Homeಮುಖಪುಟಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

- Advertisement -
- Advertisement -

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ ‘ಪಬ್ಲಿಕ್ ಟಿವಿ’ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌ ದೂರು ದಾಖಲಾಗಿದೆ.

ಮೈಸೂರು ನಿವಾಸಿಗಳಾದ ಕೆ.ಟಿ. ರಮೇಶ್ ಮತ್ತು ಮನೋಜ್ ಕುಮಾರ್ ಅವರು ಮೈಸೂರು ನಗರ ಪೊಲೀಸ್‌ ಆಯುಕ್ತರಿಗೆ ಈ ಕುರಿತು ಅಧಿಕೃತ ದೂರು ನೀಡಿದ್ದು, ಮಾಧ್ಯಮದ ಹೆಸರಿನಲ್ಲಿ ಬಹಿರಂಗವಾಗಿ ಜಾತಿವಾದಿ ಪೂರ್ವಾಗ್ರಹ ಬಿತ್ತಿರುವ ನಿರೂಪಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಜುಲೈ 25ರಂದು ಪ್ರಸಾರವಾದ ಪಬ್ಲಿಕ್ ಟಿವಿಯ ‘ಬಿಗ್ ಬುಲೆಟಿನ್’ ಕಾರ್ಯಕ್ರಮದಲ್ಲಿ ದೆಹಲಿಯ ವಿದ್ಯಾರ್ಥಿ ಯುವಜನರ ಪ್ರತಿಭಟನೆ ಕುರಿತು ಮಾತನಾಡುತ್ತಾ, ನಿರೂಪಕ ಅರುಣ್ ಬಡಿಗೇರ್ ಅವರು ಪರಿಶಿಷ್ಟ ಜಾತಿ (SC), ಪರಿಶಿಷ್ಟ ಪಂಗಡ (ST) ಹಾಗೂ ಇತರ ಹಿಂದುಳಿದ ವರ್ಗಗಳಿಗೆ (OBC) ನೀಡಿರುವ ಸಂವಿಧಾನಬದ್ಧ ಮೀಸಲಾತಿ ವ್ಯವಸ್ಥೆ ಬಗ್ಗೆ ಅತ್ಯಂತ ತುಚ್ಛವಾಗಿ ಮಾತನಾಡಿದ್ದರು.

ಈ ವೀಡಿಯೊ ‘ಪಬ್ಲಿಕ್ ಟಿವಿ’ ಯೂಟ್ಯೂಬ್‌ ಚಾನೆಲ್‌ನಲ್ಲಿ ಅಪ್‌ಲೋಡ್ ಆಗಿದ್ದು, ವೀಡಿಯೊದ 00:05:36 ರಿಂದ 00:06:23ರ ಅವಧಿಯಲ್ಲಿ ಅರುಣ್ ಬಡಿಗೇರ್ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಬಹಿರಂಗಪಡಿಸಿದ್ದರು.

ನಿರೂಪಕನ ಹೇಳಿಕೆ:

ಮೀಸಲಾತಿಯಲ್ಲಿ ಶಿಕ್ಷಣ ಪಡೆದುಕೊಂಡು 50-60% ಅಂಕ ಪಡೆದವರೆಲ್ಲ, ಮೀಸಲಾತಿ ಅಡಿಯಲ್ಲಿ ಶಿಕ್ಷಕರಾಗಿ ಪಾಠ ಮಾಡೋಕೆ ಹೋದ್ರೆ, ವಿದ್ಯಾರ್ಥಿಗಳು ಏನು ಕಲಿತಾವೆ? ನಾಳೆ ಶಿಕ್ಷಣದಲ್ಲಿ ಅದೇ ವಿಚಾರದಲ್ಲಿ ಅವನು 50-60% ಮಾಡಿದವರನ್ನೆಲ್ಲ ಮೇಲ್ಗಡೆಗೆ ಹೋಗಿ ಮೀಸಲಾತಿ ಅಡಿಯಲ್ಲಿ ಬೇರೆ ಬೇರೆ ಪ್ರಮೋಷನ್ ತಗೊಳ್ತಾ ಹೋದ್ರೆ, ಕೆಲಸಗಳು ಹೇಗೆ ಆಗುತ್ತವೆ? ಡಾಕ್ಟರೇ ಹೇಗೆ ಆಗ್ತಾನೆ ಅವನು? ಇಂಜಿನಿಯರ್ ಹೇಗೆ ಆಗ್ತಾನೆ? ಎಲ್ಲ ಕಡೆಯೂ ಮೀಸಲಾತಿ ಅಂತಿದ್ರೆ, ಮೀಸಲಾತಿ ವಿಚಾರದಲ್ಲಿ ಕ್ವಾಲಿಟಿ ಅನ್ನೋದೇ ಇಲ್ಲ. ಮೌಲ್ಯಗಳೇ ಇಲ್ಲದೆ ಇರುವಂತವರು ಪಾಠ ಮಾಡುವ ಪರಿಸ್ಥಿತಿಗೆ ಬರ್ತಾ ಇದೆ. ಎಂದು ನಿರೂಪಕ ಅರುಣ್ ಬಡಿಗೇರ್ ಪ್ರಚೋದನಕಾರಿ ಹಾಗೂ ಪೂರ್ವಾಗ್ರಹ ಪೀಡಿತ ಹೇಳಿಕೆಯನ್ನು ದೂರುದಾರರು ತೀವ್ರವಾಗಿ ಖಂಡಿಸಿದ್ದಾರೆ.

“ಅರುಣ್ ಬಡಿಗೇರ್ ಅವರ ಈ ಹೇಳಿಕೆಗಳು ಶತಶತಮಾನಗಳ ಶೋಷಣೆಯ ನಂತರ ಸಂವಿಧಾನಬದ್ಧ ಮೀಸಲಾತಿ ಪಡೆದು ಶಿಕ್ಷಣ ಮತ್ತು ಉದ್ಯೋಗದಲ್ಲಿ ಅವಕಾಶ ಪಡೆದಿರುವ ಶೂದ್ರ-ಅತಿಶೂದ್ರ ಸಮುದಾಯಗಳ ಅರ್ಹತೆ ಮತ್ತು ಸಾಮರ್ಥ್ಯವನ್ನು ಸಾರ್ವಜನಿಕವಾಗಿ ಪ್ರಶ್ನಿಸುವಂತಿವೆ. ಮೀಸಲಾತಿ ಪಡೆಯುವ ಬಹುಜನ ಸಮುದಾಯಗಳಿಗೆ ಶಿಕ್ಷಣ ಮತ್ತು ಉದ್ಯೋಗ ಪಡೆಯುವ ಯೋಗ್ಯತೆಯೇ ಇಲ್ಲ ಎನ್ನುವಂತೆ ಮಾತನಾಡಿರುವುದು ಮಾಧ್ಯಮ ಧರ್ಮಕ್ಕೆ ಎಸಗಿದ ದ್ರೋಹ. ಇದು ಸಮಾಜದಲ್ಲಿ ದ್ವೇಷ ಮತ್ತು ಜಾತಿವಾದಿ ಪೂರ್ವಾಗ್ರಹವನ್ನು ಹುಟ್ಟುಹಾಕುವ ಆಪಾಯಕಾರಿ ಯತ್ನವಾಗಿದೆ ಎಂದು ದೂರುದಾರರಾದ ಕೆ.ಟಿ. ರಮೇಶ್ ಮತ್ತು ಮನೋಜ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂವಿಧಾನದ ಮೂಲ ಆಶಯಕ್ಕೆ ಧಕ್ಕೆ ತಂದಿರುವ ಮತ್ತು ಬಹುಜನ ಸಮುದಾಯಗಳನ್ನು ನಿಂದಿಸಿರುವ ಅರುಣ್ ಬಡಿಗೇರ್ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮೈಸೂರು ನಗರ ಪೊಲೀಸ್ ಆಯುಕ್ತರನ್ನು ಅವರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...