- Advertisement -
- Advertisement -
ಕೊರೊನಾ ವಿರುದ್ಧದ ಹೋರಾಟಕ್ಕೆ ಸಹಾಯ ಮಾಡಲು ಸಿಎಂ ಮತ್ತು ಪಿಎಂ ಮನವಿ ಮಾಡಿದ ಹಿನ್ನೆಲೆಯಲ್ಲಿ ಕನ್ನಡದ ಖ್ಯಾತ ನಟ ಪುನೀತ್ ರಾಜ್‌ಕುಮಾರ್ 50ಲಕ್ಷ ದೇಣಿಗೆ ನೀಡಿದ್ದಾರೆ.
ಇಂದು ಬೆಳಿಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೋವಿಡ್ 19ರ ವಿರುದ್ಧದ ಹೋರಾಟಕ್ಕಾಗಿ ‘ಮುಖ್ಯಮಂತ್ರಿಗಳ ಪರಿಹಾರ ನಿಧಿ’ಗೆ 50 ಲಕ್ಷ ರೂಪಾಯಿ ದೇಣಿಗೆಯ ಚೆಕ್ ಹಸ್ತಾಂತರಿಸಿದರು.

ನಿನ್ನೆ ಕೂಡ ಹಲವಾರು ಜನ ದೇಣಿಗೆ ನೀಡಿ ಮಾದರಿಯಾಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಬಾಲಕನೊಬ್ಬ ಹುಂಡಿಯಲ್ಲಿ ಕೂಡಿಟ್ಟಿದ್ದ 3500 ರೂ ಗಳನ್ನು ದೇಣಿಗೆ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರನಾಗಿದ್ದ.


