Homeಮುಖಪುಟಅರುಣಾಚಲ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆ ವಿರುದ್ಧ ಭುಗಿಲೆದ್ದ ಜನಾಕ್ರೋಶ; ಕೇಂದ್ರದಿಂದ ಆರ್‌ಎಎಫ್‌ನ ಎರಡು ತುಕಡಿ ರವಾನೆ

ಅರುಣಾಚಲ ಪ್ರದೇಶದಲ್ಲಿ ಜಲವಿದ್ಯುತ್ ಯೋಜನೆ ವಿರುದ್ಧ ಭುಗಿಲೆದ್ದ ಜನಾಕ್ರೋಶ; ಕೇಂದ್ರದಿಂದ ಆರ್‌ಎಎಫ್‌ನ ಎರಡು ತುಕಡಿ ರವಾನೆ

- Advertisement -
- Advertisement -

ಪ್ರಸ್ತಾವಿತ 11,200 ಮೆಗಾವ್ಯಾಟ್ ಸಾಮರ್ಥ್ಯದ ಸಿಯಾಂಗ್ ಅಪ್ಪರ್ ಮಲ್ಟಿಪರ್ಪಸ್ ಪ್ರಾಜೆಕ್ಟ್ ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಪಾಸಿಘಾಟ್‌ನಲ್ಲಿ ಹಿಂಸಾಚಾರ ಸಂಭವಿಸಿದ ಹಿನ್ನೆಲೆ, ಕೇಂದ್ರ ಸರ್ಕಾರ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್‌) ರಾಪಿಡ್ ಆಕ್ಷನ್ ಫೋರ್ಸ್‌ನ (ಆರ್‌ಎಎಫ್‌) ಎರಡು ತುಕಡಿಗಳನ್ನು ಅರುಣಾಚಲ ಪ್ರದೇಶಕ್ಕೆ ತುರ್ತಾಗಿ ರವಾನಿಸಿದೆ ಎಂದು ಭಾನುವಾರ (ಅ.25) ವರದಿಯಾಗಿದೆ.

ಪ್ರಸ್ತಾವಿತ ಬೃಹತ್ ಯೋಜನೆಯ ವಿರುದ್ಧದ ಪ್ರತಿಭಟನೆ ಹೆಚ್ಚಾಗುತ್ತಿರುವ ಹಿನ್ನೆಲೆ, ಪರಿಸ್ಥಿತಿಯನ್ನು ನಿಯಂತ್ರಿಸಲು ಕೇಂದ್ರ ಗೃಹ ಸಚಿವಾಲಯ ಶನಿವಾರ (ಅ.24) ಮಹತ್ವದ ನಿರ್ದೇಶನ ನೀಡಿದೆ. ಇದರನ್ವಯ, ನವಿ ಮುಂಬೈನಿಂದ ಸುಮಾರು 250 ಆರ್‌ಎಎಫ್‌ ಸಿಬ್ಬಂದಿಯನ್ನು ಭಾರತೀಯ ವಾಯುಪಡೆಯ ವಿಶೇಷ ಸಾರಿಗೆ ವಿಮಾನದ ಮೂಲಕ ತುರ್ತಾಗಿ ಏರ್‌ಲಿಫ್ಟ್ ಮಾಡಲಾಗಿದೆ. ಈ ಭದ್ರತಾ ಸಿಬ್ಬಂದಿ ಭಾನುವಾರದ ವೇಳೆಗೆ ಪಾಸಿಘಾಟ್ ತಲುಪಿ, ಅಲ್ಲಿ ಭದ್ರತಾ ಕಾರ್ಯದಲ್ಲಿ ನಿಯೋಜನೆಗೊಳ್ಳಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾಗಿ newindianexpress.com ವರದಿ ಮಾಡಿದೆ.

ಆರ್‌ಎಎಫ್‌ ಎಂಬುದು ಸಿಆರ್‌ಪಿಎಫ್‌ನ ದಂಗೆ ನಿಯಂತ್ರಣದಲ್ಲಿ ಪರಿಣತಿ ಹೊಂದಿರುವ ಒಂದು ವಿಶೇಷ ಘಟಕವಾಗಿದೆ. ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ ಸಿಆರ್‌ಪಿಎಫ್‌ನ ಹಲವಾರು ತುಕಡಿಗಳನ್ನು ನಿಯೋಜಿಸಲಾಗಿದ್ದು, ಇದರ ಜೊತೆಗೆ ರಾಜ್ಯದಲ್ಲಿ ಶಾಶ್ವತವಾಗಿ ಸಿಆರ್‌ಪಿಎಫ್‌ನ ಎರಡು ಮೂರು ಬೆಟಾಲಿಯನ್‌ಗಳು ಸದಾ ಕರ್ತವ್ಯದಲ್ಲಿರುತ್ತವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶುಕ್ರವಾರದಿಂದಲೇ (ಅ.23) ಪ್ರತಿಭಟನೆಯನ್ನು ನಿಯಂತ್ರಣಕ್ಕೆ ತರುವಲ್ಲಿ ಸಿಆರ್‌ಪಿಎಫ್ ಸಿಬ್ಬಂದಿ ಯಶಸ್ವಿಯಾಗಿದ್ದು, ಪರಿಸ್ಥಿತಿ ಮತ್ತಷ್ಟು ವಿಕೋಪಕ್ಕೆ ಹೋಗದಂತೆ ತಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಸಂಘರ್ಷದ ವೇಳೆ ಸಿಆರ್‌ಪಿಎಫ್ ಸೇರಿದಂತೆ ಇತರೆ ಪೊಲೀಸ್ ಮತ್ತು ಕೇಂದ್ರ ಭದ್ರತಾ ಪಡೆಗಳ ಹಲವು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಶುಕ್ರವಾರ ರಾತ್ರಿ ಉದ್ರಿಕ್ತ ಗುಂಪು ಪೂರ್ವ ಸಿಯಾಂಗ್ ಜಿಲ್ಲೆಯಲ್ಲಿದ್ದ ಎನ್‌ಎಚ್‌ಪಿಸಿ ಕಚೇರಿ ಮತ್ತು ಪೊಲೀಸ್ ಠಾಣೆಯೊಂದಕ್ಕೆ ಬೆಂಕಿ ಹಚ್ಚಿದೆ ಎನ್ನಲಾಗಿದೆ. ಅಷ್ಟೇ ಅಲ್ಲದೆ, ರಾಜ್ಯ ಬಿಜೆಪಿ ಅಧ್ಯಕ್ಷ ಸೇರಿದಂತೆ ಮೂವರು ರಾಜಕೀಯ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದೆ ಎಂದು ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿಗಳು ಹೇಳಿವೆ.

ಮುಖ್ಯಮಂತ್ರಿ ಪೆಮಾ ಖಂಡು ಅವರು ಶಾಂತಿಯುತ ಪ್ರತಿಭಟನೆಯು ಪ್ರಜಾಪ್ರಭುತ್ವದ ಅತ್ಯಗತ್ಯ ಭಾಗವಾಗಿದೆ ಎಂದು ಹೇಳಿದ್ದಾರೆ. ಆದರೆ ಪ್ರತಿಭಟನೆಗಳು ಕಾನೂನಿನ ಚೌಕಟ್ಟಿನೊಳಗೆ ಇರಬೇಕು ಮತ್ತು ಅವು ಆಸ್ತಿಪಾಸ್ತಿ ಹಾನಿಗೆ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರಲು ಕಾರಣವಾಗಬಾರದು ಎಂದಿದ್ದಾರೆ.

ಪಾಸಿಘಾಟ್‌ನಲ್ಲಿ ನಡೆದ ಹಿಂಸಾಚಾರವನ್ನು ವಿಷಾದನೀಯ ಎಂದು ಬಣ್ಣಿಸಿದ ಖಂಡು ಅವರು, ಸಮಾಜದ ಎಲ್ಲಾ ವರ್ಗದ ಜನರು ಶಾಂತಿ ಕಾಪಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಕಚೇರಿಯ ಪ್ರಕಟಣೆಯ ಪ್ರಕಾರ, ಪ್ರಸ್ತಾವಿತ ವಿದ್ಯುತ್ ಯೋಜನೆ ವಿರೋಧಿಸಿ ಸಿಯಾಂಗ್, ಅಪ್ಪರ್ ಸಿಯಾಂಗ್ ಮತ್ತು ಈಸ್ಟ್ ಸಿಯಾಂಗ್ ಜಿಲ್ಲೆಗಳಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ 12 ಗಂಟೆಗಳ ಬಂದ್ ಬಹುತೇಕ ಶಾಂತಿಯುತವಾಗಿತ್ತು. ಆದರೆ ಬಂದ್ ಮುಗಿದ ನಂತರ ಪಾಸಿಘಾಟ್‌ನಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಶನಿವಾರ ಮುಂಜಾನೆ 3.30ರವರೆಗೆ ಮುಂದುವರಿದಿತ್ತು.

























ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಹಿಲ್ ವಕೋಡ್ ಸಾವಿನ ಪ್ರಕರಣ: ಐಐಟಿ ಬಾಂಬೆ ನಿರ್ದೇಶಕರ ರಾಜೀನಾಮೆಗೆ 84 ಸಂಘಟನೆಗಳ ಆಗ್ರಹ

ಜಾತಿ ತಾರತಮ್ಯದ ಆರೋಪ ಎದುರಿಸುತ್ತಿರುವ ಡೀನ್‌ಗೆ ಸಂಸ್ಥೆಯ ಬೆಂಬಲ, ವಿದ್ಯಾರ್ಥಿಯ ವಿರುದ್ಧ ಮಾಧ್ಯಮಗಳಿಗೆ ಹೇಳಿಕೆ, ಸಿಸಿಟಿವಿ ದೃಶ್ಯಾವಳಿ ಸೋರಿಕೆ ಮತ್ತು ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ಆರೋಪ ಮುಂಬೈ: ಐಐಟಿ ಬಾಂಬೆಯಲ್ಲಿ ವಿದ್ಯಾರ್ಥಿ ಸಾಹಿಲ್...

ಕರ್ನಾಟಕದಲ್ಲಿ ಐದು ವರ್ಷಗಳಲ್ಲಿ 629 ವರದಕ್ಷಿಣೆ ಕಿರುಕುಳದ ಸಾವು; ಶಿಕ್ಷೆಯಾಗಿದ್ದು ಕೇವಲ ಏಳು ಪ್ರಕರಣಗಳಲ್ಲಿ: ವರದಿ 

ವರದಕ್ಷಿಣೆ ಕಿರುಕುಳ ಮತ್ತು ಸಾವುಗಳ ಪ್ರಕರಣಗಳಲ್ಲಿ ಅತ್ಯಂತ ಕಡಿಮೆ ಶಿಕ್ಷೆಯ ಪ್ರಮಾಣ; ತನಿಖೆ, ಸಾಕ್ಷ್ಯ ಸಂಗ್ರಹ ಮತ್ತು ನ್ಯಾಯಾಂಗ ವಿಳಂಬದ ವಿರುದ್ಧ ತಜ್ಞರ ಕಳವಳ ಕರ್ನಾಟಕದಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಸಾವುಗಳಂತಹ ಗಂಭೀರ ಅಪರಾಧಗಳ...

ನ್ಯಾಯಾಧೀಶರ ನೇಮಕಾತಿಗೆ ಕೊಲಿಜಿಯಂ ಚರ್ಚಿಸುವ ಮುನ್ನವೇ ಸಿಜೆಐ ಚಂದ್ರಚೂಡ್ ಸರ್ಕಾರದ ಪೂರ್ವಾನುಮತಿ ಪಡೆಯುತ್ತಿದ್ದರು: ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ (ಸಿಜೆಯ) ಡಿ.ವೈ. ಚಂದ್ರಚೂಡ್ ಅವರು ನ್ಯಾಯಾಧೀಶರ ನೇಮಕಾತಿಗಾಗಿ ಪ್ರಸ್ತಾಪಿಸಲಾದ ಹೆಸರುಗಳನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ಅಧಿಕೃತವಾಗಿ ಚರ್ಚಿಸುವ ಮುನ್ನವೇ ಸರ್ಕಾರದೊಂದಿಗೆ ಚರ್ಚಿಸುವ ಅಭ್ಯಾಸವನ್ನು ಹೊಂದಿದ್ದರು ಎಂದು...

ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಕರ್ನಾಟಕ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರಿನ ಐಟಿ ವಲಯ ಸೇರಿದಂತೆ ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಉದ್ದೇಶಪೂರ್ವಕವಾಗಿ ಉದ್ಯೋಗಾವಕಾಶ ನಿರಾಕರಿಸಲಾಗುತ್ತಿದೆ ಎಂಬ ದೂರುಗಳ ಹಿನ್ನೆಲೆಯಲ್ಲಿ, ಅಂತಹ ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಚ್ಚರಿಕೆ...

“ಕೇವಲ ದುಷ್ಟರಿಗಷ್ಟೇ ಧರ್ಮ ಬೇಕು”: ಪ್ರಧಾನಿ ಮೋದಿ-ಚಿನ್ಮಯಾನಂದ ಎಐ ಸಂವಾದದ ನಡುವೆ ಸ್ವಾಮಿ ಚಿನ್ಮಯಾನಂದರ ಹಳೆಯ ಕ್ರಾಂತಿಕಾರಿ ಹೇಳಿಕೆ ಈಗ ಮುನ್ನೆಲೆಗೆ!

ದೆಹಲಿಯ ಭಾರತ್ ಮಂಟಪಂನಲ್ಲಿ ಆಯೋಜಿಸಿದ್ದ ‘ಚಿನ್ಮಯ ಅಮೃತ ಮಹೋತ್ಸವ’ ಜಾಗತಿಕ ಸಮ್ಮೇಳನದ ವೇದಿಕೆ ಇತ್ತೀಚೆಗೆ ವಿಶಿಷ್ಟ ತಾಂತ್ರಿಕ ಪ್ರದರ್ಶನವೊಂದಕ್ಕೆ ಸಾಕ್ಷಿಯಾಯಿತು. 1993ರಲ್ಲೇ ಇಹಲೋಕ ತ್ಯಜಿಸಿದ್ದ ಚಿನ್ಮಯ ಮಿಷನ್ ಸಂಸ್ಥಾಪಕ ಸ್ವಾಮಿ ಚಿನ್ಮಯಾನಂದ ಅವರ...

ಜೀವನ ವೆಚ್ಚ, ಶಾಲಾ ನಿಧಿ ಕಡಿತದ ವಿರುದ್ಧ ಫ್ರಾನ್ಸ್‌ನಲ್ಲಿ ಭುಗಿಲೆದ್ದ ಪ್ರತಿಭಟನೆ; ಅಶ್ರುವಾಯು, ಜಲಫಿರಂಗಿ ಪ್ರಯೋಗ

ಫ್ರಾನ್ಸ್‌ನಲ್ಲಿ ಹೆಚ್ಚುತ್ತಿರುವ ಜೀವನ ವೆಚ್ಚ ಮತ್ತು ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳ ವಿರುದ್ಧ ಜನಾಕ್ರೋಶ ಭುಗಿಲೆದ್ದಿದೆ. ರಾಜಧಾನಿ ಪ್ಯಾರಿಸ್ ಸೇರಿದಂತೆ ದೇಶದ ಹಲವು ನಗರಗಳಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರನ್ನು...

‘ಒಂದೇ ಹೆಸರಿನಲ್ಲಿ 13 ವೋಟ್’ : ಉತ್ತರ ಪ್ರದೇಶ ಆಝಂಗಢದಲ್ಲಿ ಮತದಾರರ ಪಟ್ಟಿ ಅಕ್ರಮ; 9 ಅಧಿಕಾರಿಗಳ ವಿರುದ್ಧ ಕ್ರಮ

ಆಝಂಗಢ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ 13 ಪ್ರತ್ಯೇಕ ಸ್ಥಳಗಳಲ್ಲಿ ವಿಕಾಸ್ ಯಾದವ್ ಎಂಬ ಹೆಸರು ತಪ್ಪಾಗಿ ದಾಖಲಾಗಿರುವುದು ಆಂತರಿಕ ತನಿಖೆಯಿಂದ ತಿಳಿದುಬಂದ ಹಿನ್ನೆಲೆಯಲ್ಲಿ, ಉತ್ತರ ಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)...

ಎಸ್‌ಆರ್‌ಎಫ್‌ಟಿಐ ವಿದ್ಯಾರ್ಥಿಗಳ ಹೋರಾಟಕ್ಕೆ ನಾಸಿರುದ್ದೀನ್ ಶಾ, ಪಾಯಲ್ ಕಪಾಡಿಯಾ ಬೆಂಬಲ; ಬಿಜೆಪಿ ವಿರುದ್ಧ ನಟನ ವಾಗ್ದಾಳಿ

ಕೋಲ್ಕತ್ತಾ: ಕೋಲ್ಕತ್ತಾದ ಸತ್ಯಜಿತ್ ರೇ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ (ಎಸ್‌ಆರ್‌ಎಫ್‌ಟಿಐ)ಯಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಗೆ ಹಿರಿಯ ನಟ ನಾಸಿರುದ್ದೀನ್ ಶಾ ಮತ್ತು ಖ್ಯಾತ ಚಲನಚಿತ್ರ ನಿರ್ದೇಶಕಿ ಪಾಯಲ್ ಕಪಾಡಿಯಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಸಂಸ್ಥೆಯ...

ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ: ದೆಹಲಿ ಮೂಲದ ರಿತೇಶ್ ಪಾಂಡೆ ಬಂಧನ: ತನಿಖೆ ಚುರುಕು 

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಆಪಾದಿತ ಕುಟುಕು ಕಾರ್ಯಾಚರಣೆಯ ವಿಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರ ಅಪರಾಧ ವಿಭಾಗದ ವಿಶೇಷ ತಂಡ ದೆಹಲಿ ಮೂಲದ ವ್ಯಕ್ತಿಯೊಬ್ಬನನ್ನು ಬಂಧಿಸಿದೆ. ಪ್ರಕರಣದಲ್ಲಿ ನಡೆದಿರುವ ಮೊದಲ...

ಕೆಪಿಎಸ್‌ಸಿ ನೇಮಕಾತಿ ಹಗರಣ : ಜ್ಞಾನೇಂದ್ರ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಸಿಎಂ ಅನುಮತಿ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಅಮಾನತುಗೊಂಡಿರುವ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ (ಅ.24) ಅನುಮತಿ ನೀಡಿದ್ದಾರೆ. ಈ...