Homeಕರ್ನಾಟಕಕಂಠೀರವ ಸ್ಟುಡಿಯೊದಲ್ಲಿ ಪುನೀತ್‌ ರಾಜ್‌ಕುಮಾರ್‌ ಅಂತ್ಯ ಸಂಸ್ಕಾರ; ಬಿಗಿ ಬಂದೋಬಸ್ತ್‌‌

ಕಂಠೀರವ ಸ್ಟುಡಿಯೊದಲ್ಲಿ ಪುನೀತ್‌ ರಾಜ್‌ಕುಮಾರ್‌ ಅಂತ್ಯ ಸಂಸ್ಕಾರ; ಬಿಗಿ ಬಂದೋಬಸ್ತ್‌‌

- Advertisement -
- Advertisement -

ಮೇರು ನಟ ಪವರ್‌ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅಕಾಲಿಕ ನಿಧನರಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಬಿಗಿ ಬಂದೋಬಸ್ತ್‌ ಕೈಗೊಳ್ಳಲಾಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ಸಂಸ್ಕಾರ ನಡೆಸುವುದಾಗಿ ಸರ್ಕಾರ ತಿಳಿಸಿದೆ.

ಮುಂಜಾಗ್ರತೆ ಕ್ರಮವಾಗಿ ನಗರದ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಶಾಲೆ-ಕಾಲೇಜುಗಳ ಆಡಳಿತ ಮಂಡಳಿಗಳು ಮನೆಗೆ ಕಳುಹಿಸುತ್ತಿವೆ. ರಾಜಧಾನಿಯಲ್ಲಿರುವ ಸಿನಿಮಾ ಮಂದಿಗಳನ್ನೂ ಮುಚ್ಚಲಾಗಿದೆ. ಬೆಂಗಳೂರು ನಗರದಲ್ಲಿರುವ ಖಾಸಗಿ ಕಂಪನಿಗಳೂ ತಮ್ಮ ಸಿಬ್ಬಂದಿಗಳನ್ನು ಮನೆಗೆ ಕಳುಹಿಸುತ್ತಿದ್ದಾರೆ. ಎಲ್ಲೆಡೆ ಬಿಗಿ ಭದ್ರತೆ ಕೈಗೊಳ್ಳಲು ಪೊಲೀಸರಿಗೆ ಸರಕಾರ ಸೂಚನೆ ನೀಡಿದೆ.

ಡಾ.ರಾಜ್‌ಕುಮಾರ್‌‌ ಸಮಾಧಿ ಸಮೀಪ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತಿದೆ. ಡಾ.ರಾಜ್‌ಕುಮಾರ್‌ ಪ್ರತಿಷ್ಠಾನದ ಸ್ವಾಮ್ಯದಲ್ಲಿರುವ ಜಮೀನಿನಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರ ಅಂತ್ಯ ಸಂಸ್ಕಾರವನ್ನು ನಡೆಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಲಭ್ಯವಿರುವ ಎಲ್ಲಾ ಸಿಬ್ಬಂದಿಗಳನ್ನು ಬಳಸಿಕೊಂಡು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚಿನ ಪೊಲೀಸ್‌ ಬಂದೋಬಸ್ತ್‌ ಏರ್ಪಾಡು ಮಾಡಿಕೊಳ್ಳಲು  ಬೆಂಗಳೂರು ಪೊಲೀಸ್‌ ಅಧೀಕ್ಷಕರು ಜಿಲ್ಲೆಯ ಎಲ್ಲಾ ಪೊಲೀಸ್‌ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದಾರೆ.

ಬೆಂಗಳೂರು ನಗರದಲ್ಲಿ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಪುನೀತ್‌ ರಾಜ್‌ಕುಮಾರ್‌ ಅವರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಶುಕ್ರವಾರ ಸಂಜೆ 5 ಗಂಟೆಯಿಂದ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ.

ಇದನ್ನೂ ಓದಿರಿ: ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

ಪುನೀತ್ ರಾಜ್‌ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದ ಜನರು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. ತಮ್ಮ ನೆಚ್ಚಿನ ನಟನ ಅಂತಿಮ ದರ್ಶನಕ್ಕಾಗಿ ಸರ್ಕಾರ ಎಲ್ಲ ರೀತಿಯ ಅಗತ್ಯ ವ್ಯವಸ್ಥೆಗಳನ್ನು ಮಾಡುತ್ತಿದೆ’ ಎಂದು ಹೇಳಿದ್ದಾರೆ.

‘ಕರ್ನಾಟಕದ ಜನತೆಯಲ್ಲಿ ನನ್ನ ಮನವಿ ಏನೆಂದರೆ, ಇಂತಹ ಮಹಾನ್ ನಟನನ್ನು ಕಳೆದುಕೊಂಡಾಗ ನೋವಾಗುವುದು ಸಹಜ, ಆದರೆ ಭಾವೋದ್ವೇಗಕ್ಕೆ ಒಳಗಾಗಬಾರದು ಮತ್ತು ತಾಳ್ಮೆ ಕಳೆದುಕೊಳ್ಳಬಾರದು. ಶಾಂತಿ ಕಾಪಾಡಬೇಕು. ಅವರನ್ನು (ಪುನೀತ್) ಶಾಂತಿಯುತವಾಗಿ ಕಳುಹಿಸಬೇಕು. ನಾವು ಅವರಿಗೆ ಸರಿಯಾದ ಗೌರವವನ್ನು ನೀಡಬೇಕು’ ಎಂದು ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಂತಿ ಕಾಪಾಡಲು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ‘ಶನಿವಾರ ದಿನ ವಿಡೀ ಸಾರ್ವಜನಿಕರಿಗೆ ಅಂತಿಮ ನಮನ ಸಲ್ಲಿಸಲು ಕಂಠೀರವ ಸ್ಟೇಡಿಯಂನಲ್ಲಿ ವ್ಯವಸ್ಥೆ ಮಾಡಿದ್ದೇವೆ. ಆದ್ದರಿಂದ ಜನರು ಶಾಂತಿಯುತವಾಗಿ ಅಂತಿಮ ನಮನ ಸಲ್ಲಿಸಬೇಕು. ಅಭಿಮಾನಿಗಳು ಶಾಂತಿ ಕಾಪಾಡುವಂತೆ ಕೈ ಜೋಡಿಸಿ ವಿನಂತಿಸುತ್ತೇನೆ” ಎಂದಿದ್ದಾರೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ಎಲ್ಲಾ ಲಿಕ್ಕರ್ ಶಾಪ್‌ಗಳನ್ನು ಮುಚ್ಚಲು ಸರಕಾರ ಆದೇಶ ನೀಡಿದೆ.

ಶುಕ್ರವಾರ ಮಧ್ಯಾಹ್ನ 3 ಗಂಟೆಯಿಂದ ಶನಿವಾರ ಮಧ್ಯರಾತ್ರಿ 12 ಗಂಟೆವರೆಗೆ ಬಾರ್‌ಗಳನ್ನು ಬಂದ್ ಮಾಡುವಂತೆ ಅಬಕಾರಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಬಾರ್ ಆಂಡ್‌ ರೆಸ್ಟೋರೆಂಟ್‌ಗಳನ್ನು ಮುಚ್ಚಲು ಆದೇಶ ನೀಡಲಾಗಿದೆ.

ಸ್ವಯಂ ಪ್ರೇರಿತ ಬಂದ್‌ಗೆ ಕರೆ: ಕನ್ನಡಪರ ಸಂಘಟನೆಯ ಮುಖಂಡರು ಸ್ವಯಂ ಪ್ರೇರಿತ ಬಂದ್‌ಗೆ ಕರೆ ನೀಡುತ್ತಿದ್ದಾರೆ. ಆದರೆ ಇದಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಏನಾದರೂ ಬಂದ್ ಆಚರಿಸಿದರೆ ದೂರದ ಜಿಲ್ಲೆಗಳಿಂದ ಪುನೀತ್‌ ಅವರ ಕೊನೆಯ ದರ್ಶನಕ್ಕೆ ಬರುವವರಿಗೆ ತೊಂದರೆಯಾಗಲಿದೆ ಎಂದು ಜನರು ಆತಂಕ ವ್ಯಕ್ತಪಡಿಸಿದ್ದಾರೆ. ರಾಜಾಜಿನಗರ, ವಿಜಯನಗರ ಸುತ್ತ ಮುತ್ತ ಒತ್ತಾಯಪೂರ್ವಕವಾಗಿ ಅಂಗಡಿಗಳನ್ನು ಕ್ಲೋಸ್ ಮಾಡಿಸಿರುವ ವರದಿಗಳಾಗಿವೆ.


ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಜಿಮ್‌ನಲ್ಲಿ ಕುಸಿದು ಬೀಳುತ್ತಿರುವ ಈ ವಿಡಿಯೊ ‘ಪುನೀತ್‌ ರಾಜ್‌ಕುಮಾರ್‌’ ಅವರದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಲಾಗ್ರಾಮ ಮತ್ತು ಕಂಠೀರವ ಸ್ಟುಡಿಯೊ ಕಲೆಗೆ ಮೀಸಲಾಗಲಿ ಅಲ್ಲಿ ಸಮಾಧಿ ಬೇಡ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...