Homeಮುಖಪುಟಪುನೀತ್ ರಾಜ್‌ಕುಮಾರ್‌ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡುತ್ತಿದ್ದೇವೆ: ಡಾ.ರಂಗನಾಥ್

ಪುನೀತ್ ರಾಜ್‌ಕುಮಾರ್‌ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡುತ್ತಿದ್ದೇವೆ: ಡಾ.ರಂಗನಾಥ್

- Advertisement -
- Advertisement -

ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು ಪರಿಸ್ಥಿತಿ ಗಂಭೀರವಾಗಿದೆ. ನಾವು ಶಕ್ತಿ ಮೀರಿ ಚಿಕಿತ್ಸೆ ನೀಡುತ್ತಿದ್ದೇವೆ ಎಂದು ವಿಕ್ರಂ ಆಸ್ಪತ್ರೆಯ ಹೃದಯ ತಜ್ಞರಾದ ಡಾ.ರಂಗನಾಥ್ ತಿಳಿಸಿದ್ದಾರೆ.

ಒಮ್ಮೆ ಹೃದಯಾಘಾತ ಸಂಭವಿಸಿದ ನಂತರ ಆಸ್ಪತ್ರೆಗೆ ಕರೆತರುವಾಗ ಮತ್ತೊಮ್ಮೆ ಸಂಭವಿಸಿದೆ. ಆದರೂ ನಾವು ಹೃದಯಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಮುಂದುವರೆಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಶುಕ್ರವಾರ ಬೆಳಗ್ಗೆ ಜಿಮ್‌ನಲ್ಲಿ ಕಸರತ್ತು ಮಾಡುವ ವೇಳೆ ಅವರ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ನಂತರ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಎಂ ಸೇರಿದಂತೆ ಹಲವು ಗಣ್ಯರು, ಚಿತ್ರನಟರು, ಅಭಿಮಾನಿಗಳು ಆಸ್ಪತ್ರೆಯ ಸುತ್ತ ನೆರೆದಿದ್ದಾರೆ. ಆಸ್ಪತ್ರೆಯ ಬಳಿ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದ್ದು ಸುತ್ತಲಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೊನ್ನೆ ತಾನೇ ಭಜರಂಗಿ – 2 ಚಿತ್ರದ ಪ್ರಮೋಷನ್ ಕಾರ್ಯಕ್ರಮದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ ಪುನೀತ್ ರಾಜ್ ಕುಮಾರ್ ಶಿವರಾಜ್ ಕುಮಾರ್ ಮತ್ತು ಯಶ್ ಜೊತೆಗೂಡಿ ಡ್ಯಾನ್ಸ್ ಮಾಡಿ ಅಭಿಮಾನಿಗಳಲ್ಲಿ ಹುರುಪು ಮೂಡಿಸಿದ್ದರು. ಈಗ ಪುನೀತ್ ಆಸ್ಪತ್ರೆ ಸೇರಿದ್ದರಿಂದ ಇಂದು ಬೆಳಿಗ್ಗೆಯಿಂದ ಬಿಡುಗಡೆಯಾಗಿದ್ದ ಶಿವರಾಜ್ ಕುಮಾರ್ ಅಭಿಯನದ ಭಜರಂಗಿ – 2 ಚಿತ್ರದ ಪ್ರದರ್ಶನವನ್ನು ರಾಜ್ಯಾದ್ಯಂತ ರದ್ದುಗೊಳಿಸಲಾಗಿದೆ.

“ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.
ನಮ್ಮ ಜನ, ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು.
ನಮ್ಮ ಅಡವಿಯ ಹಸಿರನ್ನು ಜಗತ್ತಿಗೇ ಹರಡಿತ್ತು.
ಪೀಳಿಗೆಗೆ ಸ್ಫೂರ್ತಿ ನೀಡಿ ಅಜರಾಮರವಾಗಿತ್ತು.
ಆ ಚರಿತ್ರೆ ಮರುಕಳಿಸುವ ಸಮಯವೀಗ ಬಂದಿದೆ” ಎಂದು ಪುನೀತ್ ರಾಜ್ ಕುಮಾರ್ ನವೆಂಬರ್ 01 ರಂದು ಹೊಸ ಚಿತ್ರ ಘೋಷಿಸುವುದಾಗಿ ಫೇಸ್‌ಬುಕ್‌ನಲ್ಲಿ ತಿಳಿಸಿದ್ದರು. ಈಗ ಆಸ್ಪತ್ರೆ ಸೇರಿರುವುದು ಅವರ ಅಭಿಮಾನಿಗಳಲ್ಲಿ ಆತಂಕ ಹೆಚ್ಚಿಸಿದೆ.


ಇದನ್ನೂ ಓದಿ: ನಟ ಪುನೀತ್ ರಾಜ್‌ಕುಮಾರ್‌ ಆರೋಗ್ಯದಲ್ಲಿ ಏರುಪೇರು: ವಿಕ್ರಂ ಆಸ್ಪತ್ರೆಗೆ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...