Homeಮುಖಪುಟಪುಲ್ವಾಮ ದಾಳಿ ಸಂದರ್ಶನ: ದೇಶದ ಮುಂದೆ ಮೋದಿಯನ್ನು ಬೆತ್ತಲುಗೊಳಿಸಿದ್ದಕ್ಕೆ ಸತ್ಯಪಾಲ್‌ಗೆ ಸಿಬಿಐ ನೋಟಿಸ್ ಎಂದ ಕಾಂಗ್ರೆಸ್

ಪುಲ್ವಾಮ ದಾಳಿ ಸಂದರ್ಶನ: ದೇಶದ ಮುಂದೆ ಮೋದಿಯನ್ನು ಬೆತ್ತಲುಗೊಳಿಸಿದ್ದಕ್ಕೆ ಸತ್ಯಪಾಲ್‌ಗೆ ಸಿಬಿಐ ನೋಟಿಸ್ ಎಂದ ಕಾಂಗ್ರೆಸ್

- Advertisement -
- Advertisement -

ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ದಿ ವೈರ್ ನಡೆಸಿದ ಸಂದರ್ಶನವೊಂದರಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ಗೆ ಇದೀಗ ಸಿಬಿಐ ನೋಟಿಸ್ ಜಾರಿ ಮಾಡಿದೆ. ಈ ಬಗ್ಗೆ ಕಾಂಗ್ರೆಸ್ ಟೀಕೆ ಮಾಡಿದೆ.

ಪುಲ್ವಾಮ ದಾಳಿಯ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ್ದಕ್ಕೆ ಸಿಬಿಐ ನೋಟಿಸ್ ನೀಡಿದೆ ಎಂದು ಲಿಂಕ್ ಮಾಡಿರುವ ಕಾಂಗ್ರೆಸ್,  ”ಈಗ ಎಲ್ಲಾ ಮುಗಿದಿದೆ, ಈ ಹಂತದಲ್ಲಿ ಪಿಎಂ ಮೋದಿ ಅವರಿಗೆ ಸಹಾಯ ಮಾಡಲು ಸಾಧ್ಯವಾಗಲಿಲ್ಲ. ಸತ್ಯಪಾಲ್ ಮಲಿಕ್ ಅವರು ಮೋದಿ ಅವರನ್ನು ದೇಶದ ಮುಂದೆ ಬೆತ್ತಲುಗೊಳಿಸಿದ್ದಾರೆ. ಈಗ ಸಿಬಿಐ ಮಲಿಕ್ ಅವರನ್ನು ವಿಚಾರಣೆಗೆ ಕರೆದಿದೆ. ಇದು ಆಗಬೇಕಿತ್ತು.. ಇನ್ನೂ ಒಂದು ವಿಷಯ  ಏನೆಂದರೆ, ಈ ಸಮಯದಲ್ಲಿ ‘ಗೋದಿ ಮೀಡಿಯಾ’ಗಳು ಇನ್ನೂ ಸುಮ್ಮನಿರುತ್ತವೆ,. ಇದನ್ನು ನೀವು ಬರೆದಿಟ್ಟುಕೊಳ್ಳಿ” ಎಂದು ಟ್ವಿಟ್ ಮಾಡಿದೆ.

ಪುಲ್ವಾಮಾ ದಾಳಿ ಬಗ್ಗೆ ಸತ್ಯಾಪಲ್ ಹೇಳಿದ್ದೇನು?

ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದಾರೆ.

ಪ್ರಕರಣದ ಹಿನ್ನೆಲೆ

ವಿಮಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಜಮ್ಮು ಕಾಶ್ಮೀರರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರಿಗೆ ನೋಟಿಸ್ ನೀಡಲಾಗಿದೆ. ಸಿಬಿಐ ಕೆಲವು ಸ್ಪಷ್ಟೀಕರಣಗಳನ್ನು ಬಯಸುತ್ತಿದೆ ಎಂದು ಮಲಿಕ್ ತಿಳಿಸಿದ್ದಾರೆ. ”ಕೆಲವು ಸ್ಪಷ್ಟೀಕರಣಗಳಿಗಾಗಿ” ಏಜೆನ್ಸಿಯ ಅಕ್ಬರ್ ರೋಡ್ ಗೆಸ್ಟ್‌ಹೌಸ್‌ನಲ್ಲಿ ಅವರ ಉಪಸ್ಥಿತಿಯನ್ನು ಸಿಬಿಐ ಕೇಳಿದೆ ಎಂದು ಸತ್ಯಪಾಲ್ ಮಲಿಕ್ ಪಿಟಿಐಗೆ ತಿಳಿಸಿದ್ದಾರೆ.

ಪುಲ್ವಾಮಾ ಭಯೋತ್ಪಾದನಾ ದಾಳಿಯ ಬಗ್ಗೆ ಕೆಲವು ಹೇಳಿಕೆಗಳನ್ನು ನೀಡಿದ ಸಂದರ್ಶನದ ಮೂಲಕ ಮಾಜಿ ರಾಜ್ಯಪಾಲರು ಸುದ್ದಿಯಲ್ಲಿದ್ದರೆ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಮಲಿಕ್ ಅವರನ್ನು ಕರೆಯುವುದು ಇದೇ ಮೊದಲಲ್ಲ.

ಕಳೆದ ವರ್ಷ ಏಪ್ರಿಲ್‌ನಲ್ಲಿ, ಜಮ್ಮು ಮತ್ತು ಕಾಶ್ಮೀರದ ಕಿರು ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ 2,200 ಕೋಟಿ ರೂ. ಮೌಲ್ಯದ ಸರ್ಕಾರಿ ಉದ್ಯೋಗಿಗಳಿಗೆ ಮತ್ತು ಸಿವಿಲ್ ಕೆಲಸಗಳಿಗೆ ಗುಂಪು ವೈದ್ಯಕೀಯ ವಿಮಾ ಯೋಜನೆಗೆ ಗುತ್ತಿಗೆ ನೀಡುವಲ್ಲಿ ಮಲಿಕ್ ಅವರು ಮಾಡಿದ ಭ್ರಷ್ಟಾಚಾರ ಆರೋಪಗಳ ಮೇಲೆ ಸಿಬಿಐ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದೆ.

ಸತ್ಯಪಾಲ್ ಮಲಿಕ್ ಅವರು ಈ ಹಿಂದೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದಾಗ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂ. ಲಂಚದ ಆಫರ್ ನೀಡಿದ್ದರು ಎಂದು ಆರೋಪಿಸಿದ್ದರು. ಸರ್ಕಾರಿ ನೌಕರರಿಗೆ ಸಮೂಹ ವೈದ್ಯಕೀಯ ವಿಮಾ ಯೋಜನೆಗೆ ಗುತ್ತಿಗೆ ನೀಡುವ ಕಡತಗಳಿವು. ಸಿಬಿಐ ಅನಿಲ್ ಅಂಬಾನಿಯವರ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಕಂಪನಿ ಮತ್ತು ಟ್ರಿನಿಟಿ ರೀ-ಇನ್ಶೂರೆನ್ಸ್ ಬ್ರೋಕರ್ಸ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಿಸಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...