Homeಮುಖಪುಟ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’: NHRC ಅಧ್ಯಕ್ಷರಾಗಿ ಅರುಣ್ ಮಿಶ್ರಾ ಆಯ್ಕೆಗೆ PUCL ಖಂಡನೆ

ಅರುಣ್‌ ಮಿಶ್ರಾರವರು ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು - PUCL

- Advertisement -
- Advertisement -

ಪ್ರಧಾನ ಮಂತ್ರಿ ನೇತೃತ್ವದ ಆಯ್ಕೆ ಸಮಿತಿಯಿಂದ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್‌ಎಚ್‌ಆರ್‌ಸಿ) ಮುಂದಿನ ಅಧ್ಯಕ್ಷರಾಗಿ ಸುಪ್ರೀಂಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡಿರುವುದನ್ನು ಪಿಯುಸಿಎಲ್ ಸೇರಿದಂತೆ ವಿವಿಧ ಮಾನವ ಹಕ್ಕುಗಳ ಸಂಘಟನೆಗಳ ಸದಸ್ಯರು ಖಂಡಿಸಿದ್ದಾರೆ.

ನಿನ್ನೆ ಚನ್ನೈನಲ್ಲಿ ಪಿಯುಸಿಎಲ್ ವತಿಯಿಂದ ಪತ್ರಿಕಾಗೋಷ್ಠಿ ನಡೆಸಿ ‘ಪ್ರಜಾಪ್ರಭುತ್ವ ಸಂಸ್ಥೆಗಳನ್ನು ನಾಶ ಮಾಡುವ ನಡೆ’ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯಸಭೆಯಲ್ಲಿ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ್ ಖರ್ಗೆ ಅವರು ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಅಥವಾ ಇತರ ಅಂಚಿನಲ್ಲಿರುವ ಸಮುದಾಯಗಳ ಪ್ರತಿನಿಧಿಗಳನ್ನು ಅಧ್ಯಕ್ಷ ಅಥವಾ ಸದಸ್ಯರಾಗಿ ನೇಮಿಸಬೇಕೆಂದು ಆಗ್ರಹಿಸಿದ್ದರು. ಪ್ರಭುತ್ವದ ದಬ್ಬಾಳಿಕೆಗೆ ಬಲಿಯಾದವರಲ್ಲಿ ಹೆಚ್ಚಿನವರು ಈ ಸಮುದಾಯಗಳಿಂದ ಬಂದವರು ಎಂದು ಪರಿಗಣಿಸಿ ಅಧ್ಯಕ್ಷ ಮತ್ತು ಸದಸಸ್ಯರ ನೇಮಕ ಆಗಬೇಕು ಎಂದು ಸಲಹೆಯನ್ನು ನೀಡಿದ್ದರೂ, ಅದನ್ನು ನಿರ್ಲಕ್ಷಿಸಲಾಗಿದೆ. ಇದಕ್ಕೆ ಯಾವುದೇ ಕಾರಣವನ್ನೂ ನೀಡಿಲ್ಲ ಎಂದು ಮಾನವ ಹಕ್ಕು ಸಂಘಟನೆಗಳು ಆರೋಪಿಸಿವೆ.

‘ಮೋದಿ ನೇತೃತ್ವದ ಸರ್ಕಾರವು ಮಾಡಿದ ಈ ನಿರ್ಧಾರವು ಲಜ್ಜೆಗೆಟ್ಟ ದುರಹಂಕಾರ ಮತ್ತು ಸಾರ್ವಜನಿಕ ಅಭಿಪ್ರಾಯದ ಬಗ್ಗೆ ಅಸಡ್ಡೆ ತೋರಿಸುತ್ತದೆ. ಪ್ರಜಾಪ್ರಭುತ್ವದ ಬೇರುಗಳು ಮತ್ತು ಸಾಂವಿಧಾನಿಕ ಸ್ವಾಮ್ಯಗಳಿಗೆ ಸರ್ಕಾರದ ಸಿನಿಕತನದ ತಿರಸ್ಕಾರವನ್ನು ಮತ್ತೊಮ್ಮೆ ತೋರಿಸುತ್ತದೆ. ಸುಪ್ರೀಂಕೋರ್ಟ್‌ನ ಮಾಜಿ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡ ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ನೇಮಕ ಮಾಡುವ ಮೂಲಕ, ಮೋದಿ ಸರ್ಕಾರವು ಮತ್ತೊಮ್ಮೆ ಪಕ್ಷಪಾತವನ್ನು ಪ್ರದರ್ಶಿಸಿದೆ. ಅವರ ಆಯ್ಕೆಗೆ ನಿಯಮಗಳ ಆಧಾರವೂ ಇಲ್ಲ. ಆಯ್ಕೆಯಾದ ವ್ಯಕ್ತಿಯು ಆಡಳಿತ ವಲಯಕ್ಕೆ ಹತ್ತಿರವಾಗಿದ್ದಾರೆ ಎಂಬುದೇ ಈ ಆಯ್ಕೆಗೆ ಕಾರಣವಾಗಿದೆ’ ಎಂದು ಸಂಘಟನೆಗಳು ದೂರಿವೆ.

‘ನಿರ್ಣಾಯಕ ಜೀವನ ಹಕ್ಕು ಮತ್ತು ಸಮಾಜದ ಅಂಚಿನಲ್ಲಿರುವ ಜನರ ಜೀವನೋಪಾಯದ ಸಮಸ್ಯೆಗಳನ್ನು ಒಳಗೊಂಡ ವಿಷಯಗಳಲ್ಲಿ, ನ್ಯಾಯಾಧೀಶರಾಗಿ ಮಿಶ್ರಾ ಅವರ ನಿಲುವುಗಳ ಬಗ್ಗೆ ನಾವು ಗೌರವವನ್ನು ಹೊಂದಿಲ್ಲ. ಅರಣ್ಯ ಹಕ್ಕುಗಳ ಕಾಯ್ದೆಯನ್ನು ಪ್ರಶ್ನಿಸಿ ಹಾಕಿದ್ದ ಪಿಐಎಲ್ ವಿಚಾರಣೆಯಲ್ಲಿ ಅವರು ಲಕ್ಷಾಂತರ ಬಡ ಅರಣ್ಯವಾಸಿಗಳನ್ನು ಹೊರಹಾಕಲು ಆದೇಶಿಸಿ ಟೀಕೆಗೆ ಗುರಿಯಾಗಿದ್ದರು. ಭೂಸ್ವಾಧೀನ ವಿಷಯಗಳಲ್ಲಿ, ಅವರ ಆದೇಶಗಳಲ್ಲಿ ಪ್ರಭುತ್ವಕ್ಕೆ ಒಲವು ತೋರುವ ಪ್ರವೃತ್ತಿಯನ್ನು ನೋಡಬಹುದು. ಸಂಕ್ಷಿಪ್ತವಾಗಿ ಹೇಳುವುದಾದರೆ, ರಾಜಕೀಯವಾಗಿ ಸೂಕ್ಷ್ಮವಾಗಿರುವ ಎಲ್ಲಾ ಪ್ರಕರಣಗಳಲ್ಲಿ ಅವರು ಯಾವಾಗಲೂ ಕೇಂದ್ರ ಸರ್ಕಾರದ ಪರವಾಗಿದ್ದರು ಅಥವಾ ಕೇಂದ್ರ ಸರ್ಕಾರದ ಕೆಲವು ಉನ್ನತ ನಾಯಕರಿಗೆ ಸಹಾಯ ಮಾಡುವ ರೀತಿಯಲ್ಲಿ ವರ್ತಿಸಿದರು. ಜಸ್ಟೀಸ್ ಲೋಯಾ ಕೇಸ್, ಸಹಾರಾ ಬಿರ್ಲಾ ಭ್ರಷ್ಟಾಚಾರ ಪ್ರಕರಣ, ಸಂಜೀವ್ ಭಟ್ ಕೇಸ್, ಹರೇನ್ ಪಾಂಡ್ಯ ಕೇಸ್, ಸಿಬಿಐ ಸಂಸ್ಥೆಯೊಳಗಿನ ಕಲಹ, ಆನಂದ್ ತೆಲ್ತುಂಬ್ದೆ ಮತ್ತು ಗೌತಮ್ ನವಲಖಾ ಅವರಿಗೆ ಜಾಮೀನು ನೀಡುವ ಕುರಿತಾದ ಪ್ರಕರಣಗಳಲ್ಲಿ ಇದು ಸ್ಪಷ್ಟವಾಗಿ ಗೋಚರಿಸಿದೆ’ ಎಂದು ಮಾನವ ಹಕ್ಕುಗಳ ಸಂಘಟನೆಗಳು ಆರೋಪಿಸಿವೆ.

ದಲಿತ, ಆದಿವಾಸಿ, ಅಲ್ಪಸಂಖ್ಯಾತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳ ತಜ್ಞರನ್ನು ಅಧ್ಯಕ್ಷ ಮತ್ತು ಸದಸ್ಯರನ್ನಾಗಿ ನೇಮಿಸಬೇಕು ಎಂದು ಈ ಸಂಘಟನೆಗಳು ಆಗ್ರಹಿಸಿವೆ.
ಈ ಆಗ್ರಹಕ್ಕೆ ವಿವಿಧ ಮಾನವ ಹಕ್ಕು ಸಂಘಟನೆಗಳ 67 ಮುಖ್ಯಸ್ಥರು ಸಹಿ ಮಾಡಿ ಬೆಂಬಲ ಸೂಚಿಸಿದ್ದಾರೆ.


ಇದನ್ನೂ ಓದಿ: ಮಾನವ ಹಕ್ಕು ಆಯೋಗದ ಅಧ್ಯಕ್ಷ, ಸದಸ್ಯರ ನೇಮಕ: ಎಸ್‌ಸಿ/ಎಸ್‌ಟಿಗಳಿಗೆ ಪ್ರಾಧಾನ್ಯವಿಲ್ಲವೇಕೆ ಎಂದ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...