HomeಮುಖಪುಟUPSC-2019 ರ ಪರೀಕ್ಷಾ ಫಲಿತಾಂಶ ಪ್ರಕಟ; ಪ್ರದೀಪ್ ಸಿಂಗ್‌ಗೆ ಮೊದಲ ಸ್ಥಾನ

UPSC-2019 ರ ಪರೀಕ್ಷಾ ಫಲಿತಾಂಶ ಪ್ರಕಟ; ಪ್ರದೀಪ್ ಸಿಂಗ್‌ಗೆ ಮೊದಲ ಸ್ಥಾನ

ಇದರಲ್ಲಿ ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಿ ಸೇವೆ (ಐಎಫ್‌ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಗೆ ಒಟ್ಟು 829 ಅಭ್ಯರ್ಥಿಗಳನ್ನು ಶಿಫಾರಸು ಮಾಡಲಾಗಿದೆ ಎಂದು ಅದು ತಿಳಿಸಿದೆ.

- Advertisement -
- Advertisement -

ಕೇಂದ್ರ ಲೋಕ ಸೇವಾ ಆಯೋಗ (UPSC) ಮಂಗಳವಾರ 2019 ರ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶ ಪ್ರಕಟಿಸಿದ್ದು, ಅದರಲ್ಲಿ ಪ್ರದೀಪ್ ಸಿಂಗ್ ಪ್ರಥಮ ಸ್ಥಾನ ಪಡೆದಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಪ್ರದೀಪ್ ಸಿಂಗ್ ಮೂಲತಹ ಹರಿಯಾಣದವರಾಗಿದ್ದು, ಸಾಮಾನ್ಯ ರೈತ ಕುಟುಂಬದಿಂದ ಬಂದವರಾಗಿದ್ದಾರೆ. ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸುವ ಮೂಲಕ ಐ ಆರ್ ಎಸ್ ಹುದ್ದೆಯನ್ನ ಆಯ್ಕೆ ಮಾಡಿಕೊಂಡಿದ್ದಾರೆ.
ನಾಲ್ಕನೇ ಬಾರಿ ಪರೀಕ್ಷೆ ಬರೆದು ಉತ್ತಮ ಅಂಕಗಳಿಸಿದ್ದಾರೆ.

ಇದರಲ್ಲಿ ಭಾರತೀಯ ಆಡಳಿತ ಸೇವೆ (ಐಎಎಸ್), ಭಾರತೀಯ ವಿದೇಶಿ ಸೇವೆ (ಐಎಫ್‌ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಗೆ ಒಟ್ಟು 829 ಅಭ್ಯರ್ಥಿಗಳನ್ನು ಶಿಫಾರಸು ಮಾಡಲಾಗಿದೆ ಎಂದು ಅದು ತಿಳಿಸಿದೆ.

ಜತಿನ್ ಕಿಶೋರ್ ಮತ್ತು ಪ್ರತಿಭಾ ವರ್ಮಾ (ಉತ್ತರಪ್ರದೇಶ) ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನಗಳನ್ನು ಪಡೆದಿದ್ದಾರೆ ಎಂದು ಆಯೋಗ ಹೇಳಿದೆ.

ದೇಶದ ಪ್ರಮುಖ ನಾಗರಿಕ ಸೇವೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ನಾಗರಿಕ ಸೇವೆಗಳ ಪರೀಕ್ಷೆಯನ್ನು ವಾರ್ಷಿಕವಾಗಿ ಪ್ರಾಥಮಿಕ, ಮುಖ್ಯ ಮತ್ತು ಸಂದರ್ಶನ ಎಂದು ಮೂರು ಹಂತಗಳಲ್ಲಿ ನಡೆಸಲಾಗುತ್ತದೆ.

ಒಟ್ಟು ಅರ್ಹ ಅಭ್ಯರ್ಥಿಗಳಲ್ಲಿ 304 ಮಂದಿ ಸಾಮಾನ್ಯ ವರ್ಗದವರು, 78 ಮಂದಿ ಆರ್ಥಿಕ ದುರ್ಬಲ ವರ್ಗದಿಂದ (ಇಡಬ್ಲ್ಯೂಎಸ್), ಇತರ ಹಿಂದುಳಿದ ವರ್ಗಗಳಿಂದ (ಒಬಿಸಿ) 251, ಪರಿಶಿಷ್ಟ ಜಾತಿ (ಎಸ್‌ಸಿ) ಯಿಂದ 129 ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ)ದಿಂದ 67 ಮಂದಿ ಸೇರಿದ್ದಾರೆ.

ಒಟ್ಟು 182 ಅಭ್ಯರ್ಥಿಗಳನ್ನು ಮೀಸಲು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಅದು ಹೇಳಿದೆ. 11 ಅಭ್ಯರ್ಥಿಗಳ ಫಲಿತಾಂಶವನ್ನು ತಡೆಹಿಡಿಯಲಾಗಿದೆ ಎಂದು ಯುಪಿಎಸ್ಸಿ ಹೇಳಿದೆ.

ಅಭ್ಯರ್ಥಿಗಳು ತಮ್ಮ ಪರೀಕ್ಷೆಗಳು / ನೇಮಕಾತಿಗಳ ಬಗ್ಗೆ ಯಾವುದೇ ಮಾಹಿತಿ / ಸ್ಪಷ್ಟೀಕರಣವನ್ನು ಕಛೇರಿಯ ಕೆಲಸದ ದಿನಗಳಲ್ಲಿ ಬೆಳಿಗ್ಗೆ 10:00 ಗಂಟೆಯಿಂದ ಸಂಜೆ 05:00 ಗಂಟೆಯ ನಡುವೆ ವೈಯಕ್ತಿಕವಾಗಿ ಅಥವಾ ದೂರವಾಣಿಯ ಮೂಲಕ ಪಡೆಯಬಹುದು ಎಂದು ಎಂದು ಆಯೋಗ ತಿಳಿಸಿದೆ. ದೂ.ಸಂ-011- 23385271/23381125/23098543

ಫಲಿತಾಂಶಗಳು ಯುಪಿಎಸ್ಸಿಯ ವೆಬ್‌ಸೈಟ್‌ನಲ್ಲಿ ಸಹ ಲಭ್ಯವಿರುತ್ತವೆ. http//www.upsc.gov.in.

ಫಲಿತಾಂಶ ಘೋಷಣೆಯ ದಿನಾಂಕದಿಂದ 15 ದಿನಗಳವರೆಗೆ ಅಂಕಗಳು ವೆಬ್‌ಸೈಟ್‌ನಲ್ಲಿ ಲಭ್ಯವಿರುತ್ತವೆ ಎಂದು ಅದು ಹೇಳಿದೆ.


ಇದನ್ನೂ ಓದಿ: ಅಯೋಧ್ಯೆ ಶಂಕುಸ್ಥಾಪನೆ ಸಮಾರಂಭದಲ್ಲಿ ದಲಿತರ ಕಡೆಗಣನೆ: ಅಪ್ನಾ ದಳದ ಶಾಸಕ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...