Homeಮುಖಪುಟಪುಣೆ | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಸ್ನೇಹಿತನಿಗೆ ಮೇಲೆ ಹಲ್ಲೆ

ಪುಣೆ | ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ; ಸ್ನೇಹಿತನಿಗೆ ಮೇಲೆ ಹಲ್ಲೆ

- Advertisement -
- Advertisement -

ಮಹಾರಾಷ್ಟ್ರದ ಪುಣೆಯ ಹೊರವಲಯದಲ್ಲಿ 21 ವರ್ಷದ ಯುವತಿಯ ಮೇಲೆ ಮೂವರು ವ್ಯಕ್ತಿಗಳು ಅತ್ಯಾಚಾರವೆಸಗಿದ್ದು, ಯುವತಿಯ ಸ್ನೇಹಿತವ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್ ಘರ್ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಅವರು ಹೇಳಿದ್ದಾರೆ. ಪುಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಯುವತಿಯು ತನ್ನ ಸ್ನೇಹಿತನೊಂದಿಗೆ ಬೋಪದೇವ್ ಘರ್ ಪ್ರದೇಶಕ್ಕೆ ತೆರಳಿದ್ದಾಗ ಘಟನೆ ನಡೆದಿದೆ ಎಂದು ಕೊಂಡ್ವಾ ಪೊಲೀಸರು ಹೇಳಿದ್ದಾರೆ. “ಪ್ರಾಥಮಿಕ ವಿವರಗಳ ಪ್ರಕಾರ, ಯುವತಿ ಮತ್ತು ಆಕೆಯ ಸ್ನೇಹಿತ ಗುರುವಾರ ತಡರಾತ್ರಿ ಬೋಪ್‌ದೇವ್ ಘರ್ ಪ್ರದೇಶಕ್ಕೆ ಹೋಗಿದ್ದರು. ಅಲ್ಲಿ ಮೂವರು ಅಪರಿಚಿತರು ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ” ಎಂದು ಪುಣೆ ಪೊಲೀಸರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಪಾದಿತ ಸಾಮೂಹಿಕ ಅತ್ಯಾಚಾರದ ಹಿಂದೆ ಇರುವವರನ್ನು ಪತ್ತೆಹಚ್ಚಲು ಹತ್ತು ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಹೊರ ವಲಯದಲ್ಲಿ ಈ ಘಟನೆ ನಡೆದಿದ್ದು ಈ ವೇಳೆ ಮೂವರು ದುಷ್ಕರ್ಮಿಗಳು ಯುವತಿಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಕೊಂಧ್ವಾ ಪೊಲೀಸ್ ಠಾಣೆಯ ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಪುಣೆ: ಶಾಲಾ ವ್ಯಾನ್‌ನಲ್ಲಿ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

ಪುಣೆ ನಗರದಲ್ಲಿ ನಡೆದ ಪ್ರತ್ಯೇಕ ಘಟನೆಯೊಂದರಲ್ಲಿ, ಆರು ವರ್ಷದ ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲಾ ವ್ಯಾನ್‌ನ 45 ವರ್ಷದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೆಪ್ಟೆಂಬರ್‌ 30ರಂದು ನಗರದ ವನವಾಡಿ ಪ್ರದೇಶದಲ್ಲಿ ಬಾಲಕಿಯರು ಶಾಲೆಗೆ ತೆರಳಿ ಮನೆಗೆ ಮರಳುತ್ತಿದ್ದ ವೇಳೆ ವ್ಯಾನ್‌ನಲ್ಲಿ ಈ ಘಟನೆ ನಡೆದಿದೆ. ಈ ವೇಳೆ ವ್ಯಾನ್‌ನಲ್ಲಿ ಮಹಿಳಾ ಅಟೆಂಡೆಂಟ್ ಇದ್ದರೇ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಆರೋಪಿಯು ಇಬ್ಬರು ಬಾಲಕಿಯರ ಖಾಸಗಿ ಭಾಗಗಳನ್ನು ಮುಟ್ಟಿದ್ದಾರೆ ಎಂದು ಆರೋಪಿಸಲಾಗಿದ್ದು, ಸಂತ್ರಸ್ತೆ ವಿದ್ಯಾರ್ಥಿನಿಯೊಬ್ಬರು ಈ ಘಟನೆಯನ್ನು ತನ್ನ ತಾಯಿಗೆ ಘಟನೆಯನ್ನು ವಿವರಿಸಿದ್ದಾರೆ. ಇದರ ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿದ್ದಾರೆ ಎಂದು ವಾನ್ವಾಡಿ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂಓದಿ: ಬಿಜೆಪಿ ಹರಿಯಾಣದಲ್ಲಿ ‘ನಿರುದ್ಯೋಗ ರೋಗ’ ಹರಡಿದೆ | ರಾಹುಲ್ ಗಾಂಧಿ

ಬುಧವಾರ ಪೊಲೀಸ್ ದೂರು ದಾಖಲಾಗಿದ್ದು, ಆರೋಪಿ ಸಂಜಯ್ ರೆಡ್ಡಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್‌) ಸೆಕ್ಷನ್ 64 (ಅತ್ಯಾಚಾರಕ್ಕೆ ಶಿಕ್ಷೆ) ಮತ್ತು 65 (2) (ಹನ್ನೆರಡು ವರ್ಷದೊಳಗಿನ ಮಹಿಳೆಯ ಮೇಲಿನ ಅತ್ಯಾಚಾರಕ್ಕೆ ಶಿಕ್ಷೆ) ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.

ಸ್ಥಳೀಯ ನ್ಯಾಯಾಲಯವು ರೆಡ್ಡಿ ಅವರನ್ನು ಅಕ್ಟೋಬರ್ 8 ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ನಾಗ್ಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಪ್ರಕರಣದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದು, ಅತ್ಯಾಚಾರ ಮತ್ತು ಇತರ ಅಪರಾಧಗಳಿಗಾಗಿ BNS ಮತ್ತು POCSO ಅಡಿಯಲ್ಲಿ ಸಂಬಂಧಿತ ಸೆಕ್ಷನ್‌ಗಳನ್ನು ಅನ್ವಯಿಸಲಾಗಿದೆ ಎಂದು ಹೇಳಿದ್ದಾರೆ. ಶಾಲೆಯ ಅಧಿಕಾರಿಗಳನ್ನು ವಿಚಾರಣೆಗೆ ಕರೆಯಲಾಗಿದ್ದು, ಅವರೂ ತಪ್ಪೆಸಗಿದ್ದರೆ ಅದನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದ್ದಾರೆ.

ವಿಡಿಯೊ ನೋಡಿ: ‘ಗಾಂಧೀಜಿ ಹಂತಕ ಗೋಡ್ಸೆ ಎಂಬ ವ್ಯಕ್ತಿ ಮತ್ತು ಆತನ ದೃಷ್ಟಿಯ ಭಾರತ’ ಪುಸ್ತಕ ಬಿಡುಗಡೆ: ದಿನೇಶ್ ಗುಂಡೂರಾವ್ ಅವರ ಮಾತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...