ಹೊರಬಂದಿವೆ ಎಂದು ಭಾರತೀಯ...