- Advertisement -
- Advertisement -
SSLC ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ ದ್ವೀತಿಯ PUC ಫಲಿತಾಂಶ ಪ್ರಕಟಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, “ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ. ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ” ಎಂದು ಹೇಳಿದ್ದಾರೆ.
✅ ದ್ವಿತೀಯ ಪಿಯು ಪರೀಕ್ಷೆ ಸುಸೂತ್ರವಾಗಿ ಮುಗಿದಿದೆ.
✅ ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗುತ್ತದೆ.
✅ ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ.#PUCKarnataka
— B.C Nagesh (@BCNagesh_bjp) May 20, 2022
ಮೇ 18 ರಂದು ದ್ವೀತಿಯ PUC ಪರೀಕ್ಷೆಗಳು ಮಗಿದಿವೆ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಈಗಾಗಲೇ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ಸಿದ್ದತೆ ನಡೆಸುತ್ತಿದ್ದಾರೆ. ಜೂನ್ 16 ರಂದು ಸಿಇಟಿ ಪರೀಕ್ಷೆ ನಡೆಯುವ ಸಂಭವವಿದೆ. ಅದೇ ವಾರದಲ್ಲಿ ದ್ವೀತಿಯ PUC ಫಲಿತಾಂಶ ಸಹ ಹೊರಬೀಳುವ ಸಂಭವವಿದೆ.



Prakash