Homeಮುಖಪುಟಟಿಪ್ಪು ಸುಲ್ತಾನ್ ಬ್ಯಾನರ್ ಹರಿದಿದ್ದ ಪುನೀತ್ ಕೆರೆಹಳ್ಳಿ ಬಂಧನ

ಟಿಪ್ಪು ಸುಲ್ತಾನ್ ಬ್ಯಾನರ್ ಹರಿದಿದ್ದ ಪುನೀತ್ ಕೆರೆಹಳ್ಳಿ ಬಂಧನ

- Advertisement -
- Advertisement -

ಕಾಂಗ್ರೆಸ್ ಪಕ್ಷದ ವತಿಯಿಂದ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮದ ಭಾಗವಾಗಿ ಬೆಂಗಳೂರಿನಲ್ಲಿ ಅಳವಡಿಸಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಹರಿದು ಕೋಮು ಸೌಹಾರ್ದತೆಗೆ ಧಕ್ಕೆ ತಂದ ಆರೋಪದ ಮೇಲೆ ಪುನೀತ್ ಕೆರೆಹಳ್ಳಿ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ನಡಿಗೆ ಕಾರ್ಯಕ್ರಮ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷವು, ಕಾರ್ಪೋರೇಷನ್, ಹಡ್ಸನ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಹಲವೆಡೆ ಸ್ವಾತಂತ್ರ್ಯ ಹೋರಾಟಗಾರರ ಬ್ಯಾನರ್, ಫ್ಲೆಕ್ಸ್ ಹಾಕಿತ್ತು. ಮಹಾತ್ಮ ಗಾಂಧೀಜಿ, ನೆಹರೂ, ಟಿಪ್ಪು ಸುಲ್ತಾನ್, ಭಗತ್ ಸಿಂಗ್, ಅಂಬೇಡ್ಕರ್ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರ ಫ್ಲೆಕ್ಸ್‌ಗಳು ರಾರಾಜಿಸುತ್ತಿದ್ದವು. ಶನಿವಾರ ರಾತ್ರಿ ಹಡ್ಸನ್ ವೃತ್ತಕ್ಕೆ ನುಗ್ಗಿದ್ದ ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವುರ ಟಿಪ್ಪು ಸುಲ್ತಾನ್ ಫ್ಲೆಕ್ಸ್ ಕಿತ್ತು ವಿಡಿಯೋ ಮಾಡಿ ಹಂಚಿಕೊಂಡಿದ್ದರು.

ಈ ಕೃತ್ಯವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಖಂಡಿಸಿದ್ದರು. ಸ್ಥಳಕ್ಕೆ ಸಂಸದ ಡಿ.ಕೆ ಸುರೇಶ್ ಜೊತೆ ಧಾವಿಸಿ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು. ಪುನೀತ್ ಕೆರೆಹಳ್ಳಿ ಕೃತ್ಯದ ವಿರುದ್ದ ರಾಜಾಜಿನಗರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಮಂಜುನಾಥ್‌ರವರು ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಹಲಸೂರು ಗೇಟ್ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬಂಧಿತರ ಮೇಲೆ ಐಪಿಸಿ 153ಎ (ಕೋಮು ಸೌಹಾರ್ದತೆಗೆ ಧಕ್ಕೆ), ಐಪಿಸಿ 295ಎ (ಉದ್ದೇಶಪೂರ್ವಕವಾಗಿ ಕೋಮು ಗಲಭೆಗೆ ಪ್ರಚೋದನೆ) ನೀಡಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಬಲಪಂಥೀಯರೊಂದಿಗೆ ಗುರುತಿಸಿಕೊಂಡಿರುವ ಪುನೀತ್ ಕೆರೆಹಳ್ಳಿ ಈ ಹಿಂದೆಯೂ ಕೋಮು ಗಲಭೆಗೆ ಪ್ರಚೋದನೆ ನೀಡುವ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ. ಹೈಕೋರ್ಟ್ ತೀರ್ಪಿನ ವಿರುದ್ಧವಾಗಿ ಬೆಂಗಳೂರಿನ ಬೇಗೂರು ಕೆರೆಯ ಬಳಿ ವಿಡಿಯೋ ಮಾಡಿದ್ದರು. ಅಲ್ಲದೆ ರೈಲ್ವೆ ನಿಲ್ದಾಣಕ್ಕೆ ನುಗ್ಗಿ ದಾಂಧಲೆ, ಶ್ರೀರಂಗಪಟ್ಟಣದ ಜಾಮೀಯ ಮಸೀದಿ ಬಳಿ ದಾಂಧಲೆ ನಡೆಸಿದ ಆರೋಪ ಎದುರಿಸುತ್ತಿದ್ದಾರೆ.

ಇದನ್ನೂ ಓದಿ; ಬೆಂಗಳೂರು ರೈಲು ನಿಲ್ದಾಣದ ರೈಲ್ವೇ ಕೂಲಿಗಳ ನಮಾಝ್ ಕೋಣೆಗೆ ನುಗ್ಗಿ ದಾಂಧಲೆ: ಕ್ರಮಕ್ಕೆ ಪಿಎಫ್‌ಐ ಆಗ್ರಹ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಕೆರೆ ಹಾವಿಗೆ ಜೀವಾವದಿ ಶಿಕ್ಷೆ ಕೊಟ್ರೆ ನಮ್ಮ ಕರುನಾಡು ಸ್ವಲ್ಪ ಶಾಂತಿಯುತವಾಗಿರುತ್ತೆ ಅಂತ ನನ್ನ ಅಭಿಪ್ರಾಯ 👍👍

LEAVE A REPLY

Please enter your comment!
Please enter your name here

- Advertisment -

Must Read

ಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ...

0
'ಆಡಳಿತಾರೂಢ ಬಿಜೆಪಿ ಹಣದುಬ್ಬರವನ್ನು ಹೇಗೆ ನಿಯಂತ್ರಿಸುತ್ತದೆ ಅಥವಾ ಜನರಿಗೆ ಉದ್ಯೋಗವನ್ನು ನೀಡುತ್ತದೆ ಎಂಬುದರ ಕುರಿತು ಮಾತನಾಡುವ ಬದಲು ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ' ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ...