Homeಮುಖಪುಟಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರ ಎನ್‌ಕೌಂಟರ್‌, ಶಸ್ತ್ರಾಸ್ತ್ರ ವಶ

ಪುಲ್ವಾಮಾದಲ್ಲಿ ಮೂವರು ಭಯೋತ್ಪಾದಕರ ಎನ್‌ಕೌಂಟರ್‌, ಶಸ್ತ್ರಾಸ್ತ್ರ ವಶ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಿನ್ನೆ ರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರ ಜಿಲ್ಲೆಯ ದ್ರಾಬ್ಗಾಮ್ ಪ್ರದೇಶದಲ್ಲಿ ಶನಿವಾರ ಎನ್‌ಕೌಂಟರ್ ನಡೆದಿದ್ದು, ಮೊದಲು ಒಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದೆ. ಭಯೋತ್ಪಾದಕರು ಸ್ಥಳದಿಂದ ಪಲಾಯನ ಮಾಡುವುದನ್ನು ತಡೆಯಲು ರಾತ್ರಿಯಲ್ಲಿ ಬಿಗಿಯಾದ ಭದ್ರತೆ ಮಾಡಲಾಗಿತ್ತು. ಭಾನುವಾರ ಬೆಳಿಗ್ಗೆ ಮತ್ತೆ ಗುಂಡಿನ ದಾಳಿ ನಡೆಸಿದಾಗ ಇನ್ನೂ ಇಬ್ಬರು ಭಯೋತ್ಪಾದಕರನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಮೂವರೂ ಸ್ಥಳೀಯರಾಗಿದ್ದೂ, ಭಯೋತ್ಪಾದಕ ಸಂಘಟನೆ ಎಲ್‌ಇಟಿಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಕಾಶ್ಮೀರ ಪೊಲೀಸ್ ಮಹಾನಿರೀಕ್ಷಕ ವಿಜಯ್ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಪ್ರವಾದಿ ನಿಂದನೆ: ಪ್ರತಿಭಟನಾಕಾರರ ಮೇಲೆ ’ಬುಲ್ಡೋಜರ್’ ಪ್ರಭಾವ ತೋರಿದ ಯೋಗಿ ಸರ್ಕಾರ

“ಹತರಾದವರಲ್ಲಿ ಒಬ್ಬನನ್ನು ಜುನೈದ್ ಶೀರ್ಗೋಜ್ರಿ ಎಂದು ಗುರುತಿಸಲಾಗಿದ್ದು, ಮೇ 13 ರಂದು ಕೊಲ್ಲಲ್ಪಟ್ಟ ರಿಯಾಜ್ ಅಹ್ಮದ್ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ ಮತ್ತು ಜೂನ್ 2 ರಲ್ಲಿ ಕಾರ್ಮಿಕರ ಮೇಲೆ ನಡೆದ ದಾಳಿಯಲ್ಲಿ ಭಾಗಿಯಾಗಿದ್ದರು. ಈ ವರ್ಷ 99 ಉಗ್ರರನ್ನು ಕೊಂದಿದ್ದೇವೆ” ಎಂದು ವಿಜಯ್ ಕುಮಾರ್‌ ತಿಳಿಸಿದ್ದಾರೆ.

ಇನ್ನಿಬ್ಬರನ್ನು ಫಾಜಿಲ್ ನಜೀರ್ ಭಟ್ ಮತ್ತು ಇರ್ಫಾನ್ ಅಹ್ಮದ್ ಮಲಿಕ್ ಎಂದು ಗುರುತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀರ ಜಿಲ್ಲೆಯ ದ್ರಾಬ್ಗಾಮ್ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು.

ಕಾರ್ಯಾಚರಣೆಯಲ್ಲಿ ಪೊಲೀಸರು ಎರಡು ಎಕೆ 47 ರೈಫಲ್‌ಗಳು ಮತ್ತು ಒಂದು ಪಿಸ್ತೂಲ್ ಸೇರಿದಂತೆ, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮಾಹಿರಿ ನೀಡಿದ್ದಾರೆ.


ಇದನ್ನೂ ಓದಿ: ತೆಲಂಗಾಣ: ಅವಹೇಳನಕಾರಿ ಪೋಸ್ಟ್‌ ವಿರುದ್ಧ ಭಾರೀ ಪ್ರತಿಭಟನೆ; ಲಾಠಿಚಾರ್ಜ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...