ಜೂನ್‌ 18ಕ್ಕೆ PUC, ಜೂನ್ 25 ರಿಂದ SSLC ಪರೀಕ್ಷೆ ಆರಂಭ: ಸುರೇಶ್‌ ಕುಮಾರ್‌

0
SSLC EXAM,ಸೋಮವಾರ ,ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳಾಪಟ್ಟಿ, ಪ್ರಕಟ,ಸಚಿವ ಸುರೇಶ್‌ ಕುಮಾರ್

ಪ್ರಸಕ್ತ ಸಾಲಿನಲ್ಲಿ ಜೂನ್ 25 ರಿಂದ ಜುಲೈ 4ರವರೆಗೆ ಎಸ್ಎಸ್ಎಲ್.ಸಿ. ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಜೂನ್ 18ರಂದು ನಡೆಯಲಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಪರೀಕ್ಷೆ ಬರೆಯುವಾಗ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸರ್ಕಾರವೇ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಿಸಲಿದೆ, ಶಾರೀರಿಕ ಅಂತರವನ್ನು ಕಾಯ್ದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.

ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವ ಮುನ್ನ ಥರ್ಮಲ್ ತಪಾಸಣೆ ಮಾಡಿ ಸ್ಯಾನಿಟೈಜರ್ ಹಾಕಿ ಪರೀಕ್ಷಾ ಕೇಂದ್ರಗಳಿಗೆ ಬಿಡಲಾಗುವುದು. ರಾಜ್ಯದಲ್ಲಿ 2,879 ಪರೀಕ್ಷಾ ಕೇಂದ್ರಗಳಿದ್ದು 43,720 ಕೊಠಡಿಗಳನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

ಮೊರಾರ್ಜಿ ದೇಸಾಯಿ ಶಾಲೆಗಳು, ಸಮಾಜ ಕಲ್ಯಾಣ ಇಲಾಖೆ ನಡೆಸುವ ಹಾಸ್ಟೆಲ್‌ಗಳು ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿ ನಿಲಯಗಳನ್ನು ಕ್ವಾರಂಟೈನ್ ಕೇಂದ್ರಗಳಿಗೆ ಬಳಸಿಕೊಂಡಿಲ್ಲ. ಹಾಗಾಗಿ ಅವುಗಳನ್ನು ಎಸ್ಎಸ್ಎಲ್.ಸಿ ಪರೀಕ್ಷೆ ಕೇಂದ್ರಗಳಾಗಿ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 8,48,196 ವಿದ್ಯಾರ್ಥಿಗಳು ಈ ಬಾರಿಯ ಪರೀಕ್ಷೆಗೆ ತೆಗೆದುಕೊಳ್ಳಲಿದ್ದಾರೆ. ಇದರಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳು ಸೇರಿದ್ದಾರೆ. ವಿದ್ಯಾರ್ಥಿಗಳು ತಾವು ವಾಸವಿರುವ ಸ್ಥಳಕ್ಕೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದಿದ್ದಾರೆ.

ಒಟ್ಟು ಹತ್ತು ದಿನದ ಅವಧಿಯಲ್ಲಿ ಇಂಗ್ಲೀಷ್, ಗಣಿತ, ವಿಜ್ಞಾನ, ಸಮಾಜ ವಿಜ್ಞಾನದ ವಿಷಯಗಳಿಗೆ ಒಂದೊಂದು ದಿನದ ಅಂತರವಿರಲಿದೆ. ವಿದ್ಯಾರ್ಥಿಗಳಿಗೆ ಚಂದನ ವಾಹಿನಿಯಲ್ಲಿ ಪುನರ್ ಮನನ ತರಗತಿಗಳನ್ನು ನಡೆಸಲಾಗಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದು ತಿಳಿಸಿದರು.


ಇದನ್ನೂ ಓದಿ: ಕರ್ನಾಟಕದಲ್ಲಿ ಬಹುತೇಕ ಲಾಕ್‌ಡೌನ್‌ ಸಡಿಲಿಕೆ: ಬಸ್, ರೈಲು‌ ಸಂಚಾರಕ್ಕೆ ಅವಕಾಶ 

Donate

ಜನಪರ ಪತ್ರಿಕೋದ್ಯಮದ ಉಳಿವು ಮತ್ತು ಬೆಳವಣಿಗೆಗಾಗಿ ನಿಮ್ಮ ನಿರಂತರ ಆರ್ಥಿಕ ನೆರವು ಅಗತ್ಯ. ನಿಮ್ಮಿಂದ ಸಾಧ್ಯವಿರುವಷ್ಟು ಹೆಚ್ಚಿನ ವಂತಿಗೆಯನ್ನು ನೀಡಲು ಕೆಳಗಿನ ಲಿಂಕುಗಳನ್ನು ಕ್ಲಿಕ್ಕಿಸಿ.
ಒಂದು ವೇಳೆ ಈ ಲಿಂಕಿನ ಮೂಲಕ ಹಣ ಪಾವತಿ ಮಾಡುವುದಕ್ಕೆ ಅಡಚಣೆ ಇದ್ದರೆ, ಈ ಪುಟದ ಮೇಲೆ ಅಥವಾ ಕೆಳಗೆ ಇರುವ ವಂತಿಗೆ – Donate ಬಟನ್.ಅನ್ನು ಕ್ಲಿಕ್ಕಿಸಿ.
ಧನ್ಯವಾದಗಳು
Independent journalism can’t be independent without your support, contribute by clicking below.

LEAVE A REPLY

Please enter your comment!
Please enter your name here