Homeಕರ್ನಾಟಕಪಿಯುಸಿ ಇಂಗ್ಲಿಷ್ ಪರೀಕ್ಷಾ ಕೇಂದ್ರ ಹಾಗೂ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ

ಪಿಯುಸಿ ಇಂಗ್ಲಿಷ್ ಪರೀಕ್ಷಾ ಕೇಂದ್ರ ಹಾಗೂ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟ

- Advertisement -
- Advertisement -

 

ಕೊರೊನಾ ಕಾರಣಕ್ಕೆ ಬಾಕಿಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂನ್ 18 ರಂದು ನಡೆಯಲಿದ್ದು, ಈ ಸಂಬಂಧ ವಿದ್ಯಾರ್ಥಿಗಳು ಮತ್ತು ಅವರ ಪರೀಕ್ಷಾ ಕೇಂದ್ರದ ವಿವರವುಳ್ಳ ತಾತ್ಕಾಲಿಕ ಪಟ್ಟಿ  ಬಿಡುಗಡೆಯಾಗಿದೆ.

ವಿದ್ಯಾರ್ಥಿಗಳು ತಾವಿರುವ ಜಿಲ್ಲೆಯಲ್ಲೆ ಪರೀಕ್ಷೆ ಬರೆಯಲು ಅವಕಾಶ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿ ಬಿಡುಗಡೆ ಮಾಡಿದ್ದು, ತಿದ್ದುಪಡಿಗೆ ಜೂನ್ 5 ರ ವರೆಗೆ ಕಾಲೇಜುಗಳ ಪ್ರಿನ್ಸಿಪಾಲರ ಮೂಲಕ ಅವಕಾಶ ಕಲ್ಪಿಸಿದೆ.

ಅಂತಿಮ ಪಟ್ಟಿಯನ್ನು ಜೂನ್ 7 ರಂದು ಪ್ರಕಟಿಸಲಾಗುತ್ತದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ www.pue.kar.nic.in ವೆಬ್‌ಸೈಟ್‌‌ನಲ್ಲಿ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಂಡು ನೇರವಾಗಿ  ಪರೀಕ್ಷಾ ಕೇಂದ್ರಕ್ಕೆ ಹೋಗಬಹುದಾಗಿದೆ ಎಂದು ಪಿಯು ಪರೀಕ್ಷಾ ಮಂಡಳಿ ತನ್ನ ಪ್ರಕಟಣೆ ತಿಳಿಸಿದೆ.

ಜುಲೈ 1ರಿಂದ ಶಾಲೆಗಳ ಆರಂಭ ಎಂಬುವುದು ನಿರ್ಧರಿತವಾಗಿಲ್ಲ: ಸುರೇಶ್ ಕುಮಾರ್‌

ಶಿಕ್ಷಣ ಸಚಿವ ಸುರೇಶ್ ಕುಮಾರ್‌ ಶಾಲೆಗಳ ಆರಂಭಕ್ಕೆ ಮುನ್ನ ಪಾಲಕರ ಅಭಿಪ್ರಾಯ ಕ್ರೋಢೀಕರಣಕ್ಕೆ ನಿರ್ಧರಿಸಲಾಗಿದ್ದು, ಅದಕ್ಕಾಗಿ ಜೂನ್ 11ರಿಂದ 13ರವರೆಗೆ ಪಾಲಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಸಭೆ ಕರೆದು ಅಭಿಪ್ರಾಯ ಸಂಗ್ರಹಿಸಲಾಗುವುದು. ನಂತರ ಅದನ್ನು ಕ್ರೋಢೀಕರಿಸಿ ಜೂನ್ 15ಕ್ಕೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದಿದ್ದಾರೆ.

ಕೇಂದ್ರ ಸರ್ಕಾರ ಅದನ್ನು ಆಧರಿಸಿ ನೀಡುವ ನಿರ್ದೇಶನದ ಅನ್ವಯ ಶಾಲೆಗಳನ್ನು ಆರಂಭಿಸುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಎಸ್ಎಸ್‌ಎಲ್‌ಸಿ ಪರೀಕ್ಷೆಯ ವೇಳೆ ಮಕ್ಕಳ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳನ್ನೆ ಶಾಲೆ ಪುನರಾರಂಭವಾದಾಗಲೂ ಮುಂದುವರೆಸಲಾಗುವುದು ಎಂದರು.

ಈ ಬಾರಿ ಶಾಲೆಗಳು ವಿಳಂಬವಾಗಿ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಿಗುವ ಶೈಕ್ಷಣಿಕ ದಿನಗಳಿಗೆ ಅನುಗುಣವಾಗಿ ಪಠ್ಯಕ್ರಮ ಕಡಿತಗೊಳಿಸಲು ಚಿಂತಿಸಲಾಗಿದೆ. ಆ ಬಗ್ಗೆ ರಾಜ್ಯ ಶಿಕ್ಷಣ ಸಂಶೋಧನೆ ಹಾಗೂ ತರಬೇತಿ ನಿರ್ದೇಶನಾಲಯದೊಂದಿಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.


ಓದಿ: ಕುಡಿಯುವ ನೀರನ್ನು ಮಕ್ಕಳೇ ತಂದರೆ ಒಳ್ಳೆಯದು: ಹೀಗೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದೇಕೆ?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...