Homeಮುಖಪುಟಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

ಪೋರ್ಷೆ ಕಾರು ಅಪಘಾತ ಪ್ರಕರಣ: ಎರಡನೇ ಬಾರಿ ರಕ್ತದ ಮಾದರಿ ತಿರುಚಲು ಯತ್ನಿಸಿದ್ದ ಆರೋಪಿಗಳು!

- Advertisement -
- Advertisement -

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಆರೋಪಿಯ ಪೋಷಕರು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ತಿರುಚಲು ಯತ್ನಿಸಿದ್ದಾರೆ ಎಂದು ಪೊಲೀಸರು ಮಂಗಳವಾರ ನಗರದ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಮೇ 19, 2024ರಂದು ನಸುಕಿನ ವೇಳೆ ಪುಣೆಯ ಕಲ್ಯಾಣಿ ನಗರ ಪ್ರದೇಶದಲ್ಲಿ ವೇಗವಾಗಿ ಬಂದ ಐಷಾರಾಮಿ ಪೋರ್ಷೆ ಕಾರು ಜನರ ಮೇಲೆ ಹರಿದಿತ್ತು. ಈ ಘಟನೆಯಲ್ಲಿ ರಸ್ತೆ ಬದಿ ಬೈಕ್‌ ಮೇಲೆ ಕುಳಿತಿದ್ದ ಇಬ್ಬರು ಐಟಿ ಉದ್ಯೋಗಿಗಳು ಸಾವನ್ನಪ್ಪಿದ್ದರು. ಕಾರು ಚಲಾಯಿಸಿದ ವ್ಯಕ್ತಿ ನಗರದ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗನಾಗಿದ್ದು, ಆತ ಮದ್ಯದ ನಶೆಯಲ್ಲಿ ಕಾರು ಚಲಾಯಿಸಿ ಜೀವಹಾನಿ ಮಾಡಿದ್ದ. ಘಟನೆ ಬಳಿಕ ಹಣದ ಪ್ರಭಾವ ಬಳಸಿ ಆರೋಪಿಯ ರಕ್ಷಣೆಯ ಪ್ರಯತ್ನ ನಡೆದಿತ್ತು.

ಅಪಘಾತ ನಡೆದ ಗಂಟೆಗಳ ಬಳಿಕ ಆರೋಪಿ ಬಾಲಕನ ರಕ್ತದ ಮಾದರಿಯನ್ನು ನಗರದ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ತೆಗೆದುಕೊಳ್ಳಲಾಗಿತ್ತು. ತಡವಾಗಿ ರಕ್ತದ ಮಾದರಿ ಸಂಗ್ರಹಿಸುವ ಮೂಲಕ ಆರೋಪಿಯ ರಕ್ಷಣೆಗೆ ಪ್ರಯತ್ನಿಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ಬಿಸಿ ಬಿಸಿ ಚರ್ಚೆ ಶುರುವಾಗಿತ್ತು. ಈ ನಡುವೆ ಸಂಭಾವ್ಯ ಕಲ್ಮಷದ ವರದಿಗಳಿಂದಾಗಿ ಪೊಲೀಸರು ಮತ್ತೊಮ್ಮೆ ರಕ್ತದ ಮಾದರಿ ಸಂಗ್ರಹಿಸಲು ವಿನಂತಿಸಿದ್ದರು. ಹಾಗಾಗಿ, ಎರಡನೇ ಬಾರಿಗೆ ಔಂಧ್ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದ ಮಾದರಿಯನ್ನು ಪಡೆಯಲಾಗಿತ್ತು.

ಔಂಧ್‌ನ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದ ಮಾದರಿ ಬದಲಾಯಿಸಲು ಪ್ರಯತ್ನಿಸಲಾಗಿತ್ತು. ಆದರೆ, ವೈದ್ಯರು ತಿರುಚಲು ನಿರಾಕರಿಸಿದ್ದರಿಂದ ಅದು ವಿಫಲವಾಯಿತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಪ್ರಕರಣದ ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೆಚ್ಚುವರಿ ದಾಖಲೆಗಳನ್ನು ಸಲ್ಲಿಸಿದೆ. ಅದರಲ್ಲಿ, ಮೇ 19, 2024 ರಂದು ಪೊಲೀಸ್ ತಂಡವು ಎರಡನೇ ಬಾರಿಗೆ ರಕ್ತದ ಮಾದರಿಯನ್ನು ಸಂಗ್ರಹಿಸಲು ಆರೋಪಿ ಅಪ್ರಾಪ್ತ ವಯಸ್ಕನನ್ನು ಔಂಧ್ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಾಗ, ಆತನ ತಂದೆ-ತಾಯಿ ಮತ್ತು ಮಧ್ಯವರ್ತಿ ಅಶ್ಫಾಕ್ ಮಕಂದರ್ ಎಂಬಾತ ಅಲ್ಲಿಗೆ ಹೋಗಿದ್ದರು ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ರಕ್ತದ ಮಾದರಿಯನ್ನು ಗೌಪ್ಯವಾಗಿ ತೆಗೆದುಕೊಳ್ಳಬೇಕಿತ್ತು. ಆದರೆ, ಅದು ಆರೋಪಿಯ ಕುಟುಂಬಸ್ಥರಿಗೆ ಗೊತ್ತಾಗಿದೆ. ಏಕೆಂದರೆ, ಅವರು ಯರವಾಡ ಪೊಲೀಸ್ ಠಾಣೆಯಲ್ಲಿ ಇದ್ದರು. ಹಾಗಾಗಿ, ಎರಡನೇ ಬಾರಿಯೂ ರಕ್ತದ ಮಾದರಿಯನ್ನು ತಿರುಚುವ ಪ್ರಯತ್ನ ನಡೆಸಿದ್ದಾರೆ ಎಂದು ಪ್ರಾಸಿಕ್ಯೂಷನ್ ನ್ಯಾಯಾಲಯಕ್ಕೆ ಹೇಳಿದೆ.

ಮೇ 20, 2024ರಂದು, ಎರಡೂ ರಕ್ತದ ಮಾದರಿಗಳನ್ನು ಡಿಎನ್ಎ ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.

ಅಪಘಾತದ ಸಮಯದಲ್ಲಿ 17 ವರ್ಷದ ಬಾಲಕ ಕುಡಿದ ಮತ್ತಿನಲ್ಲಿದ್ದ ಎಂಬುದನ್ನು ಮರೆಮಾಚಲು ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಆತನ ರಕ್ತದ ಮಾದರಿಯನ್ನು ತಾಯಿಯ ರಕ್ತದ ಮಾದರಿಯೊಂದಿಗೆ ಬದಲಾಯಿಸಲಾಗಿತ್ತು ಎಂದು ಈ ಹಿಂದೆ ತನಿಖೆಯಿಂದ ಬಯಲಾಗಿತ್ತು.

ಈ ಪ್ರಕರಣದಲ್ಲಿ ಸಸೂನ್ ಜನರಲ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಮುಖ್ಯಸ್ಥ ಅಜಯ್ ತಾವರೆ, ವೈದ್ಯಾಧಿಕಾರಿ ಶ್ರೀಹರಿ ಹಲ್ನೋರ್ ಮತ್ತು ಸಿಬ್ಬಂದಿ ಅತುಲ್ ಘಟ್ಕಾಂಬಳೆ ಅವರನ್ನು ಬಂಧಿಸಲಾಗಿದೆ ಎಂದು ವರದಿಗಳು ಹೇಳಿವೆ.

ಬಂಧಿತರಲ್ಲಿ ಬಾಲಕನ ತಂದೆ-ತಾಯಿ, ಮಧ್ಯವರ್ತಿ ಅಶ್ಫಾಕ್ ಮಕಂದರ್ ಮತ್ತು ಅಮರ್ ಗಾಯಕ್ವಾಡ್, ಆದಿತ್ಯ ಅವಿನಾಶ್ ಸೂದ್, ಆಶಿಶ್ ಮಿತ್ತಲ್ ಮತ್ತು ಅರುಣ್ ಕುಮಾರ್ ಸಿಂಗ್ ಎಂಬವರೂ ಸೇರಿದ್ದಾರೆ.

ಸೌಜನ್ಯ ಪ್ರಕರಣ| ಹೈಕೋರ್ಟ್ ನ್ಯಾಯಮೂರ್ತಿ ದೇವದಾಸ್ ವಾಗ್ದಂಡನೆಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....