Homeಕರ್ನಾಟಕPUC Result: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ-ಸಚಿವ ನಾಗೇಶ್‌ ಘೋಷಣೆ

PUC Result: ನಾಳೆ ದ್ವಿತೀಯ ಪಿಯುಸಿ ಫಲಿತಾಂಶ-ಸಚಿವ ನಾಗೇಶ್‌ ಘೋಷಣೆ

- Advertisement -
- Advertisement -

ದ್ವಿತೀಯ ಪಿಯುಸಿಯ ಪರೀಕ್ಷೆಯ ಫಲಿತಾಂಶಗಳನ್ನು ಶನಿವಾರ (ಜೂನ್ 18) ರಂದು ಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಫಲಿತಾಂಶವನ್ನು ಜೂನ್ 18 ರಂದು ಬೆಳಿಗ್ಗೆ 11 ಗಂಟೆಗೆ ಬಿಡುಗಡೆ ಮಾಡಲು ನಿಗದಿಪಡಿಸಲಾಗಿದ್ದು, ಪರೀಕ್ಷೆಗಳಿಗೆ ಹಾಜರಾದ ಎಲ್ಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್ karresults.nic.in ನಲ್ಲಿ ಪರಿಶೀಲಿಸಬಹುದು.

ಈ ಬಗ್ಗೆ ಅಧಿಕೃತವಾಗಿ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ನಾಗೇಶ್, “ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು” ಎಂದಿದ್ದಾರೆ.

ಇದನ್ನೂ ಓದಿ: ಪಿಯುಸಿ ಪಠ್ಯ ಪರಿಷ್ಕರಣೆಯ ‘ಚಕ್ರತೀರ್ಥ ವರದಿ’ ಪಡೆಯಲ್ಲ ಎಂದ ಸಚಿವ ಬಿಸಿ ನಾಗೇಶ್‌; ಜನಾಕ್ರೋಶಕ್ಕೆ ಮಣಿದ ಸರ್ಕಾರ

ರಾಜ್ಯದಲ್ಲಿ ಕಳೆದ ಏಪ್ರಿಲ್‌ 22 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು.

2021-22ನೇ ಸಾಲಿನಲ್ಲಿ, ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 6,00,519 ರೆಗ್ಯುಲರ್ ವಿದ್ಯಾರ್ಥಿಗಳಿದ್ದರೆ, 61,808 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. ಒಟ್ಟು 1076 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿ ಪರೀಕ್ಷೆ ನಡೆದಿತ್ತು.


ಇದನ್ನೂ ಓದಿ: ಅಗ್ನಿಪಥ್ ವಿರುದ್ಧ ಸಿಡಿದೆದ್ದ ಯುವಜನತೆ: ಒಂದು ಸಾವು, 8 ಜನರಿಗೆ ಗಾಯ – ವಯಸ್ಸಿನ ಮಿತಿ ಹೆಚ್ಚಳಕ್ಕೆ ಮುಂದಾದ ಕೇಂದ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...