Homeಮುಖಪುಟ'ಪುದುಚೇರಿಯನ್ನು ಕೇಂದ್ರ 'ಟ್ರಾನ್ಸ್ ಜೆಂಡರ್'ನಂತೆ ಪರಿಗಣಿಸುತ್ತಿದೆ': ಸಿಎಂ ನಾರಾಯಣಸ್ವಾಮಿ ಅಸಮಾಧಾನ

‘ಪುದುಚೇರಿಯನ್ನು ಕೇಂದ್ರ ‘ಟ್ರಾನ್ಸ್ ಜೆಂಡರ್’ನಂತೆ ಪರಿಗಣಿಸುತ್ತಿದೆ’: ಸಿಎಂ ನಾರಾಯಣಸ್ವಾಮಿ ಅಸಮಾಧಾನ

- Advertisement -
- Advertisement -

ಕೇಂದ್ರ ಸರ್ಕಾರದ ವಿರುದ್ಧ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ತಾರತಮ್ಯ ತೋರುತ್ತಿರುವ ಮೋದಿ ಸರ್ಕಾರದ ಧೋರಣೆಯನ್ನು ಖಂಡಿಸಿದ್ದು, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಭಾರತದಲ್ಲಿ ಫೆಡರಲಿಸಂಗೆ ಹಣಕಾಸಿನ ವಿಷಯದಲ್ಲಿ ಉದಯೋನ್ಮುಖ ಸವಾಲುಗಳು’ ಎಂಬ ವಿಷಯದ ಕುರಿತು ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಸೆಮಿನಾರ್ ನ್ನು ಉದ್ಘಾಟಿಸಿ,  ಸಿಎಂ ನಾರಾಯಣಸ್ವಾಮಿ ಮಾತನಾಡಿದರು. ಜಿಎಸ್ ಟಿ ಹಾಗೂ ಇತರೆ ಯೋಜನೆಗಳ ಉದ್ದೇಶಕ್ಕಾಗಿ ಕೇಂದ್ರ ಸರ್ಕಾರವು ಪುದುಚೇರಿಯನ್ನು ರಾಜ್ಯವಾಗಿ ಪರಿಗಣಿಸುತ್ತಿದೆ. ಆದರೆ ಇತರೆ ರಾಜ್ಯಗಳಿಗೆ ಮಾತ್ರ ಪುದುಚೇರಿ ಕೇಂದ್ರಾಡಳಿತ ಪ್ರದೇಶವಾಗಿದೆ. ಕೇಂದ್ರಾಡಳಿತ ಪ್ರದೇಶಗಳನ್ನು ನಿರ್ಲಕ್ಷಿಸುತ್ತಿರುವ ಕೇಂದ್ರ ಸರ್ಕಾರ, ಟ್ರಾನ್ಸ್ ಜೆಂಡರ್ ನಂತೆ ಪರಿಗಣಿಸುತ್ತಿದೆ ಎಂದು ಕಿಡಿಕಾರಿದರು.

ಪುದುಚೇರಿಗೆ ಅನುದಾನ ಮಂಜೂರು ಮಾಡುವಾಗ ಕೇಂದ್ರವು ವಿಭಿನ್ನ ನಿಲುವು ತಳೆಯುತ್ತಿದೆ. ಕೇಂದ್ರಾಡಳಿತ ಪ್ರದೇಶವನ್ನು ಟ್ರಾನ್ಸ್ ಜೆಂಡರ್ ನಂತೆ ಪರಿಗಣಿಸುತ್ತಿದೆ. ಪುದುಚೇರಿಯನ್ನು ಕೆಲ ಯೋಜನೆಗಳಿಗೆ ಕೇಂದ್ರ ಸರ್ಕಾರ ರಾಜ್ಯದಂತೆ ಪರಿಗಣಿಸುತ್ತಿದ್ದು, ಇತರರಿಗೆ ಕೇಂದ್ರಾಡಳಿತ ಪ್ರದೇಶವೆಂದು ಬಿಂಬಿಸುವ ಪ್ರಯತ್ನ ಮಾಡುತ್ತಿದೆ. ಇದೊಂದು ವಿಚಿತ್ರ ವಿಧಾನ ಮತ್ತು ಅಸಹಾಯಕತೆಯನ್ನು ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಪ್ರಾದೇಶಿಕ ಬಜೆಟ್ ಗೆ ಅನುದಾನ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಪುದುಚೇರಿಯನ್ನು ನಿರ್ಲಕ್ಷಿಸುತ್ತಿದೆ. ಪುದುಚೇರಿಗೆ ಬರಬೇಕಿದ್ದ ಶೇ. 30ರಷ್ಟು ಅನುದಾನದಲ್ಲಿ ಶೇ. 26ಕ್ಕೆ ಅನುದಾನವನ್ನು ಇಳಿಕೆ ಮಾಡಿದೆ. ಕೇಂದ್ರ ಸರ್ಕಾರದ ಸಮರ್ಪಕ ಬೆಂಬಲದ ಕೊರತೆಯಿಂದ ಉಚಿತ ಅಕ್ಕಿ ವಿತರಣೆ ಯೋಜನೆಯಲ್ಲಿ ಸಾಕಷ್ಟು ಅಡೆತಡೆ, ತೊಂದರೆಗಳನ್ನು ಪುದುಚೇರಿ ಅನುಭವಿಸುತ್ತಿದೆ. ಇನ್ನು ಲೆಫ್ಟಿನೆಂಟ್ ಗವರ್ನರ್ ಅವರ ಆಡಳಿತಾತ್ಮಕ ಅಡಚಣೆಗಳು ನಮಗೆ ಮುಜುಗರವನ್ನುಂಟು ಮಾಡಿವೆ ಎಂದು ಕೇಂದ್ರದ ಧೋರಣೆಯ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: ತಡರಾತ್ರಿ ಶರದ್ ಪವಾರ್ ಭೇಟಿಯಾದ ಉದ್ಧವ್ ಠಾಕ್ರೆ: ಅಂತಿಮ ಹಂತಕ್ಕೆ ತಲುಪಿದ ಸರ್ಕಾರ ರಚನೆ ಕಸರತ್ತು.

ಅಲ್ಲದೇ ಜಮ್ಮುಕಾಶ್ಮೀರ ಹಾಗೂ ಲಡಾಖ್ ನ್ನು ಹೊಸದಾಗಿ ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಲಾಗಿದೆ. ಆದರೆ ಹಳೆಯ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯನ್ನು 15 ನೇ ಕೇಂದ್ರ ಹಣಕಾಸು ಆಯೋಗದ ಸದಸ್ಯರನ್ನಾಗಿ ಸೇರಿಸಿಕೊಂಡಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ಇನ್ನು ವಿಚಾರ ಸಂಕಿರಣದ ಅಧ್ಯಕ್ಷತೆ ವಹಿಸಿದ್ದ ಕೇರಳ ಹಣಕಾಸು ಸಚಿವ ಥಾಮಸ್ ಇಸಾಕ್ ಮಾತನಾಡಿ, ಕಲ್ಯಾಣ ಯೋಜನೆಗಳ ಅನುಷ್ಠಾನದಲ್ಲಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಹಸ್ತಕ್ಷೇಪ ಪುದುಚೇರಿಯಲ್ಲಿ ಪ್ರಜಾಪ್ರಭುತ್ವದ ಅಪಹಾಸ್ಯವಾಗುತ್ತಿರುವುದನ್ನು ಎತ್ತಿ ತೋರಿಸುತ್ತಿದೆ ಎಂದು ಹೇಳಿದರು.

ಡಿಎಂಕೆ ಪಕ್ಷದ ಎಂ.ಕೆ.ಕನಿಮೋಳಿ ಮಾತನಾಡಿ, ಉತ್ತಮ ಪ್ರದರ್ಶನ ನೀಡುತ್ತಿರುವ ಮತ್ತು ಪ್ರಗತಿಪರ ರಾಜ್ಯಗಳಿಗೆ ದಂಡ ವಿಧಿಸಲಾಗುತ್ತಿದೆ. ಕೇಂದ್ರ ಸರ್ಕಾರದ ನಿರ್ಧಾರಗಳು, ವರ್ತನೆ ಪ್ರಗತಿಪರ ರಾಜ್ಯಗಳಿಗೆ ಮಾರಕವಾಗಿವೆ. ಜಿಎಸ್ ಟಿ ಹೇರಿಕೆ ಮತ್ತು ಆರ್ಥಿಕ ನಷ್ಟದಿಂದ ಮತ್ತಷ್ಟು ಹಾನಿಯುಂಟಾಗಿದೆ. ತಿರುಪುರದಂತಹ ಕೈಗಾರಿಕಾ ಪ್ರದೇಶಗಳಲ್ಲಿ ಹೊಸ ತೆರಿಗೆ ವಿಧಿಸಿದ್ದರಿಂದ ಕೆಲ ಕೈಗಾರಿಕೆಗಳು ಬಾಗಿಲು ಹಾಕಿವೆ. ಉದ್ಯೋಗ ನಷ್ಟ ಉಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮಿಳುನಾಡು ಸಿಪಿಐ (ಎಂ) ಕಾರ್ಯದರ್ಶಿ ಬಾಲಕೃಷ್ಣನ್ ಮಾತನಾಡಿ, ಕ್ಯಾಬಿನೆಟ್ ನಿರ್ಧಾರಗಳನ್ನು ಅನುಷ್ಠಾನಗೊಳಿಸುವಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರ ನಿರಂತರ ಹಸ್ತಕ್ಷೇಪವಿದೆ. ಹೀಗಿದ್ದರೆ ಹುದ್ದೆಯ ಅಗತ್ಯವಿಲ್ಲ. ಎಲ್ಲವೂ ಸ್ವಯಂಚಾಲಿತವಾಗಿದೆ. ಎನ್ ಡಿಎ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಬಹುಸಾಂಸ್ಕೃತಿಕ ಮತ್ತು ಬಹುಭಾಷೆ ಹಾಗೂ ವೈವಿಧ್ಯತೆಯನ್ನು ತೊಡೆದುಹಾಕಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....