ಮಹಾರಾಷ್ಟ್ರದ ಪುಣೆಯ ಹೊರವಲಯದಲ್ಲಿ 21 ವರ್ಷದ ಯುವತಿಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದು, ಯುವತಿಯ ಸ್ನೇಹಿತವ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್ ಘರ್ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅವರು ಹೇಳಿದ್ದಾರೆ. ಪುಣೆ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಯುವತಿಯು ತನ್ನ ಸ್ನೇಹಿತನೊಂದಿಗೆ ಬೋಪದೇವ್ ಘರ್ ಪ್ರದೇಶಕ್ಕೆ ತೆರಳಿದ್ದಾಗ ಘಟನೆ ನಡೆದಿದೆ ಎಂದು ಕೊಂಡ್ವಾ ಪೊಲೀಸರು ಹೇಳಿದ್ದಾರೆ. “ಪ್ರಾಥಮಿಕ ವಿವರಗಳ ಪ್ರಕಾರ, ಯುವತಿ ಮತ್ತು ಆಕೆಯ ಸ್ನೇಹಿತ ಗುರುವಾರ ತಡರಾತ್ರಿ ಬೋಪ್‌ದೇವ್ ಘರ್ ಪ್ರದೇಶಕ್ಕೆ ಹೋಗಿದ್ದರು. ಅಲ್ಲಿ ಮೂವರು ಅಪರಿಚಿತರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ” ಎಂದು ಪುಣೆ ಪೊಲೀಸರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆಪಾದಿತ ಸಾಮೂಹಿಕ ಅತ್ಯಾಚಾರದ ಹಿಂದೆ ಇರುವವರನ್ನು ಪತ್ತೆಹಚ್ಚಲು ಹತ್ತು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು ಈ ವೇಳೆ ಮೂವರು ದುಷ್ಕರ್ಮಿಗಳು ಯುವತಿಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಕೊಂಧ್ವಾ ಪೊಲೀಸ್ ಠಾಣೆಯ ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂಓದಿ: ಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ
ಪುಣೆ: ಶಾಲಾ ವ್ಯಾನ್‌ನಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ
ಪುಣೆ ನಗರದಲ್ಲಿ ನಡೆದ ಪ್ರತ್ಯೇಕ ಘಟನೆಯೊಂದರಲ್ಲಿ, ಆರು ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲಾ ವ್ಯಾನ್‌ನ 45 ವರ್ಷದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೆಪ್ಟೆಂಬರ್ 30ರಂದು ನಗರದ ವನವಾಡಿ ಪ್ರದೇಶದಲ್ಲಿ ಬಾಲಕಿಯರು ಶಾಲೆಗೆ ತೆರಳಿ ಮನೆಗೆ ಮರಳುತ್ತಿದ್ದ ವೇಳೆ ವ್ಯಾನ್‌ನಲ್ಲಿ ಈ ಘಟನೆ ನಡೆದಿದೆ. ಈ ವೇಳೆ ವ್ಯಾನ್‌ನಲ್ಲಿ ಮಹಿಳಾ ಅಟೆಂಡೆಂಟ್ ಇದ್ದರೇ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಆರೋಪಿಯು ಇಬ್ಬರು ಬಾಲಕಿಯರ ಖಾಸಗಿ ಭಾಗಗಳನ್ನು ಮುಟ್ಟಿದ್ದಾರೆ ಎಂದು ಆರೋಪಿಸಲಾಗಿದ್ದು, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರು ಈ ಘಟನೆಯನ್ನು ತನ್ನ ತಾಯಿಗೆ ಘಟನೆಯನ್ನು ವಿವರಿಸಿದ್ದಾರೆ. ಇದರ ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿದ್ದಾರೆ ಎಂದು ವಾನ್ವಾಡಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಇದನ್ನೂಓದಿ: ಬಿಜೆಪಿ ಹರಿಯಾಣದಲ್ಲಿ ‘ನಿರುದ್ಯೋಗ ರೋಗ’ ಹರಡಿದೆ | ರಾಹುಲ್ ಗಾಂಧಿ
ಬುಧವಾರ ಪೊಲೀಸ್ ದೂರು ದಾಖಲಾಗಿದ್ದು, ಆರೋಪಿ ಸಂಜಯ್ ರೆಡ್ಡಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸೆಕ್ಷನ್ 64 (ಅತ್ಯಾಚಾರಕ್ಕೆ ಶಿಕ್ಷೆ) ಮತ್ತು 65 (2) (ಹನ್ನೆರಡು ವರ್ಷದೊಳಗಿನ ಮಹಿಳೆಯ ಮೇಲಿನ ಅತ್ಯಾಚಾರಕ್ಕೆ ಶಿಕ್ಷೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.
ಸ್ಥಳೀಯ ನ್ಯಾಯಾಲಯವು ರೆಡ್ಡಿ ಅವರನ್ನು ಅಕ್ಟೋಬರ್ 8 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದು, ಅತ್ಯಾಚಾರ ಮತ್ತು ಇತರ ಅಪರಾಧಗಳಿಗಾಗಿ BNS ಮತ್ತು POCSO ಅಡಿಯಲ್ಲಿ ಸಂಬಂಧಿತ ಸೆಕ್ಷನ್‌ಗಳನ್ನು ಅನ್ವಯಿಸಲಾಗಿದೆ ಎಂದು ಹೇಳಿದ್ದಾರೆ. ಶಾಲೆಯ ಅಧಿಕಾರಿಗಳನ್ನು ವಿಚಾರಣೆಗೆ ಕರೆಯಲಾಗಿದ್ದು, ಅವರೂ ತಪ್ಪೆಸಗಿದ್ದರೆ ಅದನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.
ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು


