Homeಮುಖಪುಟಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿ ಟ್ವೀಟ್ ಅನ್ನು 'ಲೈಕ್' ಮಾಡಿದ ಪುದುಚೇರಿ ಮುಖ್ಯ ಚುನಾವಣಾಧಿಕಾರಿ!

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿ ಟ್ವೀಟ್ ಅನ್ನು ‘ಲೈಕ್’ ಮಾಡಿದ ಪುದುಚೇರಿ ಮುಖ್ಯ ಚುನಾವಣಾಧಿಕಾರಿ!

- Advertisement -
- Advertisement -

ಪುದುಚೇರಿಯ ಮುಖ್ಯ ಚುನಾವಣಾಧಿಕಾರಿಯು ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯ ಟ್ವೀಟ್ ಅನ್ನು ‘ಲೈಕ್’ ಮಾಡಿರುವ ವಿಷಯಕ್ಕೆ ಸಂಬಂಧಿಸಿದಂತೆ ಪರ-ವಿರೋಧದ ಚರ್ಚೆ ಆರಂಭವಾಗಿದೆ. ಇದು ಮುಂದಿನ ತಿಂಗಳು ಅಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿರುವ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗದ ನಿಷ್ಪಕ್ಷಪಾತ ನಡವಳಿಕೆ ಕುರಿತು ಪ್ರಶ್ನೆಗಳನ್ನು ಎತ್ತಿದೆ.

ಅರ್ನಾಬ್ ಗೋಸ್ವಾಮಿಯ ರಿಪಬ್ಲಿಕ್ ಟಿವಿಯ ಬಂಗಾಳ ಭಾಷೆಯಲ್ಲಿ ಹೊಸ ಚಾನೆಲ್ ಆರಂಭಿಸುತ್ತಿರುವುದಾಗಿ ಟ್ವೀಟ್ ಮಾಡಿದೆ. ಅದನ್ನು ಪುದುಚೇರಿಯ ಮುಖ್ಯ ಚುನಾವಣಾಧಿಕಾರಿಯು ‘ಲೈಕ್’ ಮಾಡಿರುವ ಸ್ಕ್ರೀನ್‌ ಶಾಟ್‌ ಅನ್ನು ಹಂಚಿಕೊಂಡಿರುವ ಸಾಮಾಜಿಕ ಕಾರ್ಯಕರ್ತ ಸಾಕೇತ್ ಗೋಖಲೆ, “ಇದು ನ್ಯಾಯಸಮ್ಮತ, ಪಾರದರ್ಶಕ, ವಸ್ತುನಿಷ್ಟ ಚುನಾವಣಾ ಯಂತ್ರಾಂಗವೇ” ಎಂದು ಪ್ರಶ್ನಿಸಿದ್ದಾರೆ.

ಪುದುಚೇರಿಯಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಸಾಕೇತ್ ಗೋಖಲೆ ದೂರು ಸಲ್ಲಿಸಿದ್ದರು. ಆದರೆ ಅದನ್ನು ದಾಖಲಿಸಿಲು ಪುದುಚೇರಿ ಚುನಾವಣಾ ಆಯೋಗ ನಿರಾಕರಿಸಿತ್ತು. ಈ ಕುರಿತು ಆಕ್ರೋಶಿತಗೊಂಡಿದ್ದ ಗೋಖಲೆ ಇಲ್ಲಿನ ಚುನಾವಣಾ ಆಯೋಗವು ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದೆ. ಹಾಗಾಗಿ ನನ್ನ ದೂರು ದಾಖಲಿಸಿಲ್ಲ ಮತ್ತು ಅರ್ನಾಬ್ ಗೋಸ್ವಾಮಿ ಟ್ವೀಟ್‌ ಅನ್ನು ಸಮರ್ಥಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ನೀತಿ ಸಂಹಿತೆ ಉಲ್ಲಂಘಿಸಿದ ಅಮಿತ್ ಶಾ ವಿರುದ್ಧ ಕ್ರಮವೇಕಿಲ್ಲ: ನೆಟ್ಟಿಗರ ಪ್ರಶ್ನೆ

ಅದು ಅವರ ವಯಕ್ತಿಕ ಖಾತೆಯಲ್ಲ. ಬದಲಿಗೆ ಚುನಾವಣಾ ಆಯೋಗದ ಅಧಿಕೃತ ಅಕೌಂಟ್‌ನಲ್ಲಿ ಬಿಜೆಪಿ ಪರವಿರುವ ಖಾಸಗಿ ಚಾನೆಲ್‌ ಒಂದನ್ನು ಉತ್ತೇಜಿಸಲಾಗುತ್ತಿದೆ. ಕೆಲವೇ ತಿಂಗಳಲ್ಲಿ ಅಲ್ಲಿ ಚುನಾವಣೆ ನಡೆಯುತ್ತಿದೆ. ಇದು ಹಲವು ಪ್ರಶ್ನೆಗಳನ್ನು ಎತ್ತಲಿದ್ದು ಇದರ ಕುರಿತು ಭಾರತೀಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕೆಂದು ಗೋಖಲೆ ಒತ್ತಾಯಿಸಿದ್ದಾರೆ.

ಅಲ್ಲದೆ ಜನವರಿ 26ರಂದು ರೈತರು ಭಾರತೀಯ ಧ್ವಜಕ್ಕೆ ಅಗೌರವ ಸೂಚಿಸಿದ್ದಾರೆ ಎಂದು ಆರೋಪಿಸಿ ರಿಪಬ್ಲಿಕ್ ಟಿವಿ ಮಾಡಿದ್ದ ಟ್ವೀಟ್ ಅನ್ನು ಸಹ ಪುದುಚೇರಿ ಚುನಾವಣಾ ಆಯೋಗ ಲೈಕ್ ಮಾಡಿದೆ. “ಇದು ಅತ್ಯಂತ ಕೊಳಕುತನ. ಈಗ ಸಂಘಪರಿವಾರದ ಮನಸ್ಥಿತಿಯಲ್ಲಿದೆ. ಇಂತಹ ಆಯೋಗದಿಂದ ಪಾರದರ್ಶನ, ನ್ಯಾಯಸಮ್ಮತ, ನಿಷ್ಪಷಪಾತ ಚುನಾವಣೆಯನ್ನು ಬಯಸುವುದು ಹೇಗೆ? ಇದರ ಬಗ್ಗೆ ಭಾರತೀಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಈಗಲೂ ಪಾಂಡಿಸಿಚೇರಿಯ ಮುಖ್ಯ ಚುನಾವಣಾ ಅದಿಕಾರಿಗ ಟ್ವಿಟರ್ ಟೈಮ್‌ಲೈನ್‌ನಲ್ಲಿ ಮೊದಲ ಟ್ವೀಟ್‌ಗೆ ಲೈಕ್ ಒತ್ತಿರುವುದು ಹಾಗೇ ಇದೆ. ಆದರೆ ಎರಡನೇ ಟ್ವೀಟ್‌ಗೆ ಮಾಡಿದ್ದ ಲೈಕ್ ಅನ್ನು ಅನ್‌ಲೈಕ್ ಮಾಡಲಾಗಿದೆ ಎಂದು ಜನತಾಕರಿಪೋರ್ಟರ್ ವರದಿ ಮಾಡಿದೆ. ಗೋಖಲೆಯವರ ಪ್ರಶ್ನೆಗಳಗೆ ಭಾರತೀಯ ಚುನಾವಣಾ ಆಯೋಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಹೇಗಾದರೂ ಅಧಿಕಾರ ಹಿಡಿಯಲು ಸ್ವಾಯುತ್ತ ಸಂಸ್ಥೆಗಳನ್ನ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ದೂರಿದ್ದಾರೆ.


ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ!: ಅದಾನಿಗಾಗಿ ಸಿಎಜಿ ವರದಿ ಬದಲಿಸಲು ಹೊರಟ ಕೇಂದ್ರ

ಇದನ್ನೂ ಓದಿ: ಬಂಗಾಳದ ಎಲ್ಲೆಡೆ ಬಾಂಬ್ ಫ್ಯಾಕ್ಟರಿ: ಅಮಿತ್ ಶಾ ಸುಳ್ಳು ಬಯಲು ಮಾಡಿದ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...