2021 ರ ಆಗಸ್ಟ್-ಸೆಪ್ಟೆಂಬರ್ ತಿಂಗಳಲ್ಲಿ ನಡೆದ ರಾಜ್ಯದ ದ್ವಿತೀಯ ಪಿಯುಸಿ(2nd puc result 2021) ಪರೀಕ್ಷೆಗಳ ಫಲಿತಾಂಶಗಳು ಸೋಮವಾರ ಪ್ರಕಟಿಸಲಾಗಿದೆ. ಈ ಹಿಂದೆ ಯಾವುದೆ ಪರೀಕ್ಷಯಿಲ್ಲದೆ ಪರ್ಯಾಯ ಮೌಲ್ಯಮಾಪನ ವಿಧಾನಗಳ ಮೂಲಕ ದ್ವಿತೀಯ ಪಿಯುಸಿಯ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ಆದರೆ ಅಂದು ಪಡೆದ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಸೇರಿದಂತೆ ಖಾಸಗಿ ಹಾಗೂ ಪುನಾರಾವರ್ತಿತ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಲಾಗಿತ್ತು.
ಅದರಂತೆ ಈ ಪರೀಕ್ಷೆಗಳು ಆಗಸ್ಟ್ 19 ಮತ್ತು ಸೆಪ್ಟೆಂಬರ್ 3 ರ ನಡುವೆ ನಡೆದಿದ್ದವು. ಈ ಪರೀಕ್ಷೆಗಳನ್ನು ಬರೆದಿದ್ದ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಇಂದು ಪ್ರಕಟಿಸಿದ್ದಾರೆ. ಪರೀಕ್ಷೆಗೆ ಹಾಜರಾಗಿರುವವ ಪೈಕಿ 29.91% ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 18,413 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದು, ಈ ಪೈಕಿ 5,507 ಮಂದಿ ಪಾಸಾಗಿದ್ದಾರೆ. ಪಾಸಾದವರ ಪೈಕಿ, 580 ಮಂದಿ ಉನ್ನತ ಶ್ರೇಣಿ ಪಡೆದರೆ, 1,939 ಮಂದಿ ಪ್ರಥಮ ಶ್ರೇಣಿ, 1,578 ಮಂದಿ ದ್ವಿತೀಯ ಶ್ರೇಣಿ ಪಡೆದಿದ್ದಾರೆ.
592 ಹೊಸ ಅಭ್ಯರ್ಥಿಗಳು ಪರಿಕ್ಷೆಗೆ ಹಾಜರಾಗಿದ್ದು, ಈ ಪೈಕಿ 556 ಪಾಸಾಗಿದ್ದಾರೆ. ಪುನರಾವರ್ತಿತವಾಗಿ ಪರೀಕ್ಷೆ ಬರೆದಿದ್ದ 351 ಜನರಲ್ಲಿ 183 ಅಭ್ಯರ್ಥಿಗಳು ಮತ್ತು ಖಾಸಗಿಯಾಗಿ ಪರೀಕ್ಷೆ ಬರೆದಿದ್ದ 17,470 ವಿದ್ಯಾರ್ಥಿಗಳಲ್ಲಿ 4,768 ಮಂದಿ ಪಾಸಾಗಿದ್ದಾರೆ.
- ಕಲಾ ವಿಭಾಗದಲ್ಲಿ 12,203 ಜನರು ಪರೀಕ್ಷೆ ಬರೆದಿದ್ದರು, ಅದರಲ್ಲಿ 3,912 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
- ವಾಣಿಜ್ಯ ವಿಭಾಗ 6,114 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು ಅದರಲ್ಲಿ 1,527 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
- ವಿಜ್ಞಾನ ವಿಭಾದಲ್ಲಿ 96 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 68 ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಫಲಿತಾಂಶ ನೋಡುವುದು ಹೇಗೆ?
- ಮೊದಲಿಗೆ ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್ ಅನ್ನು ತಯಾರಾಗಿಟ್ಟುಕೊಳ್ಳಿ.
- ನಂತರ ಇಲ್ಲಿ ಕ್ಲಿಕ್ ಮಾಡಿ.
- ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್ ತುಂಬಿಸಬೇಕು.
- ನಂತರ ಅಲ್ಲಿರುವ ‘ಸಬ್‌ಮಿಟ್’ ಬಟನ್‌ಗೆ ಕ್ಲಿಕ್ ಮಾಡಬೇಕು.
- ಸಬ್‌ಮಿಟ್ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು


